ರಾಜಕೀಯ

ನಗರಸಭೆ ಉಪಚುನಾವಣೆ | ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ | ಮಗ್ಗುಲ ಬದಲಾಯಿಸಿದ ಪುತ್ತಿಲ ಪರಿವಾರದ ಪ್ರಮುಖ ಡಾ.ಸುರೇಶ್‍ ಪುತ್ತೂರಾಯ

ಪುತ್ತೂರು: ಪುತ್ತಿಲ ಪರಿವಾರದಲ್ಲಿ ಕಾಣಿಸಿಕೊಂಡಿದ್ದ ಡಾ.ಸುರೇಶ್‍ ಪುತ್ತೂರಾಯ ಅವರು ನಗರಸಭೆ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಂದರ್ಭ ಬಿಜೆಪಿ ಪಾಳಯದಲ್ಲಿ ಕಾಣಿಸಿಕೊಂಡಿದ್ದು ಇದೀಗ ಅಚ್ಚರಿಗೆ ಕಾರಣವಾಗಿದೆ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ಪುತ್ತಿಲ ಪರಿವಾರದಲ್ಲಿ ಪ್ರಮುಖ ನಾಯಕರಾಗಿ ಕಾಣಿಸಿಕೊಂಡಿದ್ದ ಡಾ.ಸುರೇಶ್‍ ಪುತ್ತೂರಾಯ ಇದೀಗ ದಿಢೀರ್ ಪಾಳಯ ಬದಲಾಯಿಸಿ ಬಿಜೆಪಿ ನಾಮಪತ್ರ ಸಂದರ್ಭ ಹಾಜರಾಗಿ ಅಭ್ಯರ್ಥಿಗಳಿಗೆ ಮಾಲಾರ್ಪಣೆ ಮಾಡಿರುವುದು ಕುತೂಹಲ ಮೂಡಿಸಿದೆ. ನಗರಸಭೆಯ ವಾರ್ಡ್‍ 1 ಹಾಗೂ 11 ರ ಸದಸ್ಯರ ಮರಣದಿಂದಾಗಿ ಉಪಚುನಾವಣೆ ಡಿ.27 ರಂದು ನಿಗದಿಯಾಗಿದ್ದು, […]

ನಗರಸಭೆ ಉಪಚುನಾವಣೆ | ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ | ಮಗ್ಗುಲ ಬದಲಾಯಿಸಿದ ಪುತ್ತಿಲ ಪರಿವಾರದ ಪ್ರಮುಖ ಡಾ.ಸುರೇಶ್‍ ಪುತ್ತೂರಾಯ Read More »

ಪುತ್ತೂರು ನಗರಸಭೆಯಲ್ಲಿ ತೆರವಾದ ಎರಡು ಸ್ಥಾನಗಳಿಗೆ ಸಮರ್ಥ ಬಿಜೆಪಿ ಅಭ್ಯರ್ಥಿಗಳ ಆಯ್ಕೆ | ಎರಡೂ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಸುದರ್ಶನ್ ಮೂಡಬಿದ್ರೆ

ಪುತ್ತೂರು: ಈಗಾಗಲೇ ನಗರಸಭೆಯ ಎರಡು ವಾರ್ಡುಗಳಲ್ಲಿಯ ಸದಸ್ಯರ ಮರಣದಿಂದ ತೆರವಾದ ಸ್ಥಾನಗಳಿಗೆ ಭಾರತೀಯ ಜನತಾ ಪಾರ್ಟಿಯಿಂದ ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಎರಡೂ ವಾರ್ಡುಗಳಲ್ಲಿ ಗೆಲುವು ನಿಶ್ಚಿತ ಎಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ ತಿಳಿಸಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ ವಾರ್ಡು ಒಂದರಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಮ ಸಫಲ್ಯ ಅವರು ಸದಸ್ಯರಾಗಿದ್ದರು. ವಾರ್ಡು 11 ರಲ್ಲಿ ಕಾಂಗ್ರೆಸ್ ನ ಶಕ್ತಿಸಿನ್ಹ ಸದಸ್ಯರಾಗಿದ್ದರು. ಇದೀಗ ಅವರ ಮರಣದಿಂದ ವಾರ್ಡು ಒಂದರಲ್ಲಿ ಧಾರ್ಮಿಕ, ಸಾಮಾಜಿಕ,

ಪುತ್ತೂರು ನಗರಸಭೆಯಲ್ಲಿ ತೆರವಾದ ಎರಡು ಸ್ಥಾನಗಳಿಗೆ ಸಮರ್ಥ ಬಿಜೆಪಿ ಅಭ್ಯರ್ಥಿಗಳ ಆಯ್ಕೆ | ಎರಡೂ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಸುದರ್ಶನ್ ಮೂಡಬಿದ್ರೆ Read More »

ಡಿ.27: ನಗರಸಭೆ ಎರಡು ವಾರ್ಡುಗಳಿಗೆ ಉಪಚುನಾವಣೆ | ಬಿಜೆಪಿಯಿಂದ ಅಭ್ಯರ್ಥಿಗಳ ಆಯ್ಕೆ ಅಂತಿಮ

ಪುತ್ತೂರು : ಡಿ.27 ರಂದು ಎರಡು ಸ್ಥಾನಗಳಿಗೆ ನಡೆಯಲಿರುವ ನಗರಸಭಾ ಉಪಚುನಾವಣೆ ಅಂಗವಾಗಿ ಬಿಜೆಪಿ ಪಕ್ಷದಿಂದ ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ. ಬಿಜೆಪಿಯಿಂದ ನಗರಸಭೆಯ ವಾರ್ಡ್ 1ರ ಅಭ್ಯರ್ಥಿಯಾಗಿ ಸುನೀತಾ ಹಾಗೂ ನಗರಸಭೆಯ ವಾರ್ಡ್ 11ರ ಅಭ್ಯರ್ಥಿಯಾಗಿ ರಮೇಶ್ ರೈ ಅವರನ್ನು ಆಯ್ಕೆ ಮಾಡಲಾಗಿದೆ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ರವರ ನೇತೃತ್ವದಲ್ಲಿ ರೋಟರಿ ಮನಿಷಾ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಹೆಸರನ್ನು ಆಯ್ಕೆ ಮಾಡಲಾಗಿದೆ. ನಗರ ಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಿವರಾಮ

ಡಿ.27: ನಗರಸಭೆ ಎರಡು ವಾರ್ಡುಗಳಿಗೆ ಉಪಚುನಾವಣೆ | ಬಿಜೆಪಿಯಿಂದ ಅಭ್ಯರ್ಥಿಗಳ ಆಯ್ಕೆ ಅಂತಿಮ Read More »

ನಗರಸಭೆ ಉಪ ಚುನಾವಣೆ | ಪುತ್ತಿಲ ಪರಿವಾರದಿಂದ ಎರಡೂ ವಾರ್ಡುಗಳಿಗೂ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

ಪುತ್ತೂರು: ಪುತ್ತೂರು ನಗರಸಭೆಯ ಎರಡು ವಾರ್ಡುಗಳಿಗೆ ನಡೆಯುವ ಉಪಚುನಾವಣೆಗೆ ಪುತ್ತಿಲ ಪರಿವಾರದಿಂದ ಎರಡೂ ವಾರ್ಡಿನಲ್ಲಿ ಅಭ್ಯರ್ಥಿಗಳು ಕಣದಲ್ಲಿದ್ದು, ಗುರುವಾರ ನಗರಸಭೆಯಲ್ಲಿ ನಾಮಪತ್ರ ಸಲ್ಲಿಸಿದರು. ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಪುತ್ತೂರು ನಗರಸಭೆಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ವಾರ್ಡ್ ನಂ.1ರ ಅಭ್ಯರ್ಥಿಯಾಗಿ ರಕೇಶ್ವರಿ ಅನ್ನಪೂರ್ಣ ರಾವ್ ಹಾಗೂ ವಾರ್ಡು11 ರ ಅಭ್ಯರ್ಥಿಯಾಗಿ ನೆಲ್ಲಿಕಟ್ಟೆ ಚಿಂತನ್ ಅವರು ಉಪಚುನಾವಣೆಗೆ ಪುತ್ತಿಲ ಪರಿವಾರದ ವತಿಯಿಂದ ನಾಮಪತ್ರ ಸಲ್ಲಿಸಿದರು. ಚುಣಾವಣಾಧಿಕಾರಿ ನಗರ ಸಭೆಯ ಲೋಕೇಶ್ ಅವರಿಗೆ ನಾಮಪತ್ರ ಸಲ್ಲಿಸಲಾಯಿತು.

ನಗರಸಭೆ ಉಪ ಚುನಾವಣೆ | ಪುತ್ತಿಲ ಪರಿವಾರದಿಂದ ಎರಡೂ ವಾರ್ಡುಗಳಿಗೂ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ Read More »

ಮಾದಕ ವ್ಯಸನಿಗಳಿಂದ ದೇಶಕ್ಕೆ ಅಪಾಯ | ಬೆಳಗಾವಿ ಅಧಿವೇಶನದಲ್ಲಿ ಶಾಸಕ ಅಶೋಕ್ ರೈ ಆಗ್ರಹ

ಪುತ್ತೂರು: ಮಾದಕ ವ್ಯಸನಿಗಳು ಸಮಾಜ ಕಂಠಕರಾಗುತ್ತಿದ್ದಾರೆ. ಯವು ಪೀಳಿಗೆ ಮಾದಕ ವ್ಯಸನಕ್ಕೆ ಬಲಿಯಾಗುತ್ತಿದೆ. ಇದು ಅತ್ಯಂತ ಗಂಭೀರ ವಿಚಾರವಾಗಿದ್ದು, ಮುಂದುವರೆದರೆ ವ್ಯಸನಿಗಳಿಂದ ರಾಜ್ಯಕ್ಕೆ, ದೇಶಕ್ಕೆ ತೊಂದರೆ ಉಂಟಾಗಬಹುದು. ಇಂತವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಮಾದಕ ವ್ಯಸನಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ, ಯುವ ಸಮೂಹ ಇದಕ್ಕೆ ಬಲಿಯಾಗುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 147 ಪೆಡ್ಲರ್‌ಗಳ ವಿರುದ್ದ ಪ್ರಕರಣ ದಾಖಲಾಗಿದೆ. 528 ಮಂದಿ

ಮಾದಕ ವ್ಯಸನಿಗಳಿಂದ ದೇಶಕ್ಕೆ ಅಪಾಯ | ಬೆಳಗಾವಿ ಅಧಿವೇಶನದಲ್ಲಿ ಶಾಸಕ ಅಶೋಕ್ ರೈ ಆಗ್ರಹ Read More »

ಮೊದಲ ಬಾರಿ ಶಾಸಕರಾಗಿರುವ ಭಜನ್ ಲಾಲ್ ಶರ್ಮಾ ರಾಜಸ್ಥಾನ ಸಿಎಂ!

ನಿರೀಕ್ಷೆಯಂತೆಯೇ ಹೊಸ ಮುಖಗಳಿಗೆ ಆದ್ಯತೆ ನೀಡುತ್ತಾ ಬಂದಿರುವ ಬಿಜೆಪಿ, ಇದೀಗ ರಾಜಸ್ಥಾನದಲ್ಲೂ ಹೊಸ ಮುಖಕ್ಕೆ ಆದ್ಯತೆ ನೀಡಿದ್ದಾರೆ. ಇದರೊಂದಿಗೆ ಇಬ್ಬರು ಡಿಸಿಎಂಗಳನ್ನು ನೇಮಕ ಮಾಡಲಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಚ್ಚರಿಯ ಆಯ್ಕೆ ಮಾಡಲಾಗಿದೆ. ರಾಜಕೀಯದಲ್ಲಿ ಹೊಸ ಪರೀಕ್ಷೆ ನಡೆಸುವಂತೆ ಹೊಸ ಮುಖಗಳನ್ನೇ ಆಯ್ಕೆ ಮಾಡಲಾಗುತ್ತಿದೆ. ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಭಜನ್ ಲಾಲ್ ಶರ್ಮಾ ಅವರನ್ನು ಸಿಎಂ ಆಗಿ ಆಯ್ಕೆ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಇವರು ಸಂಗಾನೇರ್ ಕ್ಷೇತ್ರದ ಶಾಸಕ. 4 ಬಾರಿ

ಮೊದಲ ಬಾರಿ ಶಾಸಕರಾಗಿರುವ ಭಜನ್ ಲಾಲ್ ಶರ್ಮಾ ರಾಜಸ್ಥಾನ ಸಿಎಂ! Read More »

ಮೋಹನ್ ಯಾದವ್‌ ಮಧ್ಯಪ್ರದೇಶ ಸಿಎಂ!

ಮಧ್ಯಪ್ರದೇಶ: ತೀವ್ರ ಕುತೂಹಲ ಕೆರಳಿಸಿದ್ದ ಮಧ್ಯಪ್ರದೇಶ ಸಿಎಂ ಆಯ್ಕೆ ಕಗ್ಗಂಟು ಕೊನೆಗೂ ಬಗೆಹರಿದಿದೆ. ಸಿಎಂ ರೇಸ್‌ನಲ್ಲಿದ್ದ ಎಲ್ಲರನ್ನೂ ಹಿಂದಿಕ್ಕಿ ಮೋಹನ್ ಯಾದವ್ ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಸೋಮವಾರ ಬಿಜೆಪಿ ಕೇಂದ್ರ ನಾಯಕರ ನೇತೃತ್ವದಲ್ಲಿ ಮಧ್ಯಪ್ರದೇಶ ಬಿಜೆಪಿ ಶಾಸಕಾಂಗ ಸಭೆ ನಡೆಯಿತು. ಸಭೆಯಲ್ಲಿ ವೀಕ್ಷಕರಾಗಿ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಒಬಿಸಿ ಮೋರ್ಚಾ ಮುಖ್ಯಸ್ಥ ಕೆ. ಲಕ್ಷ್ಮಣ್ ಮತ್ತು ಕಾರ್ಯದರ್ಶಿ ಆಶಾ ಲಾಕ್ರ ಭಾಗವಹಿಸಿದ್ದರು. ಸಭೆಯಲ್ಲಿ ಮೋಹನ್ ಯಾದವ್ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಸಿಎಂ ರೇಸ್‌ನಲ್ಲಿ

ಮೋಹನ್ ಯಾದವ್‌ ಮಧ್ಯಪ್ರದೇಶ ಸಿಎಂ! Read More »

ಇಬ್ಭಾಗವಾದ ಜೆ.ಡಿ.ಎಸ್.ಗೆ ಸಿ.ಕೆ. ನಾಣು ಅಧ್ಯಕ್ಷ!

ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್​ಡಿ ದೇವೇಗೌಡ  ಅವರಿಗೆ ಅಸಮಾಧಾನಿತ ಹಾಗೂ ಉಚ್ಛಾಟಿತ ನಾಯಕರು ಸೆಡ್ಡು ಹೊಡೆದಿದ್ದಾರೆ. ಸೋಮವಾರ ನಡೆದ ಸಭೆಯಲ್ಲಿ ಉಚ್ಛಾಟಿತ ನಾಯಕ ಸಿ.ಕೆ. ನಾಣು ಅವರನ್ನು ಜೆಡಿಎಸ್​ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಬೆಂಗಳೂರಿನ ಕೆ.ಜಿ. ಹಳ್ಳಿಯ ಖಾಸಗಿ ಹೋಟೆಲ್​ನಲ್ಲಿ ಸಿ.ಎಂ. ಇಬ್ರಾಹಿಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಿ.ಕೆ. ನಾಣು ಅವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಸಿ.ಎಂ ಇಬ್ರಾಹಿಂ ಮಾಹಿತಿ ನೀಡಿದ್ದಾರೆ. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಇಬ್ರಾಹಿಂ, ಜೆಡಿಎಸ್ ನೂತನ

ಇಬ್ಭಾಗವಾದ ಜೆ.ಡಿ.ಎಸ್.ಗೆ ಸಿ.ಕೆ. ನಾಣು ಅಧ್ಯಕ್ಷ! Read More »

ಅಕ್ಬರುದ್ದಿನ್ ಓವೈಸಿ ತೆಲಂಗಾಣದ ಹಂಗಾಮಿ ಸ್ಪೀಕರ್: ವಿರೋಧ

ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯ ಸಾಧಿಸಿ ತೆಲಂಗಾಣದಲ್ಲಿ ಸರ್ಕಾರ ರಚನೆ ಮಾಡಿದೆ. ಇದೀಗ ಎಐಎಂಐಎಂ ಶಾಸಕ ಅಕ್ಬರುದ್ದಿನ್ ಓವೈಸಿ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಲಾಗಿದೆ. ಈ ನಿರ್ಧಾರಕ್ಕೆ ಇದೀಗ ತೀವ್ರ ವಿರೋಧ ವ್ಯಕ್ತವಾಗಿದೆ. ಅಕ್ಬರುದ್ದಿನ್ ಓವೈಸಿ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಿದ ನಿರ್ಧಾರವನ್ನು ವಿರೋಧಿಸಿದ ಬಿಜೆಪಿ ಶಾಸಕರು, ಅವರಿಂದ ಪ್ರಮಾಣ ವಚನ ಸ್ವೀಕರಿಸಲೂ ನಿರಾಕರಿಸಿದ್ದಾರೆ. ಓವೈಸಿ ಅವರಿಂದ ಪಕ್ಷದ ಶಾಸಕರು ಪ್ರಮಾಣ ವಚನ ಸ್ವೀಕರಿಸುವುದಿಲ್ಲ ಎಂದು

ಅಕ್ಬರುದ್ದಿನ್ ಓವೈಸಿ ತೆಲಂಗಾಣದ ಹಂಗಾಮಿ ಸ್ಪೀಕರ್: ವಿರೋಧ Read More »

ಲೋಕಸಭೆಯಿಂದ ಟಿಎಂಸಿಯ ಮಹುವಾ ಮೊಹಿತ್ರಾ ಉಚ್ಛಾಟನೆ!

ಹೊಸದಿಲ್ಲಿ: ಕೆಲವು ದಿನಗಳಿಂದ ಚರ್ಚೆಯಲ್ಲಿದ್ದ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಹಿತ್ರಾ ಅವರನ್ನು ಲೋಕಸಭೆಯಿಂದ ಉಚ್ಛಾಟನೆ ಮಾಡಲಾಗಿದೆ. ಮಹುವಾ ಮೊಹಿತ್ರಾ ಉಚ್ಛಾಟನೆಗೆ ನೈತಿಕ ಸಮಿತಿಯು ಶಿಫಾರಸು ಮಾಡಿತ್ತು. ಸಂಸತ್ ನಲ್ಲಿ ಪ್ರಶ್ನೆ ಕೇಳಲು ಮಹುವಾ ಮೊಹಿತ್ರಾ ಹಣ ಪಡೆದಿದ್ದಾರೆಂದು ಆರೋಪಿಸಲಾಗಿತ್ತು. ಸಂಸತ್ತಿನ ನೈತಿಕ ಸಮಿತಿಯು ಈ ಪ್ರಕರಣದಲ್ಲಿ ಮಹುವಾ ಮೊಯಿತ್ರಾ ಅವರನ್ನು ತಪ್ಪಿತಸ್ಥರೆಂದು ವರದಿ ನೀಡಿದೆ. ಅಲ್ಲದೆ ಸಂಸತ್ತಿನ ಕೆಳಮನೆಯಿಂದ ಅವರನ್ನು ಹೊರಹಾಕಲು ಶಿಫಾರಸು ಮಾಡಿತು. ಲೋಕಸಭೆಯಲ್ಲಿ ಸಂಸದೀಯ ವ್ಯವಹಾರಗಳ ಸಚಿವರು ಮಂಡಿಸಿದ ಮಹುವಾ ಮೊಹಿತ್ರಾ ಅವರನ್ನು

ಲೋಕಸಭೆಯಿಂದ ಟಿಎಂಸಿಯ ಮಹುವಾ ಮೊಹಿತ್ರಾ ಉಚ್ಛಾಟನೆ! Read More »

error: Content is protected !!
Scroll to Top