ರಾಜಕೀಯ

ಅಝಾನ್, ಅಲ್ಲಾಹು ಕುರಿತು ಅವಹೇಳನ: ಎಸ್.ಡಿ.ಪಿ.ಐ. ಪ್ರತಿಭಟನೆ

ಪುತ್ತೂರು: ಅಝಾನ್ ಹಾಗೂ ಅಲ್ಲಾಹುವಿನ ಕುರಿತು ಅವಹೇಳನವಾಗಿ ಮಾತನಾಡಿದ ಕೆ.ಎಸ್.ಈಶ್ವರಪ್ಪ ಹಾಗೂ ಬಿಜೆಪಿ ಪಕ್ಷದ ವಿರುದ್ಧ ಎಸ್‌ಡಿಪಿಐ ವತಿಯಿಂದ ಪ್ರತಿಭಟನೆ ಶುಕ್ರವಾರ ಸಂಜೆ ತಾಲೂಕು ಆಡಳಿತ ಸೌಧದ ಬಳಿಯ ಅಮರ್ ಜವಾನ್ ಸ್ಮಾರಕದ ಬಳಿ ನಡೆಯಿತು. ಎಸ್‌ಡಿಪಿಐ ಜಿಲ್ಲಾ ಉಪಾಧ್ಯಕ್ಷ ವಿಕ್ಟರ್ ಮಾರ್ಟಿನ್ ಮಾತನಾಡಿ, ಎಸ್‌ಡಿಪಿಐ ಪಕ್ಷದವರಿಗೆ ಹಿಂದೂ, ಮುಸ್ಲಿಂ, ಬೌದ್ಧ, ಕ್ರಿಶ್ಚಿಯನ್ ಎಲ್ಲರೂ ಒಂದೇ. ನಮಗೇ ಬೇಕಾದ್ದು ಮನುಷ್ಯ ಜಾತಿ ಹೊರತು ಧರ್ಮ ಅಲ್ಲ. ಈ ನಿಟ್ಟಿನಲ್ಲಿ ಬಿಜೆಪಿಯವರು ದ್ವೇಷವನ್ನು ಬಿಟ್ಟುಬಿಡಿ ಎಂದು ಹೇಳಿದ ಅವರು, […]

ಅಝಾನ್, ಅಲ್ಲಾಹು ಕುರಿತು ಅವಹೇಳನ: ಎಸ್.ಡಿ.ಪಿ.ಐ. ಪ್ರತಿಭಟನೆ Read More »

ಕಾಂಗ್ರೆಸ್ ಭ್ರಷ್ಟಾಚಾರ ನಡೆಸಿದಲ್ಲಿ ಜೈಲಿಗೆ ಹಾಕಲಿ : ಬಿ.ಕೆ. ಹರಿಪ್ರಸಾದ್ ಸವಾಲು

ಪುತ್ತೂರು: . ಕಾಂಗ್ರೆಸ್ ಭ್ರಷ್ಠಾಚಾರ ನಡೆಸಿದ್ದೇ ಆದರೆ ಜೈಲಿಗೆ ಹಾಕಲಿ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಸವಾಲು ಹಾಕಿದರು. ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬುಧವಾರ  ಮುರ ಗೌಡ ಸಮುದಾಯ ಭವನದಲ್ಲಿ ನಡೆದ ಕಾಂಗ್ರೆಸ್‌ನ ಕರಾವಳಿಯ ಪ್ರಜಾಧ್ವನಿ ಯಾತ್ರೆಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಲಾಗವುದು. ಬಿಜೆಪಿ ಜನಸಾಮಾನ್ಯರ ಜೀವನ ಸುಧಾರಣೆ ಮಾಡದೇ ಲೂಟಿ ಮಾಡಿರುವುದು ಮಾತ್ರ ಅವರ ಸಾಧನೆಯಾಗಿದೆ. ಬಿಜೆಪಿಯವರು ಸಮಾಜಕ್ಕೆ, ಕುಟುಂಬಕ್ಕೆ ಪೂರಕವಾದ ಯಾವುದೇ

ಕಾಂಗ್ರೆಸ್ ಭ್ರಷ್ಟಾಚಾರ ನಡೆಸಿದಲ್ಲಿ ಜೈಲಿಗೆ ಹಾಕಲಿ : ಬಿ.ಕೆ. ಹರಿಪ್ರಸಾದ್ ಸವಾಲು Read More »

ವಿಧಾನಸಭೆ ಚುನಾವಣೆಗೆ ದಿನಗಣನೆ: ಹೆಚ್ಚುತ್ತಿರುವ ಬಿಟ್ಟಿ ಉಡುಗೊರೆಗಳ ಸುರಿಮಳೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆ ಜಾರಿ ಮಾಡುವ ಮುನ್ನವೇ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಮತದಾರರಿಗೆ ಉಡುಗೊರೆಗಳ ಸುರಿಮಳೆಗೈಯುತ್ತಿದ್ದಾರೆ. ಈ ತಿಂಗಳ ಅಂತ್ಯದ ವೇಳೆಗೆ ಇಸಿ ಚುನಾವಣಾ ನೀತಿ ಸಂಹಿತೆ ಜಾರಿ ಮಾಡುವ ಸಾಧ್ಯತೆಯಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಸೇರಿದ ರಾಜಕೀಯ ಪಕ್ಷಗಳ ಮುಖಂಡರು ಮತದಾರರನ್ನು ಸೆಳೆಯಲು ಸೀರೆ, ಬೆಳ್ಳಿ, ಬಂಗಾರದ ವಸ್ತುಗಳು, ಪ್ರೆಷರ್ ಕುಕ್ಕರ್, ಮಿಕ್ಸರ್ ಗ್ರೈಂಡರ್, ಟೆಲಿವಿಷನ್ ಸೆಟ್, ಮೊಬೈಲ್‌ಗಳನ್ನು ಹಂಚುತ್ತಿದ್ದಾರೆ. ಹಾವೇರಿ ಜಿಲ್ಲೆಯ

ವಿಧಾನಸಭೆ ಚುನಾವಣೆಗೆ ದಿನಗಣನೆ: ಹೆಚ್ಚುತ್ತಿರುವ ಬಿಟ್ಟಿ ಉಡುಗೊರೆಗಳ ಸುರಿಮಳೆ Read More »

ಜನರ ಸೇವೆಯಿಂದ ರಾಮರಾಜ್ಯ ನಿರ್ಮಾಣ | ಒಳಮೊಗ್ರು ರಾಜೀವ ಗಾಂಧಿ ಸೇವಾ ಕೇಂದ್ರ, ನೂತನ ಗ್ರಾಪಂ ಕಚೇರಿ ಉದ್ಘಾಟಿಸಿ ಶಾಸಕ ಮಠಂದೂರು

ಪುತ್ತೂರು: ಜನರ ಸೇವೆಯೇ ಜನಾರ್ದನನ ಸೇವೆ ಎಂಬ ವೇದವ್ಯಾಕ್ಯದೊಂದಿಗೆ ಗಾಂಧಿ ಕಂಡ ರಾಮ ರಾಜ್ಯ ನಿರ್ಮಾಣ ಮಾಡಬಹುದು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಪುತ್ತೂರು ತಾಲೂಕು ಪಂಚಾಯಿತಿ, ಒಳಮೊಗ್ರು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ರಾಜೀವ್ ಗಾಂಧಿ ಸೇವಾ ಕೇಂದ್ರ ಹಾಗೂ ನೂತನ ಗ್ರಾಮ ಪಂಚಾಯಿತಿ ಕಚೇರಿಯನ್ನು ಮಾ. 13ರಂದು ಉದ್ಘಾಟಿಸಿ ಮಾತನಾಡಿದರು. ತಾನು ದೇವರ ಕೆಲಸ ಮಾಡಲು ಬಂದಿದ್ದೇನೆ ಎಂಬ ಭಾವನೆಯನ್ನಿಟ್ಟು ಕೆಲಸ ನಿರ್ವಹಿಸಿದ್ದೇನೆ. ಪ್ರತಿಯೊಬ್ಬ ಮತದಾರನ ಭರವಸೆಗಳನ್ನು

ಜನರ ಸೇವೆಯಿಂದ ರಾಮರಾಜ್ಯ ನಿರ್ಮಾಣ | ಒಳಮೊಗ್ರು ರಾಜೀವ ಗಾಂಧಿ ಸೇವಾ ಕೇಂದ್ರ, ನೂತನ ಗ್ರಾಪಂ ಕಚೇರಿ ಉದ್ಘಾಟಿಸಿ ಶಾಸಕ ಮಠಂದೂರು Read More »

ಪುತ್ತೂರಿನ ಶಾಲೆಗಳ ಅಭಿವೃದ್ಧಿ ರಾಜ್ಯಕ್ಕೆ ಮಾದರಿ | ಶಾಸಕ ಸಂಜೀವ ಮಠಂದೂರು ಕ್ರಮವನ್ನು ಶ್ಲಾಘಿಸಿದ ಕೆ.ಎಸ್. ಈಶ್ವರಪ್ಪ

ಪುತ್ತೂರು: ಪುತ್ತೂರಿನಲ್ಲಿ ಸರಕಾರಿ ಶಾಲೆಗಳನ್ನು ಉತ್ತಮ ರೀತಿಯಲ್ಲಿ ಶಾಸಕ ಸಂಜೀವ ಮಠಂದೂರು ಅಭಿವೃದ್ಧಿ ಮಾಡಿದ್ದಾರೆ. ಅದೇ ಕ್ರಮವನ್ನು ಮಾದರಿಯಾಗಿಟ್ಟುಕೊಂಡು ರಾಜ್ಯದಲ್ಲಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಲು ಪ್ರಯತ್ನಿಸಲಾಗುವುದು ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಮಲೆ ಮಹದೇಶ್ವರ ಬೆಟ್ಟದಲ್ಲಿ ಆರಂಭಗೊಂಡ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಶನಿವಾರ ಸುಳ್ಯದ ಮೂಲಕ ಪುತ್ತೂರಿಗೆ ಆಗಮಿಸಿದ್ದು, ಪುತ್ತೂರು ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಸಮೀಪದ ವೇದಿಕೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಮಾಡಿದ ಕ್ರಮವನ್ನು, ಅವರಿಂದಲೇ

ಪುತ್ತೂರಿನ ಶಾಲೆಗಳ ಅಭಿವೃದ್ಧಿ ರಾಜ್ಯಕ್ಕೆ ಮಾದರಿ | ಶಾಸಕ ಸಂಜೀವ ಮಠಂದೂರು ಕ್ರಮವನ್ನು ಶ್ಲಾಘಿಸಿದ ಕೆ.ಎಸ್. ಈಶ್ವರಪ್ಪ Read More »

ಅಮ್ಚಿನಡ್ಕ: ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಪುತ್ತೂರು ತಾಲೂಕಿಗೆ ಭವ್ಯ ಸ್ವಾಗತ

ಕಾವು: ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಚೈತನ್ಯ ತುಂಬುವ ನಿಟ್ಟಿನಲ್ಲಿ ರಾಜ್ಯವ್ಯಾಪಿ ಹಮ್ಮಿಕೊಂಡಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯನ್ನು ಪುತ್ತೂರು ತಾಲೂಕಿಗೆ  ಕಾವು ಅಮ್ಚಿನಡ್ಕ ದಲ್ಲಿ ಭವ್ಯ ಸ್ವಾಗತ ಕೊರಲಾಯಿತು. ಶಾಸಕ ಸಂಜೀವ ಮಠಂದೂರು ವಿಜಯ ಸಂಕಲ್ಪ ಯಾತ್ರೆಯ ವಾಹನಕ್ಕೆ ಹೂ ಹಾರ ಹಾಕಿ, ಬಿಜೆಪಿ ಜಿಲ್ಲಾ ಮಾಜಿ ಉಪಾಧ್ಯಕ್ಷ ನನ್ಯ ಅಚ್ಚುತ ಮುಡಿತ್ತಾಯ ತೆಂಗಿನಕಾಯಿ ಒಡೆದು ಚಾಲನೆ ನೀಡಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ

ಅಮ್ಚಿನಡ್ಕ: ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಪುತ್ತೂರು ತಾಲೂಕಿಗೆ ಭವ್ಯ ಸ್ವಾಗತ Read More »

ಪುತ್ತೂರಿಗೆ ಆಗಮಿಸಿದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ

ಪುತ್ತೂರು: ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಪುತ್ತೂರಿಗೆ ಆಗಮಿಸಿದ್ದು, ಪುತ್ತೂರು ಬಸ್ ನಿಲ್ದಾಣದಿಂದ ವೆಂಕಟ್ರಮಣ ದೇವಳದವರೆಗೆ ಮೆರವಣಿಗೆಯಲ್ಲಿ ಸಾಗಿ ಬರಲಾಯಿತು.ಪ್ರಾಸ್ತಾವಿಕವಾಗಿ ಮಾತನಾಡಿದ ಶಾಸಕ ಸಂಜೀವ ಮಠಂದೂರು ಅವರು, ರಾಜ್ಯ, ರಾಷ್ಟ್ರದ ಅಭಿವೃದ್ಧಿ ಕಾರ್ಯಗಳಿಗೆ ಡಬಲ್ ಇಂಜಿನ್ ಸರ್ಕಾರವೇ ಕಾರಣ. ಆದ್ದರಿಂದ ಜನತೆ ಬಿಜೆಪಿ ಸರ್ಕಾರದ ಮೇಲೆ ವಿಶ್ವಾಸ ಇಟ್ಟಿದ್ದಾರೆ ಎಂದರು. ಶಾಸಕ ಸಂಜೀವ ಮಠಂದೂರು ಅವರ ಪ್ರಾಸ್ತಾವಿಕ ಮಾತಿನ ಪೂರ್ಣ ವಿವರ ಈ ವೀಡಿಯೋನಲ್ಲಿದೆ… ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್,

ಪುತ್ತೂರಿಗೆ ಆಗಮಿಸಿದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ Read More »

ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮ ರದ್ದು | ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ನಿಧನ ಹಿನ್ನೆಲೆ

ಪುತ್ತೂರು: ಶನಿವಾರ ಸಂಜೆ ಪುತ್ತೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮ ರದ್ದಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವ ನಾರಾಯಣ್ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಕಾಂಗ್ರೆಸಿನ ಪ್ರಕಟಣೆ ತಿಳಿಸಿದೆ. ಕಾಂಗ್ರೆಸಿನ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಗೃಹಲಕ್ಷ್ಮೀ ಯೋಜನೆ ಸೇರಿದಂತೆ ಹಲವು ಯೋಜನೆಗಳ ಪ್ರಚಾರಾರ್ಥವಾಗಿ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದೀಗ ಕಾರ್ಯಕ್ರಮ ರದ್ದಾಗಿರುವ ಹಿನ್ನೆಲೆಯಲ್ಲಿ, ಕಾರ್ಯಕ್ರಮವನ್ನು ಅಜೆಂಡಾವನ್ನು ಪ್ರತಿ ಮನೆಮನೆಗೆ ತಲುಪಿಸುವಂತೆ ಮುಖಂಡರು ಹಾಗೂ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮ ರದ್ದು | ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ನಿಧನ ಹಿನ್ನೆಲೆ Read More »

`ನಾವು ಬಿಜೆಪಿಯ ಸಕ್ರೀಯ ಕಾರ್ಯಕರ್ತರು’ | ಕಾಂಗ್ರೆಸ್ ಸೇರ್ಪಡೆ ಎಂಬ ವರದಿಯೇ ಸುಳ್ಳು! | ಚಂದ್ರ ಬೋಸ್ ಹಾಗೂ ಸಂಗಡಿಗರ ವೀಡಿಯೋ ಹೇಳಿಕೆ ವೈರಲ್

ಪುತ್ತೂರು: ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆಂದು ತಮ್ಮ ಬಗ್ಗೆ ಸುಳ್ಳು ಸುದ್ದಿ ನೀಡಿದ್ದು, ತಾವು ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತರು ಎಂದು ಬಿಜೆಪಿ ಕಾರ್ಯಕರ್ತ ಚಂದ್ರ ಬೋಸ್ ವೀಡಿಯೋ ಹೇಳಿಕೆ ನೀಡಿದ್ದಾರೆ. ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ ಎಂಬಂತೆ ಬಿಂಬಿಸಿರುವ ಬಗ್ಗೆ ಪತ್ರಿಕೆಯಲ್ಲಿ ಪ್ರಕಟವಾದ ವರದಿ ಹಿನ್ನೆಲೆಯಲ್ಲಿ ಚಂದ್ರಬೋಸ್ ಹಾಗೂ ಅವರ ಸಂಗಡಿಗರು ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಬಿಟ್ಟಿದ್ದು, ಆ ವರದಿಯಲ್ಲಿ ಸತ್ಯಾಂಶವಿಲ್ಲ ಎಂದು ಆರೋಪಿಸಿದ್ದಾರೆ. ಚಂದ್ರ ಬೋಸ್ ಹಾಗೂ ಸಂಗಡಿಗರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವೀಡಿಯೋದ

`ನಾವು ಬಿಜೆಪಿಯ ಸಕ್ರೀಯ ಕಾರ್ಯಕರ್ತರು’ | ಕಾಂಗ್ರೆಸ್ ಸೇರ್ಪಡೆ ಎಂಬ ವರದಿಯೇ ಸುಳ್ಳು! | ಚಂದ್ರ ಬೋಸ್ ಹಾಗೂ ಸಂಗಡಿಗರ ವೀಡಿಯೋ ಹೇಳಿಕೆ ವೈರಲ್ Read More »

ಮಾ.11 : ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ನಿರ್ದೇಶನದಂತೆ ಮಾ.11ರಂದು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 11 ಗಂಟೆಗೆ ಉಪ್ಪಿನಂಗಡಿಯಲ್ಲಿ ಪ್ರಾರಂಭವಾಗಿ, ಮಧ್ಯಾಹ್ನ `12 ಗಂಟೆಗೆ ವಿಟ್ಲದಲ್ಲಿ, 3 ಗಂಟೆಗೆ ಕುಂಬ್ರದಲ್ಲಿ, ಸಾಯಂಕಾಲ 5 ಗಂಟೆಗೆ ಪುತ್ತೂರಿನ ಕಿಲ್ಲೆಮೈದಾನದಲ್ಲಿ ಕಾರ್ಯಕ್ರಮಗಳು ನಡೆಯಲಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಬಿ. ವಿಶ್ವನಾಥ ರೈ ಹೇಳಿದರು. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ನಾಯಕರಾದ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ, ಕಾರ್ಯಾಧ್ಯಕ್ಷ

ಮಾ.11 : ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮ Read More »

error: Content is protected !!
Scroll to Top