ರಾಜಕೀಯ

ಮನೆ ಮನೆಮತದಾನ ಪ್ರಕ್ರಿಯೆಗೆ  ಚಾಲನೆ

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಅಂಚೆ ಮತಪತ್ರದ ಮೂಲಕ ಮತದಾನ ಮಾಡುವ ಪ್ರಕ್ರಿಯೆಗೆ ಚಾಲನೆ ದೊರಕಿದೆ. ಏ. 17ರ ವರೆಗೆ ಅಂಚೆ ಮತಪತ್ರದ ಮೂಲಕ ಮತದಾನ ನಡೆಯಲಿದೆ. ದ.ಕ.ದಲ್ಲಿ 85 ವರ್ಷ ಮೇಲ್ಪಟ್ಟ 6,053 ಮತದಾರರಿಗೆ ಹಾಗೂ ಶೇ. 40ಕ್ಕಿಂತ ಮೇಲ್ಪಟ್ಟು ಅಂಗವೈಕಲ್ಯ ಹೊಂದಿರುವ 1,957 ಮತದಾರರು ಸಹಿತ 8,010 ಮಂದಿಯ ಮನೆಮನೆ ಭೇಟಿ ಮಾಡಿ ಅಂಚೆ ಮತಪತ್ರದ ಮೂಲಕ ಮತದಾನ ಸೌಲಭ್ಯ ಒದಗಿಸಲಾಗಿದೆ. ಈ ಪೈಕಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ […]

ಮನೆ ಮನೆಮತದಾನ ಪ್ರಕ್ರಿಯೆಗೆ  ಚಾಲನೆ Read More »

ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ| ಬೃಹತ್ ಸಂಖ್ಯೆಯಲ್ಲಿ ಸೇರಿದ ಜನಸಮೂಹ

ಮಂಗಳೂರು: ಲೋಕಸಭೆ ಚುನಾವಣಾ ಪ್ರಚಾರಕ್ಕೆಂದು ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ರೋಡ್ ಶೋದಲ್ಲಿ ಪಾಲ್ಗೊಂಡರು. ಇದಕ್ಕೂ ಮುನ್ನ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ ವಿಜಯಸಂಕಲ್ಪ ಬೃಹತ್ ಸಮಾವೇಶ ಮುಗಿಸಿದ ಬಳಿಕ ಪ್ರಧಾನಿ ಮೋದಿ ಮಂಗಳೂರು ತಲುಪಿದರು. ವಿಶೇಷ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಅವರು, ಕೆಂಜಾರಿನಿಂದ ನೇರವಾಗಿ ಲೇಡಿಹಿಲ್ ನಾರಾಯಣ ಗುರು ವೃತ್ತಕ್ಕೆ ಆಗಮಿಸಿ ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ರೋಡ್ ಶೋ ಆರಂಭಿಸಿದರು. ಲಾಲ್

ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ| ಬೃಹತ್ ಸಂಖ್ಯೆಯಲ್ಲಿ ಸೇರಿದ ಜನಸಮೂಹ Read More »

ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ವಿಜಯ ಪೂಜಾರಿ ಬಿಜೆಪಿ ಸೇರ್ಪಡೆ

ಪುತ್ತೂರು: ಕಾಂಗ್ರೇಸ್ ನಾಯಕರ ವರ್ತನೆ ಹಾಗೂ ರಾಜ್ಯದಲ್ಲಿ ಕಾಂಗ್ರೇಸ್ ಸರಕಾರ ಬಂದು ಹತ್ತು ತಿಂಗಳು ಕಳೆದರೂ ಯಾವುದೇ ಅಭಿವೃದ್ಧಿ ಕಾರ್ಯಗಳು ಗ್ರಾಮದಲ್ಲಿ  ಆಗದೇ ಇರುವುದರಿಂದ ಬೇಸತ್ತು ಪಡ್ನೂರು ಗ್ರಾಮ ಹಾಗೂ ಬನ್ನೂರು ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತ ವಿಜಯ ಪೂಜಾರಿಯವರು ಬಿಜೆಪಿ ಸೇರ್ಪಡೆಗೊಂಡರು. ಮಾಜಿ ಶಾಸಕ ಸಂಜೀವ ಮಠಂದೂರು ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರ ಮಾಡಿಕೊಂಡರು. ಈ ಸಂದರ್ಭದಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವಾ, ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ,

ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ವಿಜಯ ಪೂಜಾರಿ ಬಿಜೆಪಿ ಸೇರ್ಪಡೆ Read More »

ಬೆಟ್ಟಂಪಾಡಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು: ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇನ್ನಷ್ಟು ಗ್ಯಾರಂಟಿಗಳು ಅನುಷ್ಠಾನಗೊಳ್ಳಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಬೆಟ್ಟಂಪಾಡಿ ಗ್ರಾಮದ ರೆಂಜದಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಈ ದೇಶವನ್ನು 60 ವರ್ಷಗಳ ಕಾಲ ಆಳಿ ಸಾಕಷ್ಟು ಅಭಿವೃದ್ದಿ ಕೆಲಸವನ್ನು ಮಾಡಿ ದೇಶವನ್ನು ಅಭಿವೃದ್ದಿಯತ್ತ ಕೊಂಡೊಯ್ದಿತ್ತು. ಆದರೆ ಕಳೆದ ಹತ್ತು ವರ್ಷ ಆಡಳಿತ ಮಾಡಿದವರು ಎಲ್ಲವನ್ನೂ ಲಗಾಡಿ ತೆಗೆದಿದ್ದಾರೆ. ಕಾಂಗ್ರೆಸ್ ಸರಕಾರ ಇದ್ದಾಗ ಜನ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದರು.

ಬೆಟ್ಟಂಪಾಡಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ Read More »

ರಾಜ್ಯ ಬಿಜೆಪಿ ಆರ್ಥಿಕ ಪ್ರಕೋಷ್ಠದ ಸಹ ಸಂಚಾಲಕರಾಗಿ ಹೇಮಂತ್ ರೈ

ಕಡಬ: ರಾಜ್ಯ ಬಿಜೆಪಿ ಆರ್ಥಿಕ ಪ್ರಕೋಷ್ಠದ ಸಹ ಸಂಚಾಲಕರಾಗಿ ಆಲಂಕಾರಿನ‌ ಮನವಳಿಕೆಗುತ್ತು ಹೇಮಂತ್ ರೈ ಯವರನ್ನು ಆಯ್ಕೆ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರವರು ಆದೇಶ ಹೊರಡಿಸಿದ್ದಾರೆ. ಕಡಬ ತಾಲೂಕು ಆಲಂಕಾರು ಸಮೀಪದ ಮನವಳಿಕೆ ಗುತ್ತುವಿನ ಹೇಮಂತ್ ರವರು ಪ್ರವಾಸೋದ್ಯಮ ಉದ್ಯಮಿಯಾಗಿದ್ದಾರೆ. ಈ ಹಿಂದೆ ಪ್ರತಿಷ್ಠಿತ ಕಂಪೆನಿಗಳಲ್ಲಿ ಉನ್ನತ ಹುದ್ದೆಗಳಲ್ಲಿದ್ದರು. ಎಂಬಿಎ, ಎಲ್.ಎಲ್.ಬಿ ಪದವೀಧರರಾಗಿರುವ ಅವರು ಬೆಂಗಳೂರು ಉತ್ತರ ಜಿಲ್ಲೆಯ ಬಿಜೆಪಿ ವೃತ್ತಿಪರರ ಪ್ರಕೋಷ್ಠದ ಸಂಚಾಲಕರಾಗಿದ್ದರು. ಬಾಲ್ಯದಿಂದಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಕ್ರೀಯ ಕಾರ್ಯಕರ್ತರಾಗಿದ್ದು

ರಾಜ್ಯ ಬಿಜೆಪಿ ಆರ್ಥಿಕ ಪ್ರಕೋಷ್ಠದ ಸಹ ಸಂಚಾಲಕರಾಗಿ ಹೇಮಂತ್ ರೈ Read More »

ನಾಳೆ ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್‍ ಶೋ | ಪುತ್ತೂರಿನ 5 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಸ್ವ ಇಚ್ಚೆಯಿಂದ ಭಾಗಿ : ಸಂಜೀವ ಮಠಂದೂರು

ಪುತ್ತೂರು: ಮಂಗಳೂರಿನಲ್ಲಿ ನಾಳೆ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋಗೆ ಪುತ್ತೂರಿನಿಂದ 5 ಸಾವಿರಕ್ಕೂ ಮಿಕ್ಕಿ ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಪುತ್ತೂರು ವಿಧಾನಸಭೆಯ ಎಲ್ಲಾ ಬೂತ್ ಗಳಿಂದ ಕಾರ್ಯಕರ್ತರು ಸ್ವ ಇಚ್ಛೆಯಿಂದ ತಮ್ಮ ತಮ್ಮ ವಾಹನದಲ್ಲಿ ಮಂಗಳೂರಿಗೆ ತೆರಳಲಿದ್ದಾರೆ ಎಂದು ತಿಳಿಸಿದರು. ಮಂಗಳೂರಿನಲ್ಲಿ ನಡೆಯುವ ಮೋದಿ ರೋಡ್ ಶೋ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 4 ಲಕ್ಷಕ್ಕೂ ಮಿಕ್ಕಿದ ಮತಗಳಲ್ಲಿ ಗೆಲ್ಲಿಸುವ ಕಾರ್ಯಕ್ರಮದ

ನಾಳೆ ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್‍ ಶೋ | ಪುತ್ತೂರಿನ 5 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಸ್ವ ಇಚ್ಚೆಯಿಂದ ಭಾಗಿ : ಸಂಜೀವ ಮಠಂದೂರು Read More »

ಸಿಎಂ ಸಿದ್ಧರಾಮಯ್ಯ , ಡಿಕೆ ಶಿವಕುಮಾರ್ ಚುನಾವಣೆ ಪ್ರಚಾರ ಮುಂದೂಡಿಕೆ

ಪುತ್ತೂರು :ಪುತ್ತೂರಿನಲ್ಲಿ ನಡೆಯಬೇಕಿದ್ದ ಸಿಎಂ ಸಿದ್ಧರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಚುನಾವಣೆ ಪ್ರಚಾರ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ಏ.16 ಮಂಗಳವಾರ ಚುನಾವಣಾ ಪ್ರಚಾರ ಸಭೆ ನಿಗದಿಪಡಿಸಲಾಗಿತ್ತು. ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಶಾಸಕ ಅಶೋಕ ರೈ ತಿಳಿಸಿದ್ದಾರೆ.

ಸಿಎಂ ಸಿದ್ಧರಾಮಯ್ಯ , ಡಿಕೆ ಶಿವಕುಮಾರ್ ಚುನಾವಣೆ ಪ್ರಚಾರ ಮುಂದೂಡಿಕೆ Read More »

ಏ. 16: ಪುತ್ತೂರಿಗೆ ಸಿಎಂ ಸಿದ್ಧರಾಮಯ್ಯ, ಡಿ.ಕೆ ಶಿವಕುಮಾರ್ ಭೇಟಿ.

ಪುತ್ತೂರು : ಚುನಾವಣಾ ಪ್ರಚಾರ ಸಭೆಗೆ ಭಾಗವಹಿಸಲು ಸಿಎಂ ಸಿದ್ಧರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಏ. 16 ರಂದು ಪುತ್ತೂರಿಗೆ ಆಗಮಿಸಲಿದ್ದು, ಕಿಲ್ಲೆ ಮೈದಾನದಲ್ಲಿ ಬೃಹತ್‌ ಚುನಾವಣಾ ಪ್ರಚಾರ ಸಭೆ ನಡೆಯಲಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದರು. ಮಧ್ಯಾಹ್ನ 3 ಗಂಟೆಗೆ ಮೊಟ್ಟೆತ್ತಡ್ಕ ಹೆಲಿಪ್ಯಾಡ್ ನಲ್ಲಿ ಬಂದಿಳಿಯಲಿದ್ದು, ಆ ಬಳಿಕ ಕಿಲ್ಲೆ ಮೈದಾನದಲ್ಲಿ ಸಮಾವೇಶದಲ್ಲಿ ಭಾಗವಹಿಸಲಿದ್ದು, ಸಂಜೆ 5 ಗಂಟೆಗೆ ನಿರ್ಗಮಿಸಲಿದ್ದಾರೆ.ಕಾರ್ಯಕ್ರಮದಲ್ಲಿ 15 ಸಾವಿರಕ್ಕೂ ಮಿಕ್ಕಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಜಿಲ್ಲಾ

ಏ. 16: ಪುತ್ತೂರಿಗೆ ಸಿಎಂ ಸಿದ್ಧರಾಮಯ್ಯ, ಡಿ.ಕೆ ಶಿವಕುಮಾರ್ ಭೇಟಿ. Read More »

ಚುನಾವಣೆ ನೀತಿ ಸಂಹಿತೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು : ಬಿ.ಮುರಳಿ ಕುಮಾರ್

ಮಂಗಳೂರು : ಪ್ರತಿಯೊಂದು ಘಟನೆಯನ್ನು ಸೂಕ್ಷ್ಮವಾಗಿ ಗಮನಿಸಿ ಅಭ್ಯರ್ಥಿಗಳ ವೆಚ್ಚದ ಬಗ್ಗೆ ನಿಗಾವಹಿಸಬೇಕು.ಮುಕ್ತ ಹಾಗೂ ಪಾರದರ್ಶಕ ಚುನಾವಣೆಗೆ ಮಾದರಿ ನೀತಿ ಸಂಹಿತೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ಎಂದು ರಾಜ್ಯಕ್ಕೆ ನಿಯೋಜನೆಗೊಂಡ ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ್ ನಿರ್ದೇಶನ ನೀಡಿದರು. ಅವರು ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಕುರಿತಂತೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆಯಲ್ಲಿ  ಮಾತನಾಡಿದರು. ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ವೆಚ್ಚಗಳ ಬಗ್ಗೆ ವಿಶೇಷ ನಿಗಾವಹಿಸುವಂತೆ  ಮತ್ತು ಕಾಲಕಾಲಕ್ಕೆ ಪರಿಶೀಲಿಸುವಂತೆ ಸೂಚಿಸಿದರು.ಚುನಾವಣಾ ಅವಧಿಯಲ್ಲಿ

ಚುನಾವಣೆ ನೀತಿ ಸಂಹಿತೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು : ಬಿ.ಮುರಳಿ ಕುಮಾರ್ Read More »

ನಾವು ಯಾರನ್ನೂ ದ್ವೇಷಿಸಿಲ್ಲ. ಪ್ರೀತಿಯಿಂದಲೇ ಜನರ ಬಳಿಗೆ ಹೋಗಿದ್ದೇವೆ : ಪದ್ಮರಾಜ್ ಆರ್. ಪೂಜಾರಿ

ಬೆಳ್ತಂಗಡಿ : ನಾವು ಯಾರನ್ನೂ ದ್ವೇಷಿಸಿಲ್ಲ. ಪ್ರೀತಿಯಿಂದಲೇ ಜನರ ಬಳಿಗೆ ಹೋಗಿದ್ದೇವೆ. ಹಾಗಾಗಿ ಮುವತ್ತ್ಮೂರು ವರ್ಷಗಳ ಸರಪಳಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮುರಿಯಲಿದೆ. ಕಾಂಗ್ರೆಸ್ ಜಿಲ್ಲೆಯಲ್ಲಿ ಗೆಲುವು ಪಡೆಯುವುದು ನಿಶ್ಚಿತ  ಎಂದು  ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನಗರ ಹಾಗೂ ಗ್ರಾಮೀಣ ಘಟಕದ ಮುಖಂಡರು, ಕಾರ್ಯಕರ್ತರ ಸಭೆ ಬೆಳ್ತಂಗಡಿ ಕಾಂಗ್ರೆಸ್ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಹಿಂದುಳಿದ ವರ್ಗದ ಸಮುದಾಯಗಳ ಸಭೆಯನ್ನು ಮಂಗಳೂರಿನಲ್ಲಿ ಕರೆದಿದ್ದೇವು. ಎಲ್ಲಾ

ನಾವು ಯಾರನ್ನೂ ದ್ವೇಷಿಸಿಲ್ಲ. ಪ್ರೀತಿಯಿಂದಲೇ ಜನರ ಬಳಿಗೆ ಹೋಗಿದ್ದೇವೆ : ಪದ್ಮರಾಜ್ ಆರ್. ಪೂಜಾರಿ Read More »

error: Content is protected !!
Scroll to Top