ಕಾರ್ಯಕರ್ತರು ಮತ್ತು ಪಕ್ಷದ ನಾಯಕರ ಅವಿರತ ಶ್ರಮದ ಫಲವಾಗಿ ಪುತ್ತೂರಿನಲ್ಲಿ ಕಾಂಗ್ರೆಸ್ ಗೆದ್ದಿದೆ | ಕಾರ್ಯಕರ್ತರ ಸಭೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ
ಪುತ್ತೂರು: ಕಾರ್ಯಕರ್ತರು ಮತ್ತು ಪಕ್ಷದ ನಾಯಕರ ಅವಿರತ ಶ್ರಮದ ಫಲವಾಗಿ ಪುತ್ತೂರಿನಲ್ಲಿ ಕಾಂಗ್ರೆಸ್ ಗೆದ್ದಿದೆ, ಈ ಗೆಲುವು ನನ್ನದಲ್ಲ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಗೆಲುವಾಗಿದೆ. ಪಕ್ಷಕ್ಕಾಗಿ ನಾವೆಲ್ಲರೂ ಒಗ್ಗಟ್ಟಾಗಿ ದುಡಿಯಬೇಕಾಗಿದ್ದು, ನಾಳೆಯಿಂದಲೇ ತಳಮಟ್ಟದಲ್ಲಿ ಪಕ್ಷವನ್ನು ಕಟ್ಟುವ ಕೆಲಸ ಮತ್ತೆ ಆರಂಭವಾಗಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಅವರು ಹೇಳಿದರು. ಪುತ್ತೂರಿನ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಮಂಗಳವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ,ಜನರ ಸಮಸ್ಯೆಗಳನ್ನು ಬೂತ್‌ಮಟ್ಟದಲ್ಲೇ ಅರಿಯುವ […]










