ರಾಜಕೀಯ

ಜಿಲ್ಲೆಯ ಬಿಜೆಪಿ ಶಾಸಕರಿಗೆ ಅಭಿನಂದನೆ

ಮಂಗಳೂರು: ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಗೊಂಡ ಬಿಜೆಪಿಯ ಶಾಸಕರಿಗೆ ಅಭಿನಂದನಾ ಸಮಾರಂಭ ಮಂಗಳೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಜನರಿಂದ ಆಯ್ಕೆಯಾದ ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಹರೀಶ್ ಪೂಂಜಾ, ಉಮಾನಾಥ್ ಕೋಟ್ಯಾನ್, ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕೋಟಾ ಶ್ರೀನಿವಾಸ್ ಪೂಜಾರಿ, ಗೋಪಾಲಕೃಷ್ಣ ಹೇರಳೆ, ಸಂತೋಷ್ ಕುಮಾರ್ ರೈ ಮೊದಲಾದವರು […]

ಜಿಲ್ಲೆಯ ಬಿಜೆಪಿ ಶಾಸಕರಿಗೆ ಅಭಿನಂದನೆ Read More »

24 ಶಾಸಕರು ಸಂಪುಟದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕಾರ

ಪುತ್ತೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟದಲ್ಲಿ 24 ಶಾಸಕರು ಸಂಪುಟದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ಬೆಳಿಗ್ಗೆ  ನಡೆದ  ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಸಚಿವರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಥಾವರ್ ಚಂದ್ ಗೆಹ್ಲೋಟ್ , ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ನೂತನ ಸಚಿವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು.

24 ಶಾಸಕರು ಸಂಪುಟದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕಾರ Read More »

ಬಿಜೆಪಿ ವಿಜಯೋತ್ಸವದಲ್ಲಿ ಭಾಗಿ: ಗ್ರಾಪಂ ಸಿಬ್ಬಂದಿ ಅಮಾನತು

ಬೆಳ್ತಂಗಡಿ: ಬಿಜೆಪಿ ವಿಜಯೋತ್ಸವದಲ್ಲಿ ಭಾಗಿಯಾದ ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ. ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿಯಾಗಿದ್ದ ನಾಗೇಶ್ ಅಮಾನತಾದ ಸಿಬ್ಬಂದಿ. ಬೆಳ್ತಂಗಡಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ನಡೆದ ವಿಜಯೋತ್ಸವದಲ್ಲಿ ನಾಗೇಶ್ ಭಾಗಿಯಾದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಉಜಿರೆ ಪಿಡಿಓ ಪ್ರಕಾಶ್ ಶೆಟ್ಟಿ ಈ ಆದೇಶ ಹೊರಡಿಸಿದ್ದಾರೆ.

ಬಿಜೆಪಿ ವಿಜಯೋತ್ಸವದಲ್ಲಿ ಭಾಗಿ: ಗ್ರಾಪಂ ಸಿಬ್ಬಂದಿ ಅಮಾನತು Read More »

ಬಜರಂಗದಳ ಬ್ಯಾನ್ ಬಗ್ಗೆ ಚರ್ಚೆಯೇ ನಡೆದಿಲ್ಲ: ಸಚಿವ ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಿದ್ದರಾಮಯ್ಯ ಸಂಪುಟದ ಕೆಲ ಸಚಿವರು RSS ಬ್ಯಾನ್ ಮಾಡುತ್ತೇವೆ. ಬಜರಂಗದಳವನ್ನು ನಿಷೇಧಿಸುತ್ತೇವೆ ಎಂದು ನೇರವಾಗಿ ಹೇಳಿಕೆಗಳನ್ನು ಕೊಡುತ್ತಿದ್ದರೆ, ಇತ್ತ ಸಚಿವ ಜಿ. ಪರಮೇಶ್ವರ್ ಮಾತ್ರ ಈ ವಿಚಾರದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ಪ್ರಣಾಳಿಕೆಯಲ್ಲಿ ಬಜರಂಗದಳ ಮತ್ತು ಪಿಎಫ್‌ಐಗೆ ಸಂಬಂಧಿಸಿದಂತೆ ಹೇಳಿದ್ದೆವು. ಒಂದು ವೇಳೆ ಅವರು ಶಾಂತಿಗೆ ಭಂಗ ತಂದರೆ, ನಾವು ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ,

ಬಜರಂಗದಳ ಬ್ಯಾನ್ ಬಗ್ಗೆ ಚರ್ಚೆಯೇ ನಡೆದಿಲ್ಲ: ಸಚಿವ ಪರಮೇಶ್ವರ್ Read More »

ಸ್ಪೀಕರ್ ಯು.ಟಿ. ಖಾದರ್ ರಾಜೀನಾಮೆ!?

ಬೆಂಗಳೂರು: ಶಾಸಕ ಯು.ಟಿ. ಖಾದರ್ ಅವರು ಕಾಂಗ್ರೆಸಿನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದು ಬಹುತೇಕ ಪಕ್ಕಾ ಆಗಿದೆ ಎಂದು ಹೇಳಲಾಗಿದೆ. ಮಾಧ್ಯಮವೊಂದಕ್ಕೆ ನೀಡಿರುವ ಹೇಳಿಕೆಯಲ್ಲಿ ಸ್ವತಃ ಯು.ಟಿ. ಖಾದರ್ ಅವರೇ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಸ್ಪೀಕರ್ ಆಗಿ ಆಯ್ಕೆಯಾಗಿರುವ ಬೆನ್ನಿಗೇ ಯು.ಟಿ. ಖಾದರ್ ಅವರು ಈ ಹೇಳಿಕೆ ನೀಡಿದ್ದಾರೆ. ಸ್ಪೀಕರ್ ತಟಸ್ಥರಾಗಿರಬೇಕು ಎಂಬ ಕಾರಣಕ್ಕೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಅವರು ತಿಳಿಸಿದ್ದಾರೆ. ಕರಾವಳಿ ಭಾಗದಿಂದ ಅತೀ ಹೆಚ್ಚು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯು.ಟಿ.

ಸ್ಪೀಕರ್ ಯು.ಟಿ. ಖಾದರ್ ರಾಜೀನಾಮೆ!? Read More »

ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ಬೆಂಗಳೂರು: ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಿಖಿಲ್ ಕುಮಾರಸ್ವಾಮಿ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ  ಅವರು, ಪಕ್ಷ ಮರು ನಿರ್ಮಾಣ ದಿಸೆಯಲ್ಲಿ ರಾಜೀನಾಮೆ ನೀಡುತ್ತಿದ್ದು, ಪಕ್ಷ ಕಟ್ಟುವ ಕೆಲಸದಲ್ಲಿ ನಾನು ಎಂದೂ ಹಿಂಜರಿಯಲಾರೆ. ಪಕ್ಷದ ಜತೆ ಸದಾ ನಿಲ್ಲುತ್ತೇನೆ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಸೋಲೇ ಅಂತಿಮವಲ್ಲ. ಸೋಲಿನಿಂದ ಕಂಗೆಡದೆ ಪಕ್ಷವನ್ನು ಬಲವಾಗಿ ಕಟ್ಟುವ ಉದ್ದೇಶದಿಂದ ನಾವೆಲ್ಲರೂ ಅರ್ಪಣಾ ಮನೋಭಾವದೊಂದಿಗೆ ಕೆಲಸ ಮಾಡಬೇಕಿದೆ.

ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ Read More »

ಶಾಂತಿ ಕದಡಿದರೆ ಭಜರಂಗದಳ, ಆರ್‌ಎಸ್‌ಎಸ್‌ ನಿಷೇಧ: ಪ್ರಿಯಾಂಕ್‌ ಖರ್ಗೆ ಎಚ್ಚರಿಕೆ | ಹಿಜಾಬ್, ಹಲಾಲ್ ಕಟ್, ಗೋ ಹತ್ಯೆ ಕಾನೂನು‌ ವಾಪಾಸ್?

ಬೆಂಗಳೂರು : ಸರ್ಕಾರವು ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ನಿಷೇಧಿಸುತ್ತದೆ ಮತ್ತು ಕಾನೂನನ್ನು ಕೈಗೆ ತೆಗೆದುಕೊಂಡರೆ ನಿಷೇಧ ಕಟ್ಟಿಟ್ಟ ಬುತ್ತಿ. ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಭಜರಂಗದಳ, ಆರ್‌ಎಸ್‌ಎಸ್ ಸೇರಿದಂತೆ ಯಾವುದೇ ಸಂಘಟನೆಯನ್ನು ನಿಷೇಧಿಸಲು ಹಿಂದೆ ಮುಂದೆ ಯೋಚಿಸುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಹಿಜಾಬ್, ಹಲಾಲ್ ಕಟ್ ಮತ್ತು ಗೋಹತ್ಯೆ ಕಾನೂನುಗಳ ಮೇಲಿನ ನಿಷೇಧವನ್ನು ಸರ್ಕಾರ ಹಿಂಪಡೆಯಲಿದ್ದು, ಈ ಮೊದಲು ಸಮಾಜದಲ್ಲಿ ಕಾನೂನು ಮತ್ತು ಪೊಲೀಸರ ಭಯವಿಲ್ಲದೆ ಕೆಲವು ಕೃತ್ಯಗಳು ಮುಕ್ತವಾಗಿ ನಡೆಯುತ್ತಿದೆ

ಶಾಂತಿ ಕದಡಿದರೆ ಭಜರಂಗದಳ, ಆರ್‌ಎಸ್‌ಎಸ್‌ ನಿಷೇಧ: ಪ್ರಿಯಾಂಕ್‌ ಖರ್ಗೆ ಎಚ್ಚರಿಕೆ | ಹಿಜಾಬ್, ಹಲಾಲ್ ಕಟ್, ಗೋ ಹತ್ಯೆ ಕಾನೂನು‌ ವಾಪಾಸ್? Read More »

ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರ ಭೇಟಿಯಾದ ಜಗದೀಶ್ ಕಾರಂತ್

ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕರನ್ನು ಬುಧವಾರ ಹಿಂದೂ ಜಾಗರಣ ವೇದಿಕೆ ಮುಖಂಡ ಜಗದೀಶ್ ಕಾರಂತ್ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಕಾರ್ಯಕರ್ತರ ಜೊತೆ ಮಾತನಾಡಿದ ಅವರು ಕಾರ್ಯಕರ್ತರಿಗೆ ಧೈರ್ಯ ತುಂಬಿದರು. ಈ ಸಂದರ್ಭ ಪ್ರಮುಖರು ಉಪಸ್ಥಿತರಿದ್ದರು.

ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರ ಭೇಟಿಯಾದ ಜಗದೀಶ್ ಕಾರಂತ್ Read More »

ಬಳ್ಳಾರಿಯ ಕಾರ್ಯಕರ್ತನಿಂದ ಪುತ್ತಿಲಗೆ ಗೌರವ

ಪುತ್ತೂರು: ಬಳ್ಳಾರಿಯಿಂದ ಆಗಮಿಸಿದ ಹಿಂದೂ ಕಾರ್ಯಕರ್ತನೋರ್ವ ಅರುಣ್ ಕುಮಾರ್ ಪುತ್ತಿಲ ಅವರಿಗೆ ಶಾಲು ಹಾಕಿ, ಭಗವದ್ಗೀತೆಯ ಪುಸ್ತಕ ನೀಡಿ ಗೌರವಿಸಿದರು. ಅರುಣ್ ಪುತ್ತಿಲ ಅವರ ಕಚೇರಿಗೆ ಆಗಮಿಸಿದ ಬಳ್ಳಾರಿಯ ತೇಜ ಎನ್ನುವ ಯುವಕ, ಅಭಿಮಾನ ಮೆರೆದದ್ದು ಹೀಗೆ. ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತ‌ ಬಳಿಕ ಅರುಣ್ ಕುಮಾರ್ ಪುತ್ತಿಲ ಪ್ರಸಿದ್ಧಿ ಪಡೆದುಕೊಳ್ಳುತ್ತಿದ್ದಾರೆ‌.

ಬಳ್ಳಾರಿಯ ಕಾರ್ಯಕರ್ತನಿಂದ ಪುತ್ತಿಲಗೆ ಗೌರವ Read More »

ವಿಧಾನಸಭೆ ಸ್ಪೀಕರ್‌ ಆಗಿ ಯು.ಟಿ ಖಾದರ್ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆ ಸಭಾಪತಿ ಸ್ಥಾನಕ್ಕೆ ಮಾಜಿ ಸಚಿವ, ಮಂಗಳೂರಿನ ಶಾಸಕ ಯು.ಟಿ ಖಾದರ್ ಅವರು ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಬೆಳಗ್ಗೆ ಯು.ಟಿ ಖಾದರ್ ಅವರು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿಗೆ ಅವರಿಗೆ ನಾಮಪತ್ರ ಸಲ್ಲಿಸಿದ್ದರು. ಖಾದರ್ ಅವರನ್ನು ಹೊರತುಪಡಿಸಿ ಮತ್ತ್ಯಾರೂ ಸ್ಪೀಕರ್‌ ಸ್ಥಾನಕ್ಕೆ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೊದಲಿಗೆ ಯು.ಟಿ ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅದನ್ನು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಅನುಮೋದಿಸಿದರು. ಬಳಿಕ ಖಾದರ್

ವಿಧಾನಸಭೆ ಸ್ಪೀಕರ್‌ ಆಗಿ ಯು.ಟಿ ಖಾದರ್ ಅವಿರೋಧ ಆಯ್ಕೆ Read More »

error: Content is protected !!
Scroll to Top