ರಾಜಕೀಯ

ಮತ್ತೆ ಜೆಡಿಎಸ್ ಸೇರಿದ ವೈಎಸ್​ವಿ ದತ್ತಾ : ಕಡೂರು ಟಿಕೆಟ್ ಫಿಕ್ಸ್

ಚಿಕ್ಕಮಗಳೂರು: ಇತ್ತೀಚೆಗಷ್ಟೇ ಜೆಡಿಎಸ್‌ನಿಂದ ಕಾಂಗ್ರೆಸ್ ಸೇರಿ ಚುನಾವಣೆಗೆ ಟಿಕೆಟ್​​ ಸಿಗದೆ ನಿರಾಶರಾಗಿದ್ದ ವೈಎಸ್​ವಿ ದತ್ತಾ ಮತ್ತೆ ಜೆಡಿಎಸ್​​ ಸೇರ್ಪಡೆಯಾಗಿದ್ದಾರೆ. ಇದರ ಬೆನ್ನಲ್ಲೇ, ಕಡೂರು ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿಯನ್ನಾಗಿಯೂ ಅವರನ್ನು ಘೋಷಣೆ ಮಾಡಲಾಗಿದೆ. ಈ ಕುರಿತು ಪಕ್ಷದ ನಾಯಕ ಹೆಚ್​ಡಿ ರೇವಣ್ಣ ಗುರುವಾರ ಸಂಜೆ ಘೋಷಣೆ ಮಾಡಿದರು. ಕಡೂರು ಕ್ಷೇತ್ರದ ಜೆಡಿಎಸ್​​ ಅಭ್ಯರ್ಥಿಯಾಗಿ ದತ್ತಾ ನಾಮಪತ್ರ ಸಲ್ಲಿಸಲಿದ್ದಾರೆ. ಅವರು ನಾಮಪತ್ರ ಸಲ್ಲಿಸುವ ದಿನ ದೇವೇಗೌಡರು ಆಗಮಿಸಲಿದ್ದಾರೆ. ಈ ಬಗ್ಗೆ ದೇವೇಗೌಡರೇ ಹೇಳಿದ್ದಾರೆ. ಅವರ ಮಾತಿಗೆ ಎಲ್ಲರೂ ಬೆಲೆ ಕೊಡಬೇಕು […]

ಮತ್ತೆ ಜೆಡಿಎಸ್ ಸೇರಿದ ವೈಎಸ್​ವಿ ದತ್ತಾ : ಕಡೂರು ಟಿಕೆಟ್ ಫಿಕ್ಸ್ Read More »

ಈಶ್ವರಪ್ಪ ರಾಜಕೀಯ ನಿವೃತ್ತಿ ವಿರೋಧಿಸಿ ಪಾಲಿಕೆ ಸದಸ್ಯರ ಸಾಮೂಹಿಕ ರಾಜೀನಾಮೆ

ಶಿವಮೊಗ್ಗ: ಹಿರಿಯ ನಾಯಕ ಈಶ್ವರಪ್ಪ ಅವರ ಚುನಾವಣಾ ನಿವೃತ್ತಿಯಿಂದ ಎದ್ದಿರುವ ಬೇಗುದಿಯನ್ನು ಶಮನಗೊಳಿಸಲು ಪಕ್ಷದ ನಾಯಕರು ಹೆಣಗಾಡುತ್ತಿದ್ದಾರೆ. ಶಿವಮೊಗ್ಗದ ಈಶ್ವರಪ್ಪ ಬೆಂಬಲಿಗರು ಮತ್ತು ಅಭಿಮಾನಿಗಳು ನಿವೃತ್ತಿ ಹಿಂದೆ ಪಡೆದು ಚುನಾವಣೆಯಲ್ಲಿ ಸ್ಪರ್ಧಿಸಲು ಒತ್ತಡ ಹೇರುತ್ತಿದ್ದು, ಇದೀಗ ನಿವೃತ್ತಿ ವಿರೋಧಿಸಿ ಶಿವಮೊಗ್ಗ ಪಾಲಿಕೆ ಸದಸ್ಯರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ. ಕೆ.ಎಸ್‌.ಈಶ್ವರಪ್ಪ ನಿರ್ಧಾರಕ್ಕೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂಬ ಒತ್ತಾಯಿಸುತ್ತಿದ್ದಾರೆ. ಮೇಯರ್- ಉಪಮೇಯರ್ ಸೇರಿದಂತೆ ಎಲ್ಲ 19

ಈಶ್ವರಪ್ಪ ರಾಜಕೀಯ ನಿವೃತ್ತಿ ವಿರೋಧಿಸಿ ಪಾಲಿಕೆ ಸದಸ್ಯರ ಸಾಮೂಹಿಕ ರಾಜೀನಾಮೆ Read More »

ಬೈಂದೂರು : ಹೊಸ ಅಭ್ಯರ್ಥಿಗೆ ಮಣೆ ಹಾಕಿದ ಬಿಜೆಪಿ – ಸುಕುಮಾರ ಶೆಟ್ಟಿ ಕೈತಪ್ಪಿದ ಟಿಕೆಟ್‌

ಹೊಸದಿಲ್ಲಿ : ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಒಂದೇ ದಿನದ ಅಂತರದಲ್ಲಿ ಬಿಡುಗಡೆಗೊಳಿಸರುವ ಬಿಜೆಪಿ ಕೆಲವೊಂದು ಅಚ್ಚರಿಗಳನ್ನು ನೀಡಿದೆ. ಅದರಲ್ಲಿ ಗಮನಾರ್ಹವಾದದ್ದು ಬೈಂದೂರು ವಿಧಾನಸಭೆ ಕ್ಷೇತ್ರದಿಂದ ಸುಕುಮಾರ ಶೆಟ್ಟಿಯುವರನ್ನು ಕೈಬಿಟ್ಟು ಗುರುರಾಜ್‌ ಗಂಟಿಹೊಳಿ ಅವರಿಗೆ ಟಿಕೆಟ್‌ ನೀಡಿದ್ದು.ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾದ 24 ಗಂಟೆಗಳಲ್ಲೇ 2ನೇ ಪಟ್ಟಿ ದಿಢೀರ್ ಬಿಡುಗಡೆಯಾಗಿದೆ. 2ನೇ ಪಟ್ಟಿ ಗುರುವಾರ ಬಿಡುಗಡೆಯಾಗುವ ನಿರೀಕ್ಷೆ ಇತ್ತು. ಆದರೆ ಬುಧವಾರ ರಾತ್ರಿ 11 ಗಂಟೆಗೆ 2ನೇ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೈಂದೂರು : ಹೊಸ ಅಭ್ಯರ್ಥಿಗೆ ಮಣೆ ಹಾಕಿದ ಬಿಜೆಪಿ – ಸುಕುಮಾರ ಶೆಟ್ಟಿ ಕೈತಪ್ಪಿದ ಟಿಕೆಟ್‌ Read More »

ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭ

ಬೆಂಗಳೂರು : ವಿಧಾನಸಭೆಯ 224 ಕ್ಷೇತ್ರಗಳಲ್ಲಿ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಇಂದಿನಿಂದ(ಏಪ್ರಿಲ್ 13) ಆರಂಭವಾಗಲಿದೆ. ಏ.20ರ ವರೆಗೆ ನಾಮಪತ್ರ ಸಲ್ಲಿಸಸಲು ಅವಕಾಶವಿದೆ. ಏ.14 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಮತ್ತು 16ರಂದು ಭಾನುವಾರ ರಜಾ ದಿನವಾಗಿದ್ದು, ಅಂದು ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ. ಹೀಗಾಗಿ ನಾಮಪತ್ರ ಸಲ್ಲಿಕೆಗೆ ಏಳು ದಿನಗಳಲ್ಲಿ ಎರಡು ದಿನ ಸರ್ಕಾರಿ ರಜೆ ಇರಲಿದ್ದು, ಐದು ದಿನಗಳು ಮಾತ್ರ ನಾಮಪತ್ರ ಸಲ್ಲಿಕೆಗೆ ಕಾಲಾವಕಾಶ ಇದೆ. ಇದೇ ಮೊದಲ ಬಾರಿಗೆ ಆನ್‌ಲೈನ್​ ಮೂಲಕ

ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭ Read More »

ಬೇಸರ ಇದೆ. ಆದರೆ ಪಕ್ಷ ತೀರ್ಮಾನಕ್ಕೆ ಬದ್ಧ | ಶಾಸಕ ಸಂಜೀವ ಮಠಂದೂರು

ಪುತ್ತೂರು: ಕಳೆದ 5 ವರ್ಷದಲ್ಲಿ ಅಭಿವೃದ್ಧಿ ಕಾರ್ಯಕ್ಕಾಗಿ ನಿರಂತರ ಶ್ರಮ ವಹಿಸಿದ್ದೇನೆ. ಆದರೂ ಸಿಟ್ಟಿಂಗ್ ಎಂ.ಎಲ್.ಎ. ಆಗಿದ್ದು, ನನಗೆ ಅವಕಾಶ ಸಿಗಲಿಲ್ಲ ಎಂಬ ವಿಚಾರಕ್ಕೆ ಬೇಸರ ಇದೆ. ಆದರೆ ಪಕ್ಷದ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ. ನ್ಯೂಸ್ ಪುತ್ತೂರು ಜೊತೆ ಮಾತನಾಡಿದ ಅವರು, ಕಾರ್ಯಕರ್ತರು, ಮುಖಂಡರು ಬೆಂಬಲ ಸೂಚಿಸಿದ್ದಾರೆ. ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳು, ಸಂಘಟನೆಗೆ ಅವರೆಲ್ಲಾ ನನ್ನ ಜೊತೆ ನಿಂತಿದ್ದಾರೆ. ಅದಕ್ಕಾಗಿ ನಾನು ಅವರಿಗೆ ಚಿರಋಣಿಯಾಗಿದ್ದೇನೆ. ಪಕ್ಷದ ತೀರ್ಮಾನ ಬೇಸರ ತಂದಿದೆ

ಬೇಸರ ಇದೆ. ಆದರೆ ಪಕ್ಷ ತೀರ್ಮಾನಕ್ಕೆ ಬದ್ಧ | ಶಾಸಕ ಸಂಜೀವ ಮಠಂದೂರು Read More »

ಪ್ರದೀಪ್ ದೇವರಗುಂಡ ಕುಶಾಲಪ್ಪ ಬೆಳ್ತಂಗಡಿಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ! | ಭ್ರಷ್ಟಾಚಾರ ಮುಕ್ತ ಸಮಾಜದ ಆಶಯ ಹೊಂದಿರುವ ಪ್ರದೀಪ್ ದೇವರಗುಂಡ

ಬೆಳ್ತಂಗಡಿ: ಧಾರ್ಮಿಕ, ಸಾಮಾಜಿಕ ಸಂಘಟನೆಗಳಲ್ಲಿ ಸಕ್ರೀಯವಾಗಿದ್ದ ಉದ್ಯಮಿ ಪ್ರದೀಪ್ ದೇವರಗುಂಡ ಕುಶಾಲಪ್ಪ ಅವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸೂಚನೆ ನೀಡಿದ್ದಾರೆ. ಉದ್ಯಮಿಯಾಗಿ ಗುರುತಿಸಿಕೊಂಡಿರುವ ಪ್ರದೀಪ್ ಕುಶಾಲಪ್ಪ , ಬೆಳ್ತಂಗಡಿ ತಾಲೂಕಿನ ಅನೇಕ ಸಮಸ್ಯೆಗಳತ್ತ ಗಮನ ಹರಿಸಿ, ಅವುಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಸಂಕಲ್ಪದೊಂದಿಗೆ ಚುನಾವಣಾ ಆಖಾಡಕ್ಕೆ ಧುಮುಕುವ ಇಂಗಿತ ವ್ಯಕ್ತಪಡಿಸಿದ್ದಾರೆ. ರಾಜಕೀಯ ಎಂದರೆ ಶಿಸ್ತು, ನಿಯತ್ತು ಬೇಕು. ಜನಸೇವೆ ಮಾಡುವ ಏಕೈಕ ಗುರಿಯನ್ನು ರಾಜಕೀಯ ಹೊಂದಿರಬೇಕು. ಆದರೆ ಪ್ರಸ್ತುತ ರಾಜಕೀಯದಲ್ಲಿ ಇವೆಲ್ಲಾ ಕಣ್ಮರೆ

ಪ್ರದೀಪ್ ದೇವರಗುಂಡ ಕುಶಾಲಪ್ಪ ಬೆಳ್ತಂಗಡಿಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ! | ಭ್ರಷ್ಟಾಚಾರ ಮುಕ್ತ ಸಮಾಜದ ಆಶಯ ಹೊಂದಿರುವ ಪ್ರದೀಪ್ ದೇವರಗುಂಡ Read More »

ಮಠಂದೂರು ಮನೆಗೆ ಆಗಮಿಸಿದ ಬಿಜೆಪಿ ಜಿಲ್ಲಾಧ್ಯಕ್ಷರನ್ನು ತರಾಟೆಗೆತ್ತಿಕೊಂಡ ಕಾರ್ಯಕರ್ತರು | ಯಾವ ಭರವಸೆ ಮೇಲೆ ಬಿಜೆಪಿಯಲ್ಲಿ ಕೆಲಸ ಮಾಡಲಿ? | ಮಂಡಲ, ಜಿಲ್ಲೆಯ ಮುಖಂಡರಿಗೆ ಅಧಿಕಾರವೇ ಇಲ್ಲವೇ? ಹಾಗಿದ್ದರೆ ನೀವು ಇರುವುದಾದರೂ ಯಾಕೆ? | ಪ್ರಾಮಾಣಿಕ ಕೆಲಸಗಾರರಿಗೆ ಬೆಲೆ ಇಲ್ಲ ಏಕೆ?

ಪುತ್ತೂರು: ಬುಧವಾರ ಸಂಜೆ ಸಂಜೀವ ಮಠಂದೂರು ಅವರ ಮನೆಗಾಗಮಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಹಾಗೂ ಕ್ಯಾ. ಗಣೇಶ್ ಕಾರ್ಣಿಕ್ ಅವರನ್ನು ಕಾರ್ಯಕರ್ತರು ತರಾಟೆಗೆತ್ತಿಕೊಂಡ ಘಟನೆ ನಡೆಯಿತು. ಮನೆಗೆ ಆಗಮಿಸುತ್ತಿದ್ದಂತೆ ದಾರಿಮಧ್ಯವೇ ತಡೆದ ಕಾರ್ಯಕರ್ತರು, ತಮ್ಮ ಆಕ್ರೋಶ ಹೊರಗೆಡವಿದರು. ಸಂಜೀವ ಮಠಂದೂರು ಅವರನ್ನು ಕಡೆಗಣಿಸಲು ಕಾರಣವೇನು ಎಂದು ಪ್ರಶ್ನಿಸಿದ ಕಾರ್ಯಕರ್ತರು, ಹಾಗಾದರೆ ಮಂಡಲ, ಜಿಲ್ಲೆಯ ಪದಾಧಿಕಾರಿಗಳ ನಿರ್ಣಯಕ್ಕೆ ಬೆಲೆ ಇಲ್ಲವೇ? ಬೆಲೆ ಇಲ್ಲ ಎಂದಾದರೆ ನೀವು ಆ ಹುದ್ದೆಯಲ್ಲಿ ಇರುವುದಾದರೂ ಯಾಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಂಜೀವ ಮಠಂದೂರು

ಮಠಂದೂರು ಮನೆಗೆ ಆಗಮಿಸಿದ ಬಿಜೆಪಿ ಜಿಲ್ಲಾಧ್ಯಕ್ಷರನ್ನು ತರಾಟೆಗೆತ್ತಿಕೊಂಡ ಕಾರ್ಯಕರ್ತರು | ಯಾವ ಭರವಸೆ ಮೇಲೆ ಬಿಜೆಪಿಯಲ್ಲಿ ಕೆಲಸ ಮಾಡಲಿ? | ಮಂಡಲ, ಜಿಲ್ಲೆಯ ಮುಖಂಡರಿಗೆ ಅಧಿಕಾರವೇ ಇಲ್ಲವೇ? ಹಾಗಿದ್ದರೆ ನೀವು ಇರುವುದಾದರೂ ಯಾಕೆ? | ಪ್ರಾಮಾಣಿಕ ಕೆಲಸಗಾರರಿಗೆ ಬೆಲೆ ಇಲ್ಲ ಏಕೆ? Read More »

ಬಿಜೆಪಿ 2ನೇ ಪಟ್ಟಿ ಇಂದೇ ರಿಲೀಸ್: ಬಿ.ಎಸ್.ವೈ.

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ 189 ಅಭ್ಯರ್ಥಿಗಳ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಜೆಪಿ ಬಿಡುಗಡೆ ಮಾಡಿದ್ದು, 2ನೇ ಪಟ್ಟಿಯನ್ನು ಬುಧವಾರ ರಾತ್ರಿಯೇ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಬಿಜೆಪಿ 125ರಿಂದ 130 ಕ್ಷೇತ್ರಗಳಲ್ಲಿ ಗೆಲುವು ಪಡೆದುಕೊಳ್ಳಲಿದ್ದು, ಮತ್ತೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೇರಲಿದೆ ಎಂದು ತಿಳಿಸಿದರು. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಪಕ್ಷ ಟಿಕೇಟ್ ನೀಡುವುದು ಖಚಿತ ಎಂದು ವಿಶ್ವಾಸ

ಬಿಜೆಪಿ 2ನೇ ಪಟ್ಟಿ ಇಂದೇ ರಿಲೀಸ್: ಬಿ.ಎಸ್.ವೈ. Read More »

ತಪ್ಪಿದ ಟಿಕೆಟ್‌ – ಆರ್ ಶಂಕರ್ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜಿನಾಮೆ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ನಿನ್ನೆ 189 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ತಮಗೆ ಟಿಕೆಟ್ ನೀಡದ ಕಾರಣ ಅಸಮಾಧಾನಗೊಂಡಿರುವ ವಿಧಾನಪರಿಷತ್ ಸದಸ್ಯ ಆರ್ ಶಂಕರ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಣೆಬೆನ್ನೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್ ಶಂಕರ್ ಬದಲಿಗೆ ಹಾಲಿ ಶಾಸಕ ಅರುಣ್ ಕುಮಾರ್‌ಗೆ ಟಿಕೆಟ್ ಸಿಕ್ಕ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಆರ್ ಶಂಕರ್ ತಮ್ಮ ಎಂ.ಎಲ್.ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಆರ್

ತಪ್ಪಿದ ಟಿಕೆಟ್‌ – ಆರ್ ಶಂಕರ್ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜಿನಾಮೆ Read More »

ಮಠಂದೂರಿಗೆ ಟಿಕೇಟ್ ನಿರಾಕರಣೆ : ಕಾರ್ಯಕರ್ತರ ಅಸಮಾಧಾನ | ಹೈಕಮಾಂಡ್ ಭಿನ್ನ ನಿಲುವೇ ಅಸಮಾಧಾನಕ್ಕೆ ಕಾರಣ | ಕಾರ್ಯಕರ್ತರು, ಮುಖಂಡರು, ರಾಜ್ಯ ನಾಯಕರು ಪರವಾಗಿದ್ದರೂ ಟಿಕೇಟ್ ನಿರಾಕರಣೆ ಏಕೆ?

ಪುತ್ತೂರು: ಸಾಕಷ್ಟು ಅಭಿವೃದ್ಧಿ ಕಾರ್ಯಗಳ ಹೊರತಾಗಿಯೂ ಸಂಜೀವ ಮಠಂದೂರು ಅವರಿಗೆ ಟಿಕೇಟ್ ನಿರಾಕರಿಸಿರುವ ಕ್ರಮಕ್ಕೆ ಬಿಜೆಪಿ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್ ಭಿನ್ನ ನಿಲುವಿನ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಅಭಿವೃದ್ಧಿ ಕಾರ್ಯಗಳು ಮಾತ್ರವಲ್ಲ ಮುಂದಿನ 50 ವರ್ಷಗಳಲ್ಲಿ ಪುತ್ತೂರಿನ ಅವಶ್ಯಕತೆಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗಿದೆ. ಆದರೆ ಇವ್ಯಾವುದನ್ನು ಲೆಕ್ಕಿಸದೇ, ಹಾಲಿ ಶಾಸಕ ಸಂಜೀವ ಮಠಂದೂರು ಅವರನ್ನು ಬಿಜೆಪಿ ವರಿಷ್ಠರು ನಿರ್ಲಕ್ಷಿಸಿದ್ದಾರೆ. ಕಾರಣವೇ ಇಲ್ಲದೇ, ಹಾಲಿ ಶಾಸಕರಿಗೆ ಟಿಕೇಟ್ ನಿರಾಕರಿಸಿರುವುದು ಸರಿಯಲ್ಲ. ಇದರ ಪರಿಣಾಮವನ್ನು ಚುನಾವಣೆಯಲ್ಲಿ ಎದುರಿಸಬೇಕಾಗುವ

ಮಠಂದೂರಿಗೆ ಟಿಕೇಟ್ ನಿರಾಕರಣೆ : ಕಾರ್ಯಕರ್ತರ ಅಸಮಾಧಾನ | ಹೈಕಮಾಂಡ್ ಭಿನ್ನ ನಿಲುವೇ ಅಸಮಾಧಾನಕ್ಕೆ ಕಾರಣ | ಕಾರ್ಯಕರ್ತರು, ಮುಖಂಡರು, ರಾಜ್ಯ ನಾಯಕರು ಪರವಾಗಿದ್ದರೂ ಟಿಕೇಟ್ ನಿರಾಕರಣೆ ಏಕೆ? Read More »

error: Content is protected !!
Scroll to Top