ರಾಜಕೀಯ

ಬಜಪೆ ಪಟ್ಟಣ ಪಂಚಾಯತ್ ಚುನಾವಣೆ : ಬಿಜೆಪಿ ಜಯಭೇರಿ

19ರಲ್ಲಿ 11 ಸ್ಥಾನ ಗೆದ್ದು ನಿಚ್ಚಳ ಬಹುಮತ ಪಡೆದ ಬಿಜೆಪಿ ಮಂಗಳೂರು : ತಾಲೂಕಿನ ಬಜಪೆ ಪಟ್ಟಣ ಪಂಚಾಯತ್‌ಗೆ ಡಿ.21ರಂದು ನಡೆದ ಚುನಾವಣೆಯಲ್ಲಿ ಬಿಜೆಪಿಗೆ ನಿಚ್ಚಳ ಬಹುಮತ ಲಭಿಸಿದೆ.ಒಟ್ಟು 19 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11 ಸ್ಥಾನಗಳನ್ನು ಗೆದ್ದುಕೊಂಡು ಬೀಗಿದೆ. ಕಾಂಗ್ರೆಸ್-4, ಎಸ್‌ಡಿಪಿಐ-3 ಮತ್ತು ಪಕ್ಷೇತರರು 1 ಸ್ಥಾನಗಳನ್ನು ಪಡೆದಿದ್ದಾರೆ.ಬುಧವಾರ ಮಂಗಳೂರು ಮಿನಿ ವಿಧಾನಸೌಧದಲ್ಲಿ ಮಾತಗಳ ಎಣಿಕೆ ನಡಯಿತು. ಬಜಪೆಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಿದ ಬಳಿಕ ನಡೆದ ಮೊದಲ ಚುನಾವಣೆ ಇದಾಗಿತ್ತು. ವಿಜೇತರ ವಿವರ:ವಾರ್ಡ್ 1. […]

ಬಜಪೆ ಪಟ್ಟಣ ಪಂಚಾಯತ್ ಚುನಾವಣೆ : ಬಿಜೆಪಿ ಜಯಭೇರಿ Read More »

ಪ್ರಿಯಾಂಕಾ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿ ಮಾಡಿ : ಪತಿ ರಾಬರ್ಟ್‌ ವಾದ್ರಾ ಆಗ್ರಹ

ಕಾಂಗ್ರೆಸ್‌ನಲ್ಲಿ ಪ್ರಿಯಾಂಕಾ ಗಾಂಧಿ ಪರ ಬ್ಯಾಟ್‌ ಬೀಸುವವರ ಸಂಖ್ಯೆ ಹೆಚ್ಚಳ ನವದೆಹಲಿ: ಕಾಂಗ್ರೆಸ್‌ನಲ್ಲಿ ಪ್ರಿಯಾಂಕ ಗಾಂಧಿಗೆ ಪ್ರಮುಖ ಹುದ್ದೆ ನೀಡಬೇಕೆಂದು ಒತ್ತಾಯಿಸುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಅದರಲ್ಲೂ ಚಳಿಗಾಲದ ಅಧಿವೇಶನದ ಬಳಿಕ ರಾಹುಲ್‌ ಗಾಂಧಿಗಿಂತ ಪ್ರಿಯಾಂಕ ಗಾಂಧಿಯೇ ಪಕ್ಷ ಮುನ್ನಡೆಸಲು ಸಮರ್ಥ ನಾಯಕಿ ಎಂಬ ಅಭಿಪ್ರಾಯ ಬಹಿರಂಗವಾಗಿ ವ್ಯಕ್ತವಾಗಲಾರಂಭಿಸಿದೆ. ಕಾಂಗ್ರೆಸ್‌ ಸಂಸದ ಇಮ್ರಾನ್ ಮಸೂದ್ ಕೆಲದಿನಗಳ ಹಿಂದೆಯಷ್ಟೇ ಪ್ರಿಯಾಂಕಾ ಗಾಂಧಿ ವಾದ್ರಾ ಪರ ಬ್ಯಾಟಿಂಗ್‌ ಮಾಡಿದ್ದರು. ಇದೀಗ ಪತಿ ರಾಬಾರ್ಟ್‌ ವಾದ್ರಾ ಅವರು ಪತ್ನಿಯ ಪರ ವಹಿಸಿ ಮಾತನಾಡಿ

ಪ್ರಿಯಾಂಕಾ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿ ಮಾಡಿ : ಪತಿ ರಾಬರ್ಟ್‌ ವಾದ್ರಾ ಆಗ್ರಹ Read More »

ಮುಡಾ ಹಗರಣ : ಇಂದು ಜನಪ್ರತಿನಿಧಿ ನ್ಯಾಯಾಲಯದ ತೀರ್ಪು

ಸಿದ್ದರಾಮಯ್ಯನವರ ಪಾಲಿಗೆ ನಿರ್ಣಾಯಕವಾಗಲಿರುವ ತೀರ್ಪು ಬೆಂಗಳೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ಗೆ ಸಂಬಂಧಿಸಿ ಜನಪ್ರತಿನಿಧಿಗಳ ನ್ಯಾಯಾಲಯ ಮಂಗಳವಾರ ಮಹತ್ವದ ಆದೇಶ ಪ್ರಕಟಿಸಲಿದೆ. ಲೋಕಾಯುಕ್ತ ಸಲ್ಲಿಸಿರುವ ಬಿ ರಿಪೋರ್ಟ್‌ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್‌ ಮೆಟ್ಟಿಲೇರಿದ್ದರು. ವಾದ ಆಲಿಸಿದ್ದ ನ್ಯಾಯಾಲಯ ಇಂದಿಗೆ ಆದೇಶ ಕಾಯ್ದಿರಿಸಿತ್ತು. ನ್ಯಾಯಾಲಯ ಬಿ ರಿಪೋರ್ಟ್ ಒಪ್ಪಿದರೆ ಸಿದ್ದರಾಮಯ್ಯ ನಿರಾಳರಾಗುತ್ತಾರೆ. ಒಪ್ಪದೆ ಇದ್ದರೆ ಅವರಿಗೆ ಮತ್ತೆ ದೊಡ್ಡ ಸಂಕಷ್ಟ ಎದುರಾಗಲಿದೆ. ಡಿ.19 ರಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣದ

ಮುಡಾ ಹಗರಣ : ಇಂದು ಜನಪ್ರತಿನಿಧಿ ನ್ಯಾಯಾಲಯದ ತೀರ್ಪು Read More »

ದ್ವೇಷ ಭಾಷಣ ಮಾಡುವವರಿಂದ ದ್ವೇಷ ಭಾಷಣ ಕಾಯ್ದೆಗೆ ವಿರೋಧ : ಸಿದ್ದರಾಮಯ್ಯ

ಸಮಾಜದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಕಾಯ್ದೆ ರಚನೆ ಎಂದು ಸಮರ್ಥನೆ ಬೆಂಗಳೂರು: ಬಿಜೆಪಿ ದ್ವೇಷಪೂರಿತ ಮತ್ತು ಪ್ರಚೋದನಕಾರಿ ಭಾಷಣಗಳಲ್ಲಿ ಭಾಗಿಯಾಗಿದೆ. ಹೀಗಾಗಿ ವಿಧಾನಸಭೆ ಅಂಗೀಕರಿಸಿದ ದ್ವೇಷ ಭಾಷಣ ಕಾಯ್ದೆಯನ್ನು ವಿರೋಧಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೆಟು ನೀಡಿದ್ದಾರೆ. ಸಮಾಜದಲ್ಲಿ ಶಾಂತಿ ಮತ್ತು ಸಹೋದರತ್ವವನ್ನು ಕಾಪಾಡಿಕೊಳ್ಳಲು ಮತ್ತು ದ್ವೇಷ ಭಾಷಣಗಳನ್ನು ಕೊನೆಗೊಳಿಸಲು ಸರ್ಕಾರ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಕಾಯ್ದೆಯನ್ನು ಜಾರಿಗೆ ತಂದಿದೆ ಎಂದು ಹೇಳಿದರು. ಡಿಸೆಂಬರ್ 19ರಂದು ಮುಕ್ತಾಯಗೊಂಡ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ,

ದ್ವೇಷ ಭಾಷಣ ಮಾಡುವವರಿಂದ ದ್ವೇಷ ಭಾಷಣ ಕಾಯ್ದೆಗೆ ವಿರೋಧ : ಸಿದ್ದರಾಮಯ್ಯ Read More »

ಸುಳ್ಯದ ವೈದ್ಯಾಧಿಕಾರಿ ರಾಜೀನಾಮೆ : ಸರ್ಕಾರದ ಮೇಲೆ ಮುಗಿಬಿದ್ದ ಬಿಜೆಪಿ

ಆರು ತಿಂಗಳಿಂದ ಸಂಬಳ ಸಿಗದೆ ಬೇಸತ್ತು ರಾಜೀನಾಮೆ ನೀಡಿರುವ ವೈದ್ಯಾಧಿಕಾರಿ ಬೆಂಗಳೂರು: ಆರು ತಿಂಗಳಿಂದ ಸಂಬಳ ಸಿಗದ ಹಿನ್ನೆಲೆಯಲ್ಲಿ ಸುಳ್ಯದ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜೀನಾಮೆ ನೀಡಿರುವುದು ಸರ್ಕಾರವನ್ನು ಟೀಕಿಸಲು ವಿಪಕ್ಷಕ್ಕೆ ಇನ್ನೊಂದು ಅಸ್ತ್ರವಾಗಿದೆ. ರಾಜ್ಯಮಟ್ಟದಲ್ಲಿ ಈ ವಿಚಾರ ಚರ್ಚೆಯಾಗುತ್ತಿದೆ. ರಾಜ್ಯದ ಕಾಂಗ್ರೆಸ್‌ ಸರ್ಕಾರ ಸಂಪೂರ್ಣ ದಿವಾಳಿಯಾಗಿರುವುದಕ್ಕೆ ಸುಳ್ಯದ ವೈದ್ಯಾಧಿಕಾರಿ ರಾಜೀನಾಮೆಯೇ ಸಾಕ್ಷಿ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಟೀಕಿಸಿದ್ದಾರೆ. ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಸುಳ್ಯದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಸರಿಯಾಗಿ

ಸುಳ್ಯದ ವೈದ್ಯಾಧಿಕಾರಿ ರಾಜೀನಾಮೆ : ಸರ್ಕಾರದ ಮೇಲೆ ಮುಗಿಬಿದ್ದ ಬಿಜೆಪಿ Read More »

ರಾಜ್ಯಸಭೆಯಲ್ಲಿ ಮಧ್ಯರಾತ್ರಿ ಜಿ ರಾಮ್‌ ಜಿ ಮಸೂದೆ ಅಂಗೀಕಾರ

ಬೆಳಗ್ಗಿನ ತನಕ ಪ್ರತಿಭಟನೆ ನಡೆಸಿದ ವಿಪಕ್ಷಗಳು ನವದೆಹಲಿ: ಲೋಕಸಭೆಯಲ್ಲಿ ಗುರುವಾರ ಅಂಗೀಕರಿಸಲಾಗಿದ್ದ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಮಸೂದೆ-2025 ಅನ್ನು ಶುಕ್ರವಾರ ಮಧ್ಯರಾತ್ರಿ ರಾಜ್ಯಸಭೆಯಲ್ಲಿ ಅಂಗೀಕರಿಸಲಾಯಿತು. ತಡರಾತ್ರಿ 12.15ರ ಸುಮಾರಿಗೆ ಧ್ವನಿ ಮತದ ಮೂಲಕ ಮಸೂದೆಯನ್ನ ಅಂಗೀಕರಿಸಲಾಯಿತು. ಮಧ್ಯರಾತ್ರಿವರೆಗೆ ನಡೆದ ಚರ್ಚೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯ (ಮನ್ರೇಗಾ) ಹೆಸರು ಬದಲಿಸಿ ಪರಿಚಯಿಸಲಾದ ಮಸೂದೆಗೆ ಕಾಂಗ್ರೆಸ್‌ ಸೇರಿದಂತೆ ವಿಪಕ್ಷಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಯಿತು. ಗದ್ದಲ ಕೋಲಾಹಲ ಏರ್ಪಟ್ಟಿತು. ಕೊನೆಗೆ ಮಸೂದೆಯನ್ನ ವಿರೋಧಿಸಿ

ರಾಜ್ಯಸಭೆಯಲ್ಲಿ ಮಧ್ಯರಾತ್ರಿ ಜಿ ರಾಮ್‌ ಜಿ ಮಸೂದೆ ಅಂಗೀಕಾರ Read More »

ಎಕ್ಸ್ ಖಾತೆಯಲ್ಲೂ ಪ್ರಧಾನಿ ಮೋದಿ ಅವರದ್ದೇ ದರ್ಬಾರ್

ನವದೆಹಲಿ: ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ‌ಹೋಗುತ್ತಿದೆ. ಕಳೆದೊಂದು ‌ತಿಂಗಳ ಅಂಕಿ ಅಂಶಗಳ ಆಧಾರದಲ್ಲಿ ಹೇಳುವುದಾದರೆ, ಜಾಗತಿಕ ಮಟ್ಟದಲ್ಲೇ ಎಕ್ಸ್ ಖಾತೆಯಲ್ಲಿ ಅತೀ ಹೆಚ್ಚು ಲೈಕ್ಸ್ ಪಡೆದ ಹತ್ತು ಪೋಸ್ಟ್‌ಗಳ ಪೈಕಿ ಎಂಟು ಪೋಸ್ಟ್‌ಗಳು ಪ್ರಧಾನಿ ಮೋದಿ ಅವರದ್ದೇ ಆಗಿದೆ ಎನ್ನುವುದು ಗಮನಾರ್ಹ. ಇದು ಬೆಂಬಲಿಗರು, ಹಿಂಬಾಲಕರ ಜೊತೆಗೆ ಸಾರ್ವಜನಿಕರಿಗೆ ಪ್ರಧಾನಿ ಮೋದಿ ಬಗ್ಗೆ ಇರುವ ಆಸಕ್ತಿ ಮತ್ತು ಅವರ ಜನಪ್ರಿಯತೆಗೆ ಹಿಡಿದ ಕೈಗನ್ನಡಿಯಾಗಿದೆ ಎನ್ನಬಹುದು.

ಎಕ್ಸ್ ಖಾತೆಯಲ್ಲೂ ಪ್ರಧಾನಿ ಮೋದಿ ಅವರದ್ದೇ ದರ್ಬಾರ್ Read More »

ಈ ತಿಂಗಳಲ್ಲಿ ಜಮೆಯಾಗಲಿದೆ ಗೃಹಲಕ್ಷ್ಮಿಯ ಒಂದು ಕಂತು

ಮುಜುಗರದ ಬಳಿಕ ಒಂದು ಕಂತಿನ ಹಣ ಬಿಡುಗಡೆ ಮಾಡಿದ ಸರ್ಕಾರ ಬೆಂಗಳೂರು: ಸರ್ಕಾರ ಗೃಹಲಕ್ಷ್ಮಿ ಸ್ಕೀಂನ ಒಂದು ಕಂತಿನ ಹಣ ಬಿಡುಗಡೆ ಮಾಡಿದೆ. ಹೀಗಾಗಿ ಗೃಹಲಕ್ಷ್ಮಿ ಹೊಸವರ್ಷಕ್ಕೂ ಮುನ್ನ ಬಹುತೇಕ ಈ ಮಾಸಾಂತ್ಯದಲ್ಲಿ ಗೃಹಲಕ್ಷ್ಮಿ ಒಂದು ಕಂತಿ ಹಣ ಖಾತೆಗೆ ಜಮೆಯಾಗಲಿದೆ. ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ಮೇಲೆ ಈಗ 2-3 ತಿಂಗಳಿಗೊಮ್ಮೆ ಮಾತ್ರ ಗೃಹಲಕ್ಷ್ಮಿ ದುಡ್ಡು ಆಕೌಂಟ್ ಹಾಕುತ್ತಿದೆ. ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣವನ್ನು ಜಮೆ ಮಾಡದಿರುವ

ಈ ತಿಂಗಳಲ್ಲಿ ಜಮೆಯಾಗಲಿದೆ ಗೃಹಲಕ್ಷ್ಮಿಯ ಒಂದು ಕಂತು Read More »

ಮೊಟ್ಟೆಯಲ್ಲಿಲ್ಲ ಕ್ಯಾನ್ಸರ್‌ಕಾರಕ ಅಂಶ : ತಿನ್ನಲು ಸಂಪೂರ್ಣ ಸುರಕ್ಷಿತ

ಮೊಟ್ಟೆ ತಿಂದರೆ ಕ್ಯಾನ್ಸರ್‌ ಬರಬಹುದು ಎಂಬುದೆಲ್ಲ ಸುಳ್ಳು ಸುದ್ದಿ ಬೆಂಗಳೂರು: ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವದಂತಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತೆರೆ ಎಳೆದಿದ್ದಾರೆ. ಯಾವುದೇ ಕ್ಯಾನ್ಸರ್ ಕಾರಕ ಅಂಶವಿಲ್ಲ. ಮೊಟ್ಟೆಯ ಬಗ್ಗೆ ಯಾರೂ ಆತಂಕಪಡಬೇಕಿಲ್ಲ, ತಿನ್ನಲು ಸುರಕ್ಷಿತವಾಗಿದೆ ಎಂದು ತಿಳಿಸಿದ್ದಾರೆ. ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಈ ವಿಚಾರವನ್ನು ಪ್ರಸ್ತಾಪ ಮಾಡಿದ ಬಿಜೆಪಿ ಶಾಸಕ ಸುನೀಲ್ ಕುಮಾರ್, ಮೊಟ್ಟೆಯ ಬಗ್ಗೆ ಕೆಲವೊಂದು ಮಾಹಿತಿಗಳು ಕೇಳಿಬರುತ್ತಿವೆ. ಈ ಬಗ್ಗೆ ಆರೋಗ್ಯ ಸಚಿವರು ಸ್ಪಷ್ಟನೆ ನೀಡಲಿ ಎಂದು ಒತ್ತಾಯಿಸಿದರು.

ಮೊಟ್ಟೆಯಲ್ಲಿಲ್ಲ ಕ್ಯಾನ್ಸರ್‌ಕಾರಕ ಅಂಶ : ತಿನ್ನಲು ಸಂಪೂರ್ಣ ಸುರಕ್ಷಿತ Read More »

ಬಿಪಿಎಲ್‌ ಕಾರ್ಡ್‌ ಆದಾಯ ಮಿತಿ ಹೆಚ್ಚಳಕ್ಕೆ ಚಿಂತನೆ

ಈಗಿರುವ 1.20 ಲ.ರೂ.ನಿಂದ ಹೆಚ್ಚಿಸುವ ಕುರಿತು ಸಚಿವರಿಂದ ಮಾಹಿತಿ ಬೆಳಗಾವಿ: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಆಹಾರ ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್‌ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್​​ದಾರರ ಆದಾಯವನ್ನು 1.20ಲಕ್ಷ ರೂ.ಗೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ 500 ರೂ. ದೊರೆಯುತ್ತದೆ. ಇದರ ಆಧಾರದಲ್ಲಿ ಅವರ ಆದಾಯವೂ ವರ್ಷಕ್ಕೆ 1.80 ಲಕ್ಷ ರೂ.ಗಿಂತ

ಬಿಪಿಎಲ್‌ ಕಾರ್ಡ್‌ ಆದಾಯ ಮಿತಿ ಹೆಚ್ಚಳಕ್ಕೆ ಚಿಂತನೆ Read More »

error: Content is protected !!
Scroll to Top