ರಾಜಕೀಯ

ಪುತ್ತೂರಿನಲ್ಲಿ ನಡೆಯುವ ಕೃಷಿ ಯಂತ್ರ ಮೇಳಕ್ಕೆ ಅಮಿತ್‌ಷಾ ಆಗಮನ

ಮಂಗಳೂರಿನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಹೇಳಿಕೆ ಪುತ್ತೂರು : ಫೆ.10 ರಿಂದ ಮೂರು ದಿನಗಳ ಕಾಲ ಕ್ಯಾಂಪ್ಕೋ ಹಾಗೂ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ವತಿಯಿಂದ ನಡೆಯುವ ಕೃಷಿ ಯಂತ್ರಮೇಳಕ್ಕೆ ಅಮಿತ್ ಷಾ ಅವರು ಬರಲಿದ್ದು, ಅವರನ್ನು ದೊಡ್ಡ ಮಟ್ಟದಲ್ಲಿ ಸ್ವಾಗತಿಸಲಾಗುವುದು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಅವರು ಪುತ್ತೂರಿನಲ್ಲಿ ನಡೆಯುವ ಕೃಷಿಯಂತ್ರ ಮೇಳದ ಕುರಿತು ಮಂಗಳೂರಿನಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ […]

ಪುತ್ತೂರಿನಲ್ಲಿ ನಡೆಯುವ ಕೃಷಿ ಯಂತ್ರ ಮೇಳಕ್ಕೆ ಅಮಿತ್‌ಷಾ ಆಗಮನ Read More »

ರೈತರಿಗೆ ವರದಾನ ರೈತ ಸಂಪರ್ಕ ಕೇಂದ್ರದ ನೂತನ‌ ಕಟ್ಟಡ

ಶಾಸಕ ಸಂಜೀವ ಮಠಂದೂರು ಮುತುವರ್ಜಿಯಲ್ಲಿ ನಿರ್ಮಾಣಗೊಂಡ 1.50 ಕೋಟಿ ರೂ. ವೆಚ್ಚದ 3 ಕಟ್ಟಡಗಳು ಪುತ್ತೂರು, ಉಪ್ಪಿನಂಗಡಿ, ವಿಟ್ಲ ಹೋಬಳಿಯ ರೈತರ ಉಪಯೋಗಕ್ಕಾಗಿ ಸಿದ್ಧವಾಗಿದೆ ನೂತನ ಕಟ್ಟಡ ಪುತ್ತೂರು: ರೈತರಿಗೆ, ಕೃಷಿಕರಿಗಾಗಿ ಅದೆಷ್ಟು ಸವಲತ್ತುಗಳನ್ನು ನೀಡುತ್ತಿದೆ ಸರ್ಕಾರ. ಆದರೆ ಆ ಯೋಜನೆಗಳನ್ನು ರೈತರು ಪಡೆದುಕೊಳ್ಳದೇ ಇದ್ದರೆ, ಕೇಂದ್ರ ಇದ್ದೇನು ಪ್ರಯೋಜನ. ಸವಲತ್ತು, ಯೋಜನೆಗಳ ಪ್ರಯೋಜನವನ್ನು ರೈತರು ಪಡೆದುಕೊಳ್ಳಬೇಕಾದರೆ ಮೂಲಸೌಕರ್ಯ ತೀರಾ ಅವಶ್ಯಕತೆ. ಇದಕ್ಕಾಗಿ ಶಾಸಕ ಸಂಜೀವ ಮಠಂದೂರು ಅವರು ಮುತುವರ್ಜಿ ವಹಿಸಿ, ಪುತ್ತೂರು ವಿಧಾನಸಭಾ ಕ್ಷೇತ್ರದ 3

ರೈತರಿಗೆ ವರದಾನ ರೈತ ಸಂಪರ್ಕ ಕೇಂದ್ರದ ನೂತನ‌ ಕಟ್ಟಡ Read More »

ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಆಡಿಯೋ, ವೀಡಿಯೋ

ಪುತ್ತೂರು : ಆಧುನಿಕ ಜಗತ್ತಿನಲ್ಲಿ ಆಧುನೀಕರಣಕ್ಕೆ ತಕ್ಕಂತೆ ಒಂದೆಡೆ ಜಗತ್ತಿನ ಆಗುಹೋಗುಗಳು ಕ್ಷಣಾರ್ಧದಲ್ಲಿ ಜನರನ್ನು ತಲುಪುತ್ತಿದ್ದು, ವಾಟ್ಸ್ಅಪ್, ಫೇಸ್ಬುಕ್, ಟ್ವಿಟರ್ ಮುಂತಾದ ಜಾಲತಾಣ ಸೌಲಭ್ಯಗಳು ಸಹಕಾರಿಯಾಗಿವೆ. ಇನ್ನೊಂದೆಡೆ ಅಷ್ಟೇ ವೇಗದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಮನುಷ್ಯರ ತೇಜೋವಧೆಗಳು ನಡೆಯುತ್ತಿರುವುದು ಆಘಾತಕಾರಿ ಸಂಗತಿಯಾಗಿದ್ದು, ಸಮಾಜದ ಮೇಲೂ ಕೆಟ್ಟ ಪರಿಣಾಮ ಬೀಳುವುದರಲ್ಲಿ ಸಂದೇಹವಿಲ್ಲ. ಇತ್ತೀಚಿನ ದಿನಗಳಲ್ಲಿ ವ್ಯಕ್ತಿಗತವಾಗಿ ಕೆಟ್ಟ ಶಬ್ದಗಳಿಂದ ಅವಹೇಳನ ಮಾಡಿ ಆತನ ವರ್ಚಸ್ಸನ್ನು ಹಾಳುಗೆಡವುತ್ತಿರುವ ಸಂಗತಿಗಳು ಪ್ರಸ್ತುತ ಪ್ರತಿಯೊಂದು ದಿನಗಳಲ್ಲೂ ನಾವು ಕಾಣುತ್ತಿದ್ದೇವೆ. ಕೇವಲ ಒಂದು ಟಚ್

ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಆಡಿಯೋ, ವೀಡಿಯೋ Read More »

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗುತ್ತಿರುವ ಆಡಿಯೋ ತನ್ನದಲ್ಲ ಎಂದು ನಿರಾಕರಿಸಿದ ಶ್ರೀ ಕೃಷ್ಣ ವಿಟ್ಲ

ವಿಟ್ಲ : ಈ ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸಂಜೀವ ಮಠಂದೂರು ಅವರಿಗೆ ಟಿಕೇಟ್ ನೀಡಿದರೆ ಸೋಲುವುದು ಗ್ಯಾರಂಟಿ ? ಹೀಗೊಂದು ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಬಿಜೆಪಿ ಪಕ್ಷದ ಕಾರ್ಯಕರ್ತರೊಬ್ಬರೇ ಈ ರೀತಿ ಹೇಳಿಕೆ ನೀಡಿರುವುದು ಸ್ಪಷ್ಟ ಕಂಡು ಬರುತ್ತಿದೆ‌ಈ ರೀತಿ ಏಕವಚನದಲ್ಲಿ‌ ಶಾಸಕರ ನ್ನು ತೇಜೊವಧೆ ಮಾಡಿ ಮಾತನಾಡಿರುವ ವ್ಯಕ್ತಿ ವಿಟ್ಲದ ಶ್ರೀ ಕೃಷ್ಣ ವಿಟ್ಲ ಎಂಬ ಬರಹದಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಈ ವಿಚಾರವಾಗಿ ಶ್ರೀ ಕೃಷ್ಣ ವಿಟ್ಲ ಅವರನ್ನು ಸಂಪರ್ಕಿಸಿದಾಗ,

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗುತ್ತಿರುವ ಆಡಿಯೋ ತನ್ನದಲ್ಲ ಎಂದು ನಿರಾಕರಿಸಿದ ಶ್ರೀ ಕೃಷ್ಣ ವಿಟ್ಲ Read More »

ಸರ್ವೆ ಕಲ್ಪಣೆ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಪುತ್ತೂರು : ಸರ್ವೆ ಕಲ್ಪಣೆ ಸರಕಾರಿ ಪ್ರೌಢಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಸೋಮವಾರ ನಡೆಯಿತು.ಪುತ್ತೂರು ಶಾಸಕ ಸಂಜೀವ ಮಠದೂರು ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಸಕರನ್ನು ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಅಶೋಕ್ ರೈ ಸೊರಕೆ, ಹಿರಿಯ ವಿದ್ಯಾರ್ಥಿ ವಿನೋದ್‌ಶಾಂತಿಗೋಡು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಪ್ರೌಢ ಶಾಲಾ ಮುಖ್ಯ ಶಿಕ್ಷಕ ಜಯರಾಮ್ ಶೆಟ್ಟಿ ಸ್ವಾಗತಿಸಿದರು.

ಸರ್ವೆ ಕಲ್ಪಣೆ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ Read More »

ಸರ್ವೆ ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ಸ್ಮಾಟ್೯ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ಪುತ್ತೂರು : ಸರ್ವೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ಕಾರ್ಯಕ್ರಮ ಹಾಗೂ ಸ್ಮಾಟ್೯ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ ಮಂಗಳವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿ ಮಾತನಾಡಿ, ಮಕ್ಕಳ‌ ಪ್ರತಿಭಾ ಪ್ರದರ್ಶನಕ್ಕೆ ಶಿಕ್ಷಕರು ಒಂದೆಡೆ ಪ್ರಯತ್ನ ಮಾಡುತ್ತಿದ್ದರೆ, ಅದಕ್ಕೆ ಪೂರಕವಾಗಿ ಮೂಲಭೂತ‌ ಸೌಕರ್ಯಗಳನ್ನು ಒದಗಿಸುವ ಮೂಲಕ‌‌ ಶಾಲೆಯ ಅಭಿವೃದ್ಧಿ  ಕಾರ್ಯ ಸರಕಾರದಿಂದ ಆಗುತ್ತಿದೆ ಎಂದರು.  ಎಸ್ ಡಿ ಎಂ ಸಿ ಅಧ್ಯಕ್ಷ ಹನೀಫ್ ರೆಂಜಾಲಾಡಿ , ಗ್ರಾಮ ಪಂಚಾಯತ್ ಸದಸ್ಯ ಪ್ರವೀಣ್ ನಾಯ್ಕ್,,

ಸರ್ವೆ ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ಸ್ಮಾಟ್೯ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ Read More »

ಫೆ. 11ಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ತೂರಿಗೆ

ಪುತ್ತೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆ. 11ರಂದು ಪುತ್ತೂರಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿಗೆ ಭೇಟಿ ನೀಡಲಿರುವ ಅಮಿತ್ ಶಾ ಅವರು, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆಶ್ರಯದಲ್ಲಿ ನಡೆಯಲಿರುವ ಕೃಷಿ ಯಂತ್ರ ಮೇಳದಲ್ಲಿ ಭಾಗವಹಿಸಲಿದ್ದಾರೆ. ಬಿಜೆಪಿ ಸಂಕಲ್ಪ ಅಭಿಯಾನ ಪುತ್ತೂರು ತಾಲೂಕಿನಾದ್ಯಂತ ನಡೆಯುತ್ತಿದ್ದು, ಫೆ. 11ರಂದು ಪುತ್ತೂರಿನಲ್ಲಿ ನಡೆಯಲಿರುವ ಅಭಿಯಾನದಲ್ಲಿ ಅಮಿತ್ ಶಾ ಅವರು ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.

ಫೆ. 11ಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ತೂರಿಗೆ Read More »

ಪುತ್ತೂರಿನಲ್ಲಿ ಜೆಡಿಎಸ್ ಕಚೇರಿ ಉದ್ಘಾಟನೆ, ಕಾರ್ಯಕರ್ತರ ಸಭೆ

ಪುತ್ತೂರು : ಜೆಡಿಎಸ್ ಪಕ್ಷ ಜಾತ್ಯಾತೀತ ನೆಲೆಯಲ್ಲಿ ಜನಪರ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡಿರುವ ಪಕ್ಷವಾಗಿದ್ದು, ಮುಂದಿನ ದಿನಗಳಲ್ಲಿ ನಾಯಕರನ್ನು, ಕಾರ್ಯಕರ್ತರನ್ನು ಸೇರಿಸಿಕೊಂಡು ದ.ಕ ಜಿಲ್ಲೆಯಲ್ಲಿ ಪಕ್ಷವನ್ನು ಸಧೃಢವಾಗಿ ಸಂಘಟಿಸಲಾಗುವುದು. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಪಕ್ಷದ ವತಿಯಿಂದ ಪಕ್ಷ ಸಂಘಟನೆ ಬಗ್ಗೆ ತರಬೇತಿ ಕಾರ್ಯಾಗಾರ ನಡೆಯಲಿದೆ ಎಂದು ಎಂದು ಜೆಡಿಎಸ್ ದ.ಕ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಹೇಳಿದರು.ಅವರು ಸೋಮವಾರ ಪುತ್ತೂರು ಅಮರ್ ಕಾಂಪ್ಲೆಕ್ಸ್‌ನಲ್ಲಿ ಜೆಡಿಎಸ್ ಪಕ್ಷದ ಕಚೇರಿ ಉದ್ಘಾಟಿಸಿ ಬಳಿಕ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.ನಮ್ಮ ನಾಯಕ

ಪುತ್ತೂರಿನಲ್ಲಿ ಜೆಡಿಎಸ್ ಕಚೇರಿ ಉದ್ಘಾಟನೆ, ಕಾರ್ಯಕರ್ತರ ಸಭೆ Read More »

ವಿಜಯ ಸಂಕಲ್ಪ ಅಭಿಯಾನದ ಮೂಲಕ ಯೋಜನೆಗಳು ಪ್ರತೀ ಮನೆಗೆ ತಲುಪಬೇಕು : ಶಾಸಕ ಸಂಜೀವ ಮಠಂದೂರು

ವಿಟ್ಲ : ಕಮಲ ಕುಟುಂಬ ಮಿಲನ ಮತ್ತು ಕ್ರೀಡೋತ್ಸವ ಜ. 29ರಂದು ವಿಠಲ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡೋತ್ಸವಕ್ಕೆ ಚಾಲನೆ ನೀಡಿದ ಶಾಸಕ ಸಂಜೀವ ಮಠಂದೂರು ಮಾತನಾಡಿ, ವಿಜಯ ಸಂಕಲ್ಪ ಅಭಿಯಾನದ ಮೂಲಕ ಪ್ರಧಾನಿ ಮೋದಿಯವರ ಯೋಜನೆಗಳು ಪ್ರತೀ ಮನೆಗೆ ತಲುಪಿಸುವ ಕಾರ್ಯ ಆಗಬೇಕು ಎಂದರು. ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಮಾತನಾಡಿ, ನಮ್ಮೆಲ್ಲ ಸದಸ್ಯರು ಒಂದೇ ಕುಟುಂಬದವರಂತೆ ಕ್ರೀಡೆಯಲ್ಲಿ ಭಾಗವಹಿಸುವ ಅವಕಾಶ ಇಂದಿನ ಕಾರ್ಯಕ್ರಮದಲ್ಲಿ ಸಿಕ್ಕಿದೆ ಎಂದರು. ಈ ಸಂದರ್ಭದಲ್ಲಿ

ವಿಜಯ ಸಂಕಲ್ಪ ಅಭಿಯಾನದ ಮೂಲಕ ಯೋಜನೆಗಳು ಪ್ರತೀ ಮನೆಗೆ ತಲುಪಬೇಕು : ಶಾಸಕ ಸಂಜೀವ ಮಠಂದೂರು Read More »

ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಪಠ್ಯತರ ಚಟುವಟಿಕೆಗಳ ಉದ್ಘಾಟನೆ

ಪುತ್ತೂರು : ಜಿಡೆಕಲ್ಲು ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ನಡೆಯಿತು. ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿಗೆ ಪೂರಕವಾಗಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಆಗಬೇಕು. ಈ ನಿಟ್ಟಿನಲ್ಲಿ ಸರಕಾರದ ವತಿಯಿಂದ ಎಲ್ಲಾ ಅನುದಾನಗಳನ್ನು ನೀಡಲಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕುಂಬ್ರ ಸರಕಾರಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ದುಗಪ್ಪ ನಾಯ್ಕ್, ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲೆ ನಳಿನಾಕ್ಷಿ ಎ. ಎಸ್, ಸಾಂಸ್ಕೃತಿಕ ಸಂಘ ಸಂಚಾಲಕಿ

ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಪಠ್ಯತರ ಚಟುವಟಿಕೆಗಳ ಉದ್ಘಾಟನೆ Read More »

error: Content is protected !!
Scroll to Top