ರಾಜಕೀಯ

ಕುರ್ಚಿ ಕಿತ್ತಾಟ ಫೈನಲ್‌ ಹಂತಕ್ಕೆ : ನಾಳೆಯೇ ಸಿದ್ದರಾಮಯ್ಯ ರಾಜೀನಾಮೆ?

ಕೊನೆಗೂ ಪಟ್ಟ ಬಿಡಲು ಸಿದ್ದರಾಮಯ್ಯ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್‌ ಬೆಂಗಳೂರು : ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ನಡುವಿನ ಕುರ್ಚಿ ಕಿತ್ತಾಟ ಫೈನಲ್‌ ಹಂತಕ್ಕೆ ತಲುಪಿದ್ದು, ಕೊನೆಗೂ ಕಾಂಗ್ರೆಸ್‌ ಹೈಕಮಾಂಡ್‌ ಅಧಿಕಾರ ಬಿಟ್ಟುಕೊಡುವಂತೆ ಸಿದ್ದರಾಮಯ್ಯನವರ ಮನವೊಲಿಸುವಲ್ಲಿ ಯಶಸ್ವಿಯಾಗಿದೆ ಎನ್ನಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ. ಗುರುವಾರ ಬೆಳಗ್ಗೆ ಸಿಎಂ ನಿವಾಸದಲ್ಲಿ ಸಚಿವರಿಗೆ ಬ್ರೇಕ್‌ಫಾಸ್ಟ್ ಇರಲಿದೆ. ಬ್ರೇಕ್‌ಫಾಸ್ಟ್ ಬಳಿಕ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಗುರುವಾರ ರಾಜೀನಾಮೆ ಬಳಿಕ […]

ಕುರ್ಚಿ ಕಿತ್ತಾಟ ಫೈನಲ್‌ ಹಂತಕ್ಕೆ : ನಾಳೆಯೇ ಸಿದ್ದರಾಮಯ್ಯ ರಾಜೀನಾಮೆ? Read More »

ರಾಜ್ಯಸಭೆ ಚುನಾವಣೆ : ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಆಕಾಂಕ್ಷಿ

ಪಕ್ಷ ಜವಾಬ್ದಾರಿ ಕೊಟ್ಟರೆ ನಿರ್ವಹಿಸಲು ರೆಡಿ ಎಂದ ಸದಾನಂದ ಗೌಡ ಬೆಂಗಳೂರು: ರಾಜ್ಯಸಭೆಗೆ ನಾನು ಕೂಡ ಆಕಾಂಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಈ ಬಗ್ಗೆ ಪಕ್ಷದ ವರಿಷ್ಠರಿಗೆ ಈಗಾಗಲೇ ತಿಳಿಸಿದ್ದೇನೆ. ನಾನು ಈಗಾಗಲೇ ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗಿದ್ದೇನೆ. ಆದರೆ ಪಕ್ಷ ಯಾವ ಜವಾಬ್ದಾರಿ ಕೊಟ್ಟರೂ ಅದನ್ನು ನಿರ್ವಹಿಸಲು ಸಿದ್ಧನಿದ್ದೇನೆ ಎಂದು ತಿಳಿಸಿದರು. ರಾಜ್ಯಸಭೆಗೆ ಹೋಗುವ ಆಸೆ ಇದೆ ಎಂಬುದನ್ನು ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ. ಅಂತಿಮವಾಗಿ ಪಕ್ಷದ ತೀರ್ಮಾನಕ್ಕೆ

ರಾಜ್ಯಸಭೆ ಚುನಾವಣೆ : ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಆಕಾಂಕ್ಷಿ Read More »

ಪ್ರಜಾಪ್ರಭುತ್ವ ಗೆದ್ದಿದೆ, ದಬ್ಬಾಳಿಕೆ ಸೋತಿದೆ : ಫಾಲ್ಟಾ ಗೆಲುವಿಗೆ ಮೋದಿ ಶ್ಲಾಘನೆ

ಬಿಜೆಪಿಗೆ 1 ಲಕ್ಷಕ್ಕೂ ಅಧಿಕ ಮತಗಳ ಐತಿಹಾಸಿಕ ಜಯ; ಟಿಎಂಸಿಗೆ ಭಾರಿ ಮುಖಭಂಗ ನವದೆಹಲಿ: ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಭದ್ರಕೋಟೆ ಎಂದೇ ಪರಿಗಣಿಸಲ್ಪಟ್ಟಿದ್ದ ಪಶ್ಚಿಮ ಬಂಗಾಳದ ಫಾಲ್ಟಾ ವಿಧಾನಸಭಾ ಕ್ಷೇತ್ರದ ಮರುಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಭರ್ಜರಿ ಜಯಭೇರಿ ಬಾರಿಸಿದೆ. ಟಿಎಂಸಿಯನ್ನು ಧೂಳೀಪಟ ಮಾಡುವ ಮೂಲಕ ಬರೋಬ್ಬರಿ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಯಶಸ್ಸನ್ನು ಶ್ಲಾಘಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ದೇಬಾಂಶು ಪಾಂಡಾ 1,49,666

ಪ್ರಜಾಪ್ರಭುತ್ವ ಗೆದ್ದಿದೆ, ದಬ್ಬಾಳಿಕೆ ಸೋತಿದೆ : ಫಾಲ್ಟಾ ಗೆಲುವಿಗೆ ಮೋದಿ ಶ್ಲಾಘನೆ Read More »

ಗೃಹಲಕ್ಷ್ಮಿ, ಗೃಹಜ್ಯೋತಿ ಗ್ಯಾರಂಟಿಗಳ ಪರಿಷ್ಕರಣೆಗೆ ನಿರ್ಧಾರ

ಯೋಜನೆಯಲ್ಲಿ ಅನರ್ಹ ಫಲಾನುಭವಿಗಳಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ತೀರ್ಮಾನ ಬೆಂಗಳೂರು: ಪಂಚ ಗ್ಯಾರಂಟಿಗಳ ಮೇಲೆ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರ ಕೆಲವು ಗ್ಯಾರಂಟಿಗಳು ದುರುಪಯೋಗವಾಗುತ್ತಿದೆ ಎಂಬ ಕಾರಣವೊಡ್ಡಿ ಪರಿಷ್ಕರಣೆಗೆ ಮುಂದಾಗಿದೆ. 2 ಮಹತ್ವದ ಗ್ಯಾರಂಟಿಗಳಾದ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ಪರಿಷ್ಕರಣೆಗೆ ನಿರ್ಧರಿಸಿದೆ. ಶಾಸಕರು ಹಾಗೂ ಹಿರಿಯ ನಾಯಕರ ಸಭೆಯಲ್ಲಿ ಈ ಪ್ರಮುಖ ತೀರ್ಮಾನ ಕೈಗೊಳ್ಳಲಾಗಿದೆ. ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಪ್ರತಿತಿಂಗಳು 1 ಕೋಟಿ 64 ಲಕ್ಷ ಮಹಿಳೆಯರು 2,000 ರೂ. ಹಣ ಪಡೆಯುತ್ತಿದ್ದಾರೆ. ಗೃಹಜ್ಯೋತಿ ಯೋಜನೆಯಲ್ಲೂ

ಗೃಹಲಕ್ಷ್ಮಿ, ಗೃಹಜ್ಯೋತಿ ಗ್ಯಾರಂಟಿಗಳ ಪರಿಷ್ಕರಣೆಗೆ ನಿರ್ಧಾರ Read More »

ಇಂದು ಬಿಜೆಪಿ ನಾಯಕರ ಮಹತ್ವದ ಸಭೆ

ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಆಗಮನ ಬೆಂಗಳೂರು: ಅಧ್ಯಕ್ಷರೂ ಆಯ್ಕೆಯೂ ಸೇರಿದಂತೆ ಹಲವು ಪ್ರಮುಖ ವಿಚಾರಗಳನ್ನು ಚರ್ಚಿಸುವ ಸಲುವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಬೆಂಗಳೂರಿಗೆ ಆಗಮಿಸಿದ್ದಾರೆ. ನಿತಿನ್ ನಬಿನ್ ಶನಿವಾರ ತಡರಾತ್ರಿ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಬೆಂಗಳೂರಿಗೆ ಚೊಚ್ಚಲ ಭೇಟಿ ನೀಡಿದ್ದು, ವಿಮಾನ ನಿಲ್ದಾಣದಲ್ಲಿ ಅವರನ್ನು ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ವಾಗತಿಸಿದರು. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಿತಿನ್ ನಬಿನ್ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಹಿರಿಯ ನಾಯಕ

ಇಂದು ಬಿಜೆಪಿ ನಾಯಕರ ಮಹತ್ವದ ಸಭೆ Read More »

24 ರಾಜ್ಯಸಭಾ ಸ್ಥಾನಗಳಿಗೆ ಜೂ.18ರಂದು ಚುನಾವಣೆ

ಮಹಾರಾಷ್ಟ್ರ, ತಮಿಳುನಾಡಿನಲ್ಲಿ ಎರಡು ಉಪಚುನಾವಣೆ ನವದೆಹಲಿ: 24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18ರಂದು ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಘೋಷಿಸಿದೆ. ಜೂನ್ 18ರಂದು 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ. ಜೊತೆಗೆ ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಎರಡು ಉಪಚುನಾವಣೆಗಳನ್ನೂ ನಡೆಸಲಾಗುವುದು ಎಂದು ತಿಳಿಸಿದೆ. ಭಾರತೀಯ ಚುನಾವಣಾ ಆಯೋಗವು ಇಂದು ಶುಕ್ರವಾರ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಿಸಿದ್ದು, ಜೂನ್ 18ರಂದು ಮತದಾನ ನಡೆಯಲಿದೆ ಎಂದು ತಿಳಿಸಿದೆ. ಪ್ರಸ್ತುತ ರಾಜ್ಯಸಭಾ ಸದಸ್ಯರ ಅವಧಿ

24 ರಾಜ್ಯಸಭಾ ಸ್ಥಾನಗಳಿಗೆ ಜೂ.18ರಂದು ಚುನಾವಣೆ Read More »

ಪ. ಬಂಗಾಳ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸಿದ ಬಿಜೆಪಿ ಸರ್ಕಾರ

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಮಹತ್ವದ ಕ್ರಮವೊಂದನ್ನು ಜಾರಿಗೆ ತರಲು ಮುಂದಾಗಿದೆ. ಪ. ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಗೀತೆಯನ್ನು ಹಾಡುವುದನ್ನು ‌ಕಡ್ಡಾಯಗೊಳಿಸಿ ಅಲ್ಲಿನ ನೂತನ ಸರ್ಕಾರ ಹೊಸ ಆದೇಶವನ್ನು ಹೊರಡಿಸಿದೆ. ಮದರಸಾ ನಿರ್ದೇಶನಾಲಯದಿಂದ ‌ಮೇ 21 ರಂದು ಈ ಆದೇಶ ಬಂದಿರುವುದಾಗಿದೆ. ಶಾಲೆಗಳಲ್ಲಿ ರಾಷ್ಟ್ರೀಯ ಗೀತೆಗಳನ್ನು ಹಾಡುವುದನ್ನು ಕಳೆದ ವಾರವಷ್ಟೇ ಜಾರಿಗೊಳಿಸಲಾಗಿತ್ತು. ಇದೀಗ ಹೊರಬಿದ್ದಿರುವ ಆದೇಶದ ಪ್ರಕಾರ ಮದರಸಾಗಳು, ಸರ್ಕಾರ ಸಮ್ಮತಿಸಿರುವ ಶಿಕ್ಷಾ ಕೇಂದ್ರಗಳು, ಅನುದಾನಿತ ಮದರಸಾಗಳು, ಮಾಧ್ಯಮಿಕ ಶಿಕ್ಷಾ ಕೇಂದ್ರಗಳಲ್ಲಿ ತರಗತಿ ಆರಂಭಕ್ಕೂ

ಪ. ಬಂಗಾಳ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸಿದ ಬಿಜೆಪಿ ಸರ್ಕಾರ Read More »

ಇಂದು ಕೇಂದ್ರ ಸಚಿವ ಸಂಪುಟದ ಮಹತ್ವದ ಸಭೆ

ತೈಲ ಬೆಲೆ ಏರಿಕೆ, ಹಣದುಬ್ಬರದ ಕುರಿತು ಪ್ರಮುಖ ನಿರ್ಧಾರ ಕೈಗೊಳ್ಳುವ ಸಾಧ್ಯತೆ ದೆಹಲಿಯಲ್ಲಿ ಇಂದು ಪಿಎಂ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟದ ಮಹತ್ವದ ಸಭೆ; ಪಶ್ಚಿಮ ಏಷ್ಯಾ ಸಂಘರ್ಷ ಮತ್ತು ಸಂಪುಟ ಪುನಾರಚನೆ ಕುರಿತು ಚರ್ಚೆ ಸಾಧ್ಯತೆ ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಗುರುವಾರ ಸಂಜೆ 4 ಗಂಟೆಗೆ ದೆಹಲಿಯ ‘ಸೇವಾ ತೀರ್ಥ’ದಲ್ಲಿ ಕೇಂದ್ರ ಸಚಿವ ಸಂಪುಟದ ಮಹತ್ವದ ಸಭೆ ನಡೆಸಲಿದ್ದಾರೆ. ಸರ್ಕಾರದೊಳಗೆ ರಾಜಕೀಯ ಮತ್ತು ಆರ್ಥಿಕ ವಿಷಯಗಳ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ

ಇಂದು ಕೇಂದ್ರ ಸಚಿವ ಸಂಪುಟದ ಮಹತ್ವದ ಸಭೆ Read More »

ಮೇ 23ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನವೀನ್‌ ಕರ್ನಾಟಕ ಭೇಟಿ

ರಾಜ್ಯಾಧ್ಯಕ್ಷರ ಆಯ್ಕೆ, ಕೋರ್‌ ಕಮಿಟಿ ಪುನಾರಚನೆ ಕುರಿತು ಚರ್ಚೆ ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಮೇ 23 ಮತ್ತು 24ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ನಿತಿನ್‌ ನವೀನ್‌ ಅವರ ಮೊದಲ ಅಧಿಕೃತ ಕರ್ನಾಟಕ ಭೇಟಿ ಇದಾಗಿರುತ್ತದೆ. ಅವರು ರಾಜ್ಯದ ಪ್ರಮುಖ ನಾಯಕರೊಂದಿಗೆ ಸರಣಿ ಸಭೆಗಳನ್ನು ನಡೆಸಿ, ಮುಂಬರುವ ಚುನಾವಣೆಗಳನ್ನು ಎದುರಿಸಲು ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಹೊಸ ‘ಟಾಸ್ಕ್’ ನೀಡಲಿದ್ದಾರೆ ಎನ್ನಲಾಗಿದೆ. ದೇಶದಲ್ಲಿ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಗೊಂಡು ಸರ್ಕಾರ

ಮೇ 23ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನವೀನ್‌ ಕರ್ನಾಟಕ ಭೇಟಿ Read More »

ವಿಜಯ್‌ ಸರ್ಕಾರಕ್ಕೆ ಆರಂಭದಲ್ಲೇ ಅಸ್ಥಿರತೆಯ ಭೀತಿ

ಬೆಂಬಲ ಹಿಂದೆಗೆದುಕೊಳ್ಳುವ ಬೆದರಿಕೆ ಹಾಕಿದ ಎಡಪಕ್ಷ ಚೆನ್ನೈ : ತಮಿಳುನಾಡಿನಲ್ಲಿ ಅಚ್ಚರಿಯ ಬಹುಮತ ಪಡೆದು ಸರ್ಕಾರ ರಚಿಸಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ ಸರ್ಕಾರಕ್ಕೆ ಆರಂಭದಲ್ಲೇ ಅಸ್ಥಿರತೆ ಎದುರಾಗಿದೆ. ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತದ ಕೊರತೆಯಿಂದಾಗಿ ಮಿತ್ರಪಕ್ಷಗಳ ಬಾಹ್ಯ ಬೆಂಬಲದೊಂದಿಗೆ ಸರ್ಕಾರ ರಚಿಸಿದ್ದ ವಿಜಯ್ ಅವರಿಗೆ ಈಗ ಎಡಪಕ್ಷಗಳು ಬೆಂಬಲ ಹಿಂತೆಗೆದುಕೊಳ್ಳುವ ನೇರ ಎಚ್ಚರಿಕೆ ನೀಡಿವೆ. ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರ ಟಿವಿಕೆ ಪಕ್ಷ 108

ವಿಜಯ್‌ ಸರ್ಕಾರಕ್ಕೆ ಆರಂಭದಲ್ಲೇ ಅಸ್ಥಿರತೆಯ ಭೀತಿ Read More »

error: Content is protected !!
Scroll to Top