ಹಣ ನೀಡಿದರೆ ಮಾತ್ರ ಕಾಂಗ್ರೆಸಿನಲ್ಲಿ ಅಭ್ಯರ್ಥಿ : ಮೋನಪ್ಪ ಭಂಡಾರಿ ಆರೋಪ | ರಾಜ್ಯದಲ್ಲಿ ಬಿಜೆಪಿಗೆ 130ಕ್ಕೂ ಅಧಿಕ ಸ್ಥಾನ ಗೆಲ್ಲುವ ವಿಶ್ವಾಸ
ಪುತ್ತೂರು: ಹಣ ನೀಡಿದರೆ ಮಾತ್ರ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಯಾಗಲು ಸಾಧ್ಯ. ಹೀಗಿದ್ದರೂ ಬಿಜೆಪಿ ಸರಕಾರದ ಮೇಲೆ ಆರೋಪ ಮಾಡುವ ಕಾಂಗ್ರೆಸ್ ಬಳಿ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಕಾಂಗ್ರೆಸ್ ಪಕ್ಷ ಒಂದು ಮುಳುಗುವ ಹಡಗು ಎಂದು ವಿಧಾನಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ ಆರೋಪಿಸಿದರು. ಪುತ್ತೂರು ಪ್ರೆಸ್ ಕ್ಲಬ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋಸ, ವಂಚನೆ, ಭ್ರಷ್ಟಾಚಾರ ಕಾಂಗ್ರೆಸ್ ನ ಜನ್ಮಸಿದ್ಧ ಹಕ್ಕು, ಚುನಾವಣೆಯಲ್ಲಿ ಅಭ್ಯರ್ಥಿಗಳಾಗಲು ಕಾಂಗ್ರೆಸ್ ಪಕ್ಷಕ್ಕೆ ಹಣ ಕೊಡಬೇಕು ಎಂದು ಅವರ ಪಕ್ಷದವರೇ ಬಹಿರಂಗವಾಗಿ ಆರೋಪ […]










