ರಾಜಕೀಯ

ಕೈತಪ್ಪಿದ ಟಿಕೆಟ್​ಗಾಗಿ ಬಹಿರಂಗ ಪತ್ರದ ಮೂಲಕ ಅಭಿಮಾನಿಗಳಿಗೊಂದು ಮನವಿ ಮಾಡಿದ ದತ್ತಾ

ಚಿಕ್ಕಮಗಳೂರು : ಟಿಕೆಟ್​ ಖಚಿತ ಎಂದು ಭರವಸೆ ಸಿಕ್ಕ ಮೇಲೆಯೇ ಜೆಡಿಎಸ್​ ಬಿಟ್ಟು ಕಾಂಗ್ರೆಸ್​ ಸೇರ್ಪಡೆಯಾಗಿದ್ದ ಮಾಜಿ ಶಾಸಕ ವೈಎಸ್​ವಿ ದತ್ತಾಗೆ ಕಾಂಗ್ರೆಸ್ ಟಿಕೆಟ್​ ತಪ್ಪಿದೆ. ಕಾಂಗ್ರಸ್ ಸಿಗುತ್ತೆ ಎಂದು ಬಹಳ ನಿರೀಕ್ಷೆಗಳೊಂದಿಗೆ ದತ್ತಾ ಜೆಡಿಎಸ್ ಬಿಟ್ಟುಬಂದಿದ್ದರು. ಆದ್ರೆ, ಅಂತಿಮವಾಗಿ ಕಾಂಗ್ರೆಸ್​, ಆನಂದ್​ ಅವರಿಗೆ ಮಣೆ ಹಾಕಿದೆ. ಇದರಿಂದ ದತ್ತಾ ಅಸಮಾಧಾನಗೊಂಡಿದ್ದು, ಅಭಿಮಾನಿಗಳಿಗೆ ಒಂದು ಬಹಿರಂಗಪತ್ರ ಬರೆದಿದ್ದಾರೆ. ಇದರೊಂದಿಗೆ ಕಾಂಗ್ರೆಸ್​ ನಾಯಕರ ವಿರುದ್ಧ ಸಿಡಿದೆದ್ದಿದ್ದು, ಮುಂದಿನ ರಾಜಕೀಯ ನಡೆ ಬಗ್ಗೆ ತೀರ್ಮಾನಿಸಲು ಅಭಿಮಾನಿಗಳ ಸಭೆ ಕರೆದಿದ್ದಾರೆ.ನನ್ನ ಮತ್ತು […]

ಕೈತಪ್ಪಿದ ಟಿಕೆಟ್​ಗಾಗಿ ಬಹಿರಂಗ ಪತ್ರದ ಮೂಲಕ ಅಭಿಮಾನಿಗಳಿಗೊಂದು ಮನವಿ ಮಾಡಿದ ದತ್ತಾ Read More »

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ್ ಪತ್ನಿ ವೀಣಾ‌ ವಿಧಿವಶ

ಮೈಸೂರು : ಇತ್ತೀಚೆಗಷ್ಟೇ ನಿಧನರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಅವರ ಪತ್ನಿ ವೀಣಾ ಧ್ರುವನಾರಾಯಣ ಏ. 7ರಂದು ನಿಧನರಾಗಿದ್ದಾರೆ. ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಅವರು ಸುಮಾರು 10 ವರ್ಷಗಳಿಂದ ಹಾಸಿಗೆ ಹಿಡಿದಿದ್ದರು. ಇತ್ತೀಚೆಗೆ, ಪತಿ ಧ್ರುವನಾರಾಯಣ ಅವರ ಅಕಾಲಿಕ ಸಾವಿನಿಂದಾಗಿ ಶಾಕ್ ಗೆ ಒಳಗಾಗಿದ್ದ ಅವರ ಆರೋಗ್ಯ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು. ಹಾಗಾಗಿ, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಶುಕ್ರವಾರ ನಿಧನರಾಗಿದ್ದಾರೆ. ಇವರು ಮೂವರು ಪುತ್ರರನ್ನು ಅಗಲಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ್ ಪತ್ನಿ ವೀಣಾ‌ ವಿಧಿವಶ Read More »

ಶಾಸಕ ಸಂಜೀವ ಮಠಂದೂರು ಕುರಿತು ಮಾನಹಾನಿ ವರದಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ

ಪುತ್ತೂರು: ಮಾನಹಾನಿಕರ ವರದಿ ಪ್ರಕಟಿಸದಂತೆ ಶಾಸಕ ಸಂಜೀವ ಮಠಂದೂರು ಅವರು ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದು, ನ್ಯಾಯಾಲಯ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಮುದ್ರಣ, ವಿದ್ಯುನ್ಮಾನ, ಡಿಜಿಟಲ್ ಮಾಧ್ಯಮಗಳಲ್ಲಿ ಮಾನಹಾನಿಕರ ವರದಿ ಪ್ರಸಾರ ಮಾಡುವುದು, ವೆಬ್ ಹೋಸ್ಟಿಂಗ್ ಮತ್ತು ಹಂಚಿಕೊಳ್ಳುವುದನ್ನು ನಿಷೇಧಿಸಲು ತಡೆಯಾಜ್ಞೆ ನೀಡುವಂತೆ ಶಾಸಕ ಮಠಂದೂರು ಮೊಕದ್ದಮೆ ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದು, ಜೂನ್ 26ಕ್ಕೆ ವಿಚಾರಣೆ ಮುಂದೂಡಿದೆ. ತಾನು ವಿಧಾನಸಭಾ ಸದಸ್ಯನಾಗಿದ್ದು, ಕೆಲ‌ ಕಿಡಿಗೇಡಿಗಳು ತನ್ನ ಮಾನಹಾನಿಕರ ಛಾಯಾಚಿತ್ರವನ್ನು

ಶಾಸಕ ಸಂಜೀವ ಮಠಂದೂರು ಕುರಿತು ಮಾನಹಾನಿ ವರದಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ Read More »

ಹಿರಿಯ ಕಾಂಗ್ರೆಸ್ ನಾಯಕ ಎಕೆ ಆಂಟನಿ ಪುತ್ರ ಅನಿಲ್ ಆಂಟನಿ ಬಿಜೆಪಿ ಸೇರ್ಪಡೆ

ದೆಹಲಿ : ಕೇಂದ್ರ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಎಕೆ ಆಂಟನಿ ಅವರ ಮಗ ಅನಿಲ್ ಆಂಟನಿ ಎ. 6 ರಂದು ಬಿಜೆಪಿ ಸೇರ್ಪಡೆಯಾದರು. ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರದ ವಿಚಾರವಾಗಿ ಪಕ್ಷದ ನಿಲುವನ್ನು ಟೀಕಿಸಿದ್ದ ಅನಿಲ್ ಆಂಟನಿ, ಜನವರಿಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದರು. ಅಂದಿನಿಂದಲೂ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ನಿರೀಕ್ಷೆ ವ್ಯಕ್ತವಾಗಿತ್ತು. ಅನಿಲ್ ಆಂಟನಿ ಅವರು ಕೇಂದ್ರ ಸಚಿವರಾದ ಪಿಯೂಷ್ ಗೋಯಲ್

ಹಿರಿಯ ಕಾಂಗ್ರೆಸ್ ನಾಯಕ ಎಕೆ ಆಂಟನಿ ಪುತ್ರ ಅನಿಲ್ ಆಂಟನಿ ಬಿಜೆಪಿ ಸೇರ್ಪಡೆ Read More »

ಪುತ್ತೂರು ಬಿಜೆಪಿ ಅಭ್ಯರ್ಥಿಯಾಗಿ ದಿನೇಶ್ ಮೆದು ಸಾಧ್ಯತೆ | ಬಿಜೆಪಿ ಹೈಕಮಾಂಡ್ ಒಲವು!

ಪುತ್ತೂರು: ಚುನಾವಣೆ ದಿನ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಗೆ ಅಂತಿಮ ಕಸರತ್ತು ನಡೆಸುತ್ತಿದೆ. ಇದೀಗ ಸಾಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷರಾಗಿ, ಎಬಿವಿಪಿ ತಾಲೂಕು ಪ್ರಮುಖ್ ಸೇರಿದಂತೆ ಹಲವು ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿರುವ ದಿನೇಶ್ ಮೆದು ಹೆಸರು ಕೇಳಿಬರುತ್ತಿದೆ. ಹಾಲಿ ಶಾಸಕ ಸಂಜೀವ ಮಠಂದೂರು ಅವರ ಹೆಸರು ಚಾಲ್ತಿಯಲ್ಲಿರುವಂತೆ, ಕೊನೆಕ್ಷಣದಲ್ಲಿ ಹೊಸ ಅಭ್ಯರ್ಥಿಗಳತ್ತಲೂ ಬಿಜೆಪಿ ದೃಷ್ಟಿ ಹಾಯಿಸುತ್ತಿದೆ. ಒಂದು ವೇಳೆ ಹೊಸ ಮುಖಗಳನ್ನು ಆಯ್ದುಕೊಂಡದ್ದೇ ಆದರೆ, ಅದರಲ್ಲಿ ದಿನೇಶ್ ಮೆದು ಅವರ ಹೆಸರು ಅಗ್ರಪಂಕ್ತಿಯಲ್ಲಿ ಗುರುತಿಸಿಕೊಂಡಿದೆ.

ಪುತ್ತೂರು ಬಿಜೆಪಿ ಅಭ್ಯರ್ಥಿಯಾಗಿ ದಿನೇಶ್ ಮೆದು ಸಾಧ್ಯತೆ | ಬಿಜೆಪಿ ಹೈಕಮಾಂಡ್ ಒಲವು! Read More »

ಕಾಂಗ್ರೆಸ್‌ 2ನೇ ಪಟ್ಟಿ ಪ್ರಕಟ

ಬೆಂಗಳೂರು : ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ 42 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಇದ್ದು, ಬಾಕಿ 58 ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ಗೊಂದಲದ ಹಿನ್ನೆಲೆಯಲ್ಲಿ ಬಿಜೆಪಿ ಪಟ್ಟಿ ಪಗ್ರಕಟವಾದ ನಂತರವೇ ಬಿಡುಗಡೆ ಮಾಡಲು ಹೈಕಮಾಂಡ್‌ ತೀರ್ಮಾನಿಸಿದೆ.ಇಂದು ಹೊಸದಿಲ್ಲಿಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯದ ಮುಖಂಡರಾದ ಸಿದ್ದರಾಮಯ್ಯ, ಜಿ. ಪರಮೇಶ್ವರ, ಹರಿಪ್ರಸಾದ್‌ ಹಾಗೂ ರಾಜ್ಯ ಚುನಾವಣಾ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ

ಕಾಂಗ್ರೆಸ್‌ 2ನೇ ಪಟ್ಟಿ ಪ್ರಕಟ Read More »

ಏ.6 : ಬಿಜೆಪಿಯ 43ನೇ ಸಂಸ್ಥಾಪನಾ ದಿನ

10 ಲಕ್ಷಕ್ಕೂ ಹೆಚ್ಚು ಸ್ಥಳಗಳಲ್ಲಿ ಮೋದಿ ಭಾಷಣ ನೇರ ಪ್ರಸಾರ ದೆಹಲಿ : ವಿಶ್ವದಲ್ಲಿಯೇ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಏಕೈಕ ರಾಜಕೀಯ ಪಕ್ಷ ಎಂಬ ಹೆಗ್ಗಳಿಕೆ ಹೊಂದಿರುವ ಬಿಜೆಪಿ ಇಂದು ಸಂಸ್ಥಾಪನಾ ದಿನ ಆಚರಿಸಿಕೊಳ್ಳುತ್ತಿದ್ದು, ಬೆಳಗ್ಗೆ 10ಕ್ಕೆ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ. ಪ್ರಧಾನಿಯವರ ಭಾಷಣವನ್ನು ದೇಶಾದ್ಯಂತ 10 ಲಕ್ಷಕ್ಕೂ ಹೆಚ್ಚು ಸ್ಥಳಗಳಲ್ಲಿ ನೇರ ಪ್ರಸಾರ ಮಾಡಲಾಗುವುದು. ಮೋದಿ ಭಾಷಣದ ವೇಳೆ ಪಕ್ಷದ ಎಲ್ಲಾ ಸಂಸದರು ಸಂಸತ್ತಿನಲ್ಲಿ ಹಾಜರಿರಲು ಸೂಚಿಸಲಾಗಿದೆ. ಮುಂದಿನ

ಏ.6 : ಬಿಜೆಪಿಯ 43ನೇ ಸಂಸ್ಥಾಪನಾ ದಿನ Read More »

40 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯಲ್ಲಿ ಬಿಜೆಪಿಗೆ ಕಗ್ಗಂಟು

ವಾರಾಂತ್ಯಕ್ಕೆ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ ಬೆಂಗಳೂರು : ಮೂಲ ಬಿಜೆಪಿಗರು ಹಾಗೂ ವಲಸೆ ಬಿಜೆಪಿಗರ ನಡುವೆ ಟಿಕೆಟ್ ಹಂಚಿಕೆ ವಿಚಾರವಾಗಿ ಭಾರಿ ಪೈಪೋಟಿ ನಡೆಯುತ್ತಿರುವುದರಿಂದ ಬಿಜೆಪಿ ಪಾಲಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕಗ್ಗಂಟಾಗಿ ಪರಿಣಮಿಸಿದೆ. ಕನಿಷ್ಠ 40 ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಸವಾಲಾಗಿ ಪರಿಣಮಿಸಿರುವುದರಿಂದ ಬಿಜೆಪಿಗೆ ಸಮಸ್ಯೆ ಎದುರಾಗಿದೆ. ಈ 40 ಸ್ಥಾನಗಳಲ್ಲಿ ಟಿಕೆಟ್ ಹಂಚಿಕೆ ಪ್ರಕ್ರಿಯೆ ನಾಮಪತ್ರ ಸಲ್ಲಿಸುವ ಕೊನೇ ದಿನಾಂಕ ಏ.20ರ ವರೆಗೆ ಎಳೆಯುವ ಸಾಧ್ಯತೆಯಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೊಳಗೊಂಡ

40 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯಲ್ಲಿ ಬಿಜೆಪಿಗೆ ಕಗ್ಗಂಟು Read More »

ತಾನು ಪಕ್ಷದಿಂದ ಹೊರಹೋಗಲು ರಾಹುಲ್‌ ಗಾಂಧಿಯೇ ಕಾರಣ ಎಂದು ಆಜಾದ್‌ ಆರೋಪ

ಕಾಂಗ್ರೆಸ್‌ನಲ್ಲಿ ಉಳಿಯಬೇಕೆಂದರೆ ಬೆನ್ನುಮೂಳೆ ಇರಬಾರದು ದೆಹಲಿ : ಕಾಂಗ್ರೆಸ್‌ ಮತ್ತು ರಾಹುಲ್‌ ಗಾಂಧಿ ವಿರುದ್ಧ ತೀಕ್ಷ್ಣವಾಗಿ ವಾಗ್ದಾಳಿ ಮಾಡಿರುವ ಪಕ್ಷದ ಮಾಜಿ ನಾಯಕ ಗುಲಾಂ ನಬಿ ಆಜಾದ್‌ ತಾನು ಪಕ್ಷದಿಂದ ಹೊರಹೋಗಲು ರಾಹುಲ್‌ ಗಾಂಧೀಯೇ ಕಾರಣ ಎಂದಿದ್ದಾರೆ. ಇಂದು ನಾನು ಕಾಂಗ್ರೆಸ್‌ ಪಕ್ಷದಲ್ಲಿ ಇಲ್ಲದಿರುವುದಕ್ಕೆ ರಾಹುಲ್ ಗಾಂಧಿಯೇ ಮುಖ್ಯ ಕಾರಣ. ಕಾಂಗ್ರೆಸ್‌ನಲ್ಲಿ ಉಳಿಯಬೇಕೆಂದರೆ ಬೆನ್ನುಮೂಳೆ ಇರಬಾರದು ಎಂದು ಹಿರಿಯ ರಾಜಕಾರಣಿ ಗುಲಾಂ ನಬಿ ಆಜಾದ್ ಹೇಳಿದ್ದಾರೆ.ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅಥವಾ ಕಾಂಗ್ರೆಸ್ ಅಧ್ಯಕ್ಷ

ತಾನು ಪಕ್ಷದಿಂದ ಹೊರಹೋಗಲು ರಾಹುಲ್‌ ಗಾಂಧಿಯೇ ಕಾರಣ ಎಂದು ಆಜಾದ್‌ ಆರೋಪ Read More »

ಏ. 6 : ಕಾಂಗ್ರೆಸ್‌ ನ ಎರಡನೇ ಪಟ್ಟಿ ಬಿಡುಗಡೆ

ಭಿನ್ನಮತ ಶಮನಕ್ಕೆ ವರಿಷ್ಠರ ತಿಣುಕಾಟ ಬೆಂಗಳೂರು : ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನಿರಾಯಾಸವಾಗಿ ಬಿಡುಗಡೆ ಮಾಡಿ ಗೆದ್ದಿದ್ದ ಕಾಂಗ್ರೆಸ್‌ಗೆ ಉಳಿದಿರುವ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿತ್ತು. ಕೈ ನಾಯಕರು ಕಳೆದ ಎರಡು ದಿನಗಳಲ್ಲಿ ದಿಲ್ಲಿಯಲ್ಲೇ ಬೀಡುಬಿಟ್ಟು ನಿರಂತರ ಸಭೆ ನಡೆಸಿದ್ದಾರೆ. ಅಂತಿಮವಾಗಿ 100ರ ಪೈಕಿ 45ರಿಂದ 50 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಿದ್ದು, ಏಪ್ರಿಲ್ 6ರಂದು ಬೆಳಗ್ಗೆ 11 ಗಂಟೆಯೊಳಗೆ ಕೈ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ. ಬಾಕಿ ಉಳಿದಿರುವ

ಏ. 6 : ಕಾಂಗ್ರೆಸ್‌ ನ ಎರಡನೇ ಪಟ್ಟಿ ಬಿಡುಗಡೆ Read More »

error: Content is protected !!
Scroll to Top