ದ.ಕ. ಜಿಲ್ಲೆಯ ಕಾಡಂಚು ಪ್ರದೇಶಗಳಲ್ಲಿ ಕಾಡಾನೆ ದಾಳಿ: ಅರಣ್ಯ ಸಚಿವರನ್ನು ತರಾಟೆಗೆ ತೆಗೆದುಕೊಂಡ ಕಿಶೋರ್ ಕುಮಾರ್
ಪುತ್ತೂರು: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಉಡುಪಿ–ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಜಿಲ್ಲೆಯ ಕಾಡಂಚಿನ ಜನರನ್ನು ದಿನದಿಂದ ದಿನಕ್ಕೆ ಸಂಕಷ್ಟಕ್ಕೆ ಒಳಪಡಿಸುತ್ತಿರುವ ಕಾಡಾನೆ ದಾಳಿಯ ಗಂಭೀರ ಸಮಸ್ಯೆ ಕುರಿತು ಅರಣ್ಯ ಸಚಿವರನ್ನು ಪ್ರಶ್ನಿಸಿದರು. ಕಳೆದ ಅಧಿವೇಶನದಲ್ಲಿ ಸಚಿವರು ದಕ್ಷಿಣ ಕನ್ನಡದಲ್ಲಿ ಎಲಿಫಂಟ್ ಟಾಸ್ಕ್ ಫೋರ್ಸ್ (ETF) ಸ್ಥಾಪಿಸುವುದಾಗಿ ಹಾಗೂ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸುವುದಾಗಿ ಘೋಷಣೆ ಮಾಡಿದ್ದರೂ ಕೂಡ, ಇವತ್ತು ತನಕ ಯಾವುದೇ ಭೇಟಿ ನಡೆದಿಲ್ಲ […]










