ಪ್ರಜ್ವಲ್ ರೇವಣ್ಣರಂತಹ ವ್ಯಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ | ವೀಡಿಯೋ ಜೆಡಿಎಸ್ ಪಕ್ಷ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಅವಧಿಯದ್ದಾಗಿವೆ : ಪ್ರಧಾನಿ ಮೋದಿ
ಹೊಸದಿಲ್ಲಿ: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವೀಡಿಯೊ ಪ್ರಕರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಪ್ರಜ್ವಲ್ ರೇವಣ್ಣ ಅವರಂತಹ ವ್ಯಕ್ತಿಗಳ ವಿರುದ್ಧ ನಾವು ಶೂನ್ಯ ಸಹಿಷ್ಣುರಾಗಿದ್ದೇವೆ. ಅಂತಹ ವ್ಯಕ್ತಿಗಳಿಗೆ ಸಹನೆ ತೋರಬೇಕಾದ ಅಗತ್ಯ ಇಲ್ಲ. ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಆದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರವೇ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೇಶದಿಂದ ಹೊರಗೆ ಹೋಗಲು ಅವಕಾಶ ಮಾಡಿಕೊಟ್ಟಿದೆ ಎಂದು ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಮಾತನಾಡಿರುವ ಮೋದಿ, […]








