ಲೋಕಸಭೆ ಚುನಾವಣೆ : 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ |
ಬೆಂಗಳೂರು: ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅಧಿಸೂಚನೆ ಪ್ರಕಟಗೊಂಡ ಬೆನ್ನಲ್ಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏ.4ರಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿದಿನ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಸಲ್ಲಿಕೆ ಮಾಡಬಹುದು. ಚುನಾವಣಾಧಿಕಾರಿಯ ಅನುಪಸ್ಥಿತಿಯಲ್ಲಿ ಹೆಚ್ಚುವರಿ ಚುನಾವಣಾಧಿಕಾರಿ ಮೂಲಕ ನಾಮಪತ್ರ ಸಲ್ಲಿಸಬಹುದು. ಏ.5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏ.8ರಂದು ಉಮೇದುವಾರಿಕೆಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಏ.26ರಂದು ಮತದಾನ ನಡೆಯಲಿದೆ. […]
ಲೋಕಸಭೆ ಚುನಾವಣೆ : 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ | Read More »










