ರಾಜಕೀಯ

ಸರಣಿ ಆಡಿಯೋ ರಿಲೀಸ್: ಚುನಾವಣೆಗೆ ಭರ್ಜರಿ ತಯಾರಿಯೇ?

ಪುತ್ತೂರು: ಒಂದರ ಬೆನ್ನಿಗೆ ಇನ್ನೊಂದರಂತೆ ಹೊರಬರುತ್ತಿರುವ ಆಡಿಯೋ ತುಣುಕುಗಳು ಚುನಾವಣೆಗೆ ತಯಾರಿಯೇ? ಹೌದು ಎನ್ನುತ್ತಿವೆ ಬಲ್ಲಮೂಲಗಳು. ಚುನಾವಣೆ ಇನ್ನೇನು ಬಂದೇ ಬಿಟ್ಟಿತು ಎನ್ನುವಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಹೊಸ ವರಸೆಗಳು ಆರಂಭವಾಗತೊಡಗುತ್ತವೆ. ಹೇಳಿಕೆಗಳ ವಾರ್, ವೀಡಿಯೋ ರಿಲೀಸ್ ಹೀಗೆ ಅನೇಕ ರೀತಿ. ಆದರೆ ಈ ಬಾರಿ ಪುತ್ತೂರು ಕ್ಷೇತ್ರದಲ್ಲಿ ಆಡಿಯೋ ವಾರ್ ಆರಂಭವಾಗಿವೆ. ಈ ಆಡಿಯೋ ವಾರ್ ಯಾರನ್ನು ಗುರಿಯಾಗಿಸಿಕೊಂಡಿವೆ? ಉದ್ದೇಶವಾದರೂ ಏನು? ಆಗಿರುವ ಅಭಿವೃದ್ಧಿ ಕಾರ್ಯಗಳಿಗೆ ಮಸಿ ಎರಚುವ ಹುನ್ನಾರವೇ? ಹೀಗೆ ಹತ್ತು ಹಲವು ಪ್ರಶ್ನೆಗಳು […]

ಸರಣಿ ಆಡಿಯೋ ರಿಲೀಸ್: ಚುನಾವಣೆಗೆ ಭರ್ಜರಿ ತಯಾರಿಯೇ? Read More »

ಸಾರಡ್ಕ-ಪರಿಯಾಲ್ತಡ್ಕ: 9.75 ಕೋಟಿ ರೂ.ನ ಯೋಜನೆಗೆ ಶಂಕುಸ್ಥಾಪನೆ

ಪುತ್ತೂರು: ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರಡ್ಕ – ಪರಿಯಾಲ್ತಾಡ್ಕ ಪ್ರದೇಶದಲ್ಲಿ 9.75 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಅವರು ಶಂಕುಸ್ಥಾಪನೆ ನೆರವೇರಿಸಿದರು. ಶಕ್ತಿ ಕೇಂದ್ರದ ಪ್ರಮುಖರಾದ ಹರೀಶ್ ಭಟ್, ಉದಯ ಬಾಸ್ಕರ, ಪುಣಚ ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಕೃಷ್ಣ ಬಳಂತಿಮೊಗರು, ಕೇಪು ಪಂಚಾಯತ್ ಅಧ್ಯಕ್ಷೆ ಯಶಸ್ವಿನಿ ಶಾಸ್ತ್ರೀ, ಪುಣಚ ಮಹಾಶಕ್ತಿಕೆಂದ್ರದ ಅಧ್ಯಕ್ಷ ಹರಿಪ್ರಸಾದ್ ಯಾದವ್, ಮಹಿಷಮರ್ಧಿನಿ ದೇವಸ್ಥಾನ ಆಡಳಿತ ಮಂಡಳಿ ಪುಣಚ ಅಧ್ಯಕ್ಷ ಎಸ್.ಆರ್ ರಂಗಮೂರ್ತಿ, ವ್ಯಾಪಾರ ಪ್ರಕೋಷ್ಠದ ಸಂಚಾಲಕ

ಸಾರಡ್ಕ-ಪರಿಯಾಲ್ತಡ್ಕ: 9.75 ಕೋಟಿ ರೂ.ನ ಯೋಜನೆಗೆ ಶಂಕುಸ್ಥಾಪನೆ Read More »

ಕುರುಡುಕಟ್ಟೆ ಪ.ಜಾತಿ, ಪ.ಪಂಗಡ ಕಾಲನಿ ರಸ್ತೆಗೆ ಸೇತುವೆ, ರಸ್ತೆ: 2.73 ಕೋಟಿ ರೂ.ನ ಯೋಜನೆಗೆ ಶಂಕುಸ್ಥಾಪನೆ

ಪುತ್ತೂರು: ಪುಣಚ  ಗ್ರಾಮದ ಕೃಷ್ಣಮೂಲೆಯಿಂದ ಬರೆಂಜ ಮಲಿಪಾಡಿ  ನೀಡ್ಪಳಾ ಕುರುಡುಕಟ್ಟೆ ಪ- ಜಾತಿ ಪ ಪಂಗಡ  ಕಾಲೋನಿ ರಸ್ತೆಗೆ ಸೇತುವೆ ನಿರ್ಮಾಣ ಮತ್ತು ರಸ್ತೆ ಅಭಿವೃದ್ಧಿಗೆ  2 ಕೋಟಿ 73 ಲಕ್ಷ ರೂ. ಅನುದಾನದ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಅವರು ಶಂಕುಸ್ಥಾಪನೆ ನೆರವೇರಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಕೃಷ್ಣ, ಉಪಾಧ್ಯಕ್ಷೆ ಪ್ರತಿಭಾ, ಬಲ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪರಮೇಶ್ವರಿ ಭಟ್, ಬಾಜಾಪ ಮಂಡಲ  ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಬಾಜಾಪ  ಪ್ರಕೋಷ್ಠದ ಶ್ರೀಕಾಂತ್ ಪೂಂಜಾ, ಶಕ್ತಿ ಕೇಂದ್ರದ

ಕುರುಡುಕಟ್ಟೆ ಪ.ಜಾತಿ, ಪ.ಪಂಗಡ ಕಾಲನಿ ರಸ್ತೆಗೆ ಸೇತುವೆ, ರಸ್ತೆ: 2.73 ಕೋಟಿ ರೂ.ನ ಯೋಜನೆಗೆ ಶಂಕುಸ್ಥಾಪನೆ Read More »

ಆರ್ಯಾಪು ಗ್ರಾ.ಪಂ.ನ ಶಿಲಾನ್ಯಾಸ ಕಾರ್ಯಕ್ರಮ ಸಮಾರೋಪ: 1.60 ಕೋಟಿ ರೂ.ನ ಕಾಮಗಾರಿ ಶುರು

ಪುತ್ತೂರು: ಆರ‍್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು ೧ ಕೋಟಿ ೬೦ ಲಕ್ಷ ರೂ.ನ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮ ಡಿ. 15ರಂದು ನಡೆಯಿತು. ಕಾರ್ಯಕ್ರಮ ಕೊನೆಯ ಭಾಗವಾದ ಸಮಾರೋಪ ಸಮಾರಂಭ ಕಾರ್ಯಕ್ರಮ ಸಂಟ್ಯಾರಿನ ಯತೀಶ್ ದೇವ ಅವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪಕ್ಷದ ಹಿರಿಯರೂ, ಪ್ರಗತಿಪರ ಸಾವಯವ ಕೃಷಿಕರಾದ ಎ.ಪಿ ಸದಾಶಿವ ಭಟ್ ಅವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಶಾಸಕ ಸಂಜೀವ ಮಠoದೂರು ಮಾತನಾಡಿ, ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಗೆ 1.60

ಆರ್ಯಾಪು ಗ್ರಾ.ಪಂ.ನ ಶಿಲಾನ್ಯಾಸ ಕಾರ್ಯಕ್ರಮ ಸಮಾರೋಪ: 1.60 ಕೋಟಿ ರೂ.ನ ಕಾಮಗಾರಿ ಶುರು Read More »

ಶಿಗ್ಗಾಂವ್ ನಲ್ಲಿ ದೊಡ್ಡ ಪ್ರಮಾಣದಲ್ಲಿ ಕೌಶಲ್ಯ ಅಭಿವೃದ್ಧಿ ಆಗಲಿದೆ – ಸಿಎಂ ಬೊಮ್ಮಾಯಿ

ಶಿಗ್ಗಾಂವ್ ತಾಲ್ಲೂಕಿನಲ್ಲಿ ಶೀಘ್ರದಲ್ಲಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಪ್ರಾರಂಭವಾಗುತ್ತದೆ. ಬೇರೆ ಬೇರೆ ತಂತ್ರಜ್ಞಾನದಲ್ಲಿ ಆಧುನಿಕ ತರಬೇತಿ ಕೇಂದ್ರಕ್ಕೆ ಮುಂದಿನ ತಿಂಗಳು ಅದಕ್ಕೆ ಅಡಿಗಲ್ಲು ಹಾಕಲಿದ್ದೇನೆ. ಈ ಮೂಲಕ ಶಿಗ್ಗಾಂವ್ ತಾಲ್ಲೂಕಿನಲ್ಲಿ ದೊಡ್ಡ ಪ್ರಮಾಣದಲ್ಲಿ ಕೌಶಲ್ಯ ಅಭಿವೃದ್ಧಿ ಮಾಡುವ ಇಚ್ಛೆ ನನ್ನದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಹಾವೇರಿ ವಿಭಾಗದ ಶಿಗ್ಗಾಂವ್ ನೂತನ ಬಸ್ ಘಟಕ ಮತ್ತು ಚಾಲನಾ ಹಾಗೂ ತಾಂತ್ರಿಕ ತರಬೇತಿ ಕೇಂದ್ರದ ಶಂಕುಸ್ಥಾಪನಾ

ಶಿಗ್ಗಾಂವ್ ನಲ್ಲಿ ದೊಡ್ಡ ಪ್ರಮಾಣದಲ್ಲಿ ಕೌಶಲ್ಯ ಅಭಿವೃದ್ಧಿ ಆಗಲಿದೆ – ಸಿಎಂ ಬೊಮ್ಮಾಯಿ Read More »

ನಾನು ಪ್ರತಿದಿನ ಜನತಾ ದರ್ಶನ ಮಾಡುವ ಮುಖ್ಯಮಂತ್ರಿ – ಸಿಎಂ ಬೊಮ್ಮಾಯಿ

ಶಿಗ್ಗಾಂವಿ: ನನ್ನ ಕ್ಷೇತ್ರದ ಜನ ನನ್ನನ್ನ ಬಹಳ ಪ್ರೀತಿ ಮಾಡ್ತಾರೆ. ನನ್ನ ಕ್ಷೇತ್ರಕ್ಕೆ ಬಂದಾಗ ಅವರಿಗೆ ವಿಶೇಷವಾದ ಸಮಯ ಕೊಡುವ ಅವಶ್ಯಕತೆ ಇದೆ. ಅವರಿಗೆ ತಮ್ಮ ಅವಹಾಲುಗಳನ್ನು ಹೇಳಲು ಅವಕಾಶ ಮಾಡಿಕೊಟ್ಟಿದ್ದೆ. ನಾನು ಪ್ರತಿದಿನ ಜನತಾ ದರ್ಶನ ಮಾಡುವ ಮುಖ್ಯಮಂತ್ರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಶಿಗ್ಗಾಂವಿಯಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಕುಂದುಕೊರತೆಗಳನ್ನು ಆಲಿಸಿ ಮಾತನಾಡಿದರು. ನಮ್ಮ ಕ್ಷೇತ್ರದ ಜನತೆ ಮಾತ್ರವಲ್ಲದೇ ಬೆಳಗಾವಿ, ಬಳ್ಳಾರಿ, ಕುಂದಗೋಳ, ಹಾನಗಲ್ ಜನತೆ

ನಾನು ಪ್ರತಿದಿನ ಜನತಾ ದರ್ಶನ ಮಾಡುವ ಮುಖ್ಯಮಂತ್ರಿ – ಸಿಎಂ ಬೊಮ್ಮಾಯಿ Read More »

ಈ ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

ಹಾವೇರಿ, ಶಿಗ್ಗಾಂವಿ: ಈ ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ. ಯಾವುದು ಅಸಾಧ್ಯವಲ್ಲ. ಎಲ್ಲವೂ ಸಾಧ್ಯ. ಆತ್ಮವಿಶ್ವಾಸ ಇರಬೇಕು. ನಿಮ್ಮ ಮೇಲೆ ವಿಶ್ವಾಸ ಇರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಇಂದು ಅಂದಲಗಿ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ 150ನೇ ವರ್ಷ ಸಂಭ್ರಮದ ಪ್ರಯುಕ್ತ ಶತಮಾನೋತ್ತರ ಸುವರ್ಣ ಮಹೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಒಂದು ಸಂಸ್ಥೆಗೆ 150 ವರ್ಷ ಆಗುತ್ತಿದೆ ಎಂದರೆ ಅದು

ಈ ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ Read More »

ಸೂಕ್ತ ಕ್ರಮ ಕೈಗೊಳ್ಳಲು ಹಿಂದು ಮುಂದೆ ನೋಡುವುದಿಲ್ಲ, ಮತ್ತೊಮ್ಮೆ ಮಹಾರಾಷ್ಟ್ರ ಸಿಎಂ ಜೊತೆ ಮಾತುಕತೆ

ಹುಬ್ಬಳ್ಳಿ, ಡಿಸೆಂಬರ್ 05: ಕರ್ನಾಟಕದ ಪ್ರಕಾರ ಗಡಿವಿವಾದ ಮುಗಿದುಹೋಗಿರುವ ಅಧ್ಯಾಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡುವ ಬಗ್ಗೆ ತಿಳಿದ ಸಂದರ್ಭದಲ್ಲಿ ಲಿಖಿತವಾಗಿ ಈಗಿರುವ ವಾತಾವರಣದಲ್ಲಿ ಭೇಟಿ ನೀಡುವುದು ಬೇಡ. ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗಲಿದೆ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ. ಆದಾಗ್ಯೂ ಕೂಡ ಅವರು ಬರುವುದಾಗಿ ತಿಳಿಸಿರುವುದು ಸರಿಯಾದ ಕ್ರಮವಲ್ಲ ಎಂದರು. ಮತ್ತೊಮ್ಮೆ ಮಹಾರಾಷ್ಟ್ರ ಸಿಎಂ ಜೊತೆ ಮಾತುಕತೆಮಹಾರಾಷ್ಟ್ರ ಹಾಗೂ

ಸೂಕ್ತ ಕ್ರಮ ಕೈಗೊಳ್ಳಲು ಹಿಂದು ಮುಂದೆ ನೋಡುವುದಿಲ್ಲ, ಮತ್ತೊಮ್ಮೆ ಮಹಾರಾಷ್ಟ್ರ ಸಿಎಂ ಜೊತೆ ಮಾತುಕತೆ Read More »

ಕರ್ನಾಟಕದ ಪ್ರಕಾರ ಗಡಿವಿವಾದ ಮುಗಿದುಹೋಗಿರುವ ಅಧ್ಯಾಯ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ, ಡಿಸೆಂಬರ್ 05: ಕರ್ನಾಟಕದ ಪ್ರಕಾರ ಗಡಿವಿವಾದ ಮುಗಿದುಹೋಗಿರುವ ಅಧ್ಯಾಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡುವ ಬಗ್ಗೆ ತಿಳಿದ ಸಂದರ್ಭದಲ್ಲಿ ಲಿಖಿತವಾಗಿ ಈಗಿರುವ ವಾತಾವರಣದಲ್ಲಿ ಭೇಟಿ ನೀಡುವುದು ಬೇಡ. ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗಲಿದೆ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ. ಆದಾಗ್ಯೂ ಕೂಡ ಅವರು ಬರುವುದಾಗಿ ತಿಳಿಸಿರುವುದು ಸರಿಯಾದ ಕ್ರಮವಲ್ಲ ಎಂದರು. ಮತ್ತೊಮ್ಮೆ ಮಹಾರಾಷ್ಟ್ರ ಸಿಎಂ ಜೊತೆ ಮಾತುಕತೆಮಹಾರಾಷ್ಟ್ರ ಹಾಗೂ

ಕರ್ನಾಟಕದ ಪ್ರಕಾರ ಗಡಿವಿವಾದ ಮುಗಿದುಹೋಗಿರುವ ಅಧ್ಯಾಯ ಸಿಎಂ ಬೊಮ್ಮಾಯಿ Read More »

ಪಿಎಫ್ ಐ ಸೇರಿ ಪೋಸ್ಟರ್ : ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಡಿಸೆಂಬರ್ 05: ಶಿವಮೊಗ್ಗದಲ್ಲಿ ಪಿಎಫ್ ಐ ಸೇರಿ ಎಂಬ ಪೋಸ್ಟರ್ ಗಳನ್ನು ಅಂಟಿಸಿರುವವರ ವಿರುದ್ಧ ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು..ಪಿಎಪಿಐ ರದ್ದು ಮಾಡಿದ ನಂತರ ಹತಾಶರಾಗಿ ಈ ರೀತಿ ಗೋಡೆ ಮೇಲೆ ಬರೆಯುವುದು ಮಾಡುವ ಕೆಲಸ ಮಾಡುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿರುವುದು ಸರಿಯಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಮಹಾರಾಷ್ಟ್ರ

ಪಿಎಫ್ ಐ ಸೇರಿ ಪೋಸ್ಟರ್ : ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Read More »

error: Content is protected !!
Scroll to Top