ರಾಜಕೀಯ

ಭ್ರಷ್ಟಾಚಾರ ಆರೋಪಿ ಶಾಸಕ ವಿರೂಪಾಕ್ಷಪ್ಪ ಜಾಮೀನಿಗೆ ಅರ್ಜಿ

ಬೆಂಗಳೂರು : ಲಂಚ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನಿಗಾಗಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಶಾಸಕರ ಪುತ್ರ ಪ್ರಶಾಂತ್ ಮಾಡಾಳ್‌ 40 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಈ ಪ್ರಕರಣ ಬೆಳಕಿಗೆ ಬಂದ ಬಳಿಕ ಶಾಸಕರು ನಾಪತ್ತೆಯಾಗಿದ್ದಾರೆ. ಲೋಕಾಯುಕ್ತ ಪೊಲೀಸರು ಸೋಮವಾರ ವಿಚಾರಣೆಗೆ ಬರುವಂತೆ ಮಾಡಾಳ್ ವಿರೂಪಾಕ್ಷಪ್ಪಗೆ ನೋಟಿಸ್ ನೀಡಿದ್ದಾರೆ.ಸೋಮವಾರ ವಕೀಲರ ಮೂಲಕ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನಿಗಾಗಿ ಕರ್ನಾಟಕ ಹೈಕೋರ್ಟ್‌ಗೆ […]

ಭ್ರಷ್ಟಾಚಾರ ಆರೋಪಿ ಶಾಸಕ ವಿರೂಪಾಕ್ಷಪ್ಪ ಜಾಮೀನಿಗೆ ಅರ್ಜಿ Read More »

ರಾಹುಲ್‌ ಗಾಂಧಿಯನ್ನು ಮತ್ತೆ ಟೀಕಿಸಿದ ನಳಿನ್

ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ಸನ್ನು ಟೀಕಿಸುವ ಭರದಲ್ಲಿ ಮತ್ತೊಮ್ಮೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಕೊರೊನಾ ಲಸಿಕೆ ತೆಗೆದುಕೊಂಡರೆ ಮಕ್ಕಳಾಗುವುದಿಲ್ಲ ಎಂದು ವಿಪಕ್ಷ ನಾಯಕರು ಹೇಳಿಕೆ ನೀಡಿದ್ದರು. ಬಳಿಕ ಅವರೇ ರಹಸ್ಯವಾಗಿ ಹೋಗಿ ತೆಗೆದುಕೊಂಡರು ಎಂದು ನಳಿನ್‌ ಕುಮಾರ್ ಕಟೀಲ್ ಟಾಂಗ್ ಕೊಟ್ಟಿದ್ದಾರೆ.ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಡಿ, ಹಾಕಿಸಿಕೊಂಡರೆ ಮಕ್ಕಳಾಗುವುದಿಲ್ಲ ಎಂದು ಜನರಿಗೆ ಹೇಳಿದರು. ಅದು ಬಂಜೆತನಕ್ಕೆ ಕಾರಣವಾಗುತ್ತದೆ ಎಂದು ಪ್ರಚಾರ ಮಾಡಿದರು. ಆದರೆ ಅವರೇ ಅದನ್ನು

ರಾಹುಲ್‌ ಗಾಂಧಿಯನ್ನು ಮತ್ತೆ ಟೀಕಿಸಿದ ನಳಿನ್ Read More »

ಬಿಜೆಪಿ ಎಸ್‌ಟಿ ಮೋರ್ಚಾದ ಜಿಲ್ಲಾ ಸಮಾವೇಶ  

ಪುತ್ತೂರು : ಬಿಜೆಪಿ ಎಸ್ ಟಿ ಮೋರ್ಚಾದ ಜಿಲ್ಲಾ ಸಮಾವೇಶ ಭಾನುವಾರ ತೆಂಕಿಲದ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು.   ಸಮಾವೇಶವನ್ನು ಉದ್ಘಾಟಿಸಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ ಮಾತನಾಡಿ, ಕೇವಲ ಅಧಿಕಾರ ಗದ್ದುಗೆಯ ಉದ್ದೇಶ ಇಟ್ಟುಕೊಂಡು ಬಿಜೆಪಿ ಪಕ್ಷ ಸ್ಥಾಪನೆಯಾಗಿಲ್ಲ. ಇದಕ್ಕೆ ಹೊರತಾಗಿ ಸಾಮಾಜಿಕ ನ್ಯಾಯ ನೀಡುವ ನಿಟ್ಟಿನಲ್ಲಿ ಸಂಕಲ್ಪ ತೊಟ್ಟಿರುವ ಏಕೈಕ ಪಕ್ಷ ಇದ್ದರೆ ಅದು ಬಿಜೆಪಿ ಪಕ್ಷ ಎಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದಿರೆ ಹೇಳಿದರು. ಸಾಮಾಜಿಕ ನ್ಯಾಯ

ಬಿಜೆಪಿ ಎಸ್‌ಟಿ ಮೋರ್ಚಾದ ಜಿಲ್ಲಾ ಸಮಾವೇಶ   Read More »

ಬೂತ್ ಜೀತೇಗಾ ತೋ, ದೇಶ್ ಜೀತೇಗಾ | ಆರ್ಯಾಪು ಗ್ರಾಪಂ ಉಪಚುನಾವಣೆಯ ಗೆಲುವು ಹಿನ್ನೆಲೆಯ ಕೃತಜ್ಞತಾ ಸಭೆಯಲ್ಲಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಬೂತ್ ಮಟ್ಟದಲ್ಲಿ ಜಯ ಪಡೆದರೆ ಮಾತ್ರ ನಾವು ದೇಶದಲ್ಲಿ ಜಯ ಗಳಿಸಬಹುದು ಎಂದು ಅಮಿತ್ ಶಾ ಹೇಳಿದ್ದಾರೆ. ಅದರಂತೆ ಆರ್ಯಾಪು ಗ್ರಾಮ ಪಂಚಾಯತ್ ಬೂತ್ ಮಟ್ಟದಲ್ಲಿ ನಾವು ಜಯ ಗಳಿಸಿದ್ದು, ಇದು ರಾಜ್ಯ ಮತ್ತು ರಾಷ್ಟ್ರಕ್ಕೆ ದಿಕ್ಸೂಚಿಯಾಗಿರಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಆರ್ಯಾಪು ಗ್ರಾಮ ಪಂಚಾಯತಿನ ಉಪಚುನಾವಣೆಯಲ್ಲಿ ಜಯ ಗಳಿಸಿದ ಯತೀಶ್ ದೇವ ಅವರ ಮನೆಯಲ್ಲಿ ಏರ್ಪಡಿಸಿದ್ದ ಅಭಿನಂದನೆ ಹಾಗೂ ಕೃತಜ್ಞತಾ ಸಭೆಯಲ್ಲಿ ಅವರು ಮಾತನಾಡಿದರು. ಮೆಂಬರ್ ಆಫ್ ಪಾರ್ಲಿಮೆಂಟ್ ಅವರಿಗೂ ಎಂ.ಪಿ.

ಬೂತ್ ಜೀತೇಗಾ ತೋ, ದೇಶ್ ಜೀತೇಗಾ | ಆರ್ಯಾಪು ಗ್ರಾಪಂ ಉಪಚುನಾವಣೆಯ ಗೆಲುವು ಹಿನ್ನೆಲೆಯ ಕೃತಜ್ಞತಾ ಸಭೆಯಲ್ಲಿ ಶಾಸಕ ಸಂಜೀವ ಮಠಂದೂರು Read More »

ಅರಿಯಡ್ಕ ಗ್ರಾಮ ಪಂಚಾಯಿತಿ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಪುತ್ತೂರು : ಅರಿಯಡ್ಕ ಗ್ರಾಮದ ನೂತನ ಗ್ರಾಮ ಪಂಚಾಯಿತಿ ಕಚೇರಿ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಶನಿವಾರ ನಡೆಯಿತು. ಪುತ್ತೂರು ಶಾಸಕ ಸಂಜೀವ ಮಠಂದೂರು ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಗ್ರಾಮ ಪಂಚಾಯಿತಿಗಳು ಸ್ಥಳೀಯ ಗ್ರಾಮಸ್ಥರ ಆಶೋತ್ತರಗಳನ್ನು ಈಡೇರಿಸುವ ಕೇಂದ್ರವಾಗಿದ್ದು, ಗ್ರಾಪಂ ಮೂಲಕ ಹಲವಾರು ಯೋಜನೆಗಳು ಜನಸಾಮಾನ್ಯರನ್ನು ತಪುಲುತ್ತಿರುವುದು ಶ್ಲಾಘನೀಯ ಎಂದರು. ಕಾರ್ಯಕ್ರಮದಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ಪಂಚಾಯತ್ ಅಧ್ಯಕ್ಷರು, ಸದಸ್ಯರುಗಳು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ಹಾಗೂ ಊರ ಗ್ರಾಮಸ್ಥರು

ಅರಿಯಡ್ಕ ಗ್ರಾಮ ಪಂಚಾಯಿತಿ ನೂತನ ಕಟ್ಟಡಕ್ಕೆ ಶಿಲಾನ್ಯಾಸ Read More »

ಶಾಸಕರ ಅಭಿವೃದ್ಧಿ ಕಾರ್ಯದಿಂದ ನನ್ನ ಗೆಲುವು: ಯತೀಶ್ ದೇವ | ದಿ. ಗಿರೀಶ್ ಗೌಡ ಮರಿಕೆ ಅವರಿಗೆ ಗೆಲುವು ಅರ್ಪಣೆ

ಪುತ್ತೂರು: ಶಾಸಕ ಸಂಜೀವ ಮಠಂದೂರು ಅವರು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯ ಹಾಗೂ ಅವರು ನೀಡಿರುವ ಅನುದಾನವನ್ನು ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಬಳಕೆ ಮಾಡಿರುವುದೇ ತನ್ನ ಗೆಲುವಿಗೆ ಕಾರಣ ಎಂದು ಆರ್ಯಾಪು ಗ್ರಾ.ಪಂ. ಉಪಚುನಾವಣೆಯಲ್ಲಿ ಗೆಲುವು ಪಡೆದುಕೊಂಡ ಯತೀಶ್ ದೇವ ತಿಳಿಸಿದ್ದಾರೆ. ಗಿರೀಶ್ ಗೌಡ ಅವರ ಅಕಾಲಿಕ ನಿಧನದ ಬಳಿಕ ಉಪಚುನಾವಣೆ ನಡೆದಿದ್ದು, ತನ್ನ ಗೆಲುವನ್ನು ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ಗಿರೀಶ್ ಗೌಡ ಅವರಿಗೆ ಅರ್ಪಿಸುತ್ತೇನೆ ಎಂದಿರುವ ಯತೀಶ್ ದೇವ. ಶಾಸಕ ಸಂಜೀವ ಮಠಂದೂರು

ಶಾಸಕರ ಅಭಿವೃದ್ಧಿ ಕಾರ್ಯದಿಂದ ನನ್ನ ಗೆಲುವು: ಯತೀಶ್ ದೇವ | ದಿ. ಗಿರೀಶ್ ಗೌಡ ಮರಿಕೆ ಅವರಿಗೆ ಗೆಲುವು ಅರ್ಪಣೆ Read More »

ನಮಗೆ ಸಿಕ್ಕಿದ ಸ್ಥಾನಮಾನ ಪಕ್ಷದಿಂದ ಸಿಕ್ಕಿದ್ದು : ಶಾಸಕ ಸಂಜೀವ ಮಠಂದೂರು | ಪುತ್ತೂರು ಗ್ರಾಮಾಂತರ ಮಂಡಲ ಮಹಿಳಾ ಮೋರ್ಚಾ ಸಭೆ

ಪುತ್ತೂರು : ಪುತ್ತೂರು ಗ್ರಾಮಾಂತರ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಚುನಾವಣಾ ಪೂರ್ವ ತಯಾರಿ  ಸಭೆ ಶುಕ್ರವಾರ ಟೌನ್‍ ಬ್ಯಾಂಕ್‍ ಸಭಾಂಗಣದಲ್ಲಿ ನಡೆಯಿತು. ಸಭೆಯನ್ನುದ್ದೇಶಿಸಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ನಮಗೆ ಸಿಕ್ಕಿದ ಸ್ಥಾನಮಾನ ಪಕ್ಷದಿಂದ ಸಿಕ್ಕಿದ್ದು, ಅದಕ್ಕಾಗಿ ಪಕ್ಷವನ್ನು ಮತ್ತಷ್ಟು ಕಟ್ಟುವಲ್ಲಿ ಪ್ರಯತ್ನಗಳು ಸಾಗಬೇಕು. ಇಂದು ಬಹುಮತ ಇರುವ ಮಹಿಳೆಯರು ಸಂಘಟನೆ ಮಾಡಿ ನಾಯಕತ್ವ ಬೆಳೆಸುವ ಕೆಲಸ ಕಾರ್ಯ ಆಗಬೇಕು ಎಂದ ಅವರು, ವಿಜಯ ಸಂಕಲ್ಪ ಯಾತ್ರೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು. ಬಿಜೆಪಿ

ನಮಗೆ ಸಿಕ್ಕಿದ ಸ್ಥಾನಮಾನ ಪಕ್ಷದಿಂದ ಸಿಕ್ಕಿದ್ದು : ಶಾಸಕ ಸಂಜೀವ ಮಠಂದೂರು | ಪುತ್ತೂರು ಗ್ರಾಮಾಂತರ ಮಂಡಲ ಮಹಿಳಾ ಮೋರ್ಚಾ ಸಭೆ Read More »

ಮಾ.5 : ಬಿಜೆಪಿ ಎಸ್‍.ಟಿ.ಮೋರ್ಚಾದಿಂದ ಎಸ್‍.ಟಿ.ಮೋರ್ಚಾ ಸಮಾವೇಶ | ಜಿಲ್ಲೆಯಿಂದ 5 ಸಾವಿರಕ್ಕೂ ಮಿಕ್ಕಿ ಎಸ್.ಟಿ. ಮೋರ್ಚಾ ಸದಸ್ಯರು ಪಾಲ್ಗೊಳ್ಳುವ ನಿರೀಕ್ಷೆ

ಪುತ್ತೂರು : ಬಿಜೆಪಿ ಎಸ್‍.ಟಿ ಮೋರ್ಚಾ ವತಿಯಿಂದ ಎಸ್‍.ಟಿ.ಮೋರ್ಚಾ ಸಮಾವೇಶ ಮಾ.5 ಭಾನುವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಎಂದಿ ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ಮಂಜುನಾಥ ನಾಯ್ಕ ತಿಳಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿಂದುತ್ವ, ರಾಷ್ಟ್ರೀಯ ವಿಚಾರಧಾರೆ ಅಡಿಯಲ್ಲಿ ಬಿಜೆಪಿ ಸರಕಾರ ಎಸ್‍.ಟಿ. ಸಮಯದಾಯದ ಅಭಿವೃದ್ಧಿಗೆ ನಿರಂತರ ಕಾರ್ಯಪ್ರವೃತ್ತವಾಗಿದ್ದು, ಭಾರತದ ಅತ್ಯುನ್ನತ ರಾಷ್ಟ್ರಪತಿ ಸ್ಥಾನವನ್ನು ದ್ರೌಪದಿ ಮುರ್ಮು ಅವರಿಗೆ ನೀಡಿದ್ದು, ಅಲ್ಲದೆ ಸುರಂಗದ ಮೂಲಕ ಜಲಧಾರೆಯನ್ನು ಕಂಡುಕೊಂಡು ಬರಡು

ಮಾ.5 : ಬಿಜೆಪಿ ಎಸ್‍.ಟಿ.ಮೋರ್ಚಾದಿಂದ ಎಸ್‍.ಟಿ.ಮೋರ್ಚಾ ಸಮಾವೇಶ | ಜಿಲ್ಲೆಯಿಂದ 5 ಸಾವಿರಕ್ಕೂ ಮಿಕ್ಕಿ ಎಸ್.ಟಿ. ಮೋರ್ಚಾ ಸದಸ್ಯರು ಪಾಲ್ಗೊಳ್ಳುವ ನಿರೀಕ್ಷೆ Read More »

ಈಶಾನ್ಯ ಭಾರತದ ಚುನಾವಣಾ ಫಲಿತಾಂಶ ದೇಶದ ಪ್ರಗತಿ, ಸ್ಥಿರತೆಗೆ ಪ್ರೇರಣೆ ಎಂದ ಮೋದಿ

ತ್ರಿಪುರಾ, ನಾಗಾಲ್ಯಾಂಡ್ ಎನ್.ಡಿ.ಎ.ಗೆ ಸ್ಪಷ್ಟ ಬಹುಮತ | ಮೇಘಾಲಯದಲ್ಲಿ ಎನ್.ಸಿ.ಪಿ. ಜೊತೆ ಬಿಜೆಪಿ ಸರ್ಕಾರ! ನವದೆಹಲಿ: ಗುರುವಾರ ಪ್ರಕಟವಾದ ಈಶಾನ್ಯ ಭಾರತದ ಚುನಾವಣಾ ಫಲಿತಾಂಶ ದೇಶದ ಪ್ರಗತಿ, ಸ್ಥಿರತೆಗೆ ಪ್ರೇರಣೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಟ್ವೀಟಿನಲ್ಲಿ ತಿಳಿಸಿದ್ದಾರೆ. ತ್ರಿಪುರಾ, ನಾಗಾಲ್ಯಾಂಡಿನಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಸ್ಪಷ್ಟ ಬಹುಮತ ಪಡೆದಿದ್ದರೆ, ಮೇಘಾಲಯದಲ್ಲಿ ಎನ್.ಸಿ.ಪಿ. ಜೊತೆಗೆ ಬಿಜೆಪಿ ಮೈತ್ರಿ ಸರಕಾರ ರಚನೆಯಾಗಲಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಮಾಡಿರುವ ನರೇಂದ್ರ ಮೋದಿ, ‘ಧನ್ಯವಾದ ತ್ರಿಪುರಾ! ಈ ಮತ ಪ್ರಗತಿ ಮತ್ತು ಸ್ಥಿರತೆಗಾಗಿ. ಬಿಜೆಪಿಯು ರಾಜ್ಯದ ಅಭಿವೃದ್ಧಿಯ ಪಥಕ್ಕೆ ಉತ್ತೇಜನ ನೀಡಲಿದೆ. ತ್ರಿಪುರಾದಲ್ಲಿ ಬೇರು ಮಟ್ಟದಿಂದ ಅದ್ಬುತವಾಗಿ ಶ್ರಮಿಸಿದ ಬಿಜೆಪಿಯ ಎಲ್ಲ ಕಾರ್ಯಕರ್ತರ ಬಗ್ಗೆ ನನಗೆ ಹೆಮ್ಮೆ ಇದೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ತ್ರಿಪುರಾ ಫಲಿತಾಂಶ:

ಈಶಾನ್ಯ ಭಾರತದ ಚುನಾವಣಾ ಫಲಿತಾಂಶ ದೇಶದ ಪ್ರಗತಿ, ಸ್ಥಿರತೆಗೆ ಪ್ರೇರಣೆ ಎಂದ ಮೋದಿ Read More »

ಶಾಸಕ ಸಂಜೀವ ಮಠಂದೂರು, ಸಂಸದ ನಳಿನ್ ಕುಮಾರ್ ಕಾರ್ಯವೈಖರಿಯಿಂದ ಮತ್ತೊಮ್ಮೆ ಬಿಜೆಪಿ ಗೆಲುವು | ಬೂತ್ ವಿಜಯ ಅಭಿಯಾನದಿಂದ ಬಿಜೆಪಿ ಬೂತ್ ಶಕ್ತೀಕರಣ

ಪುತ್ತೂರು: ಮುಂದಿನ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿಯ ಲೋಕಸಭಾ ಚುನಾವಣೆ ಲೀಡ್‌ಗಿಂತಲೂ ಅಧಿಕ ಮತಗಳಿಂದ ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಬಿಜೆಪಿ ವಿಭಾಗ ಪ್ರಭಾರಿ ಗೋಪಾಲಕೃಷ್ಣ ಹೇರಳೆ ತಿಳಿಸಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಸ್ತುತ ಬಿಜೆಪಿ ಅತ್ಯಂತ ಬಲಿಷ್ಠವಾಗಿದ್ದು, ಯೋಜನೆ ಹಾಗೂ ಯೋಚನೆ ಸಹಿತ ಕಾರ್ಯಬದ್ಧತೆಯಲ್ಲಿ ರಾಜಿ ಮಾಡಿಕೊಂಡಿಲ್ಲ. ಪಕ್ಷದ ಯೋಜನೆ, ಯೋಚನೆಗಳಿಗೆ ಪೂರಕವಾಗಿ ಶಾಸಕ ಸಂಜೀವ ಮಠಂದೂರು ಅವರ ಕಾರ್ಯವೈಖರಿ ಯಶಸ್ವಿಯಾಗಿದೆ. ಈ ಹಿನ್ನಲೆಯಲ್ಲಿ ನಮಗೆ ಗೆಲ್ಲುವುದರಲ್ಲಿ ನಿಶ್ಚಯವಿದೆ ಎಂದ ಅವರು,

ಶಾಸಕ ಸಂಜೀವ ಮಠಂದೂರು, ಸಂಸದ ನಳಿನ್ ಕುಮಾರ್ ಕಾರ್ಯವೈಖರಿಯಿಂದ ಮತ್ತೊಮ್ಮೆ ಬಿಜೆಪಿ ಗೆಲುವು | ಬೂತ್ ವಿಜಯ ಅಭಿಯಾನದಿಂದ ಬಿಜೆಪಿ ಬೂತ್ ಶಕ್ತೀಕರಣ Read More »

error: Content is protected !!
Scroll to Top