ಮೂರು ವರ್ಷಗಳ ಕಾಲ ಪಕ್ಷಕ್ಕೆ ಚ್ಯುತಿ ಬಾರದ ರೀತಿಯಲ್ಲಿ ದುಡಿದ ತೃಪ್ತಿ ನಮಗಿದೆ | ಪಕ್ಷದ ಜವಾಬ್ದಾರಿಯಿಂದ ನಮ್ಮನ್ನು ಮುಕ್ತಗೊಳಿಸಿ : ಪುತ್ತೂರು, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಿಂದ ವರಿಷ್ಠರಿಗೆ ಮನವಿ | ಪತ್ರಿಕಾಗೋಷ್ಠಿಯಲ್ಲಿ ಎಂ.ಬಿ.ವಿಶ್ವನಾಥ ರೈ , ಡಾ.ರಾಜಾರಾಮ ಕೆ.ಬಿ.
ಪುತ್ತೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಆಕಾಂಕ್ಷಿಯಾಗಿದ್ದರೂ ಪಕ್ಷದ ಹೈಕಮಾಂಡ್ ಅಶೋಕ್ ಕುಮಾರ್ ರೈ ಯವರಿಗೆ ಅವಕಾಶ ಕಲ್ಪಿಸಿತ್ತು. ಈ ಸಂದರ್ಭದಲ್ಲಿ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿ ನಾವು ಎಲ್ಲಾ ಕಾರ್ಯಕರ್ತರನ್ನು ಒಗ್ಗೂಡಿಸಿ ಚ್ಯುತಿ ಬಾರದಂತೆ ಅಹರ್ನಿಶಿ ದುಡಿದಿದ್ದೇವೆ. ಇದೀಗ ನಮ್ಮ ಪಕ್ಷದ ಜವಾಬ್ದಾರಿ ಅವಧಿ ಮುಗಿದಿದ್ದು, ನಮ್ಮನ್ನು ಪಕ್ಷದ ಹುದ್ದೆಯಿಂದ ಬಿಡುಗಡೆ ಮಾಡವಂತೆ ಹೈಕಮಾಂಡ್ ಗೆ ಮನವಿ ಮಾಡಿದ್ದೇವೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು […]










