ಕರಾವಳಿ ಸೇರಿದಂತೆ ಇಡೀ ರಾಜ್ಯಕ್ಕೆ ಬರ ಘೋಷಿಸಲು ನಳಿನ್ ಒತ್ತಾಯ | ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿ ರಾಜ್ಯಾಧ್ಯಕ್ಷ
ಪುತ್ತೂರು: ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರಕಾರ ಭ್ರಷ್ಟರ ಕೂಟದ ಸರಕಾರವಾಗಿದ್ದು, ಸರಕಾರದ ಭ್ರಷ್ಟಾಚಾರದ ಬಗ್ಗೆ ದೂರು ನೀಡಿದವರ ಮೇಲೆ ದೌರ್ಜನ್ಯ ನಡೆಸುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ಗುರುವಾರ ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಸರಕಾರದ ವಿರುದ್ಧ ಬರೆದ ಮಾಧ್ಯಮಗಳು, ಸಾಮಾಜಿಕ ಜಾಲತಾಣದ ಮೇಲೂ ದಬ್ಬಾಳಿಕೆ ನಡೆಸುತ್ತಿದೆ. ಭ್ರಷ್ಟಾಚಾರದ ಒಂದು ಭಾಗವಾಗಿ ಪರಿಶಿಷ್ಟ ಜಾತಿ, ಪಂಗಡದವರ ಜಾಗ ಕಬಳಿಸಿದ ಸಚಿವ ಸುಧಾಕರ್ ಅವರನ್ನು ರಕ್ಷಿಸುವ […]










