ಅಚ್ಚೇದಿನ್ ಬರುವುದಾಗಿ ಹೇಳಿದ್ದ ಬಿಜೆಪಿ, ಜನರ ಖಾತೆಗೆ ನಯಾ ಪೈಸೆ ಹಣ ಹಾಕಿಲ್ಲವೆಂದ ಅಶೋಕ್ ರೈ | ಕೊಳ್ತಿಗೆ ವಲಯ ಕಾಂಗ್ರೆಸ್‌ಕಾರ್ಯಕರ್ತರ ಸಭೆಯಲ್ಲಿ ಶಾಸಕರಿಗೆ ಸನ್ಮಾನ | ಕಾವು ಹೇಮನಾಥ ಶೆಟ್ಟಿ ಅವರಿಗೆ ಅರಣ್ಯ ನಿಗಮ ನೀಡಲು ಆಗ್ರಹ
ಪುತ್ತೂರು: ನಾವು ಅಧಿಕಾರಕ್ಕೆ ಬಂದರೆ ದೇಶದಲ್ಲಿ ಅಚ್ಚೇದಿನ್ ಕೊಡುತ್ತೇವೆ, ಜನರಿಗೆ ನೆಮ್ಮದಿಯ ಜೀವನ ಕೊಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಬಿಜೆಪಿ ಜನರ ಖಾತೆಗೆ ನಯಾ ಪೈಸೆ ನೀಡಿಲ್ಲ. ನೆಮ್ಮದಿಯ ಜೀವನವನ್ನೂ ನೀಡಿಲ್ಲ ಎಂದು ಶಾಸಕ ಅಶೋಕ್ ರೈ ಆರೋಪಿಸಿದರು. ಕೊಳ್ತಿಗೆ ವಲಯ ಕಾಂಗ್ರೆಸ್ ವತಿಯಿಂದ ಕೊಳ್ತಿಗೆ ಅಂಬೇಡ್ಕರ್ ಭವನದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನತೆಗೆ ಕೊಟ್ಟಿದ್ದ ಗ್ಯಾರಂಟಿಯನ್ನು ಕಾಂಗ್ರೆಸ್ ಈಡೇರಿಸಿದೆ. ಜನರ ಖಾತೆಗೆ ಹಣವನ್ನು ನೀಡಿದ್ದೇವೆ, ಅಕ್ಕಿಯನ್ನು ನೀಡಿದ್ದೇವೆ, […]










