ರಘುಪತಿ ಭಟ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ
ಪುತ್ತೂರು: ವಿಧಾನಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ರಘುಪತಿ ಭಟ್ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಶುಕ್ರವಾರ ಬೆಳಿಗ್ಗೆ ಭೇಟಿ ನೀಡಿದರು. ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರ ರಾಜಾರಾಂ ಭಟ್, ಪ್ರಮುಖರಾದ ನವೀನ್ ಕುಲಾಲ್, ಶಿವ ಭಟ್ ಉಪಸ್ಥಿತರಿದ್ದರು. ಇಂದು ಪುತ್ತೂರಿನಾದ್ಯಂತ ಶಾಲಾ ಕಾಲೇಜು, ಪದವೀಧರರನ್ನು ಭೇಟಿಯಾಗಿ ಮತಯಾಚನೆ ನಡೆಸಲಿದ್ದಾರೆ.
ರಘುಪತಿ ಭಟ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ Read More »










