ರಾಜಕೀಯ

ಮಾರ್ಚ್ 26ರಂದು ಪುತ್ತೂರಿನಲ್ಲಿ ಯುವ ಜಾಥಾ | ಬಿಜೆಪಿ ಯುವಮೋರ್ಚಾದಿಂದ ಪೂರ್ವಭಾವಿ ಸಭೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ವತಿಯಿಂದ ಮಾ. 26ರಂದು ಪುತ್ತೂರಿನಲ್ಲಿ ನಡೆಯಲಿರುವ ಯುವ ಜಾಥಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಗುರುವಾರ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಸಹಜ್ ರೈ ಬಳೆಜ್ಜ ಪ್ರಾಸ್ತಾವಿಕವಾಗಿ ಮಾತನಾಡಿ, ಮಾರ್ಚ್ 26ರಂದು ಮಧ್ಯಾಹ್ನ 3 ಗಂಟೆಗೆ ಜಾಥಾ ನಡೆಯಲಿದ್ದು, ಜಾಥಾವು ಎರಡು ಭಾಗಳಿಂದ ಆಗಮಿಸಲಿದೆ. ವಿಟ್ಲದಿಂದ ಹಾಗೂ ಕುಂಬ್ರದಿಂದ ಜಾಥಾ ಆಗಮಿಸಿ ಕಲ್ಲೇಗ ಭಾರತ್ ಮಾತಾ ಸಭಾಭವನದಲ್ಲಿ ಸೇರಲಿದೆ. ಕಾರ್ಯಕ್ರಮದ ಯಶಸ್ಸಿಗೆ […]

ಮಾರ್ಚ್ 26ರಂದು ಪುತ್ತೂರಿನಲ್ಲಿ ಯುವ ಜಾಥಾ | ಬಿಜೆಪಿ ಯುವಮೋರ್ಚಾದಿಂದ ಪೂರ್ವಭಾವಿ ಸಭೆ Read More »

ಆಝಾನ್‌ ಕೂಗಿದ ಸ್ಥಳವನ್ನು ಗೋಮೂತ್ರ ಸಿಂಪಡಿಸಿ ಶುದ್ಧಿ

ಶಿವಮೊಗ್ಗ : ಹಿರಿಯ ನಾಯಕ ಈಶ್ವರಪ್ಪನವರ ಹೇಳಿಕೆ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ಆಜಾನ್ ಕೂಗಿದ್ದ ಸ್ಥಳವನ್ನು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳದ ಕಾರ್ಯಕರ್ತರು ಸೋಮವಾರ ಗೋಮೂತ್ರ ಸಿಂಪಡಿಸಿ ಶುದ್ಧೀಕರಿಸಿದ್ದಾರೆ.ಪೊಲೀಸರ ಪ್ರತಿರೋಧದ ನಡುವೆಯೂ ಗೋಮೂತ್ರ ಸಿಂಪಡಣೆ ಮಾಡಲಾಯಿತು. ಇದರಿಂದ ಡಿಸಿ ಕಚೇರಿ ಆವರಣದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ಆಜಾನ್ ಕೂಗಿದ್ದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳದ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು. ಈ

ಆಝಾನ್‌ ಕೂಗಿದ ಸ್ಥಳವನ್ನು ಗೋಮೂತ್ರ ಸಿಂಪಡಿಸಿ ಶುದ್ಧಿ Read More »

ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ 2,500 ಕೋ. ರೂ. ಟಿಡಿಆರ್‌ ಹಗರಣ ಎಂದು ಬಿಜೆಪಿ ಆರೋಪ

ಬೆಂಗಳೂರು : ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಟಿಡಿಆರ್‌ಗೆ ಸಂಬಂಧಿಸಿದಂತೆ ನಡೆದಿರುವ ಬೃಹತ್‌ ಹಗರಣವನ್ನು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷ ಎನ್‌.ಆರ್‌.ರಮೇಶ್‌ ಬಯಲಿಗೆಳೆದಿದ್ದು, ದಾಖಲೆ ಬಿಡುಗಡೆ ಮಾಡಿದ್ದಾರೆ.ಈ ಸಂಬಂಧ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಬಿಬಿಎಂಪಿ ಇತಿಹಾಸದಲ್ಲಿಯೇ 2,500 ಕೋಟಿ ರೂ. ಮೊತ್ತದ ಅತಿ ದೊಡ್ಡ ಹಗರಣವಾಗಿದ್ದು, ಬಿಬಿಎಂಪಿ ಎಂದು ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್‌ ಪ್ರದೇಶ ಯೋಜನಾ ಪ್ರಾಧಿಕಾರ (ಬಿಎಂಐಸಿಎಪಿಎ) ಅಧಿಕಾರಿಗಳು ಭಾಗಿಯಾಗಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ

ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ 2,500 ಕೋ. ರೂ. ಟಿಡಿಆರ್‌ ಹಗರಣ ಎಂದು ಬಿಜೆಪಿ ಆರೋಪ Read More »

ರಾಜಕೀಯದಲ್ಲಿ ನಿವೃತ್ತಿಯ ಅಂಚಿಗೆ ಬಂದವರಿಂದ ಯುವಕ್ರಾಂತಿ ಸಮಾವೇಶ: ನಳಿನ್‌ ಕುಮಾರ್‌ ಕಟೀಲ್‌ ವ್ಯಂಗ್ಯ

ಮಂಗಳೂರು : ರಾಜಕಾರಣದಲ್ಲಿ ನಿವೃತ್ತಿ ಅಂಚಿಗೆ ಬಂದು ನಿಂತಿರುವ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯಂಥ ನಾಯಕರು ಯುವಕ್ರಾಂತಿ ಸಮಾವೇಶ ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ವ್ಯಂಗ್ಯವಾಡಿದ್ದಾರೆ.ರಾಹುಲ್‌ ಹೋದಲೆಲ್ಲ ಕಾಂಗ್ರೆಸ್‌ ನೆಲಕಚ್ಚಿದೆ. ಹೀಗಾಗಿ ಅವರು ಕರ್ನಾಟಕಕ್ಕೆ ಬಂದಿರುವುದನ್ನು ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ರಾಜ್ಯದಿಂದ ಕಾಂಗ್ರೆಸ್‌ನ್ನು ಕಿತ್ತೆಸೆಯುವ ಬಿಜೆಪಿಯ ವಾಗ್ದಾನವನ್ನು ನನಸು ಮಾಡುವಲ್ಲಿ ರಾಹುಲ್‌ ಗಾಂಧಿ ಸಾಥ್‌ ನೀಡಲಿದ್ದಾರೆ ಎಂದು ಕಟೀಲ್‌ ಕಾಲೆಳೆದಿದ್ದಾರೆ.ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿ ರಾಜ್ಯಕ್ಕೆ ಭೇಟಿ

ರಾಜಕೀಯದಲ್ಲಿ ನಿವೃತ್ತಿಯ ಅಂಚಿಗೆ ಬಂದವರಿಂದ ಯುವಕ್ರಾಂತಿ ಸಮಾವೇಶ: ನಳಿನ್‌ ಕುಮಾರ್‌ ಕಟೀಲ್‌ ವ್ಯಂಗ್ಯ Read More »

ಶಕುಂತಳಾ ಶೆಟ್ಟಿಯನ್ನು ಅಭ್ಯರ್ಥಿಯೆಂದು ಘೋಷಿಸಲು ಮಹಿಳಾ ಕಾಂಗ್ರೆಸ್ ಆಗ್ರಹ

ಪುತ್ತೂರು: ದಣಿವರಿಯದ ನಾಯಕಿ ಶಕುಂತಳಾ ಶೆಟ್ಟಿ ಅವರನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯೆಂದು ಘೋಷಿಸುವಂತೆ ಮಹಿಳಾ ಕಾಂಗ್ರೆಸ್ ಆಗ್ರಹಿಸಿದೆ.ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶಾರದಾ ಅರಸ್ ಮಾತನಾಡಿ, ಎರಡು ಬಾರಿ ಶಾಸಕರಾಗಿದ್ದ ಶಕುಂತಳಾ ಶೆಟ್ಟಿ ಅವರು ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿದವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿಯೂ ಗುರುತಿಸಿಕೊಂಡವರು. ಜನರ ಸಮಸ್ಯೆಗಳನ್ನು ಬಹಳ ಹತ್ತಿರದಿಂದ ಕಂಡು, ಅದನ್ನು ಬಗೆಹರಿಸಿದವರು. ಆದ್ದರಿಂದ ಅವರು ಮತ್ತೊಮ್ಮೆ ಶಾಸಕರಾಗಿ ಆಯ್ಕೆ ಆಗಬೇಕು ಎಂದು ಮನವಿ ಮಾಡಿಕೊಂಡರು.

ಶಕುಂತಳಾ ಶೆಟ್ಟಿಯನ್ನು ಅಭ್ಯರ್ಥಿಯೆಂದು ಘೋಷಿಸಲು ಮಹಿಳಾ ಕಾಂಗ್ರೆಸ್ ಆಗ್ರಹ Read More »

ಪಂಜದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಮಹಿಳಾ ಸಮಾವೇಶ | ದೇಶವನ್ನು ಪರಮ ವೈಭವದೆಡೆಗೆ ಕೊಂಡೊಯ್ಯುವುದು ಬಿಜೆಪಿಯ ಗುರಿ: ಕೇಂದ್ರ ಸಚಿವ ಶ್ರೀಪಾದ್ ಯೆಸ್ಸೋ ನಾಯ್ಕ್ | ಆರೋಪಗಳಿಗೆ ಅಭಿವೃದ್ಧಿಯ ಮೂಲಕ ಉತ್ತರ: ಸಚಿವ ಅಂಗಾರ

ಸುಳ್ಯ: ಭಾರತವನ್ನು ಪರಮ ವೈಭವದೆಡೆಗೆ ಕೊಂಡೊಯ್ಯುವುದು ಬಿಜೆಪಿ ಸರಕಾರದ ಉದ್ದೇಶ ಎಂದು ಕೇಂದ್ರ ಪ್ರವಾಸೋದ್ಯಮ, ಬಂದರು, ಹಡಗು ಮತ್ತು ಜಲ ಮಾರ್ಗಗಳ ರಾಜ್ಯ ಸಚಿವ ಶ್ರೀಪಾದ್ ಯೆಸ್ಸೋ ನಾಯ್ಕ್ ಹೇಳಿದ್ದಾರೆ. ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಭಾನುವಾರ ಪಂಜ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಮಹಿಳಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತವು ಈಗ ವಿಶ್ವದ ಶ್ರೇಷ್ಠ ದೇಶವಾಗಿ ಬೆಳೆಯುತಿದೆ. ಎಂದ ಅವರು, ಈ ಹಿಂದೆ ವಾಜಪೇಯಿ ಸರಕಾರ ಹಾಗು ಈಗ

ಪಂಜದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಮಹಿಳಾ ಸಮಾವೇಶ | ದೇಶವನ್ನು ಪರಮ ವೈಭವದೆಡೆಗೆ ಕೊಂಡೊಯ್ಯುವುದು ಬಿಜೆಪಿಯ ಗುರಿ: ಕೇಂದ್ರ ಸಚಿವ ಶ್ರೀಪಾದ್ ಯೆಸ್ಸೋ ನಾಯ್ಕ್ | ಆರೋಪಗಳಿಗೆ ಅಭಿವೃದ್ಧಿಯ ಮೂಲಕ ಉತ್ತರ: ಸಚಿವ ಅಂಗಾರ Read More »

ಅಝಾನ್, ಅಲ್ಲಾಹು ಕುರಿತು ಅವಹೇಳನ: ಎಸ್.ಡಿ.ಪಿ.ಐ. ಪ್ರತಿಭಟನೆ

ಪುತ್ತೂರು: ಅಝಾನ್ ಹಾಗೂ ಅಲ್ಲಾಹುವಿನ ಕುರಿತು ಅವಹೇಳನವಾಗಿ ಮಾತನಾಡಿದ ಕೆ.ಎಸ್.ಈಶ್ವರಪ್ಪ ಹಾಗೂ ಬಿಜೆಪಿ ಪಕ್ಷದ ವಿರುದ್ಧ ಎಸ್‌ಡಿಪಿಐ ವತಿಯಿಂದ ಪ್ರತಿಭಟನೆ ಶುಕ್ರವಾರ ಸಂಜೆ ತಾಲೂಕು ಆಡಳಿತ ಸೌಧದ ಬಳಿಯ ಅಮರ್ ಜವಾನ್ ಸ್ಮಾರಕದ ಬಳಿ ನಡೆಯಿತು. ಎಸ್‌ಡಿಪಿಐ ಜಿಲ್ಲಾ ಉಪಾಧ್ಯಕ್ಷ ವಿಕ್ಟರ್ ಮಾರ್ಟಿನ್ ಮಾತನಾಡಿ, ಎಸ್‌ಡಿಪಿಐ ಪಕ್ಷದವರಿಗೆ ಹಿಂದೂ, ಮುಸ್ಲಿಂ, ಬೌದ್ಧ, ಕ್ರಿಶ್ಚಿಯನ್ ಎಲ್ಲರೂ ಒಂದೇ. ನಮಗೇ ಬೇಕಾದ್ದು ಮನುಷ್ಯ ಜಾತಿ ಹೊರತು ಧರ್ಮ ಅಲ್ಲ. ಈ ನಿಟ್ಟಿನಲ್ಲಿ ಬಿಜೆಪಿಯವರು ದ್ವೇಷವನ್ನು ಬಿಟ್ಟುಬಿಡಿ ಎಂದು ಹೇಳಿದ ಅವರು,

ಅಝಾನ್, ಅಲ್ಲಾಹು ಕುರಿತು ಅವಹೇಳನ: ಎಸ್.ಡಿ.ಪಿ.ಐ. ಪ್ರತಿಭಟನೆ Read More »

ಕಾಂಗ್ರೆಸ್ ಭ್ರಷ್ಟಾಚಾರ ನಡೆಸಿದಲ್ಲಿ ಜೈಲಿಗೆ ಹಾಕಲಿ : ಬಿ.ಕೆ. ಹರಿಪ್ರಸಾದ್ ಸವಾಲು

ಪುತ್ತೂರು: . ಕಾಂಗ್ರೆಸ್ ಭ್ರಷ್ಠಾಚಾರ ನಡೆಸಿದ್ದೇ ಆದರೆ ಜೈಲಿಗೆ ಹಾಕಲಿ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಸವಾಲು ಹಾಕಿದರು. ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬುಧವಾರ  ಮುರ ಗೌಡ ಸಮುದಾಯ ಭವನದಲ್ಲಿ ನಡೆದ ಕಾಂಗ್ರೆಸ್‌ನ ಕರಾವಳಿಯ ಪ್ರಜಾಧ್ವನಿ ಯಾತ್ರೆಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಲಾಗವುದು. ಬಿಜೆಪಿ ಜನಸಾಮಾನ್ಯರ ಜೀವನ ಸುಧಾರಣೆ ಮಾಡದೇ ಲೂಟಿ ಮಾಡಿರುವುದು ಮಾತ್ರ ಅವರ ಸಾಧನೆಯಾಗಿದೆ. ಬಿಜೆಪಿಯವರು ಸಮಾಜಕ್ಕೆ, ಕುಟುಂಬಕ್ಕೆ ಪೂರಕವಾದ ಯಾವುದೇ

ಕಾಂಗ್ರೆಸ್ ಭ್ರಷ್ಟಾಚಾರ ನಡೆಸಿದಲ್ಲಿ ಜೈಲಿಗೆ ಹಾಕಲಿ : ಬಿ.ಕೆ. ಹರಿಪ್ರಸಾದ್ ಸವಾಲು Read More »

ವಿಧಾನಸಭೆ ಚುನಾವಣೆಗೆ ದಿನಗಣನೆ: ಹೆಚ್ಚುತ್ತಿರುವ ಬಿಟ್ಟಿ ಉಡುಗೊರೆಗಳ ಸುರಿಮಳೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆ ಜಾರಿ ಮಾಡುವ ಮುನ್ನವೇ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಮತದಾರರಿಗೆ ಉಡುಗೊರೆಗಳ ಸುರಿಮಳೆಗೈಯುತ್ತಿದ್ದಾರೆ. ಈ ತಿಂಗಳ ಅಂತ್ಯದ ವೇಳೆಗೆ ಇಸಿ ಚುನಾವಣಾ ನೀತಿ ಸಂಹಿತೆ ಜಾರಿ ಮಾಡುವ ಸಾಧ್ಯತೆಯಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಸೇರಿದ ರಾಜಕೀಯ ಪಕ್ಷಗಳ ಮುಖಂಡರು ಮತದಾರರನ್ನು ಸೆಳೆಯಲು ಸೀರೆ, ಬೆಳ್ಳಿ, ಬಂಗಾರದ ವಸ್ತುಗಳು, ಪ್ರೆಷರ್ ಕುಕ್ಕರ್, ಮಿಕ್ಸರ್ ಗ್ರೈಂಡರ್, ಟೆಲಿವಿಷನ್ ಸೆಟ್, ಮೊಬೈಲ್‌ಗಳನ್ನು ಹಂಚುತ್ತಿದ್ದಾರೆ. ಹಾವೇರಿ ಜಿಲ್ಲೆಯ

ವಿಧಾನಸಭೆ ಚುನಾವಣೆಗೆ ದಿನಗಣನೆ: ಹೆಚ್ಚುತ್ತಿರುವ ಬಿಟ್ಟಿ ಉಡುಗೊರೆಗಳ ಸುರಿಮಳೆ Read More »

ಜನರ ಸೇವೆಯಿಂದ ರಾಮರಾಜ್ಯ ನಿರ್ಮಾಣ | ಒಳಮೊಗ್ರು ರಾಜೀವ ಗಾಂಧಿ ಸೇವಾ ಕೇಂದ್ರ, ನೂತನ ಗ್ರಾಪಂ ಕಚೇರಿ ಉದ್ಘಾಟಿಸಿ ಶಾಸಕ ಮಠಂದೂರು

ಪುತ್ತೂರು: ಜನರ ಸೇವೆಯೇ ಜನಾರ್ದನನ ಸೇವೆ ಎಂಬ ವೇದವ್ಯಾಕ್ಯದೊಂದಿಗೆ ಗಾಂಧಿ ಕಂಡ ರಾಮ ರಾಜ್ಯ ನಿರ್ಮಾಣ ಮಾಡಬಹುದು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಪುತ್ತೂರು ತಾಲೂಕು ಪಂಚಾಯಿತಿ, ಒಳಮೊಗ್ರು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ರಾಜೀವ್ ಗಾಂಧಿ ಸೇವಾ ಕೇಂದ್ರ ಹಾಗೂ ನೂತನ ಗ್ರಾಮ ಪಂಚಾಯಿತಿ ಕಚೇರಿಯನ್ನು ಮಾ. 13ರಂದು ಉದ್ಘಾಟಿಸಿ ಮಾತನಾಡಿದರು. ತಾನು ದೇವರ ಕೆಲಸ ಮಾಡಲು ಬಂದಿದ್ದೇನೆ ಎಂಬ ಭಾವನೆಯನ್ನಿಟ್ಟು ಕೆಲಸ ನಿರ್ವಹಿಸಿದ್ದೇನೆ. ಪ್ರತಿಯೊಬ್ಬ ಮತದಾರನ ಭರವಸೆಗಳನ್ನು

ಜನರ ಸೇವೆಯಿಂದ ರಾಮರಾಜ್ಯ ನಿರ್ಮಾಣ | ಒಳಮೊಗ್ರು ರಾಜೀವ ಗಾಂಧಿ ಸೇವಾ ಕೇಂದ್ರ, ನೂತನ ಗ್ರಾಪಂ ಕಚೇರಿ ಉದ್ಘಾಟಿಸಿ ಶಾಸಕ ಮಠಂದೂರು Read More »

error: Content is protected !!
Scroll to Top