ರಾಜಕೀಯ

ಕೆ.ಆರ್.ಎಸ್ ಪಕ್ಷಕ್ಕೆ ನಮ್ಮ ಬೆಂಬಲ: ನೀತಿ ತಂಡ ಘೋಷಣೆ

ಕಡಬ: ಭ್ರಷ್ಟಾಚಾರ ಮುಕ್ತ ಕರ್ನಾಟನ ನಿರ್ಮಾಣದ ಕನಸು ಹೊತ್ತಿರುವ ಕರ್ನಾಟಕ ರಾಷ್ಟ ಸಮಿತಿ(ಕೆ.ಅರ್.ಎಸ್) ಪಕ್ಷ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಸ್ಫರ್ಧೆಗೆ ಇಳಿದಿದ್ದು ಪಕ್ಷದ ಅಭ್ಯರ್ಥಿಗೆ ನಮ್ಮ ಸಂಘಟನೆ ಸಂಪೂರ್ಣ ಬೆಂಬಲ ಸೂಚಿಸುವುದಲ್ಲದೆ ಅಭ್ಯರ್ಥಿಯ ಪರವಾಗಿ ಕೆಲಸ ಮಾಡುತ್ತೇವೆ ಎಂದು ಸಾಮಾಜಿಕ ಸಂಘಟನೆ ನೀತಿ ತಂಡ ಘೋಷಣೆ ಮಾಡಿದೆ. ತಂಡದ ರಾಜ್ಯಾಧ್ಯಕ್ಷ ಜಯಂತ್ ಟಿ.ಕೆ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರವಿಕೃಷ್ಣಾ ರೆಡ್ಡಿಯವರ ನೇತೃತ್ವದಲ್ಲಿ ಸ್ಥಾಪನೆಯಾದ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ಪದಾಧಿಕಾರಿಗಳು ಸೇರಿ ನಿರ್ಮಿಸಿರುವ ಕರ್ನಾಟಕ ರಾಷ್ಟ್ರ […]

ಕೆ.ಆರ್.ಎಸ್ ಪಕ್ಷಕ್ಕೆ ನಮ್ಮ ಬೆಂಬಲ: ನೀತಿ ತಂಡ ಘೋಷಣೆ Read More »

ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಗೌಡರಿಂದ ಕಾಲಿಗೆ ಚಕ್ರ ಕಟ್ಟಿ ಹಗಲು ರಾತ್ರಿಯೆನ್ನದೆ ಭರ್ಜರಿ ಮತ ಪ್ರಚಾರ

ಪುತ್ತೂರು: ಪುತ್ತೂರು ಕ್ಷೇತ್ರ ಈಗಾಗಲೇ ಹೈ ವೋಲ್ಟೇಜ್ ಕ್ಷೇತ್ರವಾಗಿ ಮಾರ್ಪಟ್ಟಿದ್ದು ಚುನಾವಣಾ ಅಖಾಡದಲ್ಲಿ ಅಭ್ಯರ್ಥಿಗಳು ಮತ ಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೇಸ್ ನ  ತತ್ವ ಸಿದ್ಧಾಂತಗಳಿಂದ ಬೇಸರಗೊಂಡು ಹೊರ ಬಂದು  ಜೆಡಿಎಸ್ ನಿಂದ ಟಿಕೆಟ್ ಗಿಟ್ಟಿಸಿಕೊಂಡ ದಿವ್ಯ ಪ್ರಭಾ ಗೌಡ ರವರು ಜೆಡಿಎಸ್ ಅಸ್ತಿತ್ವವನ್ನ ಪುತ್ತೂರಿನಲ್ಲಿ ತೋರಿಸಲು ಗೆಲುವಿಗಾಗಿ ಹಗಲು ರಾತ್ರಿ ಎನ್ನದೇ ಗ್ರಾಮ ಗ್ರಾಮಗಳಿಗೆ ಭೇಟಿ ನೀಡಿ ಭರ್ಜರಿ ಮತ ಪ್ರಚಾರ ನಡೆಸುತ್ತಿದ್ದಾರೆ. ಚುನಾವಣಾ ದಿನ ಹತ್ತಿರ ಬರುತ್ತಿದ್ದಂತೆ ಲೆಕ್ಕಾಚಾರಗಳು ಮೇಲೆ ಕೆಳಗೆ ಆಗುತ್ತಿದ್ದು ಜೆಡಿಎಸ್ ನ 

ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಗೌಡರಿಂದ ಕಾಲಿಗೆ ಚಕ್ರ ಕಟ್ಟಿ ಹಗಲು ರಾತ್ರಿಯೆನ್ನದೆ ಭರ್ಜರಿ ಮತ ಪ್ರಚಾರ Read More »

ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ ಜೆ.ಪಿ. ನಡ್ಡಾ

ಬೆಂಗಳೂರು: ಬೆಂಗಳೂರಿನ ಶಾಂಗ್ರಿಲಾ ಹೊಟೇಲ್ ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬಿಜೆಪಿಯ ಪ್ರಣಾಳಿಕೆ ಬಿಡುಗಡೆ ಮಾಡಿದರು. ಪ್ರಣಾಳಿಕೆಯ ಪ್ರಮುಖ ಅಂಶಗಳು: 1. ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ವರ್ಷಕ್ಕೆ ಮೂರು ಅಡುಗೆ ಅನಿಲ ವಿತರಣೆ (ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಯಂದು ಉಚಿತ ಸಿಲಿಂಡರ್ ವಿತರಣೆ) 2. ಗುಣಮಟ್ಟದ ಆಹಾರ ಒದಗಿಸುವುದಕ್ಕಾಗಿ ಮಹಾನಗರ ಪಾಲಿಕೆಯ ವಾರ್ಡ್ ಗಳಲ್ಲಿ ಅಟಲ್ ಆಹಾರ ಕೇಂದ್ರ ಸ್ಥಾಪನೆ. 3. ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸಲಾಗುವುದು. 4. ಬಿಪಿಎಲ್

ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ ಜೆ.ಪಿ. ನಡ್ಡಾ Read More »

ಮೇಸ್ಟ್ರ ಮಗ ಯಾರ ಮನಸ್ಸಿಗೂ ನೋವು ಕೊಡುವುದಿಲ್ಲ | ಪೆರುವಾಯಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಅಶೋಕ್ ರೈ

ಪುತ್ತೂರು: ಅಶೋಕರು ಗೆದ್ದರೆ ಅವರೊಟ್ಟಿಗೆ ಹೋಗಬಹುದು ಎಂದು ಕೆಲವರು ಹೇಳುತ್ತಿದ್ದಾರೆ. ಗೆದ್ದರೆ ಕಾಂಗ್ರೆಸ್ ನಲ್ಲೇ ಇರುವೆ ಎಲ್ಲರ ಸೇವೆ ಮಾಡುವೆ ವಿನ ದುಷ್ಡ ಬುದ್ದಿ ನನಗಿಲ್ಲ. ನನ್ನ ತಂದೆ ಶಾಲೆ ಮೇಸ್ಟ್ರು ಆಗಿದ್ದರು. ಮೇಸ್ಡ್ರ ಮಗ ಯಾರ ಮನಸ್ಸಿಗೂ ನೋವು ಕೊಟ್ಟಿಲ್ಲ‌,ಕೊಡುವುದೂ ಇಲ್ಲ ಎಂದು ಅಶೋಕ್ ರೈ ಹೇಳಿದರು. ಪೆರುವಾಯಿಯಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ನಾನು ಶಾಸಕನಾದರೆ ಪಕ್ಷ ಬೇದವಿಲದೆ ಎಲ್ಲರಿಗೂ ನೆರವು ನೀಡುತ್ತೇನೆ. ಅಶೋಕ್ ರೈ ಎಂದಿಗೂ ಮೋಸ ಮಾಡುವುದಿಲ್ಲ.

ಮೇಸ್ಟ್ರ ಮಗ ಯಾರ ಮನಸ್ಸಿಗೂ ನೋವು ಕೊಡುವುದಿಲ್ಲ | ಪೆರುವಾಯಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಅಶೋಕ್ ರೈ Read More »

ಎಸ್.ಡಿ.ಪಿ.ಐ.ಯನ್ನು ಕೆಣಕುವ ಅಶೋಕ್ ರೈಗೆ ಚುನಾವಣೆಯಲ್ಲಿ ಉತ್ತರ | ಸರಕಾರದ ಫ್ಯಾಸಿಸ್ಟ್ ಧೋರಣೆ ವಿರೋಧಿಸಿ ಚುನಾವಣೆಯಲ್ಲಿ ಸ್ಪರ್ಧೆ

ಪುತ್ತೂರು: ಚುನಾವಣಾ ಪ್ರಚಾರ ಸಭೆಗಳಲ್ಲಿ ಅಶೋಕ್ ಕುಮಾರ್ ರೈ ಅವರು ಎಸ್.ಡಿ.ಪಿ.ಐ. ಅನ್ನು ಕೆಣಕಿ ಹೇಳಿಕೆ ನೀಡುತ್ತಿದ್ದಾರೆ. ಇದಕ್ಕೆ ಚುನಾವಣೆಯಲ್ಲಿ ಉತ್ತರ ನೀಡಲಾಗುವುದು ಎಂದು ಎಸ್.ಡಿ.ಪಿ.ಐ. ರಾಜ್ಯ ವಕ್ತಾರ ರಿಯಾಜ್ ಕಡಂಬು ಹೇಳಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಲೀಲ್ ಕರೋಪಾಡಿ ಕೊಲೆಗೈದ ವ್ಯಕ್ತಿಗೆ ರಕ್ಷಣೆ ನೀಡಿರುವ, ತನ್ನ ಅಪಾರ್ಟ್ ಮೆಂಟಿನಲ್ಲಿ ಮುಸ್ಲಿಮರಿಗೆ ಅವಕಾಶವಿಲ್ಲ ಎಂದು ಬೋರ್ಡ್ ಹಾಕಿರುವ ವ್ಯಕ್ತಿಗೆ ಕಾಂಗ್ರೆಸ್ ಟಿಕೇಟ್ ನೀಡಿದೆ. ಭಾಷಣಗಳಲ್ಲಿ ಕಾಂಗ್ರೆಸ್ ಸೆಕ್ಯುಲರ್ ಪಕ್ಷ ಎಂದು ಹೇಳಿಕೊಳ್ಳುವ ರಾಷ್ಟ್ರೀಯ ನಾಯಕರು, ಪುತ್ತೂರಿನಲ್ಲಿ

ಎಸ್.ಡಿ.ಪಿ.ಐ.ಯನ್ನು ಕೆಣಕುವ ಅಶೋಕ್ ರೈಗೆ ಚುನಾವಣೆಯಲ್ಲಿ ಉತ್ತರ | ಸರಕಾರದ ಫ್ಯಾಸಿಸ್ಟ್ ಧೋರಣೆ ವಿರೋಧಿಸಿ ಚುನಾವಣೆಯಲ್ಲಿ ಸ್ಪರ್ಧೆ Read More »

ಬಿಜೆಪಿಯಿಂದ ರಾಜ್ಯದಲ್ಲಿ ಸುದೃಢ ಸರಕಾರ ರಚನೆ : ರಘುಪತಿ ಭಟ್ ವಿಶ್ವಾಸ

ಪುತ್ತೂರು: ಈ ಬಾರಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬರುವುದು ಅನಿವಾರ್ಯ ಹಾಗೂ ಅವಶ್ಯಕ. ಖಂಡಿತವಾಗಿಯೂ ಬಿಜೆಪಿ ರಾಜ್ಯದಲ್ಲಿ ಸುಸ್ಥಿರ ಸರಕಾರವನ್ನು ರಚಿಸಲಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು. ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸಂಜೀವ ಮಠಂದೂರು ಅವರ ಆಡಳಿತ ವೈಖರಿ ಪುತ್ತೂರಿನಲ್ಲಿ ಬಿಜೆಪಿಗೆ ಲಾಭವಾಗಲಿದೆ. ಪುತ್ತೂರಿನಲ್ಲಿ ಬಿಜೆಪಿ ಗೆಲ್ಲುವ ಜೊತೆಗೆ, ಕರಾವಳಿಯಲ್ಲಿ ಎಲ್ಲಾ ಸೀಟುಗಳನ್ನು ಬಿಜೆಪಿ ಬಾಚಿಕೊಳ್ಳಲಿದೆ. ಆದ್ದರಿಂದ ರಾಜ್ಯದಲ್ಲಿ‌ ಬಿಜೆಪಿ ಸುಸ್ಥಿರ ಅಧಿಕಾರ ಸ್ಥಾಪಿಸುವುದರಲ್ಲಿ ಎರಡು ಮಾತಿಲ್ಲ ಎಂದರು.ಸಂವಿಧಾನದಲ್ಲಿ ಇಲ್ಲದನ್ನು ಬಿಜೆಪಿ ಸರಿಪಡಿಸಿದೆ.

ಬಿಜೆಪಿಯಿಂದ ರಾಜ್ಯದಲ್ಲಿ ಸುದೃಢ ಸರಕಾರ ರಚನೆ : ರಘುಪತಿ ಭಟ್ ವಿಶ್ವಾಸ Read More »

ಪುತ್ತೂರು: ಬಿಜೆಪಿ ಮಹಾಸಂಪರ್ಕ ಅಭಿಯಾನದ ಸಂಚಲನ | ಒಂದೇ ದಿನ 34 ಸಾವಿರ ಮತದಾರರ ಸಂಪರ್ಕ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಭಾನುವಾರ ಬಿಜೆಪಿ ಮಹಾಸಂಪರ್ಕ ಅಭಿಯಾನ ನಡೆಸಿದ್ದು, ತಾಲೂಕಿನಾದ್ಯಂತ ಸಂಚಲನ ಸೃಷ್ಟಿಸಿತು. ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಸಾರಥ್ಯದಲ್ಲಿ ತಾಲೂಕಿನ ಪ್ರತಿ ಬೂತ್‌ನ ಮತದಾರರನ್ನು ಸಂಪರ್ಕಿಸಿ, ಬಿಜೆಪಿ ಸರಕಾರದ ಸಾಧನೆಗಳನ್ನು ಅವರಿಗೆ ತಲುಪಿಸಲಾಯಿತು. ಕರ್ನಾಟಕದಲ್ಲಿ ಕಳೆದ ಮೂರುವರೆ ವರ್ಷದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರಕಾರ, ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ. ಪುತ್ತೂರು ಒಂದೇ ವಿಧಾನಸಭಾ ಕ್ಷೇತ್ರಕ್ಕೆ ಸಾವಿರ ಕೋಟಿ ರೂ.ಗೂ ಮಿಕ್ಕಿ ಅನುದಾನವನ್ನು ಬಿಡುಗಡೆ ಮಾಡಿದೆ ಅಂದರೆ ಬಿಜೆಪಿ ಮಾಡಿರುವ ಕಾರ್ಯಗಳನ್ನು ಗಮನಿಸಬೇಕು.

ಪುತ್ತೂರು: ಬಿಜೆಪಿ ಮಹಾಸಂಪರ್ಕ ಅಭಿಯಾನದ ಸಂಚಲನ | ಒಂದೇ ದಿನ 34 ಸಾವಿರ ಮತದಾರರ ಸಂಪರ್ಕ Read More »

ಪ್ರವೀಣ್ ನೆಟ್ಟಾರು ಮನೆಗೆ ಜೆ.ಪಿ. ನಡ್ಡಾ ಭೇಟಿ | ಪತ್ನಿ, ಹೆತ್ತವರಿಗೆ ಸಾಂತ್ವನ ಹೇಳಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ

ಪುತ್ತೂರು: ಸುಳ್ಯಕ್ಕೆ ತೆರಳುವ ಹಾದಿಯಲ್ಲಿ ಬೆಳ್ಳಾರೆಯಲ್ಲಿರುವ ದಿವಂಗತ ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ ನೀಡಿದರು. ಪ್ರವೀಣ್ ನೆಟ್ಟಾರು ಅವರ ಪತ್ನಿ ಹಾಗೂ ಹೆತ್ತವರ ಜೊತೆ ಮಾತನಾಡಿ, ಸಾಂತ್ವನ ಹೇಳಿದರು. ಮನೆಯವರ ಜೊತೆ ತಾವು ಇರುವುದಾಗಿ ಭರವಸೆ ನೀಡಿದರು. ಇದೇ ಸಂಧರ್ಭ ಪ್ರವೀಣ್ ನೆಟ್ಟಾರು ಅವರ ನೂತನ ಮನೆಯನ್ನು ವೀಕ್ಷಿಸಿ, ಪ್ರವೀಣ್ ನೆಟ್ಟಾರು ಸಮಾಧಿಗೆ ಭೇಟಿ ನೀಡಿದರು.

ಪ್ರವೀಣ್ ನೆಟ್ಟಾರು ಮನೆಗೆ ಜೆ.ಪಿ. ನಡ್ಡಾ ಭೇಟಿ | ಪತ್ನಿ, ಹೆತ್ತವರಿಗೆ ಸಾಂತ್ವನ ಹೇಳಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ Read More »

ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ಪೆರ್ಲಂಪಾಡಿ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ಹಾಗೂ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸುಮತಿ ಹೆಗ್ಡೆ ಪೆರ್ಲಂಪಾಡಿ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನಕ್ಕೆ ಭಾನುವಾರ ಭೇಟಿ ನೀಡಿದರು. ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಕಾರ್ಯಕರ್ತರೊಂದಿಗೆ ಮಾತನಾಡಿ, ಸಾರ್ಜಜನಿಕರಿಂದ ಮತ ಯಾಚಿಸಿದರು. ಈ ಸಂಧರ್ಭದಲ್ಲಿ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ್ ಕುಮಾರ್ ವೈ, ದ. ಕ ಜೆಡಿಎಸ್ ಮಹಿಳಾ ಘಟಕದ ಕಾರ್ಯದರ್ಶಿ ಪ್ರಿಯಾ ಸಾಲಿಯಾನ್, ಪದ್ಮ ಮಣಿ ,ಮತ್ತಿತರರು ಉಪಸ್ಥಿತರಿದ್ದರು.

ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ಪೆರ್ಲಂಪಾಡಿ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ Read More »

ಸಾಜಾ: ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಮಹಾ ಸಂಪರ್ಕ ಅಭಿಯಾನಕ್ಕೆ ಚಾಲನೆ

ಪುತ್ತೂರು: ವಿಧಾನ ಸಭಾ ಚುನಾವಣೆ ಪ್ರಯುಕ್ತ ಬಿಜೆಪಿ ಪಕ್ಷದ ಅಭ್ಯರ್ಥಿ ಆಶಾ ತಿಮ್ಮಪ್ಪ ಪರವಾಗಿ ಸಾಜ ವಾರ್ಡ್ ನ ಶ್ರೀ ದುರ್ಗಾ-ವೆಂಕಟ್ರಮಣ ಭಜನಾ ಮಂದಿರದ ವಠಾರ 105 ರಲ್ಲಿ ಮಹಾ ಸಂಪರ್ಕ ಅಭಿಯಾನ ಮತ್ತು ಪ್ರಣಾಳಿಕೆ ನೀಡುವ ಕಾರ್ಯಕ್ರಮ ಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಬಳಿಕ ಮನೆ ಮನೆ ಭೇಟಿ ನೀಡಿ ಸಂಪರ್ಕ ಅಭಿಯಾನ ಮಾಡಲಾಯಿತು ಈ ಸಂದರ್ಭದಲ್ಲಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ರಾಧಾಕೃಷ್ಣ ಆಳ್ವ ಸಾಜ, ಬಿಜೆಪಿ ಬಲ್ನಾಡು ಶಕ್ತಿ ಕೇಂದ್ರದ ಪ್ರಮುಖ್ ಅಕ್ಷಯ್

ಸಾಜಾ: ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಮಹಾ ಸಂಪರ್ಕ ಅಭಿಯಾನಕ್ಕೆ ಚಾಲನೆ Read More »

error: Content is protected !!
Scroll to Top