ಆಧಾರ್-ಪಾನ್ ಜೋಡಣೆ ಹೆಸರಿನಲ್ಲಿ ವಸೂಲಿ ಮಾಡಿದ ಹಣವನ್ನು ಸರಕಾರ ಏನು ಮಾಡುತ್ತಿದೆ ಎಂದು ಬಹಿರಂಗ ಪಡಿಸಲಿ : ರವೀಂದ್ರ ನೆಕ್ಕಿಲು ಆಗ್ರಹ
ಪುತ್ತೂರು: ಜನರ ಹಣ ಲೂಟಿ ಮಾಡಲೆಂದೇ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಹುಟ್ಟಿದ್ದು, ಆಧಾರ್ – ಪಾನ್ ಜೋಡಣೆಯ ಹೆಸರಿನಲ್ಲಿ ಜನರಿಂದ ವಸೂಲಿ ಮಾಡಿದ ಹಣವನ್ನು ಸರ್ಕಾರ ಏನು ಮಾಡುತ್ತಿದೆ ಎಂದು ಬಹಿರಂಗ ಪಡಿಸಬೇಕಾಗಿದೆ. ಎಂದು ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾ ಉಪಾಧ್ಯಕ್ಷ ರವೀಂದ್ರ ರೈ ನೆಕ್ಕಿಲು ಆಗ್ರಹಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ರೀತಿ ಸಾರ್ವಜನಿಕ ಹಣವನ್ನು ಲೂಟಿ ಮಾಡುವ ಪ್ರಕ್ರಿಯೆಯನ್ನು ಖಂಡಿಸುತ್ತೇವೆ ಮತ್ತು ಈಗಾಗಲೇ ಪಡೆದ ಹಣವನ್ನು ತಕ್ಷಣ ಮರುಪಾವತಿ ಮಾಡಬೇಕೆಂದು […]










