ಭಾಗೀರಥಿ ಮುರುಳ್ಯ ಸುಳ್ಯ ಬಿಜೆಪಿ ಅಭ್ಯರ್ಥಿ: ಸ್ವಾಗತಿಸಿದ ಎಸ್.ಎನ್. ಮನ್ಮಥ
ಪುತ್ತೂರು: ಭಾಗೀರಥಿ ಮುರುಳ್ಯ ಅವರು ಸುಳ್ಯದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆ ಆಗಿರುವುದನ್ನು ಬಿಜೆಪಿ ಸುಳ್ಯ ಮಂಡಲದ ಮಾಜಿ ಅಧ್ಯಕ್ಷ ಎಸ್.ಎನ್. ಮನ್ಮಥ ಸ್ವಾಗತಿಸಿದ್ದಾರೆ. ಬಿಜೆಪಿ ಹೊಸ ಮುಖಗಳಿಗೆ ಅವಕಾಶ ನೀಡಿದೆ. ಉತ್ತಮ ಅಭ್ಯರ್ಥಿಯನ್ನೇ ಆಯ್ಕೆ ಮಾಡಿದ್ದು, ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವುದಾಗಿ ಎಸ್.ಎನ್. ಮನ್ಮಥ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮಂಗಳವಾರ ರಾತ್ರಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ದೆಹಲಿಯಲ್ಲಿ ಬಿಡುಗಡೆ ಮಾಡಿದ್ದು, ಅದರಲ್ಲಿ ಸುಳ್ಯ ಅಭ್ಯರ್ಥಿಯಾಗಿ ಭಾಗೀರಥಿ ಮುರುಳ್ಯ ಅವರನ್ನು ಆಯ್ಕೆ ಮಾಡಿದೆ.
ಭಾಗೀರಥಿ ಮುರುಳ್ಯ ಸುಳ್ಯ ಬಿಜೆಪಿ ಅಭ್ಯರ್ಥಿ: ಸ್ವಾಗತಿಸಿದ ಎಸ್.ಎನ್. ಮನ್ಮಥ Read More »