ರಾಜಕೀಯ

ಡಿಕೆಶಿಗಿಲ್ಲ ಕುರ್ಚಿ : ಬಿಜೆಪಿಯ ಎಐ ವಿಡಿಯೋ ವೈರಲ್‌

ಕಾಂಗ್ರೆಸ್‌ಗೆ ಮುಜುಗರ ತಂದ ವಿಡಿಯೋ ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಡುವೆ ನಡೆಯುತ್ತಿರುವ ಕುರ್ಚಿ ಕಿತ್ತಾಟದ ಹಿನ್ನೆಲೆಯಲ್ಲಿ ಬಿಜೆಪಿ ಭಾನುವಾರ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿಕೊಂಡು ಎಕ್ಸ್‌ನಲ್ಲಿ ಬಿಡುಗಡೆಗೊಳಿಸಿದ ಕೃತಕ ಬುದ್ಧಿಮತ್ತೆ (ಎಐ) ಬಳಸಿ ತಯಾರಿಸಿದ ವಿಡಿಯೋ ಸಿಕ್ಕಾಪಟ್ಟೆ ವೈರಲ್‌ ಆಗಿ ಕಾಂಗ್ರೆಸ್ಸನ್ನು ಮುಜುಗರಕ್ಕೀಡುಮಾಡಿದೆ. ಡಿ.ಕೆ ಶಿವಕುಮಾರ್ ಅವರಿಗೆ ‘ನೋ ಚೇರ್ ನವೆಂಬರ್’ ಎಂಬ ಶೀರ್ಷಿಕೆಯೊಂದಿಗೆ ಬಿಜೆಪಿ ಕರ್ನಾಟಕ ಎಐ ವಿಡಿಯೋವನ್ನು ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರ […]

ಡಿಕೆಶಿಗಿಲ್ಲ ಕುರ್ಚಿ : ಬಿಜೆಪಿಯ ಎಐ ವಿಡಿಯೋ ವೈರಲ್‌ Read More »

ಜಾತಿ ಗಣತಿ : ಇಂದು ಆನ್‌ಲೈನ್‌ ಸಮೀಕ್ಷೆ ಮುಕ್ತಾಯ

6.13 ಕೋಟಿ ಜನರ ಸಮೀಕ್ಷೆ ಪೂರ್ಣ ಬೆಂಗಳೂರು : ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದ್ದು, ಆನ್‍ಲೈನ್ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸೋಮವಾರ(ನ.10) ಕೊನೆಯ ದಿನವಾಗಿದೆ. ಇದುವರೆಗೆ 6.13 ಕೋಟಿ ಜನರ ಸಮೀಕ್ಷೆ ಪೂರ್ಣಗೊಂಡಿದೆ ಎಂದು ಹಿಂದುಳಿದ ವರ್ಗಗಳ ಆಯೋಗವು ಮಾಹಿತಿ ನೀಡಿದೆ. ರಾಜ್ಯದಲ್ಲಿರುವ ಪರಿಶಿಷ್ಟ ಜಾತಿ, ಪಂಗಡ, ಇತರ ಹಿಂದುಳಿದ ವರ್ಗ ಸೇರಿ ಎಲ್ಲ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆ.22ರಿಂದ ಆರಂಭಿಸಲಾಗಿತ್ತು. ಅ.31ರವರೆಗೆ ಸಮೀಕ್ಷಾದಾರರನ್ನು ನೇಮಕ ಮಾಡಿ,

ಜಾತಿ ಗಣತಿ : ಇಂದು ಆನ್‌ಲೈನ್‌ ಸಮೀಕ್ಷೆ ಮುಕ್ತಾಯ Read More »

ಕಬ್ಬಿಗೆ 3,300 ರೂ. ನಿಗದಿ ಮಾಡಿರುವ ಸರ್ಕಾರದ ನಿಲುವು ಸಮ್ಮತವಲ್ಲ: ರೈತರಿಂದ ಧರಣಿ

ಬೆಳಗಾವಿ: ಕಬ್ಬಿಗೆ 3,300 ರೂ. ಬೆಲೆ ನಿಗದಿ ಮಾಡಿರುವ ರಾಜ್ಯ ಸರ್ಕಾರದ ನಡೆಗೆ ಮುಧೋಳ ಭಾಗದ ರೈತರು ಅಸಮಾಧಾನ ವ್ಯಕ್ತಪಡಿಸಿದ್ದು, ತಮ್ಮ ಬೇಡಿಕೆಗೆ ಸ್ಪಂದಿಸದೇ ಇದ್ದಲ್ಲಿ ಹೋರಾಟ ತೀವ್ರ ಸ್ವರೂಪ ಪಡೆಯುವ ಎಚ್ಚರಿಕೆಯನ್ನು ಸರ್ಕಾರಕ್ಕೆ ರವಾನಿಸಿದ್ದಾರೆ. ಮುಧೋಳದ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಸಾವಿರಾರು ರೈತರು ಸೇರಿ ಸರ್ಕಾರದ ವಿರುದ್ಧ ಧರಣಿ ಮಾಡಿದ್ದಾರೆ. ಸರ್ಕಾರ ನಿಗದಿ ಮಾಡಿರುವ ಬೆಲೆ ತಮಗೆ ಸಾಲುವುದಿಲ್ಲ. ಇದು ರೈತರಿಗೆ ಮಾಡುತ್ತಿರುವ ಅನ್ಯಾಯ. ಕಬ್ಬು ಟನ್‌ಗೆ 3,500 ರೂ. ಇರಲೇಬೇಕು ಎಂದು ಆಗ್ರಹಿಸಿದ್ದಾರೆ.

ಕಬ್ಬಿಗೆ 3,300 ರೂ. ನಿಗದಿ ಮಾಡಿರುವ ಸರ್ಕಾರದ ನಿಲುವು ಸಮ್ಮತವಲ್ಲ: ರೈತರಿಂದ ಧರಣಿ Read More »

ಡಿ.1-19 ರ ವರೆಗೆ ಸಂಸತ್ ಚಳಿಗಾಲದ ಅಧಿವೇಶನ ನಡೆಸಲು ರಾಷ್ಟ್ರಪತಿ ಸಮ್ಮತಿ

ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ನಡೆಸಲು ಡಿ. 1 ರಿಂದ 19 ರ ವರೆಗೆ ಅವಕಾಶ ನೀಡುವಂತೆ ಕೇಂದ್ರ ಸರ್ಕಾರ ಮಾಡಿದ ಮನವಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಕಿರಣ್ ರಿಜಿಜು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಮುಂಬರುವ ಚಳಿಗಾಲದ ಅಧಿವೇಶನ ನಮ್ಮ ಪ್ರಜಾಪ್ರಭುತ್ವವನ್ನು ಬಲಗೊಳಿಸಲು ಹಾಗೂ ಜನರ ಸೇವೆಯನ್ನು ಮುಂದುವರಿಸುವ ನಿಟ್ಟಿನಲ್ಲಿ ಅರ್ಥಪೂರ್ಣವಾಗಿ ನಡೆಯಲು ಎಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದ್ದಾರೆ. ಜುಲೈ 21ರಂದು ಆರಂಭಗೊಂಡಿದ್ದ ಚಳಿಗಾಲದ

ಡಿ.1-19 ರ ವರೆಗೆ ಸಂಸತ್ ಚಳಿಗಾಲದ ಅಧಿವೇಶನ ನಡೆಸಲು ರಾಷ್ಟ್ರಪತಿ ಸಮ್ಮತಿ Read More »

ಕಬ್ಬು ಬೆಳೆಗಾರರ ಹೋರಾಟ: ಸಕ್ಕರೆ ಕಾರ್ಖಾನೆ ಮಾಲಕರ ಜೊತೆ ಸಿಎಂ ‌ಸಿದ್ದು ಸಭೆ

ಬೆಳಗಾವಿ: ಕಬ್ಬಿನ ಬೆಲೆ ಟನ್‌ಗೆ ಮೂರೂವರೆ ಸಾವಿರ ರೂ. ಗಳಿಗೆ ಏರಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ಸರ್ಕಾರದ ವಿರುದ್ಧ ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದಿದೆ. ಈ ನಡುವೆ ಸಿಎಂ ‌ಸಿದ್ದರಾಮಯ್ಯ ಅವರು ಸಕ್ಕರೆ ಕಾರ್ಖಾನೆ ಮಾಲಕರ ಜೊತೆಗೆ ತುರ್ತು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮೂವತ್ತೆಂಟಕ್ಕೂ ಹೆಚ್ಚು ಸಕ್ಕರೆ ಕಾರ್ಖಾನೆ ಮಾಲಕರು, ಆಡಳಿತ ಮಂಡಳಿಯ ಪ್ರತಿನಿಧಿಗಳು ಭಾಗವಹಿಸಿದ್ದಾರೆ. ಸಿಎಂ ಅವರು ಈ‌ ಸಭೆಯಲ್ಲಿ ರೈತರಿಗೆ ಮಾಡಬಹುದಾದ ನ್ಯಾಯಯುತ ಬೆಲೆಗೆ ಸಂಬಂಧಿಸಿದ ಹಾಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಕಬ್ಬು ಬೆಳೆಗಾರರ ಹೋರಾಟ: ಸಕ್ಕರೆ ಕಾರ್ಖಾನೆ ಮಾಲಕರ ಜೊತೆ ಸಿಎಂ ‌ಸಿದ್ದು ಸಭೆ Read More »

ಆರ್‌ಎಸ್‌ಎಸ್‌ಗೆ ಅಂಕುಶ ಹಾಕಲು ಹೊರಟ ಸರ್ಕಾರಕ್ಕೆ ಮತ್ತೆ ಹಿನ್ನಡೆ

ಸಾರ್ವಜನಿಕ ಸ್ಥಳ ಬಳಕೆ ಅಧಿಸೂಚನೆ ಮೇಲ್ಮನವಿ ಹೈಕೋರ್ಟಿನಲ್ಲಿ ವಜಾ ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಾ ಸಂಘಟನೆಯನ್ನು ನಿಷೇಧಿಸಲು ಮುಂದಾಗಿರುವ ರಾಜ್ಯ ಸರ್ಕಾರಕ್ಕೆ ಹೈಕೋರ್ಟಿನಲ್ಲಿ ಇಂದು ಮತ್ತೊಂದು ಹಿನ್ನಡೆಯಾಗಿದೆ. ಆರ್​​ಎಸ್​ಎಸ್‌ಗೆ ಅಂಕುಶ ಹಾಕಲು ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ಸರ್ಕಾರದ ಪರವಾಗಿ ಸಲ್ಲಿಕೆಯಾದ ಮೇಲ್ಮನವಿಯನ್ನ ಹೈಕೋರ್ಟ್ ದ್ವಿಸದಸ್ಯ ಪೀಠ ವಜಾಗೊಳಿಸಿ ಏಕಸದಸ್ಯ ಪೀಠದಲ್ಲೇ ಇದನ್ನ ಇತ್ಯರ್ಥ ಮಾಡಿಕೊಳ್ಳಿ ಎಂದು ಧಾರವಾಡದ ವಿಭಾಗೀಯ ಪೀಠ ತಿಳಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಜಾಗಗಳಲ್ಲಿ ಆರ್​​ಎಸ್​ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಬಗ್ಗೆ

ಆರ್‌ಎಸ್‌ಎಸ್‌ಗೆ ಅಂಕುಶ ಹಾಕಲು ಹೊರಟ ಸರ್ಕಾರಕ್ಕೆ ಮತ್ತೆ ಹಿನ್ನಡೆ Read More »

ರಾಹುಲ್‌ ಗಾಂಧಿ ತೋರಿಸಿದ್ದು ಬ್ರಝಿಲ್‌ ರೂಪದರ್ಶಿಯ ಹಳೆಯ ಫೋಟೊ!

ಹರಿಯಾಣದಲ್ಲಿ ಮತ ಕಳ್ಳತನ ಆರೋಪಕ್ಕೆ ಬಳಸಿದ್ದ ಫೊಟೊ ನವದೆಹಲಿ : ನಿನ್ನೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹರಿಯಾಣದಲ್ಲಿ ಭಾರಿ ಪ್ರಮಾಣದ ಮತಕಳ್ಳತನವಾಗಿದೆ ಎಂದು ಆರೋಪಿಸಲು ಬಳಸಿಕೊಂಡಿದ್ದ ಯುವತಿಯ ಫೋಟೊ ಬ್ರಝಿಲ್‌ನ ಮೋಡೆಲ್‌ ಒಬ್ಬರ ಹಳೆಯ ಫೋಟೊ ಎನ್ನುವುದು ಬಹಿರಂಗವಾಗಿದೆ.ಬ್ರಝಿಲ್‌ನ ರೂಪದರ್ಶಿ ಲಾರಿಸ್ಸಾ ಎಂಬವರ ಫೋಟೊ ಇದು ಎನ್ನುವುದು ಖಾಸಗಿ ವಾಹಿನಿಗಳು ನಡೆಸಿದ ತನಿಖೆಯಿಂದ ಗೊತ್ತಾಗಿದೆ. ಸ್ವತಹ ಲಾರಿಸ್ಸಾ ಈ ವಿಚಿತ್ರ ವಿದ್ಯಮಾನಕ್ಕೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಬುಧವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಬಿಜೆಪಿ ಚುನಾವಣಾ

ರಾಹುಲ್‌ ಗಾಂಧಿ ತೋರಿಸಿದ್ದು ಬ್ರಝಿಲ್‌ ರೂಪದರ್ಶಿಯ ಹಳೆಯ ಫೋಟೊ! Read More »

1 ಗಂಟೆಯಲ್ಲಿ 20 ಮತ ಹಾಕುವುದು ಸಾಧ್ಯನಾ? : ರಾಹುಲ್‌ ಗಾಂಧಿ ಆರೋಪಕ್ಕೆ ಬಿಜೆಪಿ ವ್ಯಂಗ್ಯ

ಕಾಂಗ್ರೆಸ್‌ ನಾಯಕ ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ಟೀಕೆ ನವದೆಹಲಿ: ಹರಿಯಾಣದಲ್ಲಿ ವೋಟ್‌ ಚೋರಿ ನಡೆದಿದೆ ಎಂಬ ರಾಹುಲ್‌ ಗಾಂಧಿ ಆರೋಪವನ್ನು ಬಿಜೆಪಿ ವ್ಯಂಗ್ಯ ಮಾಡಿದೆ. ಯಾರಾದ್ರೂ ಒಂದು ಗಂಟೆಯಲ್ಲಿ 20 ಹಾಕುವುದಕ್ಕೆ ಸಾಧ್ಯವಾ ಎಂದು ಬಿಜೆಪಿ ಪ್ರಶ್ನಿಸಿದೆ. ನಿನ್ನೆ ಸುದ್ದಿಗೋಷ್ಠಿ ನಡೆಸಿದ ರಾಹುಲ್‌ ಗಾಂಧಿ, ಹರಿಯಾಣದಲ್ಲಿ ದೊಡ್ಡ ಪ್ರಮಾಣದ ಮತದಾರರ ವಂಚನೆ ನಡೆದಿದೆ. ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಅಪಖ್ಯಾತಿಗೊಳಿಸುವ ಪ್ರಯತ್ನ ಎಂದು ಆರೋಪಿಸಿದ್ದರು. ಅದಕ್ಕೆ ಬಿಜೆಪಿ ತಿರುಗೇಟು ನೀಡಿದೆ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಭಾರತ

1 ಗಂಟೆಯಲ್ಲಿ 20 ಮತ ಹಾಕುವುದು ಸಾಧ್ಯನಾ? : ರಾಹುಲ್‌ ಗಾಂಧಿ ಆರೋಪಕ್ಕೆ ಬಿಜೆಪಿ ವ್ಯಂಗ್ಯ Read More »

ಬಿಹಾರದಲ್ಲಿ ಮೊದಲ ಹಂತದ ಮತದಾನ ಶುರು

121 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನಕ್ಕೆ ಉತ್ಸಾಹದಿಂದ ಧಾವಿಸಿದ ಮತದಾರರು ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಮತದಾನ ಇಂದು ನಡೆಯುತ್ತಿದ್ದು, ಜನರು ಬೆಳಗ್ಗಿನಿಂದಲೇ ಉತ್ಸಾಹದಿಂದ ಮತಗಟ್ಟೆಗಳತ್ತ ಧಾವಿಸುತ್ತಿದ್ದಾರೆ. ಇಂದು ಮೊದಲ ಹಂತದ ಮತದಾನದಲ್ಲಿ, 18 ಜಿಲ್ಲೆಗಳಾದ್ಯಂತ 121 ವಿಧಾನಸಭಾ ಕ್ಷೇತ್ರಗಳಲ್ಲಿ ಜನರು ತಮ್ಮ ಮತದಾನದ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಈ ಹಂತವು ರಾಜ್ಯದ ರಾಜಕೀಯ ದಿಕ್ಕನ್ನು ನಿರ್ಧರಿಸುವುದಲ್ಲದೆ, ಎನ್​ಡಿಎ ಮತ್ತು ಮಹಾ ಮೈತ್ರಿಕೂಟ ಎರಡಕ್ಕೂ ಅಗ್ನಿಪರೀಕ್ಷೆ ಇದಾಗಿರಲಿದೆ. ಆಡಳಿತವು ಪ್ರತಿ ಮತಗಟ್ಟೆಯಲ್ಲಿ ಸಶಸ್ತ್ರ ಪಡೆಗಳನ್ನು

ಬಿಹಾರದಲ್ಲಿ ಮೊದಲ ಹಂತದ ಮತದಾನ ಶುರು Read More »

ಮೈಸೂರು ನಗರದಲ್ಲಿ ಫ್ಲೈ‌ಓವರ್ ನಿರ್ಮಾಣಕ್ಕೆ ಮುಂದಾದ ರಾಜ್ಯ ಸರ್ಕಾರ: ಸಂಸದ ಯದುವೀರ್ ವಿರೋಧ

ಮೈಸೂರು: ರಾಜ್ಯ ಸರ್ಕಾರ ಮೈಸೂರು ನಗರದಲ್ಲಿ ಎರಡು ಫ್ಲೈ ಓವರ್ ನಿರ್ಮಾಣಕ್ಕೆ ಮುಂದಾಗಿದ್ದು, ಇದಕ್ಕೆ ಸಂಸದ ಯದುವೀರ ಕೃಷ್ಣದತ್ತ ‌ಚಾಮರಾಜ ಒಡೆಯರ್ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು ಜೆಎಲ್‌ಬಿ ರಸ್ತೆ, ವಿನೋಬಾ ರಸ್ತೆಗಳು ಪಾರಂಪರಿಕ ರಸ್ತೆಗಳಾಗಿವೆ. ಈ ರಸ್ತೆಗಳನ್ನು ಹಾಗೆಯೇ ಉಳಿಸಿಕೊಳ್ಳಬೇಕು. ಜನಾಭಿಪ್ರಾಯ ಪಡೆಯದೇ ಈ ಮಾರ್ಗದಲ್ಲಿ ಫೈಓವರ್ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ. ಡಿಪಿಆರ್ ಕೂಡ ಸಿದ್ದಪಡಿಸುತ್ತಿದ್ದಾರೆ. ಇದಕ್ಕೆ ನಮ್ಮ ತೀವ್ರ ವಿರೋಧವಿದೆ ಎಂದಿದ್ದಾರೆ. ಸಿಎಂ ಕೂಡ ಗ್ರೇಟ‌ರ್

ಮೈಸೂರು ನಗರದಲ್ಲಿ ಫ್ಲೈ‌ಓವರ್ ನಿರ್ಮಾಣಕ್ಕೆ ಮುಂದಾದ ರಾಜ್ಯ ಸರ್ಕಾರ: ಸಂಸದ ಯದುವೀರ್ ವಿರೋಧ Read More »

error: Content is protected !!
Scroll to Top