ರಾಜಕೀಯ

ಕಲ್ಲು ತೂರಿದವರ ಮೇಲಿನ ಕೇಸ್‌ ವಾಪಸ್‌ ಪಡೆದ ನಿರ್ಧಾರಕ್ಕೆ ಕೋರ್ಟ್‌ ತಡೆ

ಚಿತ್ತಾಪುರದಲ್ಲಿ ನಡೆದ ಪ್ರಕರಣದಲ್ಲಿ ಸರ್ಕಾರಕ್ಕೆ ಹಿನ್ನಡೆ ಬೆಂಗಳೂರು: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ 2019ರ ಆಗಸ್ಟ್‌ನಲ್ಲಿ ನಡೆದಿದ್ದ ಪೊಲೀಸರ ಮೇಲೆ ಹಲ್ಲೆ ಮತ್ತು ಕರ್ತವ್ಯಕ್ಕೆ ಅಡ್ಡಿ ಪ್ರಕರಣವನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಸಚಿವ ಸಂಪುಟದ ನಿರ್ಧಾರಕ್ಕೆ ಹೈಕೋರ್ಟ್​​ನ ಕಲಬುರಗಿ ವಿಭಾಗೀಯ ಪೀಠ ತಾತ್ಕಾಲಿಕ ತಡೆ ನೀಡಿ ಆದೇಶಿಸಿದೆ. ಸರ್ಕಾರದ ನಿರ್ಧಾರ ಪ್ರಶ್ನಿಸಿ ಗಿರೀಶ್ ಭಾರದ್ಚಜ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಿದೆ. 2019ರ ಆಗಸ್ಟ್‌ನಲ್ಲಿ ಬಕ್ರೀದ್​ ಹಬ್ಬದ ಸಂದರ್ಭದಲ್ಲಿ ಗೋವು ಸಾಗಾಟ ಮಾಡುತ್ತಿದ್ದ ವಾಹನವೊಂದನ್ನು ಖಚಿತ ಮಾಹಿತಿಯ ಆಧಾರದಲ್ಲಿ […]

ಕಲ್ಲು ತೂರಿದವರ ಮೇಲಿನ ಕೇಸ್‌ ವಾಪಸ್‌ ಪಡೆದ ನಿರ್ಧಾರಕ್ಕೆ ಕೋರ್ಟ್‌ ತಡೆ Read More »

ನಾಳೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್‌ ಕುಮಾರ್‌ ದಾಖಲೆ 10ನೇ ಬಾರಿ ಪ್ರಮಾಣ ವಚನ ಸ್ವೀಕಾರ

ನರೇಂದ್ರ ಮೋದಿ, ಅಮಿತ್‌ ಶಾ ಮತ್ತಿತರರು ಭಾಗವಹಿಸುವ ನಿರೀಕ್ಷೆ ಪಾಟ್ನಾ : ಬಿಹಾರದ ಮುಖ್ಯಮಂತ್ರಿ ಆಗಿ ದಾಖಲೆ 10ನೇ ಬಾರಿಗೆ ನಿತೀಶ್ ಕುಮಾರ್ ಗುರುವಾರ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ನವೆಂಬರ್ 20ರಂದು ನಿತೀಶ್ ಕುಮಾರ್ ಜೆಡಿಯು-ಬಿಜೆಪಿ ಸಮ್ಮಿಶ್ರ ಸರ್ಕಾರದ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಡೆಯಲಿರುವ ಬಿಹಾರದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್‌ಡಿಎಯ ಹಲವಾರು ಉನ್ನತ ನಾಯಕರು ಈ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ನಾಳೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್‌ ಕುಮಾರ್‌ ದಾಖಲೆ 10ನೇ ಬಾರಿ ಪ್ರಮಾಣ ವಚನ ಸ್ವೀಕಾರ Read More »

ಪತ್ನಿಯ ಆರೋಗ್ಯ ವಿಚಾರಿಸಲು ವಿಮಾನ ನಿಲ್ದಾಣದಿಂದ ಅಸ್ಪತ್ರೆಗೆ ದೌಡಾಯಿಸಿದ ಸಿದ್ದರಾಮಯ್ಯ

ಶ್ವಾಸಕೋಶದ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಸಿದ್ದರಾಮಯ್ಯನವರ ಪತ್ನಿ ಪಾರ್ವತಮ್ಮ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಮ್ಮ ಅವರನ್ನು ಶ್ವಾಸಕೋಶದ ಸಮಸ್ಯೆಯಿಂದಾಗಿ ಬೆಂಗಳೂರಿನ ಶೇಷಾದ್ರಿಪುರಂ‌‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಐಸಿಯುನಲ್ಲಿ ಡಾ.ಬಿ.ಸಿ. ಶ್ರೀನಿವಾಸ್ ನೇತೃತ್ವದ ವೈದ್ಯರ ಚಿಕಿತ್ಸೆ ನೀಡುತ್ತಿದೆ. ಸಿದ್ದರಾಮಯ್ಯ ಇಂದು ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ ಬಂದಿಳಿದ ಕೂಡಲೇ ಆಸ್ಪತ್ರೆಗೆ ದೌಡಾಯಿಸಿ ಪತ್ನಿಯ ಆರೋಗ್ಯ ವಿಚಾರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭೇಟಿ, ಸಂಪುಟ ವಿಸ್ತರಣೆ ಸಂಬಂಧ ಚರ್ಚಿಸಲು ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದರು. ಇಂದು ಮುಂಜಾನೆ ದೆಹಲಿಯಿಂದ ಬೆಂಗಳೂರಿಗೆ

ಪತ್ನಿಯ ಆರೋಗ್ಯ ವಿಚಾರಿಸಲು ವಿಮಾನ ನಿಲ್ದಾಣದಿಂದ ಅಸ್ಪತ್ರೆಗೆ ದೌಡಾಯಿಸಿದ ಸಿದ್ದರಾಮಯ್ಯ Read More »

RSS ಗೆ ಸ್ಪರ್ಧೆ ನೀಡಲು ಹುಟ್ಟಿದ ಯಾವ ಸಂಘವೂ ಉಳಿದಿಲ್ಲ: ಮೋಹನ್ ಭಾಗವತ್

ಜೈಪುರ: RSS ಗೆ ಸಂಬಂಧಿಸಿದ ಹಾಗೆ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮಾತನಾಡಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಸ್ಪರ್ಧೆ ನೀಡಲೆಂದು ಹಲವರು ಪ್ರಯತ್ನ ಮಾಡಿ ತಮ್ಮದೇ ಶಾಖೆಯನ್ನು ಸ್ಥಾಪಿಸಿದರು. ಆದರೆ ಅವುಗಳು 15 ದಿನಗಳ ಕಾಲ ಸಹ ಉಳಿಯಲಿಲ್ಲ ಎಂದು ಹೇಳಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘ ನೂರು ವರ್ಷಗಳಿಂದ ನಡೆಯುತ್ತಿದೆ. ಇನ್ನೂ ಬೆಳೆಯುತ್ತದೆ. ಇದಕ್ಕೆ ಕಾರಣ ಸ್ವಯಂಸೇವಕರ ಸಮರ್ಪಣಾ ಮನೋಭಾವ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಂಘ ನಡೆಯುತ್ತಿರುವುದು ಸ್ವಯಂಸೇವಕರ ಭಾವನಾತ್ಮಕ ಶಕ್ತಿ ಮತ್ತು ಜೀವ ಶಕ್ತಿಯ

RSS ಗೆ ಸ್ಪರ್ಧೆ ನೀಡಲು ಹುಟ್ಟಿದ ಯಾವ ಸಂಘವೂ ಉಳಿದಿಲ್ಲ: ಮೋಹನ್ ಭಾಗವತ್ Read More »

ಪ್ರಧಾನಿ ಮೋದಿ ಅಲೆ ಕಡೆಮೆಯಾಗಿಲ್ಲ ಎನ್ನುವುದು ಬಿಹಾರ ಚುನಾವಣೆಯಿಂದ ಸ್ಪಷ್ಟ: ಬೊಮ್ಮಾಯಿ

ಬೆಂಗಳೂರು: ಪ್ರಧಾನಿ ಮೋದಿ ಅವರ ಜನಪ್ರಿಯತೆ ಮುಂದುವರಿದಿದೆ ಎನ್ನುವುದನ್ನು ಬಿಹಾರದ ವಿಧಾನಸಭಾ ಚುನಾವಣೆ ಮತ್ತೆ ಸ್ಪಷ್ಟಪಡಿಸಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಬಳಿಕವೂ ಮೋದಿ ಅಲೆಯ ಪ್ರಭಾವ ಕಡಿಮೆಯಾಗಿಲ್ಲ. ಮಾತ್ರವಲ್ಲದೆ ಮಹಾರಾಷ್ಟ್ರ, ಹರಿಯಾಣ ಹಾಗೂ ಬಿಹಾರದಲ್ಲಿ ಜನರು ಮತ್ತೆ ಅವರ ನಾಯಕತ್ವಕ್ಕೆ ಬೆಂಬಲ ಸೂಚಿಸಿರುವುದು ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಬಿಹಾರದಲ್ಲಿ ಜಾತಿ ರಾಜಕಾರಣ ಮತ್ತು ಸಮೀಕರಣಗಳ ಬಗ್ಗೆ ನಡೆದಿದ್ದ ಚರ್ಚೆಗಳು ಕಾಂಗ್ರೆಸ್ ಪಕ್ಷಕ್ಕೆ ಪ್ರತಿಕೂಲವಾಗುವುದಾಗಿ

ಪ್ರಧಾನಿ ಮೋದಿ ಅಲೆ ಕಡೆಮೆಯಾಗಿಲ್ಲ ಎನ್ನುವುದು ಬಿಹಾರ ಚುನಾವಣೆಯಿಂದ ಸ್ಪಷ್ಟ: ಬೊಮ್ಮಾಯಿ Read More »

ಹೀನಾಯ ಸೋಲಿಗೆ ಚುನಾವಣಾ ಆಯೋಗವನ್ನು ದೂಷಿಸುತ್ತಿರುವ ಕಾಂಗ್ರೆಸ್‌ ನಾಯಕರು

ನ್ಯಾಯಸಮ್ಮತ ಚುನಾವಣೆ ನಡೆದಿಲ್ಲ ಎಂದು ಆರೋಪ ನವದೆಹಲಿ: ಬಿಹಾರ ಚುನಾವಣೆಯಲ್ಲಿ ಹೀನಾಯವಾಗಿ ಸೋತ ಬಳಿಕ ಕಾಂಗ್ರೆಸ್‌ ನಾಯಕರು ಚುನಾವಣಾ ಅಯೋಗವನ್ನು ಸ್ಪರ್ಧೆಗೆ ಬಿದ್ದವರಂತೆ ದೂಷಿಸತೊಡಗಿದ್ದಾರೆ. ಸೋಲಿನ ಎಲ್ಲ ಹೊಣೆಯನ್ನು ಚುನಾವಣಾ ಆಯೋಗಕ್ಕೆ ಕಟ್ಟುತ್ತಿದ್ದಾರೆ. ಕಾಂಗ್ರೆಸ್‌ನ ಅಧಿನಾಯಕ ರಾಹುಲ್‌ ಗಾಂಧಿ, ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌, ವಕ್ತಾರ ಹರೀಶ್‌ ಖೇರಾ ಅವರಿಂದ ಹಿಡಿದು ಪ್ರತಿಯೊಬ್ಬರು ಚುನಾವಣಾ ಆಯೋಗದ ಸಹಕಾರದಿಂದಲೇ ಬಿಜೆಪಿ ಗೆಲ್ಲುತ್ತಿದೆ ಎಂದು ಹೇಳುತ್ತಿದ್ದಾರೆ. ಸೋಲಿನ ಬಗ್ಗೆ ಪ್ರತಿಕ್ರಿಯಿಸಿರುವ ಲೋಕಸಭೆಯ ವಿರೋಧ

ಹೀನಾಯ ಸೋಲಿಗೆ ಚುನಾವಣಾ ಆಯೋಗವನ್ನು ದೂಷಿಸುತ್ತಿರುವ ಕಾಂಗ್ರೆಸ್‌ ನಾಯಕರು Read More »

ಬಿಹಾರ ಫಲಿತಾಂಶ : ಪಕ್ಷಗಳ ಅಂತಿಮ ಬಲಾಬಲ

200 ದಾಟಿ ಇತಿಹಾಸ ನಿರ್ಮಿಸಿದ ಎನ್‌ಡಿಎ ಮೈತ್ರಿಕೂಟ ಪಾಟ್ನಾ: ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ಐತಿಹಾಸಿಕ ಜಯ ಸಾಧಿಸಿದೆ. ಎಲ್ಲ ಎಕ್ಸಿಟ್‌ ಪೋಲ್‌ಗಳನ್ನು ತಲೆಕೆಳಗು ಮಾಡಿ ಮತ್ತೆ ಅಧಿಕಾರಕ್ಕೇರಿದೆ. ಎನ್‌ಡಿಎ 202, ಮಹಾಘಟಬಂಧನ್‌ 35 ಹಾಗೂ ಇತರ 6 ಸ್ಥಾನಗಳಲ್ಲಿ ಗೆಲುವು ದಾಖಲಿಸಿವೆ. ಕಾಂಗ್ರೆಸ್ ಎಂದಿನಂತೆ ಹೇಳೋಕೆ ಹೆಸರಿಲ್ಲದಂತೆ ನೆಲಕಚ್ಚಿದೆ. ಕಾಂಗ್ರೆಸ್ ಪಕ್ಷವನ್ನು ನೆಚ್ಚಿಕೊಂಡ ಆರ್‌ಜೆಡಿ ಮಣ್ಣು ಮುಕ್ಕಿದೆ. ಮತಪಟ್ಟಿ ಪರಿಷ್ಕರಣೆಗೆ ವಿರೋಧ, ಮತಕಳವು ಆರೋಪ, ಅತ್ಯಧಿಕ ಮತದಾನ, ಶೇ.47ರಷ್ಟು ಮಹಿಳಾ ಮತದಾರರಿಂದ ವೋಟಿಂಗ್ ದಾಖಲೆಗಳ ವಿಶೇಷತೆ ನಡುವೆ

ಬಿಹಾರ ಫಲಿತಾಂಶ : ಪಕ್ಷಗಳ ಅಂತಿಮ ಬಲಾಬಲ Read More »

ಬಿಹಾರದಲ್ಲಿ NDA ಮೈತ್ರಿಕೂಟದ ಮೋಡಿ: ಕಳಪೆ ಸಾಧನೆಯ ಮೂಲಕ ಮುಖಭಂಗ ‌ಮಾಡಿಕೊಂಡ ಕಾಂಗ್ರೆಸ್, RJD

ಬಿಹಾರ: ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿ ಕೂಟ ಭರ್ಜರಿ ಗೆಲುವಿನತ್ತ ಮುಖ ಮಾಡಿದೆ. ಆ ಮೂಲಕ ರಾಜ್ಯದಲ್ಲಿ ಬಿಜೆಪಿ ಅತೀ‌ದೊಡ್ಡ ಪಕ್ಷವಾಗಿ ಅರಳುವ ಹಾದಿಯಲ್ಲಿದೆ ಎಂದು ಚು. ಆಯೋಗದ ವರದಿ ಹೇಳಿದೆ. 243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಎನ್‌ಡಿಎ ಮೈತ್ರಿಕೂಟ 190ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ 101 ಸ್ಥಾನಗಳಲ್ಲಿ ಸ್ಪರ್ಧಿಸಿದ್ದು, 80ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ರಾಜ್ಯದ ಪ್ರಬಲ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಿದೆ. ದೆಹಲಿ, ಮಹಾರಾಷ್ಟ್ರ ಮತ್ತು ಹರಿಯಾಣದ ನಂತರ

ಬಿಹಾರದಲ್ಲಿ NDA ಮೈತ್ರಿಕೂಟದ ಮೋಡಿ: ಕಳಪೆ ಸಾಧನೆಯ ಮೂಲಕ ಮುಖಭಂಗ ‌ಮಾಡಿಕೊಂಡ ಕಾಂಗ್ರೆಸ್, RJD Read More »

ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ

ಮಂಗಳೂರು: ಬೆಂಗಳೂರು ಆರ್‌ಟಿಒ ನೋಂದಣಿಯ ಕಾರ್‌ನಲ್ಲಿ ನಗರದ ನಂತೂರ್ ಸಮೀಪ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರಿನ ಎಂಜಿನ್‌ನಲ್ಲಿ ಹೊಗೆ ಆವರಿಸಿ ಬೆಂಕಿ ಹತ್ತಿಕೊಂಡಿದೆ. ತಕ್ಷಣವೇ ಅದೇ ರಸ್ತೆಯಲ್ಲಿ ಸಾಗುತ್ತಿದ್ದ ಡ್ರೈನೇಜ್ ಸಕ್ಕಿಂಗ್ ವಾಹನದಲ್ಲಿದ್ದ ನೀರನ್ನು ಬಳಸಿ ಕಾರಿನ ಬೆಂಕಿ ನಂದಿಸುವ ಪ್ರಯತ್ನ ಮಾಡಲಾಗಿದೆ.

ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ Read More »

ಬಿಹಾರದಲ್ಲಿ‌ ಓಟ್ ಚೋರಿ?: ಸಿಎಂ ‌ಸಿದ್ದು ಹೇಳಿದ್ದೇನು?

ಬೆಂಗಳೂರು: ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಓಟ್ ಚೋರಿ ಆಗಿದೆ. ಆದರೂ ಜನರ ತೀರ್ಪನ್ನು ನಾವು ಒಪ್ಪಿಕೊಳ್ಳಬೇಕಿದೆ ಎಂದು ಸಿ ಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಹಾರದಲ್ಲಿ ಯಾಕೆ ಹಿನ್ನಡೆ ಆಗಿದೆ. ಈ ಬಗ್ಗೆ ಸರಿಯಾದ ಮಾಹಿತಿ ಪಡೆದು ಆ ಬಳಿಕ ಮಾತನಾಡುತ್ತೇನೆ ಎಂದಿದ್ದಾರೆ. NDA ಯಾಕೆ ಬಹುಮತ ಪಡೆದಿದೆ. ಅಲ್ಲೂ ಓಟ್ ಚೋರಿ ಆಗಿದೆ. ಆದರೆ ಜನ ತೀರ್ಪು ನಾವು ಒಪ್ಪಬೇಕು ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಅಜೆಂಡಾ ಓಬಿಸಿ ಅವರೇ ಬಿಹಾರದಲ್ಲಿ ಕೈ

ಬಿಹಾರದಲ್ಲಿ‌ ಓಟ್ ಚೋರಿ?: ಸಿಎಂ ‌ಸಿದ್ದು ಹೇಳಿದ್ದೇನು? Read More »

error: Content is protected !!
Scroll to Top