ರಾಜಕೀಯ

ಮಂಜುನಾಥನಗರದಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ

ಸವಣೂರು : ಪಾಲ್ತಾಡಿ ಬಿಜೆಪಿ ವತಿಯಿಂದ ಬಿಜೆಪಿ ಸ್ಥಾಪನಾ ದಿನಾಚರಣೆಯನ್ನು ಪಾಲ್ತಾಡಿ ಬೂತ್ ಸಂಖ್ಯೆ 70ರ ಅಧ್ಯಕ್ಷ ಅನ್ನಪೂರ್ಣ ಪ್ರಸಾದ್ ರೈ ಅವರ ಮನೆಯಲ್ಲಿ ನಡೆಯಿತು. ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷೆ ಇಂದಿರಾ ಬಿ.ಕೆ. ಅವರು ಮುಂಬರುವ ಲೋಕಸಭಾ ಚುನಾವಣೆ ಹಾಗೂ ನಾರಿ ಶಕ್ತಿ ಸಂಗಮದ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಗಣೇಶ್ ಶೆಟ್ಟಿ ಕುಂಜಾಡಿ, ಬಾಳಪ್ಪ ಪೂಜಾರಿ ಬಂಬಿಲದೋಳ, ವಿಠಲ ಶೆಟ್ಟಿ ಬಂಬಿಲ, ಸವಣೂರು ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್.ಬಂಬಿಲ, […]

ಮಂಜುನಾಥನಗರದಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ Read More »

ಏ.14 : ಪ್ರಧಾನಿ ಮೋದಿ ಕರ್ನಾಟಕಕ್ಕೆ | ರೋಡ್ ಶೋ ದಲ್ಲಿ ಪಾಲ್ಗೊಳ್ಳಲಿರುವ ಮೋದಿ

ಬೆಂಗಳೂರು : ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರೆ. ಏ.14ರಂದು ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದು, ಒಂದು ದಿನದಲ್ಲಿ ಬೆಂಗಳೂರಿನ ಉತ್ತರ ಲೋಕಸಭಾ ಕ್ಷೇತ್ರದಲ್ಲಿ ರೋಡ್ ಶೋ ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಬೆಂಗಳೂರಿಗೆ ಆಗಮಿಸಲಿರುವ ನರೇಂದ್ರ ಮೋದಿ ಮಧ್ಯಾಹ್ನ 3 ಗಂಟೆಗೆ ಡಾ ಕೆ ಸುಧಾಕರ್ ಪರ ಕ್ಷೇತ್ರ ಚಿಕ್ಕಬಳ್ಳಾಪುರ ಆಯೋಜಿಸಲಾದ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾವೇಶ ಮುಗಿದ ನಂತರ ಮೋದಿ

ಏ.14 : ಪ್ರಧಾನಿ ಮೋದಿ ಕರ್ನಾಟಕಕ್ಕೆ | ರೋಡ್ ಶೋ ದಲ್ಲಿ ಪಾಲ್ಗೊಳ್ಳಲಿರುವ ಮೋದಿ Read More »

ಏ.9 : ಪುತ್ತೂರಿನಲ್ಲಿ ಬಿಜೆಪಿ ಮಹಿಳಾ ಸಮಾವೇಶ | ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸಲು ಮಹಿಳಾ ಸಮಾವೇಶ : ಸುಲೋಚನಾ ಜಿ.ಕೆ.ಭಟ್

ಪುತ್ತೂರು: ಹಲವಾರು ಯೋಜನೆಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಪುತ್ತೂರಿನ ಜೈನ ಭವನದಲ್ಲಿ ಏ.9 ರಂದು ಬಿಜೆಪಿ ಮಹಿಳಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ಸುಲೋಚನಾ ಜಿ.ಕೆ.ಭಟ್‍ ತಿಳಿಸಿದ್ದಾರೆ. ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ಪ್ರಧಾನಿಯವರ ಯೋಜನೆ ಕುರಿತು ತಿಳಿಸಲು ಮನೆ ಮನೆ ಭೇಟಿ, ಪ್ರತೀ ಬೂತ್‍ಗಳಲ್ಲಿ ಮಹಿಳಾ ಸಭೆ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತ್ರಿವಳಿ ತಲಾಖ್,

ಏ.9 : ಪುತ್ತೂರಿನಲ್ಲಿ ಬಿಜೆಪಿ ಮಹಿಳಾ ಸಮಾವೇಶ | ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸಲು ಮಹಿಳಾ ಸಮಾವೇಶ : ಸುಲೋಚನಾ ಜಿ.ಕೆ.ಭಟ್ Read More »

ಪುತ್ತೂರು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ

ಪುತ್ತೂರು: ಬಿಜೆಪಿ ಸ್ಥಾಪನಾ ದಿನವನ್ನು ಬಿಜೆಪಿ ಕಛೇರಿಯಲ್ಲಿ ಇಂದು ಆಚರಿಸಲಾಯಿತು. ದ. ಕನ್ನಡ ಬಿಜೆಪಿ ಉಪಾಧ್ಯಕ್ಷ, ಪುತ್ತೂರು ಬಿಜೆಪಿ ಪ್ರಭಾರಿ ಸುನೀಲ್ ಆಳ್ವಾ ಈ ಸಂದರ್ಭದಲ್ಲಿ ಮಾತಾನಾಡಿ, ಜನಸಂಘದ ಹಿರಿಯರ ತ್ಯಾಗ ಬಲಿದಾನ ಮತ್ತು 1980ರ ನಂತರ ಬಿಜೆಪಿಯ ಏಳುಬೀಳುಗಳ ಬಗ್ಗೆ ಮಾಹಿತಿ ನೀಡಿದರು, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವಾ ಅಧ್ಯಕ್ಷತೆ ವಹಿಸಿದ್ದರು. ಚುನಾವಣಾ ಪ್ರಭಾರಿ ಸುಲೋಚನಾ ಜಿ. ಕೆ ಭಟ್, ನಗರ ಮಂಡಲ ಅಧ್ಯಕ್ಷ ಪಿ.ಜಿ ಜಗನ್ನೀವಾಸ್ ರಾವ್, ಬಿಜೆಪಿ ಪ್ರಮುಖ್

ಪುತ್ತೂರು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ Read More »

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಸಭೆ

ಪುತ್ತೂರು: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಸಭೆ ಶುಕ್ರವಾರ ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ  ಪ್ರಾಮಾಣಿಕವಾಗಿ ಬೂತ್ ಮಟ್ಟದಲ್ಲಿ ಕೆಲಸ ಮಾಡಬೇಕು. ಅಲ್ಲದೆ ಅಲ್ಪಸಂಖ್ಯಾತ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರರ ಮತವನ್ನು ಪಡೆದು ನಮ್ಮ ಅಭ್ಯರ್ಥಿ ಬ್ರಿಜೇಶ್ ಚೌಟರನ್ನು ಲಕ್ಷಾಂತರ ಮತಗಳ ಅಂತರದಲ್ಲಿ ಗೆಲ್ಲಿಸಿ ಎಂದು ಕರೆ ನೀಡಿದರು ಸಭೆಯಲ್ಲಿ ಪುತ್ತೂರು ಮಾಜಿ

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಸಭೆ Read More »

ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಸುಮಲತಾ ಅಂಬರೀಶ್

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ಮಾಜಿ ಮುಖ್ಯಮಂತ್ರಿ ಬಿ.ಎಸ್‍.ಯಡಿಯೂರಪ್ಪ ಅವರು ಕೇಸರಿ ಶಾಲು ಹಾಕಿ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಸಮಲತಾ ಅವರ ಜತೆಗೆ ಹಲವಾರು ಮುಖಂಡರು, ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ವಿರೋಧ ಪಕ್ಷದ ನಾಯಕ ಆರ್‍.ಅಶೋಕ್‍, ರಾಜ್ಯ ಬಿಜೆಪಿ ಘಟಕದ

ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಸುಮಲತಾ ಅಂಬರೀಶ್ Read More »

ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರದಲ್ಲಿ 21 ನಾಮಪತ್ರ ಸಲ್ಲಿಕೆ | ಒಟ್ಟು 11 ಅಭ್ಯರ್ಥಿಗಳಿಂದ ನಾಮಪತ್ರ

ಮಂಗಳೂರು: ಏ.26ರಂದು ನಡೆಯಲಿರುವ ದ.ಕ. ಲೋಕಸಭಾ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯಿಂದ ಒಟ್ಟು 11 ಅಭ್ಯರ್ಥಿಗಳಿಂದ 21 ನಾಮಪತ್ರ ಸಲ್ಲಿಕೆಯಾಗಿದೆ. ಬಿಜೆಪಿ ಅಭ್ಯರ್ಥಿಯಾಗಿ ಕ್ಯಾ.ಬ್ರಿಜೇಶ್ ಚೌಟ(42), ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ಆರ್. (53),ಜನತಾ ಪಕ್ಷ ಹಾಗೂ ಜನತಾದಳ (ಯು) ಎರಡಕ್ಕೂ ಸುಪ್ರೀತ್ ಕುಮಾ‌ರ್ ಪೂಜಾರಿ (47), ಬಹುಜನ್ ಸಮಾಜ್ ಪಾರ್ಟಿ (ಬಿಎಸ್ಪಿ)ಯಿಂದ ಕಾಂತಪ್ಪ (63), ಉತ್ತಮ ಪ್ರಜಾಕೀಯ ಪಾರ್ಟಿಯಿಂದ ಕೆ.ಇ.ಮನೋಹರ (47), ಕರ್ನಾಟಕ ರಾಷ್ಟ್ರ ಸಮಿತಿಯಿಂದ ರಂಜಿನಿ ಎಂ.(39) ಮತ್ತು ಕರುನಾಡ ಸೇವಕರ ಪಾರ್ಟಿಯಿಂದ ದುರ್ಗಾಪ್ರಸಾದ್ (33) ಹಾಗೂ ಪಕ್ಷೇತರ

ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರದಲ್ಲಿ 21 ನಾಮಪತ್ರ ಸಲ್ಲಿಕೆ | ಒಟ್ಟು 11 ಅಭ್ಯರ್ಥಿಗಳಿಂದ ನಾಮಪತ್ರ Read More »

ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ನಾಮಪತ್ರ ಸಲ್ಲಿಕೆ

ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ದಕ್ಷಿಣ ಕನ್ನಡದ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಶೋಭಾ ಕರಂದ್ಲಾಜೆ ಇಂದು  ನಾಮಪತ್ರ ಸಲ್ಲಿಸಿದರು. ಅಪಾರ ಸಂಖ್ಯೆಯ ಕಾರ್ಯಕರ್ತರ ಜೊತೆ ಬೃಹತ್ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದ ಶೋಭಾ ಕರಂದ್ಲಾಜೆ ಚುನಾವಣಾ ಆಯೋಗಕ್ಕೆ ತಮ್ಮ ಆಸ್ತಿ ವಿವರ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ನಾಮಪತ್ರ ಸಲ್ಲಿಕೆ Read More »

ಲೋಕಸಭೆ ಚುನಾವಣೆ : ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಗುರುವಾರ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಬಂಟ್ಸ್ ಹಾಸ್ಟೆಲ್ ನ ಬಿಜೆಪಿ ಚುನಾವಣಾ ಕಚೇರಿಯಿಂದ ಮಂಗಳೂರು ಪುರಭವನವರೆಗೆ ಮೆರವಣಿಯಲ್ಲಿ ಸಾಗಿಬಂದರು. ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಪುರಭವನದ ಹೊರಭಾಗದಲ್ಲಿ ಬಿಜೆಪಿ ಪ್ರಚಾರ ಸಮಾವೇಶ ನಡೆಯಿತು.ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ನಳಿನ್ ಕುಮಾರ್ ಕಟೀಲ್, ಜೆಡಿಎಸ್ ಜಿಲ್ಲಾಧ್ಯಕ್ಷ

ಲೋಕಸಭೆ ಚುನಾವಣೆ : ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ Read More »

ಬಿಜೆಪಿ ಸೇರ್ಪಡೆ ನಿರ್ಧಾರ ಪ್ರಕಟಿಸಿದ ಸುಮಲತಾ ಅಂಬರೀಶ್ | ಏ.6 ಕ್ಕೆ ಬಿಜೆಪಿ ಸೇರ್ಪಡೆಗೆ ಮುಹೂರ್ತ ಘೋಷಿಸಿದ ಸುಮಲತಾ

ಮಂಡ್ಯ: ನಾನು ಈ ಬಾರಿ ಪಕ್ಷೇತರಳಾಗಿ ಸ್ಪರ್ಧೆ‍ ಮಾಡುವುದಿಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ನಾನು ಬೆಂಬಲ ನೀಡುತ್ತೇನೆ. ಆದರೆ ಕಾಂಗ್ರೆಸ್ ಪಕ್ಷ ಸೇರುವುದಿಲ್ಲ, ರಾಜಕೀಯ ಬಿಟ್ಟು ಹೋಗುವುದಿಲ್ಲ ಎಂದು ಸುಮಲತಾ ಅಂಬರೀಶ್ ತಿಳಿಸಿದ್ದಾರೆ. ಮಂಡ್ಯದಲ್ಲಿ ಇಂದು ನಡೆದ ಬೆಂಬಲಿಗರ ಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಪ್ರಸ್ತುತ ದಿನಗಳಲ್ಲಿ ಮೋದಿ ಅವರು ದೇಶದ ಬಗ್ಗೆ ಹೊಂದಿರುವ ಕನಸಿಗೆ ನಾವು ಬೆಂಬಲವಾಗಿ ನಿಲ್ಲಬೇಕು. ನನ್ನ ಎಂಪಿ ಸ್ಥಾನವನ್ನು ಬಿಟ್ಟು ಕೊಟ್ಟು ಬಿಜೆಪಿ ಸೇರುವ ನಿರ್ಧಾರ ಮಾಡಿದ್ದೀನಿ ಎಂದು ಘೋಷಿಸಿದರು.

ಬಿಜೆಪಿ ಸೇರ್ಪಡೆ ನಿರ್ಧಾರ ಪ್ರಕಟಿಸಿದ ಸುಮಲತಾ ಅಂಬರೀಶ್ | ಏ.6 ಕ್ಕೆ ಬಿಜೆಪಿ ಸೇರ್ಪಡೆಗೆ ಮುಹೂರ್ತ ಘೋಷಿಸಿದ ಸುಮಲತಾ Read More »

error: Content is protected !!
Scroll to Top