ರಾಜಕೀಯ

ದ.ಕ. ಜಿಲ್ಲಾ ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟರಿಂದ ವಿಜಯೇಂದ್ರ ಭೇಟಿ

ಬೆಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಭೇಟಿ ಮಾಡಿದರು. ಬೆಂಗಳೂರಿನಲ್ಲಿ ಇಂದು ವಿಜಯೇಂದ್ರ ಭೇಟಿ ಮಾಡಿದ ಬಿಜೆಪಿ ರಾಜ್ಯ ಕಾರ್ಯದರ್ಶಿಯೂ ಆಗಿರುವ ಬ್ರಿಜೇಶ್ ಚೌಟ ಧನ್ಯವಾದ ತಿಳಿಸಿದರು. ನಾಳೆ ದೆಹಲಿಯಲ್ಲಿ ಬಿಜೆಪಿ ನೂತನ ಸಂಸದರ ಸಭೆಯ ಹಿನ್ನೆಲೆಯಲ್ಲಿ ಬ್ರಿಜೇಶ್ ಚೌಟ ಇಂದು ದೆಹಲಿಗೆ ತೆರಳಲಿದ್ದಾರೆ.

ದ.ಕ. ಜಿಲ್ಲಾ ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟರಿಂದ ವಿಜಯೇಂದ್ರ ಭೇಟಿ Read More »

ಮಹಾರಾಷ್ಟ್ರ  ದೇವೇಂದ್ರ ಫಡ್ನವೀಸ್  ಉಪ ಮುಖ್ಯಮಂತ್ರಿ  ಸ್ಥಾನಕ್ಕೆ ರಾಜೀನಾಮೆ

ಲೋಕಸಭಾ ಚುನಾವಣೆ ಮಹಾರಾಷ್ಟ್ರದಲ್ಲಿ ಬಿಜೆಪಿ ತೀವ್ರ ಹಿನ್ನಡೆ ಸಾಧಿಸಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ್ದಾರೆ.  ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿಯ ಸಂಖ್ಯೆಯು 2019 ರಲ್ಲಿ 23 ಸ್ಥಾನಗಳಿಂದ ಈ ವರ್ಷ ಕೇವಲ 9ಕ್ಕೆ ಕುಸಿದಿದೆ. ರಾಜ್ಯದ ಬಿಜೆಪಿ ನಾಯಕರ ಪೈಕಿ ಪ್ರಮುಖ ವ್ಯಕ್ತಿಯಾಗಿರುವ ಫಡ್ನವೀಸ್, ಪಕ್ಷದ ಚುನಾವಣಾ ಹಿನ್ನಡೆಯ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತು ರಾಜೀನಾಮೆ ನೀಡಿರುವುದಾಗಿ ತಿಳಿದುಬಂದಿದೆ.

ಮಹಾರಾಷ್ಟ್ರ  ದೇವೇಂದ್ರ ಫಡ್ನವೀಸ್  ಉಪ ಮುಖ್ಯಮಂತ್ರಿ  ಸ್ಥಾನಕ್ಕೆ ರಾಜೀನಾಮೆ Read More »

ಜೂನ್ 8 : ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಬಹುಮತ ಪಡೆದು ಮೂರನೇ ಬಾರಿಗೆ ಅಧಿಕಾರದ ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಜೂನ್ 8 ರಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೂಡಲೇ ನರೇಂದ್ರ ಮೋದಿ ಅವರ ಹೆಸರಿಗೆ ಹೊಸ ದಾಖಲೆ ಸೇರ್ಪಡೆಯಾಗಲಿದೆ. ಸತತ ಮೂರನೇ ಬಾರಿಗೆ ಚುನಾವಣೆಯಲ್ಲಿ ಗೆದ್ದು ದೇಶದ ಪ್ರಧಾನಿಯಾದ ದೇಶದ ಎರಡನೇ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಜೂನ್ 8 : ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ Read More »

ಕೇಂದ್ರ ಅಧಿಕಾರ ಚುಕ್ಕಾಣಿಗೆ‌ ಎನ್ ಡಿಎ ಗೆ ಬೆಂಬಲ ಘೋಷಿಸಿದ  ಎನ್ ಚಂದ್ರಬಾಬು ನಾಯ್ಡು

ಪ್ರಸ್ತುತ ರಾಜಕಾರಣದಲ್ಲಿ ಕಿಂಗ್ ಮೇಕ‌ರ್, ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಬಿಜೆಪಿ ನೇತೃತ್ವದ ಎನ್‌ಡಿಎಗೆ ತಮ್ಮ ಬೆಂಬಲವನ್ನು ಪುನರುಚ್ಛರಿಸಿದ್ದಾರೆ ಹಾಗೂ ಕೇಂದ್ರದಲ್ಲಿ ಹೊಸ ಸರ್ಕಾರ ರಚಿಸಲು ತಮ್ಮ ಪಕ್ಷ ಬಿಜೆಪಿಯನ್ನು ಬೆಂಬಲಿಸಲಿದೆ ಎಂದು ಹೇಳಿದ್ದಾರೆ. ಎನ್‌ಡಿಎ ಮೈತ್ರಿಕೂಟದ ಸಭೆಯಲ್ಲಿ ಭಾಗಿಯಾಗಲಿದ್ದೇನೆ ಎಂದು ಚಂದ್ರಬಾಬು ನಾಯ್ಡು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಹೊಸ ಸರ್ಕಾರದಲ್ಲಿ ಸ್ಪೀಕ‌ರ್ ಸ್ಥಾನಕ್ಕೆ ಟಿಡಿಪಿ ಮುಖಂಡ ಚಂದ್ರಬಾಬು ನಾಯ್ಡು ಬೇಡಿಕೆ ಇರಿಸಿದ್ದಾರೆ. ಲೋಕಸಭೆಯಲ್ಲಿ ಟಿಡಿಪಿ ಪಕ್ಷದ ಸಂಸದರನ್ನ ಸ್ಪೀಕ‌ರ್ ಮಾಡಬೇಕು. ಸಂಪುಟದಲ್ಲಿ ಟಿಡಿಪಿಗೆ ಒಂದು

ಕೇಂದ್ರ ಅಧಿಕಾರ ಚುಕ್ಕಾಣಿಗೆ‌ ಎನ್ ಡಿಎ ಗೆ ಬೆಂಬಲ ಘೋಷಿಸಿದ  ಎನ್ ಚಂದ್ರಬಾಬು ನಾಯ್ಡು Read More »

ಪಾಕ್ ಪರ ಜೈಕಾರ ಕೂಗಿದ ಯುವಕನ ಬಂಧನ

ಚಿಕ್ಕೋಡಿ : ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದ ಹಿನ್ನೆಲೆ ಸಂಭ್ರಮಾಚರಣೆಯಲ್ಲಿ ಯುವಕನೋರ್ವ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು, ಪಾಕಿಸ್ತಾನ ಪರ ಜೈಕಾರ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂದಿತ ಆರೋಪಿಯನ್ನುಜಮೀರ್ ನಾಯಿಕವಾಡಿ (25) ಎಂದು ಗುರುತಿಸಲಾಗಿದೆ. ಮಂಗಳವಾರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಗಳಿಸಿತ್ತು. ಈ ಹಿನ್ನೆಲೆ ಮತ ಎಣಿಕೆ ಕೇಂದ್ರದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ. ಈ ವೇಳೆ ಆರೋಪಿ ಜಮೀರ್ ಪಾಕಿಸ್ತಾನ್ ಕೀ ಜೈ ಎಂದು ಘೋಷಣೆ

ಪಾಕ್ ಪರ ಜೈಕಾರ ಕೂಗಿದ ಯುವಕನ ಬಂಧನ Read More »

ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ಜಯಭೇರಿ | 1.52 ಲಕ್ಷ ಮತಗಳ ಅಂತರದಿಂದ ಗೆಲುವು

ನವದೆಹಲಿ : ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ವಿರುದ್ಧ ಸ್ಪರ್ಧಿಸಿದ್ದ ಪ್ರಧಾನಿ ಮೋದಿ ಅವರು ಜಯಭೇರಿ ಬಾರಿಸಿದ್ದಾರೆ. ಮೊದ ಮೊದಲು ಮತ ಎಣಿಕೆ ಆರಂಭವಾದಾಗ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಮುನ್ನಡೆ ಕಾಯ್ದುಕೊಂಡಿದ್ದರು. ಇದಾದ ಬಳಿಕ ಸುಮಾರು 4998 ಮತಗಳ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ನಂತರ ಹಿನ್ನಡೆ ಅನುಭವಿಸಿದರು. ಕೊನೇ ಹಂತದ ಮತ ಎಣಿಕೆಯಲ್ಲಿ ಪ್ರಧಾನಿ ಮೋದಿ ಅವರನ್ನು ಸೋಲಿಸುವಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ

ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ಜಯಭೇರಿ | 1.52 ಲಕ್ಷ ಮತಗಳ ಅಂತರದಿಂದ ಗೆಲುವು Read More »

ದಕ್ಷಿಣ ಕನ್ನಡದಲ್ಲಿ ಬ್ರಿಜೇಶ್ ಚೌಟ ಗೆಲುವು : ಜಿಲ್ಲಾಧಿಕಾರಿಯಿಂದ ಪ್ರಮಾಣ ಪತ್ರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದು, ಅವರಿಗೆ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಮುಲ್ಪೆ ಮುಗಿಲನ್ ಪ್ರಮಾಣ ಪತ್ರ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಚುನಾವಣಾ ವೀಕ್ಷಕರಾದ ಆಕಾಂಕ್ಷ ರಂಜನ್, ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಪುತ್ತೂರು ಉಪ ವಿಭಾಗ ಅಧಿಕಾರಿ ಜುಬಿನ್ ಮೋಹ ಪಾತ್ರ, ಪ್ರೊಬೆಷನರಿ ಐಎಎಸ್ ಅಧಿಕಾರಿ ಪಿ. ಶ್ರವಣ್ ಕುಮಾರ್

ದಕ್ಷಿಣ ಕನ್ನಡದಲ್ಲಿ ಬ್ರಿಜೇಶ್ ಚೌಟ ಗೆಲುವು : ಜಿಲ್ಲಾಧಿಕಾರಿಯಿಂದ ಪ್ರಮಾಣ ಪತ್ರ ಸ್ವೀಕಾರ Read More »

ದಕ್ಷಿಣ ಜಿಲ್ಲಾ ಸಂಸದರಾಗಿ ಬ್ರಿಜೇಶ್ ಚೌಟ ಆಯ್ಕೆ | 1,49,208 ಅಂತರದಿಂದ ಗೆಲುವು

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವಿಜಯದ ಪತಾಕೆಯನ್ನು ಹಾರಿಸಿದ್ದಾರೆ. 7,64,132 ಮತಗಳ ಮೂಲಕ ಬ್ರಿಜೇಶ್ ಚೌಟ ಜಯಗಳಿಸಿದ್ದಾರೆ. 1,49,208 ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಗೆಲುವಿನ ನಗೆ ಬೀರಿದ್ದಾರೆ. ಇದೀಗ ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ್ದು, ದಕ್ಷಿಣ ಜಿಲ್ಲಾ ಸಂಸದರಾಗಿ ಆಯ್ಕೆಯಾಗಿದ್ದಾರೆ.

ದಕ್ಷಿಣ ಜಿಲ್ಲಾ ಸಂಸದರಾಗಿ ಬ್ರಿಜೇಶ್ ಚೌಟ ಆಯ್ಕೆ | 1,49,208 ಅಂತರದಿಂದ ಗೆಲುವು Read More »

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,34,799 ಮತಗಳ ಮುನ್ನಡೆ

ಪುತ್ತೂರು:ದ.ಕ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಮಂಗಳೂರಿನ ಎನ್ ಐಟಿಕೆ ಮತ ಎಣಿಕಾ ಕೇಂದ್ರದಲ್ಲಿ ಮತ ಎಣಿಕೆ ಆರಂಭವಾಗಿದೆ. ಇದುವರೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 5,91,941 ಸಾವಿರ ಮತಗಳನ್ನು ಪಡೆದು ಮುನ್ನಡೆ ಸಾಧಿಸಿದರೆ.  ಕಾಂಗ್ರೆಸ್ ನ ಪದ್ಮರಾಜ್ ಪೂಜಾರಿ 4,57,142 ಮತಗಳನ್ನು ಪಡೆದುಕೊಂಡಿದ್ದಾರೆ. ಅಂತರ 1,34,799 ನೋಟಾ ಮತ 18,179.

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,34,799 ಮತಗಳ ಮುನ್ನಡೆ Read More »

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಭರ್ಜರಿ ಗೆಲುವು

ರಾಮನಗರ : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.ಅವರು 1 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ.  ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರ ವಿರುದ್ಧ ಡಾ.ಸಿ.ಎನ್ ಮಂಜುನಾಥ್ ಅವರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಸದ್ಯ ಡಾ. ಸಿ.ಎನ್. ಮಂಜುನಾಥ್ ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಡಾ. ಸಿ.ಎನ್. ಮಂಜುನಾಥ್ ಅವರಿಗೆ ಶುಭ ಕೋರಲು ಕಾರ್ಯಕರ್ತರು ಹಾಗೂ ಸಾಕಷ್ಟು ಅಭಿಮಾನಿಗಳು ಕಿಕ್ಕಿರಿದು ನಿವಾಸದ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಭರ್ಜರಿ ಗೆಲುವು Read More »

error: Content is protected !!
Scroll to Top