ರಾಜಕೀಯ

ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಪುಣ್ಯಕ್ಷೇತ್ರಗಳಿಗೆ ಭೇಟಿ

ಮಂಗಳೂರು : ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಕ್ಷಿಣ ಕನ್ನಡದ ವಿವಿಧ ದೇಗುಲಗಳಿಗೆ ಭೇಟಿ ನೀಡುತ್ತಿದ್ದಾರೆ. ಕುಟುಂಬಸಮೇತರಾಗಿ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳಕ್ಕೆ ಭೇಟಿ ನೀಡಿರುವ ಅವರು, ಮಂಜುನಾಥನ ದರ್ಶನ ಪಡೆಯಲಿದ್ದಾರೆ. ದೇವಾಲಯದಲ್ಲಿ ವಿಷೇಶ ಪೂಜೆ‌ ಸಲ್ಲಿಸಿದ ಬಳಿಕ ಧರ್ಮಸ್ಥಳದಿಂದ‌ ಕುಕ್ಕೆ‌ ಸುಬ್ರಹ್ಮಣ್ಯಕ್ಕೂ ಭೇಟಿ‌ ನೀಡಲಿದ್ದಾರೆ. ಇಂದು ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.ಗುರುವಾರ ಮುಂಜಾನೆ‌ ಕೊಲ್ಲೂರಿಗೂ ತೆರಳಲಿರುವ ಅವರು ನಂತರ ಕಟೀಲು ದೇಗುಲ ಮತ್ತು ಉಳ್ಳಾಲದ ಪುರಾಣ ಪ್ರಸಿದ್ದ ಸೋಮನಾಥ ದೇಗುಲಕ್ಕೆ […]

ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಪುಣ್ಯಕ್ಷೇತ್ರಗಳಿಗೆ ಭೇಟಿ Read More »

ಬಿಜೆಪಿ ಸೇರ್ಪಡೆಗೊಂಡ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ

ಬೆಂಗಳೂರು : ರಾಜ್ಯದಲ್ಲಿ ಚುನಾವಣೆ ಕಾವು ಜೋರಾಗಿದೆ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಇದೀಗ ಬಂಡಾಯದ ಬಿಸಿ ಹೆಚ್ಚಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಪಕ್ಷ ತೊರೆಯುವವರ ಸಂಖ್ಯೆ ಹೆಚ್ಚಾಗಿದೆ. ಬಿಜೆಪಿ ನಾಯಕರು ಅಸಮಾಧಾನದ ನಡುವೆ ಇದೀಗ ಕಾಂಗ್ರೆಸ್‌ಗೆ ಮತ್ತೊಂದು ಆಘಾತ ಎದುರಾಗಿದೆ. ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜನಂದಿನಿ ಏ. 11 ರಂದು ಪಕ್ಷ ತೊರೆಯಲು ಮುಂದಾಗಿದ್ದು, ನಗರದ ಮಲ್ಲೇಶ್ವರದ ಬಿಜೆಪಿಯ ರಾಜ್ಯ ಕಚೇರಿಯಲ್ಲಿ

ಬಿಜೆಪಿ ಸೇರ್ಪಡೆಗೊಂಡ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ Read More »

ಬಿಜೆಪಿ ಟಿಕೆಟ್‌ ಘೋಷಣೆ ಹಿನ್ನೆಲೆ ಪುತ್ತೂರಿನಲ್ಲಿ ಹೆಚ್ಚಿದ ಅಸಮಾಧಾನ

ಪುತ್ತೂರು : ಬಿಜೆಪಿ ನಿನ್ನೆ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಆಶಾ ತಿಮ್ಮಪ್ಪ ಗೌಡ ಅವರಿಗೆ ಪುತ್ತೂರಿನ ಬಿಜೆಪಿ ಟಿಕೆಟ್ ನೀಡಿದೆ. ಇದರ ಬೆನ್ನಲ್ಲೇ ಪುತ್ತೂರು ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದೆ. ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಬೆಂಬಲಿಗರ ನೇತೃತ್ವದಲ್ಲಿ ತುರ್ತು ಸಭೆ ನಡೆಯಲಿದೆ. ಕಳೆದ ಎರಡು ಅವಧಿಯಲ್ಲಿ ಅರುಣ್ ಅವರ ಹೆಸರು ಅಭ್ಯರ್ಥಿ ಸ್ಥಾನಕ್ಕೆ ಕೇಳಿ ಬಂದಿದ್ದರೂ ಅವಕಾಶ ಸಿಕ್ಕಿರಲಿಲ್ಲ. ಆದರೆ ಈ ಬಾರಿ ಅವರಿಗೆ

ಬಿಜೆಪಿ ಟಿಕೆಟ್‌ ಘೋಷಣೆ ಹಿನ್ನೆಲೆ ಪುತ್ತೂರಿನಲ್ಲಿ ಹೆಚ್ಚಿದ ಅಸಮಾಧಾನ Read More »

ಈ ಬಾರಿಯೂ ಶಕುಂತಳಾ ಶೆಟ್ಟಿಯವರಿಗೆ ಅವಕಾಶ ನೀಡಬೇಕು | ಇಲ್ಲದಿದ್ದಲ್ಲಿ ಸಾಮೂಹಿಕ ರಾಜೀನಾಮೆ | ಬಂಡಾಯದ ಕೂಗು

ಪುತ್ತೂರು: ಈ ಬಾರಿಯೂ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‍ ಅಭ್ಯರ್ಥಿಯಾಗಿ ಶಕುಂತಳಾ ಟಿ. ಶೆಟ್ಟಿಯವರಿಗೇ ಅವಕಾಶ ನೀಡಬೇಕು. ಇಲ್ಲದಿದ್ದಲ್ಲಿ ಪಕ್ಷದ ಹುದ್ದೆಗೆ ರಾಜೀನಾಮೆ ನೀಡುವ ಮೂಲಕ ಪಕ್ಷದಲ್ಲಿ ತಟಸ್ಥವಾಗಿ ಉಳಿಯಲಿದ್ದೇವೆ ಎಂದು ಪುತ್ತೂರು ಮಹಿಳಾ ಬ್ಲಾಕ್ ಕಾಂಗ್ರೆಸ್‍ ಸಮಿತಿ ಅಧ್ಯಕ್ಷೆ ಶಾರದಾ ಅರಸ್ ಹೇಳಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಕುಂತಳಾ ಶೆಟ್ಟಿಯವರು ಈ ಹಿಂದಿನ ಶಾಸಕರಾಗಿದ್ದ ಅವಧಿಯಲ್ಲಿ ಮಹಿಳೆಯರ ಏಳಿಗೆಗಾಗಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಈ ಪೈಕಿ ಮಹಿಳಾ ಪೊಲೀಸ್ ಠಾಣೆಯನ್ನು ಪುತ್ತೂರಿಗೆ ಆರಂಭಿಸಲು

ಈ ಬಾರಿಯೂ ಶಕುಂತಳಾ ಶೆಟ್ಟಿಯವರಿಗೆ ಅವಕಾಶ ನೀಡಬೇಕು | ಇಲ್ಲದಿದ್ದಲ್ಲಿ ಸಾಮೂಹಿಕ ರಾಜೀನಾಮೆ | ಬಂಡಾಯದ ಕೂಗು Read More »

ಬಿಜೆಪಿ ಚುನಾವಣಾ ಪ್ರಚಾರದ ನಾಟು…. ನಾಟು…. ಹಾಡು ವೈರಲ್

ಬೆಂಗಳೂರು : ಇನ್ನೊಂದು ತಿಂಗಳು ಬಾಕಿ ಇರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಶತಾಯಗತಾಯ ಗೆಲ್ಲಲೇಬೇಕೆಂದು ಪಣತೊಟ್ಟಿರುವ ಬಿಜೆಪಿ ನಾಯಕರು ರಣತಂತ್ರಗಳನ್ನು ರೂಪಿಸುತ್ತಿದ್ದು, ಮತದಾರರ ಒಲೈಕೆಗಾಗಿ ನಾನಾ ರೀತಿಯ ಕಸರತ್ತುಗಳನ್ನು ನಡೆಸುತ್ತಿದ್ದಾರೆ.ಆಡಳಿತಾರೂಢ ಬಿಜೆಪಿ ಇವತ್ತು ತಮ್ಮ ಚುನಾವಣಾ ಪ್ರಚಾರದ ಹಾಡನ್ನು ಬಿಡುಗಡೆ ಮಾಡಿದೆ. ಟಾಲಿವುಡ್ ನ ಖ್ಯಾತ ನಿರ್ದೇಶಕ ರಾಜಮೌಲಿ ನಿರ್ದೇಶನದ ಆರ್ ಆರ್ ಆರ್ ಸಿನಿಮಾದಲ್ಲಿನ ಆಸ್ಕರ್ ವಿಜೇತ ಹಾಡು ನಾಟು ನಾಟು ಹಾಡನ್ನು ರಿಮಿಕ್ಸ್ ಮಾಡಿ ಇವತ್ತು (ಏ.11) ಬಿಡುಗಡೆ ಮಾಡಿದೆ. ಈ ಹಾಡಿನಲ್ಲಿ ನಾಟು

ಬಿಜೆಪಿ ಚುನಾವಣಾ ಪ್ರಚಾರದ ನಾಟು…. ನಾಟು…. ಹಾಡು ವೈರಲ್ Read More »

ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ : 126.14 ಕೋಟಿ ರೂ. ಜಪ್ತಿ

ಬೆಂಗಳೂರು : ಚುನಾವಣೆಗೆ ಸಜ್ಜಾಗುತ್ತಿರುವ ಕರ್ನಾಟಕದಲ್ಲಿ ಮಾ.29 ರಿಂದ ಜಾರಿಯಲ್ಲಿರುವ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣದಲ್ಲಿ 1,000 ಎಫ್ಐಆರ್ ದಾಖಲಾಗಿದೆ. ನಗದು, ಮದ್ಯ, ಡ್ರಗ್ಸ್, ಬೆಲೆಬಾಳುವ ಲೋಹಗಳು ಹಾಗೂ ಉಚಿತ ಕೊಡುಗೆಗಳನ್ನು ನೀಡುವ ಪ್ರಕರಣಗಳಿಗೆ ಸಂಬಂಧಿಸಿದ ಎಫ್ಐಆರ್ ಗಳು ಇದಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಈ ವರೆಗೂ ಒಟ್ತು 126.14 ಕೋಟಿ ರೂಪಾಯಿಗಳನ್ನು ಜಪ್ತಿ ಮಾಡಲಾಗಿದೆ. ಈ ಪೈಕಿ 47 ಕೋಟಿ ರೂಪಾಯಿಗಳ ನಗದು, 29 ಕೋಟಿ ರೂಪಾಯಿ ಮೌಲ್ಯದ

ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ : 126.14 ಕೋಟಿ ರೂ. ಜಪ್ತಿ Read More »

ಬಿಜೆಪಿಗೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ರಾಜಿನಾಮೆ ಘೋಷಣೆ…?

ನಾಳೆ ಬೆಂಬಲಿಗರೊಂದಿಗೆ ಚರ್ಚಿಸಿ ಕಾಂಗ್ರೆಸ್‌ ಸೇರ್ಪಡೆಯ ತೀರ್ಮಾನ ಚಿಕ್ಕೋಡಿ : ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪಕ್ಷದಿಂದ ಹೊರನಡೆಯಲಿದ್ದಾರೆ ಎಂಬ ಮುನ್ಸೂಚನೆ ಸಿಕ್ಕಿದೆ. ಅವರು ಕಾಂಗ್ರೆಸ್‌ ಸೇರಲಿದ್ದಾರೆ ಎಂದು ಹೇಳಲಾಗಿದ್ದು, ನಾಳೆ ಬೆಂಬಲಿಗರ ಜತೆ ಚರ್ಚೆ ನಡೆಸಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳೋದಾಗಿ ಲಕ್ಷ್ಮಣ ಸವದಿ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ. ಮಂಗಳವಾರ ಸಂಜೆ ಅಥಣಿಯಲ್ಲಿ ನಡೆದ ಬಣಜಿಗರ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸವದಿ, ಟಿಕೆಟ್‌ ಕೈತಪ್ಪಿದ್ದಕ್ಕೆ ದು:ಖಿತರಾಗಿ

ಬಿಜೆಪಿಗೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ರಾಜಿನಾಮೆ ಘೋಷಣೆ…? Read More »

ಶಾಸಕ, ಸಚಿವ ಎಸ್.ಅಂಗಾರ ಅವರಿಗೆ ಟಿಕೆಟ್‌ ಮಿಸ್‌ : ವೆಂಕಟ್ ವಳಲಂಬೆ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ಕಡಬ : ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ, ಸಚಿವ ಎಸ್.ಅಂಗಾರ ಅವರಿಗೆ ಬಿಜೆಪಿ ಟಿಕೆಟ್‌ ದೊರೆಯದೇ ಇರುವುದಕ್ಕಾಗಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ವೆಂಕಟ್ ವಳಲಂಬೆ ಹೇಳಿದ್ದಾರೆ. ಕಳೆದ 30 ವರ್ಷಗಳ ಕಾಲ ಕ್ಷೇತ್ರ ಮತ್ತು ಪಕ್ಷಕ್ಕೆ ಯಾವುದೇ ಚ್ಯುತಿ ಬಾರದ ರೀತಿ ದುಡಿದ, ಸಾಮಾನ್ಯ ಮನೆತನದಿಂದ ಬಂದಿರುವ ಸರಳ ಸಜ್ಜನಿಕೆಯ ಎಲ್ಲರ ಜನಮನ ಗೆದ್ದಿರುವ ಪಕ್ಷಾತೀತವಾಗಿ ಕ್ಷೇತ್ರದ ಅಭಿವೃದ್ಧಿಯನ್ನು ಮಾಡಿರುವ ಎಸ್.ಅಂಗಾರರಂತಹ ಪ್ರಾಮಾಣಿಕ ಕಾರ್ಯಕರ್ತನೊಂದಿಗೆ ಚರ್ಚಿಸದೆ ಏಕಪಕ್ಷೀಯವಾಗಿ ಅಭ್ಯರ್ಥಿ ಘೋಷಣೆ ಮಾಡಿರುವುದರಿಂದ

ಶಾಸಕ, ಸಚಿವ ಎಸ್.ಅಂಗಾರ ಅವರಿಗೆ ಟಿಕೆಟ್‌ ಮಿಸ್‌ : ವೆಂಕಟ್ ವಳಲಂಬೆ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ Read More »

ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಲ್ಲಿ ಕರಾವಳಿಗರಿಗೆ ಅಚ್ಚರಿ

ಉಡುಪಿಯಿಂದ ಯಶ್‌ಪಾಲ್‌ ಸುವರ್ಣ, ಕಾಪುವಿನಿಂದ ಗುರ್ಮೆ ಸುರೇಶ್‌ ಶೆಟ್ಟಿ ಕಣಕ್ಕೆ ಪುತ್ತೂರು, ಸುಳ್ಯ ಟಿಕೆಟ್‌ ಮಹಿಳೆಯರಿಗೆ ದೆಹಲಿ : ಗಜಪ್ರಸವದಂತಾಗಿದ್ದ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆಗೊಳಿಸಲಾಗಿದೆ. ರಾತ್ರಿ 9 ಗಂಟೆ ವೇಳೆಗೆ ಕೇಂದ್ರ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯದ 189 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದರು.ನಿರೀಕ್ಷೆಯಂತೆಯೇ ಬಿಜೆಪಿ ಹಲವು ಪ್ರಯೋಗಗಳನ್ನು ಮಾಡಲು ಮುಂದಾಗಿದೆ. ಹಲವು ಅನಿರೀಕ್ಷಿತ ಹೆಸರುಗಳು ಪಟ್ಟಿಯಲ್ಲಿ

ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಲ್ಲಿ ಕರಾವಳಿಗರಿಗೆ ಅಚ್ಚರಿ Read More »

ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದ ಆಶಾ ತಿಮ್ಮಪ್ಪ | ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಬೆನ್ನಿಗೇ ಪುತ್ತೂರು ಭೇಟಿ

ಪುತ್ತೂರು: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲೇ ಪುತ್ತೂರು ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಆಶಾ ತಿಮ್ಮಪ್ಪ ಅವರು ಬುಧವಾರ ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಜಾತ್ರಾ ಸಂಭ್ರಮದಲ್ಲಿರುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ತಮ್ಮ ದಿನಚರಿಗೆ ಚಾಲನೆ ನೀಡಿದರು. ದೇವಸ್ಥಾನದಿಂದ ಪುತ್ತೂರು ಬಿಜೆಪಿ ಪಕ್ಷದ ಕಚೇರಿಗೆ ತೆರಳಿದರು.

ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದ ಆಶಾ ತಿಮ್ಮಪ್ಪ | ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಬೆನ್ನಿಗೇ ಪುತ್ತೂರು ಭೇಟಿ Read More »

error: Content is protected !!
Scroll to Top