ದೇಶದ ಸಂಸ್ಕೃತಿ, ಸಂಸ್ಕಾರ ಉಳಿವು ಬಿಜೆಪಿಯಿಂದ ಮಾತ್ರ ಸಾಧ್ಯ | ರಾಮಕುಂಜದಲ್ಲಿ ಸುಳ್ಯ ಶಾಸಕರಿಗೆ, ಮತದಾರರಿಗೆ, ಕಾರ್ಯಕರ್ತರಿಗೆ ಅಭಿನಂದನಾ ಸಭೆಯಲ್ಲಿ ಭಾಗೀರಥಿ ಮುರುಳ್ಯ
ಕಡಬ: ಭಾರತ ದೇಶ ವಿಶ್ವಮಾನ್ಯ ರಾಷ್ಟ್ರವಾಗಿ ಹೊರಹೊಮ್ಮಿ ಜಗತ್ತಿನಲ್ಲಿ ಮಾನ್ಯತೆ ಪಡೆಯುತ್ತಿರುವ ಈ ಸಂದರ್ಭದಲ್ಲಿ ನಮ್ಮ ದೇಶದ ಸಂಸ್ಕೃತಿ ಸಂಪ್ರದಾಯ ವೈಶಿಷ್ಟ್ಯತೆ ಇಡೀ ಪ್ರಪಂಚದಲ್ಲಿ ಜನಜನಿತವಾಗಿದೆ. ನಮ್ಮ ದೇಶದ ಮೌಲ್ಯಗಳು ಉಳಿಯಬೇಕಾದರೆ, ಸರ್ವತೋಮುಖ ಅಭಿವೃದ್ಧಿಯಾಗಬೇಕಾದರೆ ಅದು ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಮಂಗಳವಾರ ಸಂಜೆ ಶ್ರೀ ರಾಮಕುಂಜೇಶ್ವರ ದೇವಸ್ಥಾನದ ವಠಾರದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಕೊಯಿಲ ಮಹಾಶಕ್ತಿಕೇಂದ್ರ ಹಾಗೂ ರಾಮಕುಂಜ, […]










