ರಾಜಕೀಯ

ಸುಳ್ಯ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಮನಾ ಬೊಳ್ನಾರ್ಕರ್ ರಿಂದ ಪ್ರಚಾರ ಕಾರ್ಯ

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಮನಾ ಬೊಳ್ನಾರ್ಕರ್ ಸುಳ್ಯ ತಾಲೂಕಿನ ಹಲವೆಡೆ ಪ್ರಚಾರ ಕಾರ್ಯ ನಡೆಸಿದರು. ಅಜ್ಜಾವರ, ಅಡ್ಕ, ಮಾವಿನಪಳ್ಳ ಸೇರಿದಂತೆ ಹಲವಾರು ಕಡೆ ಚುನಾವಣಾ ಪ್ರಚಾರ ನಡೆಸಿ, ಕಾರ್ನರ್ ಸಭೆ ನಡೆಸಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಸುಮಾರು 50 ಕ್ಕೂ ಅಧಿಕ ಮಂದಿ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಗುರುಪ್ರಸಾದ್ ಮೆರ್ಕಜೆ, ಖಲಂದರ್ ಎಲಿಮಲೆ, ಗಣೇಶ್ ಕುಂಡಡ್ಕ, ರಾಮಕೃಷ್ಣ ಬೀರಮಂಗಿಲ, ಸಂಶುದ್ದೀನ್ ಕೆ.ಎಂ., ವಸಂತ, ಸಿಂಚನ, […]

ಸುಳ್ಯ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಮನಾ ಬೊಳ್ನಾರ್ಕರ್ ರಿಂದ ಪ್ರಚಾರ ಕಾರ್ಯ Read More »

ತಲೆಬೈಲು ಮಠದಲ್ಲಿ ಬೊಟ್ಯಾಡಿ ವಿಶೇಷ ಪ್ರಾರ್ಥನೆ

ಪುತ್ತೂರು: ಶತ್ರುನಿಗ್ರಹ ಕ್ಷೇತ್ರ ಶ್ರೀ ತಲೆಬೈಲು ನರಸಿಂಹ ದೇವರ ಮಠದಲ್ಲಿ ಕರ್ನಾಟಕ ರಾಜ್ಯ ವಿದ್ಯುಚ್ಛಕ್ತಿ ಮಂಡಳಿಯ ನಿರ್ದೇಶಕ ಕಿಶೋರ್ ಕುಮಾರ್ ಬೊಟ್ಯಾಡಿ ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ರಾಜ್ಯದಲ್ಲಿ ಹಾಗೂ ಪುತ್ತೂರಿನಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವಂತೆ ಪ್ರಾರ್ಥಿಸಿದರು. ಇದೇ ಸಂದರ್ಭ ಮಠದ ಮಂಜುನಾಥ್ ಉಡುಪ ಅವರು ಕಿಶೋರ್ ಕುಮಾರ್ ಬೊಟ್ಯಾಡಿ ಅವರನ್ನು ಶಾಲು ಹೊದಿಸಿ ಸನ್ಮಾನಿಸಿದರು.

ತಲೆಬೈಲು ಮಠದಲ್ಲಿ ಬೊಟ್ಯಾಡಿ ವಿಶೇಷ ಪ್ರಾರ್ಥನೆ Read More »

ಪುತ್ತಿಲ ಪ್ರಣಾಳಿಕೆಯಲ್ಲಿ ಏನೇನಿದೆ? | ಎಂಡೋ ಸಲ್ಫಾನ್ ಪರಿಹಾರ, ಜಿಲ್ಲಾಕೇಂದ್ರ, 24×7 ಹೆಲ್ಪ್ ಲೈನ್ ಇತ್ಯಾದಿ ಪ್ರಣಾಳಿಕೆಯಲ್ಲಿವೆ

ಪುತ್ತೂರು: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅರುಣ್ ಕುಮಾರ್ ಪುತ್ತಿಲ ಅವರು 31 ವಿಷಯಗಳನ್ನು ಮುಂದಿಟ್ಟುಕೊಂಡು ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ದರ್ಬೆ ಸುಭದ್ರ ಕಲಾಣ ಮಂಟಪದ ಬಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಲಾಯಿತು. ಸತೀಶ್ ರೈ ನೀರ್ಪಾಡಿ, ಪ್ರಮೋದ್ ರೈ, ಮನ್ಮಥ ಶೆಟ್ಟಿ ಅವರು ಪ್ರಣಾಳಿಕೆ ತಯಾರಿಸುವ ನೇತೃತ್ವ ವಹಿಸಿದ್ದರು. ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ, ಸುನಿಲ್ ಬೋರ್ಕರ್, ಭಾಸ್ಕರ್ ಆಚಾರ್ಯ ಹಿಂದಾರು, ಸೇಡಿಯಾಪು ಜನಾರ್ದನ ಭಟ್, ಡಾ.ಗಣೇಶ್ ಪ್ರಸಾದ್ ಮುದ್ರಾಜೆ, ಪ್ರಸನ್ನ ಕುಮಾರ್ ಮಾರ್ತಾ, ಸ್ನೇಹ ಸಿಲ್ಕ್ ನ

ಪುತ್ತಿಲ ಪ್ರಣಾಳಿಕೆಯಲ್ಲಿ ಏನೇನಿದೆ? | ಎಂಡೋ ಸಲ್ಫಾನ್ ಪರಿಹಾರ, ಜಿಲ್ಲಾಕೇಂದ್ರ, 24×7 ಹೆಲ್ಪ್ ಲೈನ್ ಇತ್ಯಾದಿ ಪ್ರಣಾಳಿಕೆಯಲ್ಲಿವೆ Read More »

ಆಮ್ ಆದ್ಮಿ ಅಭ್ಯರ್ಥಿ ಡಾ. ಬಿ.ಕೆ. ವಿಶು ಕುಮಾರ್ ಬಿರುಸಿನ ಪ್ರಚಾರ

ಪುತ್ತೂರು: ಆಮ್ ಆದ್ಮಿ ಪಾರ್ಟಿಯ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಬಿ.ಕೆ. ವಿಶು ಕುಮಾರ್ ಅವರು ಕಬಕ ವಿದ್ಯಾಪುರದಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಪ್ರಚಾರ ಕಾರ್ಯದ ನಡುವೆ ಹಲವರನ್ನು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳಿಸಲಾಯಿತು. ವಿದ್ಯಾಪುರದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಪಕ್ಷದ ಪರವಾಗಿ ಒಲವು ವ್ಯಕ್ತಪಡಿಸಿದ್ದಾರೆ. ಪಕ್ಷ ಅಧಿಕಾರಕ್ಕೆ ಬಂದರೆ, ಅಭಿವೃದ್ಧಿ ಕಾರ್ಯಕ್ಕೆ ವೇಗ ನೀಡುವ ಬಗ್ಗೆ ಭರವಸೆ ನೀಡಲಾಯಿತು ಎಂದು ಡಾ. ಬಿ.ಕೆ. ವಿಶು ಕುಮಾರ್ ತಿಳಿಸಿದ್ದಾರೆ.

ಆಮ್ ಆದ್ಮಿ ಅಭ್ಯರ್ಥಿ ಡಾ. ಬಿ.ಕೆ. ವಿಶು ಕುಮಾರ್ ಬಿರುಸಿನ ಪ್ರಚಾರ Read More »

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶೇಖರ್ ಬಿ. ಮಾಡಾವು ಬಿಜೆಪಿಗೆ ಸೇರ್ಪಡೆ

ಪುತ್ತೂರು: 2018ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿದ್ದ ಶೇಖರ್ ಬಿ. ಮಾಡಾವು ಅವರು ಬಿಜೆಪಿಗೆ ಸೇರ್ಪಡೆಗೊಂಡರು. ಕೇಂದ್ರ ಸಚಿವೆ ಡಾ. ಭಾರತಿ ಪವಾರ್ ಅವರು ಬಿಜೆಪಿ ಧ್ವಜ ನೀಡಿ, ಪಕ್ಷಕ್ಕೆ ಸೇರ್ಪಡೆಗೊಳಿಸಿದರು. ಇದೇ ಸಂದರ್ಭ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಅಪ್ಪಯ್ಯ ಮಣಿಯಾಣಿ ಮೊದಲಾದವರು ಉಪಸ್ಥಿತರಿದ್ದರು.

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶೇಖರ್ ಬಿ. ಮಾಡಾವು ಬಿಜೆಪಿಗೆ ಸೇರ್ಪಡೆ Read More »

ಮಾತೃಶಕ್ತಿ  ಮೇಲೆ ಬಿಜೆಪಿಗೆ ವಿಶ್ವಾಸ | ಸಂಜೀವ ಮಠಂದೂರು ಅಭಿವೃದ್ಧಿ ಕಾರ್ಯ ಆಶಾ ತಿಮ್ಮಪ್ಪ ಗೆಲುವಿಗೆ ಪೂರಕ

ಪುತ್ತೂರು: ಮಾತೃಶಕ್ತಿ ಮೇಲೆ ಬಿಜೆಪಿಗೆ ವಿಶ್ವಾಸವಿದೆ. ಈ ಬಾರಿಗೆ ಪುತ್ತೂರಿನಲ್ಲಿ ಮಹಿಳೆಗೆ ಟಿಕೆಟ್ ನೀಡಿದ್ದು, ಪುತ್ತೂರು ಬಿಜೆಪಿ ಅಭ್ಯರ್ಥಿಗೆ ಎಲ್ಲರೂ ಮತ ನೀಡುವ ಮೂಲಕ ಗೆಲ್ಲಿಸಿ ಕೊಡುವಲ್ಲಿ ಪ್ರಯತ್ನಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಡಾ.ಭಾರತೀ ಪವಾರ್ ವಿನಂತಿಸಿದರು. ಅವರು ಪುತ್ತೂರು ಭಾರತೀಯ ಜನತಾ ಪಾರ್ಟಿ ವತಿಯಿಂದ ಬಪ್ಪಳಿಗೆ ಜೈನಭವನದಲ್ಲಿ ನಡೆದ ಬಿಜೆಪಿ ಮಹಿಳಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದರು. ಕಾಂಗ್ರಸ್ ಪಕ್ಷ ಮಹಿಳಾ ವಿರೋಧಿಯಾಗಿದೆ. ಈ ನಿಟ್ಟಿನಲ್ಲಿ ಈ ಬಾರಿ ಕಾಂಗ್ರೆಸ್ ಗೆ

ಮಾತೃಶಕ್ತಿ  ಮೇಲೆ ಬಿಜೆಪಿಗೆ ವಿಶ್ವಾಸ | ಸಂಜೀವ ಮಠಂದೂರು ಅಭಿವೃದ್ಧಿ ಕಾರ್ಯ ಆಶಾ ತಿಮ್ಮಪ್ಪ ಗೆಲುವಿಗೆ ಪೂರಕ Read More »

ಅರಿಯಡ್ಕ: ದಲಿತ ಕಾಲನಿಗೆ ಅಶೋಕ್ ರೈ ಭೇಟಿ ಮತ ಯಾಚನೆ

ಪುತ್ತೂರು: ಅರಿಯಡ್ಕ ಗ್ರಾಮದ ಶೇಕಮಲೆ ದಲಿತ ಕಾಲನಿಗೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಭೇಟಿ ನೀಡಿ ಮತ ಯಾಚನೆ ನಡೆಸಿದರು. ಕಾಲನಿಗೆ ತೆರಳುವ ರಸ್ತೆಯಲ್ಲಿ ಹೊಳೆ ಇದ್ದು ಅದಕ್ಕೆ ಸೇತುವೆ ಇಲ್ಲದೆ ಸಮಸ್ಯೆಯಾಗಿದ್ದು ಮಳೆಗಾಲದಲ್ಲಿ ಶಾಲೆಗೆ ಮಕ್ಕಳು ತೆರಳಲೂ ಸಾಧ್ಯವಾಗುತ್ತಿಲ್ಲ. ಸೇತುವೆ ನಿರ್ಮಾಣ ಮಾಡಿಕೊಡುವಂತೆ ಕಾಲನಿ ನಿವಾಸಿಗಳು ಮನವಿ ಮಾಡಿದರು. ಮನವಿ ಸ್ವೀಕರಿಸಿ ಮಾತನಾಡಿದ ಅಶೋಕ್ ರೈಯವರು ಇಲ್ಲಿ ಇಷ್ಟೊಂದು ಅಪಾಯಕಾರಿಯಾದ ಸ್ಥಳವಿದ್ದರೂ ಸೂಕ್ತ ಸ್ಪಂದನೆ ಸಿಗದೇ ಇದ್ದದ್ದು ಅತ್ಯಂತ ಬೇಸರದ ಸಂಗತಿಯಾಗಿದೆ. ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ

ಅರಿಯಡ್ಕ: ದಲಿತ ಕಾಲನಿಗೆ ಅಶೋಕ್ ರೈ ಭೇಟಿ ಮತ ಯಾಚನೆ Read More »

ಇಂದು ರಾಜ್ಯಕ್ಕೆ ಯೋಗಿ ಆದಿತ್ಯನಾಥ್‌ ಭೇಟಿ

ಚುನಾವಣಾ ಪ್ರಚಾರದಲ್ಲಿ ಕೇಂದ್ರದ ನಾಯಕರು ಭಾಗಿ ಬೆಂಗಳೂರು: ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಕೇಂದ್ರ ಸಚಿವರು ಮತ್ತು ಬಿಜೆಪಿಯ ಪ್ರಮುಖ ನಾಯಕರ ದಂಡೇ ರಾಜ್ಯಕ್ಕೆ ಆಗಮಿಸುತ್ತಿದೆ. ವಿವಿಧ ರಾಜ್ಯಗಳ ಸಿಎಂ, ಡಿಸಿಎಂ ಮತ್ತು ಕೇಂದ್ರ ಸಚಿವರು ಆಗಮಿಸುತ್ತಿದ್ದಾರೆ. ಇಂದು ಮಂಡ್ಯ ಮತ್ತು ವಿಜಯಪುರ ಜಿಲ್ಲೆಗೆ ಹಿಂದೂ ಫಯರ್​ ಬ್ರ್ಯಾಂಡ್​ ಲೀಡರ್‌ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಆಗಮಿಸಲಿದ್ದಾರೆ.ಲಖನೌನಿಂದ ಮೈಸೂರಿಗೆ ಆಗಮಿಸುವ ಯೋಗಿ ಆದಿತ್ಯನಾಥ್​​ 11 ಗಂಟೆಗೆ ಮಂಡ್ಯದಲ್ಲಿ ನಡೆಯುವ ರೋಡ್​​ ಶೋ ಮತ್ತು ಪ್ರಚಾರ ಸಭೆಯಲ್ಲಿ ಭಾಗಿಯಾಗುತ್ತಾರೆ.

ಇಂದು ರಾಜ್ಯಕ್ಕೆ ಯೋಗಿ ಆದಿತ್ಯನಾಥ್‌ ಭೇಟಿ Read More »

ಕೋರ್ಟ್ ವಿಚಾರಣೆ ಪೂರ್ಣವಾಗುವವರೆಗೆ ಮುಸ್ಲಿಂ ಮೀಸಲಾತಿ ಬಗ್ಗೆ ನಿರ್ಧಾರ ಇಲ್ಲ : ಸಿಎಂ ಬೊಮ್ಮಾಯಿ

ಬೆಂಗಳೂರು: ಸುಪ್ರೀಂ ಕೋರ್ಟ್ ವಿಚಾರಣೆ ಪೂರ್ಣವಾಗುವವರೆಗೆ ಮುಸ್ಲಿಂ ಮೀಸಲಾತಿ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮುಸ್ಲಿಮರ ಮೀಸಲಾತಿ ಕುರಿತು ಈಗಾಗಲೇ ಸರ್ವೋಚ್ಚ ನ್ಯಾಯಾಲಯದ ಪ್ರಕರಣದ ವಿಚಾರಣೆ ಪೂರ್ಣವಾಗುವವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ. ಸರ್ವೋಚ್ಚ ನ್ಯಾಯಾಲಯವು ಮೇ 9ಕ್ಕೆ ದಿನಾಂಕ ಮುಂದೂಡಿದ್ದು, ಕೋರ್ಟ್‌ನಿಂದ ಯಾವುದೇ ತಡೆಯಾಜ್ಞೆ ಸಿಕ್ಕಿಲ್ಲ ಎಂದರು.ಮುಸ್ಲಿಮರಿಗೆ ವಿರುದ್ಧವಾಗಿ ಈ ಮೀಸಲಾತಿ ಹಂಚಿಕೆ ಇಲ್ಲ. ಈ ಬಗ್ಗೆ ಕಾಂಗ್ರೆಸ್ ಸುಳ್ಳು ಹೇಳುತ್ತಿದೆ. ಮುಸ್ಲಿಮರಲ್ಲಿ ಸುಮಾರು 17

ಕೋರ್ಟ್ ವಿಚಾರಣೆ ಪೂರ್ಣವಾಗುವವರೆಗೆ ಮುಸ್ಲಿಂ ಮೀಸಲಾತಿ ಬಗ್ಗೆ ನಿರ್ಧಾರ ಇಲ್ಲ : ಸಿಎಂ ಬೊಮ್ಮಾಯಿ Read More »

ಪಂಜಾಬ್‌ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ನಿಧನ

ಚಂಡೀಗಢ: ಪಂಜಾಬ್‌ನ ಮಾಜಿ ಮುಖ್ಯಮಂತ್ರಿ, ಶಿರೋಮಣಿ ಅಖಾಲಿದಳದ ನಾಯಕ ಪ್ರಕಾಶ್ ಸಿಂಗ್ ಬಾದಲ್ (95) ನಿನ್ನೆ ರಾತ್ರಿ ನಿಧನರಾಗಿದ್ದಾರೆ.ಮೊಹಾಲಿಯಲ್ಲಿರುವ ಫೋರ್ಟಿಸ್ ಆಸ್ಪತ್ರೆಯಲ್ಲಿ ಪ್ರಕಾಶ್ ಸಿಂಗ್ ಬಾದಲ್ ಚಿಕಿತ್ಸೆಗೆ ದಾಖಲಾಗಿದ್ದರು. ಪ್ರಕಾಶ್ ಸಿಂಗ್ ಬಾದಲ್ ನಿಧನ ಸುದ್ದಿಯನ್ನು ಅವರ ಆಪ್ತ ಸಹಾಯಕರು ಹಾಗೂ ಪುತ್ರರು ದೃಢಪಡಿಸಿದ್ದಾರೆ. ಪ್ರಕಾಶ್ ಸಿಂಗ್ ಬಾದಲ್ 5 ಬಾರಿ ಪಂಜಾಬ್‌ ಮುಖ್ಯಮಂತ್ರಿಯಾಗಿದ್ದರು. ಇವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಅವರ ಅಂತಿಮ ಸಂಸ್ಕಾರ ಭಟಿಂಡದ ಬಾದಲ್ ಗ್ರಾಮದಲ್ಲಿ ನಡೆಯಲಿದೆ. ಬುಧವಾರ ಬೆಳಗ್ಗೆ ಅವರ ಪಾರ್ಥಿವ

ಪಂಜಾಬ್‌ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ನಿಧನ Read More »

error: Content is protected !!
Scroll to Top