ರಾಜಕೀಯ

ಬಹು ನಿರೀಕ್ಷೆಯ ಕಾಂಗ್ರೆಸ್‌ ಪಟ್ಟಿ ಬಿಡುಗಡೆ : ಸಿದ್ದರಾಮಯ್ಯಗೆ ವರುಣಾ ಕ್ಷೇತ್ರ

ಬೆಂಗಳೂರು : ಬಹು ಸಮಯದಿಂದ ನಿರೀಕ್ಷಿಸುತ್ತಿದ್ದ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬೆಳಗ್ಗೆ ದಿಢೀರ್‌ ಎಂದು ಬಿಡುಗಡೆ ಮಾಡಲಾಗಿದೆ. ಮೊದಲ ಪಟ್ಟಿಯಲ್ಲೇ ಸಿದ್ದರಾಮಯ್ಯ ಹೆಸರಿದ್ದು, ಅವರಿಗೆ ವರುಣಾ ಕ್ಷೇತ್ರವನ್ನು ನೀಡಲಾಗಿದೆ. ಇದರೊಂದಿಗೆ ಸಿದ್ದರಾಮಯ್ಯ ಅವರ ಕ್ಷೇತ್ರ ಗೊಂದಲ ಬಗೆಹರಿದಿದೆ. ವರುಣಾದಲ್ಲಿ ಪ್ರಸ್ತುತ ಸಿದ್ದರಾಮಯ್ಯನವರ ಪುತ್ರ ಡಾ. ಯತೀಂದ್ರ ಶಾಸಕರಾಗಿದ್ದಾರೆ.ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರಿದ್ದು, ನಂಜನಗೂಡಿನಲ್ಲಿ ಧ್ರುವ ನಾರಾಯಣ್‌ ಅವರ ಪುತ್ರ ದರ್ಶನ್‌,ಕನಕಪುರದಿಂದ ಡಿ. ಕೆ. ಶಿವಕುಮಾರ್‌, ದೇವನಹಳ್ಳಿಯಿಂದ ಎಚ್‌. ಸಿ. ಮುನಿಯಪ್ಪ ಸ್ಪರ್ಧಿಸಲಿದ್ದಾರೆ.ಕಾಪುವಿನಿಮದ ವಿನಯ್‌ ಕುಮಾರ್‌ […]

ಬಹು ನಿರೀಕ್ಷೆಯ ಕಾಂಗ್ರೆಸ್‌ ಪಟ್ಟಿ ಬಿಡುಗಡೆ : ಸಿದ್ದರಾಮಯ್ಯಗೆ ವರುಣಾ ಕ್ಷೇತ್ರ Read More »

ಅಂದು ವೀರಾವೇಶದಿಂದ ಹರಿದೆಸೆದ ಸುಗ್ರೀವಾಜ್ಞೆಯೇ ಇಂದು ಸಂಸತ್‌ ಸದಸ್ಯತ್ವಕ್ಕೆ ಕುತ್ತು ತಂದಿತು

ದೆಹಲಿ : ಮೋದಿ ಕುಲನಾಮ ಹೊಂದಿರುವವರೆಲ್ಲ ಕಳ್ಳರು ಎಂಬರ್ಥ ಬರುವಂತೆ ಮಾಡಿದ ಭಾಷಣ ಕೊನೆಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯ ಸಂಸತ್‌ ಸದಸ್ಯತನಕ್ಕೆ ಕುತ್ತು ತಂದಿದೆ. ವಿಶೇಷ ಎಂದರೆ ಕ್ರಿಮಿನಲ್‌ ಪ್ರಕರಣದಲ್ಲಿ ಶಿಕ್ಷೆಯಾದ ಸಂಸದರ ಸದಸ್ಯತ್ವ ತಕ್ಷಣ ರದ್ದುಗೊಳಿಸಬೇಕೆಂಬ ಕೇಂದ್ರ ಸರಕಾರದ ಒಂದು ಸುಗ್ರೀವಾಜ್ಞೆಯನ್ನು ಪ್ರತಿಭಟಿಸಿ ರಾಹುಲ್‌ ಗಾಂಧಿ ಅದರ ಪ್ರತಿಯನ್ನು ಪತ್ರಿಕಾಗೋಷ್ಠಿಯಲ್ಲಿ ಹರಿದೆಸೆದು ವೀರಾವೇಶ ಪ್ರದರ್ಶಿಸಿದ್ದರು. ಆಗ ಕಾಂಗ್ರೆಸಿನ ಯುವರಾಜನಾಗಿ ಕಂಗೊಳಿಸುತ್ತಿದ್ದ ರಾಹುಲ್‌ ಗಾಂಧಿಯ ಪತ್ರಿಕಾಗೋಷ್ಠಿಯ ಈ ವೀರಾವೇಶ ಆ ದಿನಗಳಲ್ಲಿ ಭಾರಿ ಸುದ್ದಿಯಾಗಿತ್ತು. ದೇಶವಿಡೀ

ಅಂದು ವೀರಾವೇಶದಿಂದ ಹರಿದೆಸೆದ ಸುಗ್ರೀವಾಜ್ಞೆಯೇ ಇಂದು ಸಂಸತ್‌ ಸದಸ್ಯತ್ವಕ್ಕೆ ಕುತ್ತು ತಂದಿತು Read More »

ಸಿದ್ದರಾಮಯ್ಯನವರಿಂದ ಕಾಂಗ್ರೆಸ್​ ಕಾರ್ಯಕರ್ತನಿಗೆ ಕಪಾಳಮೋಕ್ಷ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್​ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿರುವ ಪ್ರಸಂಗ ನಡೆದಿದೆ. ಮಹಿಳಾ ಕಾರ್ಯಕರ್ತೆಯನ್ನು ತಳ್ಳಿದ್ದಕ್ಕೆ ಕೋಪಗೊಂಡ ಸಿದ್ದರಾಮಯ್ಯ, ದಾವಣಗೆರೆ ಜಿಲ್ಲೆ ಹರಿಹರ ಮೂಲದ ಕಾರ್ಯಕರ್ತನಿಗೆ ಕಪಾಳಕ್ಕೆ ಹೊಡೆದಿದ್ದಾರೆ. ಈ ಬಾರಿಯೂ ಸಹ ಶಾಸಕ ರಾಮಪ್ಪ ಅವರಿಗೆ ಟಿಕೆಟ್​ ನೀಡಬೇಕೆಂದು ದಾವಣಗೆರೆ ಜಿಲ್ಲೆ ಹರಿಹರ ಮೂಲದ ಕಾರ್ಯಕರ್ತರು ಇಂದು (ಮಾರ್ಚ್ 24) ಬೆಂಗಳೂರಿನ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಆಗ್ರಹಿಸಿದರು. ಈ ವೇಳೆ ತಳ್ಳಾಟ ನೂಕಾಟದಿಂದ ಸಿಟ್ಟಿಗೆದ್ದ ಸಿದ್ದರಾಮಯ್ಯ, ಕಾರ್ಯಕರ್ತನ ಕೆನ್ನೆಗೆ ಬಾರಿಸಿದ ವಿಡಿಯೋ

ಸಿದ್ದರಾಮಯ್ಯನವರಿಂದ ಕಾಂಗ್ರೆಸ್​ ಕಾರ್ಯಕರ್ತನಿಗೆ ಕಪಾಳಮೋಕ್ಷ Read More »

ಚುನಾವಣೆ ಪೂರ್ವ ಮತ್ತು ಚುನಾವಣಾ ನೀತಿ ಸಂಹಿತೆಗೆ ಸಿದ್ಧತೆ ಮಾಡಿಕೊಳ್ಳಿ : ಮುಖ್ಯ ಚುನಾವಣಾಧಿಕಾರಿ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿವೆ. ಪ್ರಚಾರ ಕಾರ್ಯವನ್ನು ಕೂಡ ಆರಂಭಿಸಿವೆ. ಮೇ ತಿಂಗಳ ಎರಡನೇ ವಾರದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ ಪತ್ರದ ಮೂಲಕ ತುರ್ತು ಸೂಚನೆ ನೀಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಪತ್ರದಲ್ಲಿ ಸಂದೇಶ ನೀಡಿದ್ದು, ಯಾವುದೇ ಕ್ಷಣಗಳಲ್ಲಿ ಚುನಾವಣೆ

ಚುನಾವಣೆ ಪೂರ್ವ ಮತ್ತು ಚುನಾವಣಾ ನೀತಿ ಸಂಹಿತೆಗೆ ಸಿದ್ಧತೆ ಮಾಡಿಕೊಳ್ಳಿ : ಮುಖ್ಯ ಚುನಾವಣಾಧಿಕಾರಿ Read More »

ಲೋಕಸಭೆ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹ

ದೆಹಲಿ : ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಶುಕ್ರವಾರ ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಇದರಿಂದ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಅವರಿಗೆ ಭಾರಿ ಹಿನ್ನಡೆ ಉಂಟಾಗಿದೆ. 2019ರಲ್ಲಿನ ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರು ತಪ್ಪಿತಸ್ಥ ಎಂದು ಗುರುವಾರ ತೀರ್ಪು ನೀಡಿದ್ದ ಸೂರತ್ ನ್ಯಾಯಾಲಯ, ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಜನಪ್ರತಿನಿಧಿ ಕಾಯ್ದೆ ಅನ್ವಯ ಎರಡು ವರ್ಷ ಶಿಕ್ಷೆಗೆ ಗುರಿಯಾದ ಕಾರಣಕ್ಕೆ ರಾಹುಲ್

ಲೋಕಸಭೆ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹ Read More »

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 1,102.47 ಕೋಟಿ ರೂ. ಶಾಸಕರ ಅನುದಾನ : ಚನಿಲ ತಿಮ್ಮಪ್ಪ ಶೆಟ್ಟಿ

ಪುತ್ತೂರು: ಶಾಸಕ ಸಂಜೀವ ಮಠಂದೂರು ಅವರು 2018ರಿಂದ 2023ರ ಅವಧಿಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 110247.34 ಕೋಟಿ ರೂ. ಅನುದಾನವನ್ನು ತರಿಸಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಹೇಳಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ವರ್ಷದ ಕೊರೋನಾ ಕಾಲಘಟ್ಟ ಸಹಿತ ವಿರೋಧ ಪಕ್ಷದವರನ್ನು ಎದುರಿಸಿ ನಿರೀಕ್ಷೆಗೂ ಮೀರಿ ಅನುದಾನವನ್ನು ತರುವಲ್ಲಿ ಯಶಸ್ವಿಯಾಗುವುದರ ಜತೆಗೆ ಅಭೂತಪೂರ್ವ ಅಭಿವೃದ್ಧಿ ಕಾರ್ಯ ಮಾಡಲಾಗಿದೆ ಎಂದು ತಿಳಿಸಿದರು. 2018 ರಿಂದ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 1,102.47 ಕೋಟಿ ರೂ. ಶಾಸಕರ ಅನುದಾನ : ಚನಿಲ ತಿಮ್ಮಪ್ಪ ಶೆಟ್ಟಿ Read More »

ರಾಜಭವನ ಚಲೋ ಹಮ್ಮಿಕೊಂಡಿದ್ದ ಕಾಂಗ್ರೆಸ್ ನಾಯಕರು ಪೊಲೀಸರ ವಶಕ್ಕೆ

ಬೆಂಗಳೂರು: ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಮಾಡಿ ಆದೇಶ ಮಾಡಿದರೂ ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ‌ ಶಿಫಾರಸ್ಸು ಮಾಡಿಲ್ಲ ಎಂದು‌ ಆರೋಪಿಸಿ ರಾಜಭವನ ಚಲೋ ಹಮ್ಮಿಕೊಂಡಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಕೆಪಿಸಿಸಿ ಕಚೇರಿಯಿಂದ ರಾಜಭವನಕ್ಕೆ ತೆರಳಲು ಮುಂದಾದ ಕಾಂಗ್ರೆಸ್‌ ನಾಯಕರನ್ನು ಪೊಲೀಸರು ಮಾರ್ಗದ ಮಧ್ಯೆಯೇ ತಡೆದರು.ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಸೇರಿದಂತೆ ಹಲವಾರು ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು. ವಶಕ್ಕೆ ಪಡೆಯುವುದಕ್ಕೆ ಮುನ್ನ ಮಾತನಾಡಿದ ಮಾಜಿ ಸಿಎಂ

ರಾಜಭವನ ಚಲೋ ಹಮ್ಮಿಕೊಂಡಿದ್ದ ಕಾಂಗ್ರೆಸ್ ನಾಯಕರು ಪೊಲೀಸರ ವಶಕ್ಕೆ Read More »

ಪ್ರಧಾನಿ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ತಯಾರಾದ ಕಾಂಗ್ರೆಸ್‌ ನಾಯಕಿ ರೇಣುಕಾ ಚೌಧರಿ

ದೆಹಲಿ : ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್‌ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆಯಾದ ಬಳಿಕ ಕುದಿಯುತ್ತಿರುವ ಕಾಂಗ್ರೆಸ್‌ ನಾಯಕರು ಈಗ ಬಿಜೆಪಿ ನಾಯಕರನ್ನು ನಿರ್ದಿಷ್ಟವಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಕಟ್ಟಿಕೊಡಲು ನಾನಾ ದಾರಿಗಳನ್ನು ಹುಡುಕುತ್ತಿದ್ದಾರೆ. ಇದೀಗ ಕಾಂಗ್ರೆಸಿನ ನಾಯಕಿ ಮಾಜಿ ಸಚಿವೆ ರೇಣುಕಾ ಚೌಧರಿ ಮೋದಿ ತನ್ನನ್ನು ಶೂರ್ಪನಖಿ ಎಂದು ಕರೆದಿದ್ದಾರೆ ಎಂದು ಹೇಳಿಕೊಂಡು ಮಾನನಷ್ಟ ಮೊಕದ್ದಮೆ ಹೂಡಲು ತಯಾರಾಗಿದ್ದಾರೆ. 2018ರಲ್ಲಿ ಸದನದಲ್ಲಿ ಭಾಷಣ ಮಾಡುವಾಗ ಪ್ರಧಾನಿ ಮೋದಿ ತನ್ನ ಭಾಷಣಕ್ಕೆ ಗಹಗಹಿಸಿ ನಗುತ್ತಿದ್ದ ರೇಣುಕಾ ಚೌಧರಿಯನ್ನು

ಪ್ರಧಾನಿ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ತಯಾರಾದ ಕಾಂಗ್ರೆಸ್‌ ನಾಯಕಿ ರೇಣುಕಾ ಚೌಧರಿ Read More »

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಘೋಷಣೆಗೆ ಮತದಾರರಿಂದ ಉತ್ತಮ ಬೆಂಬಲ  : ಅಮಲ ರಾಮಚಂದ್ರ

ಪುತ್ತೂರು: ಮುಂಬರುವ ಚುನಾವಣೆಯನ್ನು ಗುರಿಯಾಗಿರಿಸಿಕೊಂಡು ಕಾಂಗ್ರೆಸ್ ಪಕ್ಷವು ನಾಲ್ಕು ಗ್ಯಾರಂಟಿ ಯೋಜನೆಗಳನ್ನು ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದು, ಇದಕ್ಕೆ ಮತದಾರರಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿದ್ದು, ಇದರಿಂದ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಕಾಂಗ್ರೆಸ್ ರಾಜ್ಯ ವಕ್ತಾರ ಅಮಳ ರಾಮಚಂದ್ರ ಹೇಳಿದ್ದಾರೆ. ಪುತ್ತೂರಿನ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ ಬಂದರೆ ತಿಂಗಳಿಗೆ 200 ಯುನಿಟ್ ಉಚಿತ ವಿದ್ಯುತ್,  ಮನೆ ಯಜಮಾನಿಗೆ ಮಾಸಿಕ ರೂ 2000, ಬಿಪಿಎಲ್ ಕಾರ್ಡ್‍ದಾರರಿಗೆ ಪ್ರತಿ ತಿಂಗಳು 10

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಘೋಷಣೆಗೆ ಮತದಾರರಿಂದ ಉತ್ತಮ ಬೆಂಬಲ  : ಅಮಲ ರಾಮಚಂದ್ರ Read More »

ಮೋದಿ ಉಪನಾಮ ಟೀಕೆಗೆ ರಾಹುಲ್ ಗಾಂಧಿಗೆ ಎರಡು ವರ್ಷ ಜೈಲು

ದೆಹಲಿ : ಮೋದಿ ಹೆಸರು ಇರುವವರೆಲ್ಲ ವಂಚಕರು ಎಂದು ಟೀಕಿಸಿದ್ದ ಕಾಂಗ್ರೆಸ್‌ ನಾಯಕ ದೋಷಿ ಎಂದು ಗುಜರಾತ್‌ನ ನ್ಯಾಯಾಲಯ ತೀರ್ಪು ನೀಡಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ.ರಾಹುಲ್ ಗಾಂಧಿ ಮಾಡಿರುವ ಮೋದಿ ಉಪನಾಮ ಟೀಕೆಗೆ ಸಂಬಂಧಿಸಿದಂತೆ ಗುಜರಾತಿನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಸೂರತ್ ನ್ಯಾಯಾಲಯ ಇಂದು ಈ ಪ್ರಕರಣದ ತೀರ್ಪು ನೀಡಿದೆ. ಎಲ್ಲ ಕಳ್ಳರ ಉಪನಾಮ ಮೋದಿ ಎಂದಿರುವುದು ಹೇಗೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದರು. ಇದರ ವಿರುದ್ಧ ಗುಜರಾತ್‌ನ ಬಿಜೆಪಿ ಶಾಸಕ ಮತ್ತು, ಮಾಜಿ

ಮೋದಿ ಉಪನಾಮ ಟೀಕೆಗೆ ರಾಹುಲ್ ಗಾಂಧಿಗೆ ಎರಡು ವರ್ಷ ಜೈಲು Read More »

error: Content is protected !!
Scroll to Top