ಮುಂದಿನ ಲೋಕಸಭಾ ಚುನಾವಣೆ ಸಹಿತ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಚುನಾವಣೆಗಳಲ್ಲಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ! | ಸ್ಪರ್ಧೆಯ ಕುರಿತು ಪುತ್ತಿಲ ಪರಿವಾರದ ಅಧ್ಯಕ್ಷರು ಹೇಳಿದ್ದೇನು ?
ಪುತ್ತೂರು: ಮುಂದಿನ ಲೋಕಸಭಾ ಚುನಾವಣೆ ಸೇರಿದಂತೆ ದ.ಕ.ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಚುನಾವಣೆಗಳಲ್ಲಿ ಪುತ್ತಿಲ ಪರಿವಾರದ ನಾಯಕ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ಮಾಡಲಿದ್ದು, ಕಾರ್ಯಕರ್ತರು, ಹಿತೈಷಿಗಳ, ಮತದಾರರ ನಿರ್ಧಾರದಂತೆ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ತಿಳಿಸಿದ್ದಾರೆ. ಪುತ್ತಿಲ ಪರಿವಾರದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಪಕ್ಷೇತರವಾಗಿ ನಿಂತು 60 ಸಾವಿರಕ್ಕೂ ಅಧಿಕ ಮತಗಳನ್ನು ಪಡೆಯುವ ಮೂಲಕ ಸಂಚಲನ ಮೂಡಿಸಿತ್ತು. ಬಳಿಕದ […]










