ರಾಜಕೀಯ

ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ರೆಡಿ

ಬೆಂಗಳೂರು : ಕಾಂಗ್ರೆಸ್​​ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಿದ್ಧಪಡಿಸಿದೆ. ನಿನ್ನೆ ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಮೊದಲ ಹಂತದಲ್ಲಿ 120 ಕ್ಷೇತ್ರಗಳ ಸಂಭಾವ್ಯ ಟಿಕೆಟ್​ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಸೇರಿದಂತೆ ಹಿರಿಯ ನಾಯಕರು ನಿನ್ನೆ ಬೆಂಗಳೂರಿನಲ್ಲಿ ಸಭೆ ನಡೆಸಿದ್ದು, ಮಧ್ಯಾಹ್ನದಿಂದ ರಾತ್ರಿ 10 ಗಂಟೆಯವರೆಗೆ ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಟಿಕೆಟ್ ಆಕಾಂಕ್ಷಿಗಳಿಂದ ಬಂದಿರುವ ಅರ್ಜಿಗಳನ್ನು ಪರಿಶೀಲಿಸಿದರು.ಸಿದ್ದರಾಮಯ್ಯ ಹಾಗೂ ಡಿಕೆಶಿ ಸೇರಿಕೊಂಡು 120 ಕ್ಷೇತ್ರಗಳ […]

ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ರೆಡಿ Read More »

ಮಾ.11 : ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಕಾವುನಲ್ಲಿ ಸ್ವಾಗತ | ಪುತ್ತೂರು ವೆಂಕಟ್ರಮಣ ದೇವಸ್ಥಾನದ ಬಳಿ ಸಮಾವೇಶ |

ಪುತ್ತೂರು: ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಪುತ್ತೂರು ವಿಧಾನ ಸಭಾಕ್ಷೇತ್ರಕ್ಕೆ ಮಾ.11 ರಂದು ಸಾಯಂಕಾಲ 5 ಗಂಟೆಗೆ ಕಾವುನಲ್ಲಿ ಸ್ವಾಗತಿಸಿ, 5.30ಕ್ಕೆ ಪುತ್ತೂರು ವೆಂಕಟ್ರಮಣ ದೇವಸ್ಥಾನ ಸಮೀಪದಲ್ಲಿ ಸಮಾವೇಶ ನಡೆಯಲಿದೆ. ಚುನಾವಣೆಯ ದಿಕ್ಸೂಚಿಯಾಗಿ ಈ ಸಮಾವೇಶ ನಡೆಯಲಿದೆ ಎಂದು ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವ ಹೇಳಿದರು. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಧಾನ ಸಭಾ ಚುನಾವಣೆಯ ದೃಷ್ಠಿಕೋನದಲ್ಲಿ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಆರಂಭವಾಗಿದೆ. ನಾಲ್ಕು ತಂಡಗಳಾಗಿ ರಾಜ್ಯದ 224

ಮಾ.11 : ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಕಾವುನಲ್ಲಿ ಸ್ವಾಗತ | ಪುತ್ತೂರು ವೆಂಕಟ್ರಮಣ ದೇವಸ್ಥಾನದ ಬಳಿ ಸಮಾವೇಶ | Read More »

ಮಾ.11ರಂದು ಸುಳ್ಯದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ- ಅದ್ದೂರಿ ರೋಡ್ ಶೋ: ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ಸಿದ್ಧತೆ : ಸಚಿವ ಎಸ್.ಅಂಗಾರ

ಸುಳ್ಯ: ರಾಜ್ಯ ಬಿಜೆಪಿ ನೇತೃತ್ವದಲ್ಲಿ ನಡೆಯುತ್ತಿರುವ ವಿಜಯ ಸಂಕಲ್ಪ ಯಾತ್ರೆ ಮಾ.11ರಂದು ಸುಳ್ಯ ಕ್ಷೇತ್ರಕ್ಕೆ ಆಗಮಿಸಲಿದೆ. ಸುಳ್ಯದಲ್ಲಿ ಅದ್ದೂರಿ ರೋಡ್ ಶೋ ನಡೆಯಲಿದೆ. ಬಿಜೆಪಿಯ ರಾಜ್ಯಮಟ್ಟದ ನಾಯಕರು ಭಾಗವಹಿಸಲಿದ್ದಾರೆ. ವಿಜಯ ಸಂಕಲ್ಪ ಯಾತ್ರೆಯ ಯಶಸ್ವಿಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬಂದರು,ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್.ಅಂಗಾರ ತಿಳಿಸಿದ್ದಾರೆ‌.  ಮಾ.11ರಂದು ಬೆಳಗ್ಗೆ ಮಡಿಕೇರಿಯಿಂದ ಹೊರಡುವ ವಿಜಯ ಸಂಕಲ್ಪ ಯಾತ್ರೆ ಮಧ್ಯಾಹ್ನದ ವೇಳೆಗೆ ಸಂಪಾಜೆಗೆ ಆಗಮಿಸಲಿದೆ. ಜಿಲ್ಲಾ ಗಡಿಯಲ್ಲಿ ಯಾತ್ರೆಯನ್ನು ಸ್ವಾಗತಿಸಲಾಗುವುದು. ಬಳಿಕ ಸಂಪಾಜೆ, ಅರಂತೋಡುಗಳಲ್ಲಿ

ಮಾ.11ರಂದು ಸುಳ್ಯದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ- ಅದ್ದೂರಿ ರೋಡ್ ಶೋ: ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ಸಿದ್ಧತೆ : ಸಚಿವ ಎಸ್.ಅಂಗಾರ Read More »

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಅವರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ

ಪುತ್ತೂರು: ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಚನಿಲ ತಿಮ್ಮಪ್ಪ ಶೆಟ್ಟಿ ಅವರಿಗೆ ರಾಜ್ಯ ಸರಕಾರ ಎಲ್ಲಾ ಸೌಲಭ್ಯಗಳೊಂದಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಆದೇಶಿಸಿದೆ. ರಾಜ್ಯ ಶಿಷ್ಟಾಚಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ – 2 ಅವರು ಆದೇಶ ಹೊರಡಿಸಿದ್ದಾರೆ. ಈ ಮೂಲಕ ಕರಾವಳಿ ಭಾಗದ ಅಭಿವೃದ್ಧಿಗೆ ಹೆಚ್ಚಿನ ಪ್ರಾಶಸ್ತ್ಯವನ್ನು ರಾಜ್ಯ ಸರಕಾರ ನೀಡಿದಂತಾಗಿದೆ. ಸಂಪುಟ ದರ್ಜೆಯ ಸ್ಥಾನಮಾನವು ರಾಜ್ಯದ ಸಂಪುಟ ದರ್ಜೆಯ ಸಚಿವರಿಗೆ ಸರಿಸಮಾನವಾದ ಸ್ಥಾನಮಾನ. ಸಚಿವರುಗಳಿಗೆ ಸಿಗುವ ಎಲ್ಲಾ ಸೌಲಭ್ಯಗಳು, ಅಧಿಕಾರಗಳು

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಅವರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ Read More »

ಭ್ರಷ್ಟಾಚಾರ ಆರೋಪಿ ಶಾಸಕ ವಿರೂಪಾಕ್ಷಪ್ಪ ಜಾಮೀನಿಗೆ ಅರ್ಜಿ

ಬೆಂಗಳೂರು : ಲಂಚ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನಿಗಾಗಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಶಾಸಕರ ಪುತ್ರ ಪ್ರಶಾಂತ್ ಮಾಡಾಳ್‌ 40 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಈ ಪ್ರಕರಣ ಬೆಳಕಿಗೆ ಬಂದ ಬಳಿಕ ಶಾಸಕರು ನಾಪತ್ತೆಯಾಗಿದ್ದಾರೆ. ಲೋಕಾಯುಕ್ತ ಪೊಲೀಸರು ಸೋಮವಾರ ವಿಚಾರಣೆಗೆ ಬರುವಂತೆ ಮಾಡಾಳ್ ವಿರೂಪಾಕ್ಷಪ್ಪಗೆ ನೋಟಿಸ್ ನೀಡಿದ್ದಾರೆ.ಸೋಮವಾರ ವಕೀಲರ ಮೂಲಕ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನಿಗಾಗಿ ಕರ್ನಾಟಕ ಹೈಕೋರ್ಟ್‌ಗೆ

ಭ್ರಷ್ಟಾಚಾರ ಆರೋಪಿ ಶಾಸಕ ವಿರೂಪಾಕ್ಷಪ್ಪ ಜಾಮೀನಿಗೆ ಅರ್ಜಿ Read More »

ರಾಹುಲ್‌ ಗಾಂಧಿಯನ್ನು ಮತ್ತೆ ಟೀಕಿಸಿದ ನಳಿನ್

ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ಸನ್ನು ಟೀಕಿಸುವ ಭರದಲ್ಲಿ ಮತ್ತೊಮ್ಮೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಕೊರೊನಾ ಲಸಿಕೆ ತೆಗೆದುಕೊಂಡರೆ ಮಕ್ಕಳಾಗುವುದಿಲ್ಲ ಎಂದು ವಿಪಕ್ಷ ನಾಯಕರು ಹೇಳಿಕೆ ನೀಡಿದ್ದರು. ಬಳಿಕ ಅವರೇ ರಹಸ್ಯವಾಗಿ ಹೋಗಿ ತೆಗೆದುಕೊಂಡರು ಎಂದು ನಳಿನ್‌ ಕುಮಾರ್ ಕಟೀಲ್ ಟಾಂಗ್ ಕೊಟ್ಟಿದ್ದಾರೆ.ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಡಿ, ಹಾಕಿಸಿಕೊಂಡರೆ ಮಕ್ಕಳಾಗುವುದಿಲ್ಲ ಎಂದು ಜನರಿಗೆ ಹೇಳಿದರು. ಅದು ಬಂಜೆತನಕ್ಕೆ ಕಾರಣವಾಗುತ್ತದೆ ಎಂದು ಪ್ರಚಾರ ಮಾಡಿದರು. ಆದರೆ ಅವರೇ ಅದನ್ನು

ರಾಹುಲ್‌ ಗಾಂಧಿಯನ್ನು ಮತ್ತೆ ಟೀಕಿಸಿದ ನಳಿನ್ Read More »

ಬಿಜೆಪಿ ಎಸ್‌ಟಿ ಮೋರ್ಚಾದ ಜಿಲ್ಲಾ ಸಮಾವೇಶ  

ಪುತ್ತೂರು : ಬಿಜೆಪಿ ಎಸ್ ಟಿ ಮೋರ್ಚಾದ ಜಿಲ್ಲಾ ಸಮಾವೇಶ ಭಾನುವಾರ ತೆಂಕಿಲದ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು.   ಸಮಾವೇಶವನ್ನು ಉದ್ಘಾಟಿಸಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ ಮಾತನಾಡಿ, ಕೇವಲ ಅಧಿಕಾರ ಗದ್ದುಗೆಯ ಉದ್ದೇಶ ಇಟ್ಟುಕೊಂಡು ಬಿಜೆಪಿ ಪಕ್ಷ ಸ್ಥಾಪನೆಯಾಗಿಲ್ಲ. ಇದಕ್ಕೆ ಹೊರತಾಗಿ ಸಾಮಾಜಿಕ ನ್ಯಾಯ ನೀಡುವ ನಿಟ್ಟಿನಲ್ಲಿ ಸಂಕಲ್ಪ ತೊಟ್ಟಿರುವ ಏಕೈಕ ಪಕ್ಷ ಇದ್ದರೆ ಅದು ಬಿಜೆಪಿ ಪಕ್ಷ ಎಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದಿರೆ ಹೇಳಿದರು. ಸಾಮಾಜಿಕ ನ್ಯಾಯ

ಬಿಜೆಪಿ ಎಸ್‌ಟಿ ಮೋರ್ಚಾದ ಜಿಲ್ಲಾ ಸಮಾವೇಶ   Read More »

ಬೂತ್ ಜೀತೇಗಾ ತೋ, ದೇಶ್ ಜೀತೇಗಾ | ಆರ್ಯಾಪು ಗ್ರಾಪಂ ಉಪಚುನಾವಣೆಯ ಗೆಲುವು ಹಿನ್ನೆಲೆಯ ಕೃತಜ್ಞತಾ ಸಭೆಯಲ್ಲಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಬೂತ್ ಮಟ್ಟದಲ್ಲಿ ಜಯ ಪಡೆದರೆ ಮಾತ್ರ ನಾವು ದೇಶದಲ್ಲಿ ಜಯ ಗಳಿಸಬಹುದು ಎಂದು ಅಮಿತ್ ಶಾ ಹೇಳಿದ್ದಾರೆ. ಅದರಂತೆ ಆರ್ಯಾಪು ಗ್ರಾಮ ಪಂಚಾಯತ್ ಬೂತ್ ಮಟ್ಟದಲ್ಲಿ ನಾವು ಜಯ ಗಳಿಸಿದ್ದು, ಇದು ರಾಜ್ಯ ಮತ್ತು ರಾಷ್ಟ್ರಕ್ಕೆ ದಿಕ್ಸೂಚಿಯಾಗಿರಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಆರ್ಯಾಪು ಗ್ರಾಮ ಪಂಚಾಯತಿನ ಉಪಚುನಾವಣೆಯಲ್ಲಿ ಜಯ ಗಳಿಸಿದ ಯತೀಶ್ ದೇವ ಅವರ ಮನೆಯಲ್ಲಿ ಏರ್ಪಡಿಸಿದ್ದ ಅಭಿನಂದನೆ ಹಾಗೂ ಕೃತಜ್ಞತಾ ಸಭೆಯಲ್ಲಿ ಅವರು ಮಾತನಾಡಿದರು. ಮೆಂಬರ್ ಆಫ್ ಪಾರ್ಲಿಮೆಂಟ್ ಅವರಿಗೂ ಎಂ.ಪಿ.

ಬೂತ್ ಜೀತೇಗಾ ತೋ, ದೇಶ್ ಜೀತೇಗಾ | ಆರ್ಯಾಪು ಗ್ರಾಪಂ ಉಪಚುನಾವಣೆಯ ಗೆಲುವು ಹಿನ್ನೆಲೆಯ ಕೃತಜ್ಞತಾ ಸಭೆಯಲ್ಲಿ ಶಾಸಕ ಸಂಜೀವ ಮಠಂದೂರು Read More »

ಅರಿಯಡ್ಕ ಗ್ರಾಮ ಪಂಚಾಯಿತಿ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಪುತ್ತೂರು : ಅರಿಯಡ್ಕ ಗ್ರಾಮದ ನೂತನ ಗ್ರಾಮ ಪಂಚಾಯಿತಿ ಕಚೇರಿ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಶನಿವಾರ ನಡೆಯಿತು. ಪುತ್ತೂರು ಶಾಸಕ ಸಂಜೀವ ಮಠಂದೂರು ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಗ್ರಾಮ ಪಂಚಾಯಿತಿಗಳು ಸ್ಥಳೀಯ ಗ್ರಾಮಸ್ಥರ ಆಶೋತ್ತರಗಳನ್ನು ಈಡೇರಿಸುವ ಕೇಂದ್ರವಾಗಿದ್ದು, ಗ್ರಾಪಂ ಮೂಲಕ ಹಲವಾರು ಯೋಜನೆಗಳು ಜನಸಾಮಾನ್ಯರನ್ನು ತಪುಲುತ್ತಿರುವುದು ಶ್ಲಾಘನೀಯ ಎಂದರು. ಕಾರ್ಯಕ್ರಮದಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ಪಂಚಾಯತ್ ಅಧ್ಯಕ್ಷರು, ಸದಸ್ಯರುಗಳು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ಹಾಗೂ ಊರ ಗ್ರಾಮಸ್ಥರು

ಅರಿಯಡ್ಕ ಗ್ರಾಮ ಪಂಚಾಯಿತಿ ನೂತನ ಕಟ್ಟಡಕ್ಕೆ ಶಿಲಾನ್ಯಾಸ Read More »

ಶಾಸಕರ ಅಭಿವೃದ್ಧಿ ಕಾರ್ಯದಿಂದ ನನ್ನ ಗೆಲುವು: ಯತೀಶ್ ದೇವ | ದಿ. ಗಿರೀಶ್ ಗೌಡ ಮರಿಕೆ ಅವರಿಗೆ ಗೆಲುವು ಅರ್ಪಣೆ

ಪುತ್ತೂರು: ಶಾಸಕ ಸಂಜೀವ ಮಠಂದೂರು ಅವರು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯ ಹಾಗೂ ಅವರು ನೀಡಿರುವ ಅನುದಾನವನ್ನು ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಬಳಕೆ ಮಾಡಿರುವುದೇ ತನ್ನ ಗೆಲುವಿಗೆ ಕಾರಣ ಎಂದು ಆರ್ಯಾಪು ಗ್ರಾ.ಪಂ. ಉಪಚುನಾವಣೆಯಲ್ಲಿ ಗೆಲುವು ಪಡೆದುಕೊಂಡ ಯತೀಶ್ ದೇವ ತಿಳಿಸಿದ್ದಾರೆ. ಗಿರೀಶ್ ಗೌಡ ಅವರ ಅಕಾಲಿಕ ನಿಧನದ ಬಳಿಕ ಉಪಚುನಾವಣೆ ನಡೆದಿದ್ದು, ತನ್ನ ಗೆಲುವನ್ನು ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ಗಿರೀಶ್ ಗೌಡ ಅವರಿಗೆ ಅರ್ಪಿಸುತ್ತೇನೆ ಎಂದಿರುವ ಯತೀಶ್ ದೇವ. ಶಾಸಕ ಸಂಜೀವ ಮಠಂದೂರು

ಶಾಸಕರ ಅಭಿವೃದ್ಧಿ ಕಾರ್ಯದಿಂದ ನನ್ನ ಗೆಲುವು: ಯತೀಶ್ ದೇವ | ದಿ. ಗಿರೀಶ್ ಗೌಡ ಮರಿಕೆ ಅವರಿಗೆ ಗೆಲುವು ಅರ್ಪಣೆ Read More »

error: Content is protected !!
Scroll to Top