ರಾಜಕೀಯ

ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಎಸ್‍ ಡಿಪಿಐ ಪ್ರತಿಭಟನೆ

ಪುತ್ತೂರು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2024 ಮಂಡನೆಯನ್ನು ವಿರೋದಿಸಿ ಪುತ್ತೂರು ಬಸ್ಸು ನಿಲ್ದಾಣದ ಬಳಿ ವಕ್ಫ್  ತಿದ್ದುಪಡಿ ಮಸೂದೆಯನ್ನು ವಿರೋಧಿಸಿ, ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ಘೋಷಣೆ ಕೂಗಿ, ಮಸೂದೆಯ ಪ್ರತಿಯನ್ನು ಸುಡುವ ಮೂಲಕ ಪ್ರತಿಭಟನೆ ನಡೆಯಿತು. ವಕ್ಫ್ ತಿದ್ದುಪಡಿ ಮಸೂದೆಯು ಕೇಂದ್ರ ಸರ್ಕಾರದ ಹಿಡನ್ ಅಜೆಂಡಾವಾಗಿದ್ದು ಈ ಮಸೂದೆಯನ್ನು ದೇಶದ ಜಾತ್ಯಾತೀತರು ಒಪ್ಪಲ್ಲ, ವಕ್ಫ್ ಆಸ್ತಿಯು […]

ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಎಸ್‍ ಡಿಪಿಐ ಪ್ರತಿಭಟನೆ Read More »

ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗೆ ಆಗ್ರಹ: ಬಿಜೆಪಿ ನಿಯೋಗ ಭೇಟಿ

ಪುತ್ತೂರು : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆದಿದೆ. ಮುಷ್ಕರಕ್ಕೆ ಇಂದು ಪುತ್ತೂರು ಬಿಜೆಪಿ ನಿಯೋಗ ಭೇಟಿ ನೀಡಿ ಬೆಂಬಲವಿತ್ತಿದೆ. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಪ್ರದಾನ ಕಾರ್ಯದರ್ಶಿ ಗಳಾದ ಉಮೇಶ್, ಪ್ರಶಾಂತ್ ನೆಕ್ಕಿಲಾಡಿ. ಅನಿಲ್ ತೆಂಕಿಲ. ಟೌನ್ ಬ್ಯಾಂಕ್ ನಿರ್ದೇಶಕರು ರಾಜು ಶೆಟ್ಟಿ, ಶಕ್ತಿ ಕೇಂದ್ರ ದ ಅಧ್ಯಕ್ಷ ಪ್ರಜ್ವಲ್ ಘಾಟೆ, ಹರೀಶ್ ಆಚಾರ್, ರೂಪೇಶ್, ಪ್ರದೀಪ್ ಮತ್ತು ಪ್ರಮುಖರು ಉಪಸ್ಥಿತರಿದ್ದರು.

ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗೆ ಆಗ್ರಹ: ಬಿಜೆಪಿ ನಿಯೋಗ ಭೇಟಿ Read More »

ಮೋದಿಯವರ ದೃಢ ನಿಶ್ಚಯ, ಅಭಿವೃದ್ಧಿ ಪರ ಅಜೆಂಡಾ ದೆಹಲಿಯಲ್ಲಿ ಬಿಜೆಪಿ ಗೆಲುವಿಗೆ ಕಾರಣ : ಡಿ.ವಿ.ಸದಾನಂದ ಗೌಡ

ದೆಹಲಿಯಲ್ಲಿ ಭಾರತೀಯ ಜನತಾ ಪಾರ್ಟಿ ಭರ್ಜರಿ ಗೆಲುವು ಸಾಧಿಸಿರುವುದು ಪಕ್ಷದ ಸಕಲ ಮಟ್ಟದ ಶ್ರಮ, ಸಂಘಟನೆ ಮತ್ತು ಜನಪರ ರಾಜಕೀಯದ ಫಲವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯ ಅವರ ದೃಢನಿಶ್ಚಯ, ಅಭಿವೃದ್ಧಿ ಪರ ಆಜಂಡಾ. ಮತ್ತು ಕೇಂದ್ರ ಸರ್ಕಾರದ ಸಮರ್ಥ ಕಾರ್ಯಪದ್ಧತಿ ಜನತೆಯ ವಿಶ್ವಾಸವನ್ನು ಮತ್ತೆ ಗಳಿಸಿತು. ಪಕ್ಷದ ಬೂತ್ ಮಟ್ಟದ ಬಲವಾದ ತಂತ್ರ, ಸುಸಂಘಟಿತ ಪ್ರಚಾರ ಯಂತ್ರ ಮತ್ತು ಜನಸಾಮಾನ್ಯರ ಸಮಸ್ಯೆಗಳನ್ನು ನಿರ್ಧಾರಾತ್ಮಕವಾಗಿ ಪರಿಹರಿಸುವ ನೇತೃತ್ವದ ಫಲವಾಗಿ ದೆಹಲಿಯಲ್ಲಿ ಈ ಜಯ ಸಾಧ್ಯವಾಯಿತು ಎಂದು ಮಾಜಿ ಕೇಂದ್ರ

ಮೋದಿಯವರ ದೃಢ ನಿಶ್ಚಯ, ಅಭಿವೃದ್ಧಿ ಪರ ಅಜೆಂಡಾ ದೆಹಲಿಯಲ್ಲಿ ಬಿಜೆಪಿ ಗೆಲುವಿಗೆ ಕಾರಣ : ಡಿ.ವಿ.ಸದಾನಂದ ಗೌಡ Read More »

ಮೊಗಪ್ಪೆಯಲ್ಲಿ‌ ಹೈ ಮಾಸ್ಟ್ ದೀಪ ಅಳವಡಿಸಲು ಶಾಸಕರಿಗೆ ಮನವಿ

ಪುತ್ತೂರು: ಕೊಳ್ತಿಗೆ ಗ್ರಾಮದ ಮೊಗಪ್ಪೆಯಲ್ಲಿ ಹೈ ಮಾಸ್ಡ್ ದೀಪ ಅಳವಡಿಸುವಂತೆ ಎನ್ ಎಸ್ ಯು ಐ ಪ್ರಧಾನ ಕಾರ್ಯದರ್ಶಿ ರೂಪರಾಜ್ ರವರು ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದರು. ಜನವಸತಿ ಇರುವ ಮೊಗಪ್ಪೆಯಲ್ಲಿ ರಾತ್ರಿ ವೇಳೆ ಹೈ ಮಾಸ್ಕ್ ದೀಪದ ಅಗತ್ಯ ಇದ್ದು ಗ್ರಾಮಸ್ಥರ ಹಿತದೃಷ್ಟಿಯಿಂದ ದೀಪ ಅಳವಡಿಸುವಂತೆ ಶಾಸಕರಿಗೆ ನೀಡಿದ ಮನವಿಯಲ್ಲಿ ತಿಳಿಸಿದ್ದಾರೆ. ಮನವಿ ಸ್ವೀಕರಿಸಿದ ಶಾಸಕರು ಮೊಗಪ್ಪೆಯಲ್ಲಿ ಹೈ ಮಾಸ್ಕ್ ದೀಪ ಅಳವಡಿಸುವ ಭರವಸೆಯನ್ನು ನೀಡಿದ್ದಾರೆ ಈ ಸಂದರ್ಭದಲ್ಲಿ ಎನ್ ಎಸ್ ಯು

ಮೊಗಪ್ಪೆಯಲ್ಲಿ‌ ಹೈ ಮಾಸ್ಟ್ ದೀಪ ಅಳವಡಿಸಲು ಶಾಸಕರಿಗೆ ಮನವಿ Read More »

ಕುದ್ರೋಳಿ ಕಸಾಯಿಖಾನೆಗೆ ಮಹಾನಗರ ಪಾಲಿಕೆ ಮೇಯರ್‌ ಮನೋಜ್‌  ದಿಢೀರ್ ದಾಳಿ

ಮಂಗಳೂರು :  ಇಲ್ಲಿನ ಅಕ್ರಮ ಕಸಾಯಿಖಾನೆಗಳ ವಿರುದ್ದ ಮಹಾನಗರ ಪಾಲಿಕೆ ಮೇಯರ್‌ ಮನೋಜ್‌ ಕುಮಾರ್‌ ಸಮರ ಸಾರಿದ್ದು, ಮಂಗಳೂರಿನ ಹೃದಯಭಾಗದಲ್ಲಿರುವ ಕುದ್ರೋಳಿ ಕಸಾಯಿಖಾನೆ ಪರಿಸರಕ್ಕೆ ದಿಢೀರ್ ದಾಳಿ ಮಾಡಿದ್ದಾರೆ. ಕುದ್ರೋಳಿ ಕಸಾಯಿಖಾನೆ ಈ ಹಿಂದೆ ಅಧಿಕೃತವಾಗಿದ್ದರು ಸಹ ಹಸಿರು ಪೀಠದ ಆದೇಶದ ಹಿನ್ನಲೆಯಲ್ಲಿ ಸ್ಥಗಿತಗೊಳಿಸಿ ನಾಲ್ಕು ವರ್ಷ ಕಳೆದಿದೆ. ಆದರೆ ಈ ಕಸಾಯಿಖಾನೆ ಖಾಸಗಿ ಜಾಗದಲ್ಲಿ ಅಕ್ರಮವಾಗಿ ವ್ಯವಹಾರ ನಡೆಯುತ್ತಿದೆ. ಈ ಬಗ್ಗೆ ಪ್ರತಿನಿತ್ಯ ಗೋವು, ಆಡು, ಕುರಿಗಳ ವಧಿಸುವ ಕುರಿತಾಗಿ ದೂರುಗಳಿದ್ದವು. ಈ ದೂರಿನನ್ವಯ ಮಂಗಳೂರು

ಕುದ್ರೋಳಿ ಕಸಾಯಿಖಾನೆಗೆ ಮಹಾನಗರ ಪಾಲಿಕೆ ಮೇಯರ್‌ ಮನೋಜ್‌  ದಿಢೀರ್ ದಾಳಿ Read More »

ಮಂಗಳೂರಿನಲ್ಲಿ ರಾಷ್ಟ್ರೀಯ ಕಾನೂನು ವಿವಿ ಸ್ಥಾಪನೆ : ವೀರಪ್ಪ ಮೊಯ್ಲಿ ಒತ್ತಾಯ

ಬಜೆಟ್‌ನಲ್ಲಿ ಘೋಷಿಸುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಬೆಂಗಳೂರು: ರಾಜ್ಯದ ಎರಡನೇ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯವನ್ನು ಮಂಗಳೂರಿನಲ್ಲಿ ಸ್ಥಾಪಿಸುವಂತೆ ರಾಜ್ಯ ಸರ್ಕಾರವನ್ನು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಅವರು ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಮೊಯ್ಲಿ, ಬೆಂಗಳೂರಿನಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಕಾನೂನು ಶಾಲೆ ಎನ್‌ಎಲ್‌ಎಸ್‌ಐಯು ಸ್ಥಾಪಿಸಲು ಕ್ರಮಗಳ ಕೈಗೊಂಡಿದ್ದೆ. ಇದು ಅತ್ಯಂತ ಯಶಸ್ವಿ ಪ್ರಯೋಗವಾಗಿದ್ದು, ಇಂದು ಭಾರತದಲ್ಲಿ 27 ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳಿವೆ. ಕೆಲವು ರಾಜ್ಯಗಳು ಒಂದಕ್ಕಿಂತ ಹೆಚ್ಚು ರಾಷ್ಟ್ರೀಯ ಕಾನೂನು

ಮಂಗಳೂರಿನಲ್ಲಿ ರಾಷ್ಟ್ರೀಯ ಕಾನೂನು ವಿವಿ ಸ್ಥಾಪನೆ : ವೀರಪ್ಪ ಮೊಯ್ಲಿ ಒತ್ತಾಯ Read More »

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ | ಪುತ್ತೂರಿನ ಬಿಜೆಪಿ ಕಚೇರಿ ಮುಂದೆ ಪಟಾಕಿ ಸಿಡಿಸಿ, ಸಿಹಿ ತಿಂಡಿ ವಿತರಿಸಿ ಹರ್ಷಾಚರಣೆ.

ಪುತ್ತೂರು: ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಫಲಿತಾಂಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ ಹಿನ್ನಲೆಯಲ್ಲಿ ಪುತ್ತೂರು ಬಿಜೆಪಿ ಕಚೇರಿ ಮುಂದೆ ಬಿಜೆಪಿ ಸಂಭ್ರಮಿಸಿತು. ಬಿಜೆಪಿ ಪ್ರಮುಖರು, ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ತಿಂಡಿ ವಿತರಿಸಿ ಹರ್ಷಚಾರಣೆಯನ್ನು ವ್ಯಕ್ತಪಡಿಸಿದರು. ಇದೆ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ನಗರ ಮಂಡಲ ಅಧ್ಯಕ್ಷ ಶಿವಕುಮಾರ್, ಗ್ರಾಮಾಂತರ ಮಂಡಲ‌ ಅಧ್ಯಕ್ಷ ದಯಾನಂದ ಉಜಿರೆಮಾರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ವಿದ್ಯಾಗೌರಿ, ಸುರೇಶ್ ಆಳ್ವ, ಚಂದ್ರಶೇಖರ ಬಪ್ಪಳಿಗೆ,ಸಾಜ ರಾಧಾಕೃಷ್ಣ ಆಳ್ವ,ಪುರೊಷೋತ್ತಮ ಮುಂಗ್ಲಿಮನೆ,ರಾಜೇಶ್

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ | ಪುತ್ತೂರಿನ ಬಿಜೆಪಿ ಕಚೇರಿ ಮುಂದೆ ಪಟಾಕಿ ಸಿಡಿಸಿ, ಸಿಹಿ ತಿಂಡಿ ವಿತರಿಸಿ ಹರ್ಷಾಚರಣೆ. Read More »

ನಿಮ್ಮೊಳಗೆ ಕಿತ್ತಾಡಿ ನಾಶವಾಗಿ ಹೋಗಿ : ಇಂಡಿ ಮೈತ್ರಿಕೂಟಕ್ಕೆ ಓಮರ್‌ ಅಬ್ದುಲ್ಲ ಲೇವಡಿ

ಸೋಲು-ಗೆಲುವಿನ ನಡುವೆ ಹೊಯ್ದಾಡುತ್ತಿರುವ ಅರವಿಂದ ಕೇಜ್ರಿವಾಲ್‌ ಹೊಸದಿಲ್ಲಿ : ದಿಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಆಪ್‌ ಪರಾಭವ ಬಹುತೇಕ ನಿಶ್ಚಿತಗೊಂಡಿರುವಂತೆ ಕಾಂಗ್ರೆಸ್‌ ಮತ್ತು ಆಪ್‌ ವಿರುದ್ಧ ಇಂಡಿ ಮೈತ್ರಿಕೂಟದ ಮಿತ್ರಪಕ್ಷಗಳು ಕೆಂಡ ಕಾರತೊಡಗಿವೆ. ಇಂಡಿ ಭಾಗವಾಗಿರುವ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್‌ ಅಬ್ದುಲ್ಲ ಆಪ್‌ ಮೇಲೆ ಸೋಲಿನ ಕರಿಮೋಡ ಕವಿಯುತ್ತಿರುವಂತೆಯೇ ನಿಮ್ಮೊಳಗೆ ಕಿತ್ತಾಡಿ ನಾಶವಾಗಿ ಹೋಗಿ ಎಂದು ಲೇವಡಿ ಮಾಡಿದ್ದಾರೆ.ದಿಲ್ಲಿ ಚುನಾವಣೆಯಲ್ಲಿ ಇಂಡಿ ಮಿತ್ರಪಕ್ಷಗಳಾದ ಕಾಂಗ್ರೆಸ್‌ ಮತ್ತು ಆಪ್‌ ಪ್ರತ್ಯೇಕವಾಗಿ ಸ್ಪರ್ಧಿಸಿದ್ದು ಮಾತ್ರವಲ್ಲದೆ ಪ್ರಚಾರದ ವೇಳೆ ಸಾಕಷ್ಟು ಕಿತ್ತಾಡಿಕೊಂಡಿದ್ದವು. ಈ

ನಿಮ್ಮೊಳಗೆ ಕಿತ್ತಾಡಿ ನಾಶವಾಗಿ ಹೋಗಿ : ಇಂಡಿ ಮೈತ್ರಿಕೂಟಕ್ಕೆ ಓಮರ್‌ ಅಬ್ದುಲ್ಲ ಲೇವಡಿ Read More »

ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ್‍ ನಡುತೋಟ ಆಯ್ಕೆ

ಮಂಗಳೂರು: ಒಕ್ಕಲಿಗರ ಗೌಡರ ಸೇವಾ ಸಂಘ ಯುವ ಘಟಕದ ಉಪಾಧ್ಯಕ್ಷ ಮಹೇಶ್ ನಡುತೋಟರವರು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಚುಣಾವಣೆಯಲ್ಲಿ ಸ್ಫರ್ಧಿಸಿ ಅತ್ಯಧಿಕ ಮತಗಳಿಂದ ಚುನಾಯಿತರಾಗಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿದ್ದಾರೆ. ಮಹೇಶ್‍ ನಡುತೋಟ ಅವರು ಸುಬ್ರಹ್ಮಣ್ಯದ ಬಿಳಿನೆಲೆ ಗ್ರಾಮದ ಕೈಕಂಬದ ನಡುತೊಟ ಮನೆಯವರು. ಮಂಗಳೂರಿನಲ್ಲಿ ಉದ್ಯಮಿ ಯಾಗಿ ಕಳೆದ 15 ವರುಷದಿಂದ ನೆಲೆಸಿದ್ದಾರೆ. ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನ ಸಮಿತಿಯ ನಿರ್ದೇಶಕರಾಗಿದ್ದಾರೆ. ದಿವಂಗತ ಚೆನ್ನಕೇಶವ ಗೌಡ ನಡುತೋಟ ಮತ್ತು ರುಕ್ಮಿಣಿ ದಂಪತಿ

ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ್‍ ನಡುತೋಟ ಆಯ್ಕೆ Read More »

ದಿಲ್ಲಿ ಫಲಿತಾಂಶ : ಆರಂಭಿಕ ಹಂತದಲ್ಲಿ ಬಿಜೆಪಿಗೆ ಮುನ್ನಡೆ

ಹೊಸದಿಲ್ಲಿ : ದಿಲ್ಲಿ ವಿಧಾನಸಭೆ ಚುನಾವಣೆ ಮತ ಎಣಿಕೆ ಪ್ರಾರಂಭವಾಗಿದ್ದು, ಆರಂಭಿಕ ಹಂತದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಆರಂಭದ ಕೆಲವು ಸುತ್ತಿನ ಮತ ಎಣಿಕೆ ಮುಗಿದಾಗ ಬಿಜೆಪಿ 40, ಆಪ್‌ 29 ಮತ್ತು ಕಾಂಗ್ರೆಸ್‌ ಬರೀ 1 ಸ್ಥಾನದಲ್ಲಿ ಮುಂದಿರುವುದು ಕಂಡುಬಂದಿದೆ. ಮುಖ್ಯಮಂತ್ರಿ ಆತಿಶಿ ಮರ್ಲೆನಾ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಂಜ್ರಿವಾಲ್‌, ಮಾಜಿ ಸಚಿವ ಮನೀಷ್‌ ಸಿಸೋದಿಯ ಅವರಂಥ ದಿಗ್ಗಜರೇ ಆರಂಭದ ಸುತ್ತುಗಳಲ್ಲಿ ಹಿನ್ನಡೆ ಅನುಭವಿಸಿದ್ದಾರೆ.

ದಿಲ್ಲಿ ಫಲಿತಾಂಶ : ಆರಂಭಿಕ ಹಂತದಲ್ಲಿ ಬಿಜೆಪಿಗೆ ಮುನ್ನಡೆ Read More »

error: Content is protected !!
Scroll to Top