ರಾಜಕೀಯ

ಕಾಂಗ್ರೆಸ್‌ನಲ್ಲಿ ಮತ್ತೆ ಸದ್ದು ಮಾಡಲಾರಂಭಿಸಿದ ಕ್ರಾಂತಿ ವಿಚಾರ

ಮುಖ್ಯಮಂತ್ರಿ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬೆಂಗಳೂರು: ಕಾಂಗ್ರೆಸ್‌ನಲ್ಲಿ ಮತ್ತೆ ಕ್ರಾಂತಿ ಸದ್ದು ಮಾಡಲಾರಂಭಿಸಿದೆ. ಮಾಜಿ ಸಚಿವ ಕೆ.ಎನ್ ರಾಜಣ್ಣ ಹೇಳಿದ್ದ ಸೆಪ್ಟೆಂಬರ್ ಕ್ರಾಂತಿ ನಡೆಯದಿದ್ದರೂ ಈಗ ನವೆಂಬರ್ ಕ್ರಾಂತಿ ಎಂಬ ಚರ್ಚೆ ಶುರುವಾಗಿದೆ. ಹಲವು ಕಾಂಗ್ರೆಸ್‌ ಶಾಸಕರು ಮುಖ್ಯಮಂತ್ರಿ ಬದಲಾವಣೆ ಕುರಿತು ಮತ್ತೆ ಮಾತನಾಡಲಾರಂಭಿಸಿದ್ದಾರೆ. ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡೂವರೆ ವರ್ಷ ನಾನೇ ಇದ್ದೆ, ಮುಂದಿನ ಎರಡೂವರೆ ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದಿದ್ದಾರೆ. ನವೆಂಬರ್ ಕ್ರಾಂತಿ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹೈಕಮಾಂಡ್​ […]

ಕಾಂಗ್ರೆಸ್‌ನಲ್ಲಿ ಮತ್ತೆ ಸದ್ದು ಮಾಡಲಾರಂಭಿಸಿದ ಕ್ರಾಂತಿ ವಿಚಾರ Read More »

ಎಐಸಿಸಿ ಆಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

ಉಸಿರಾಟದ ಸಮಸ್ಯೆಗೆ ಚಿಕಿತ್ಸೆ ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರು ನಿಗಾ ಇರಿಸಿದ್ದಾರೆ. ಖರ್ಗೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಮೂಲಗಳು ತಿಳಿಸಿವೆ. ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಎಂದಿನಂತೆಯೇ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಭಾರಿ ಪ್ರವಾಹ ಮತ್ತು ಬೆಳೆ ಹಾನಿ ಬಗ್ಗೆ

ಎಐಸಿಸಿ ಆಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು Read More »

ಧರ್ಮಸ್ಥಳ ಪ್ರಕರಣ ಎಸ್‌ಐಟಿ ತನಿಖೆ ಶೀಘ್ರ ಮುಕ್ತಾಯ : ಪರಮೇಶ್ವರ್‌

ಶೀಘ್ರದಲ್ಲೇ ವರದಿ ಕೊಡಲು ಎಸ್‌ಐಟಿಗೆ ಸೂಚನೆ ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ಆದಷ್ಟು ಬೇಗ ಮುಕ್ತಾಯವಾಗಲಿದ್ದು, ಇಡೀ ತನಿಖೆಯನ್ನು ಆದಷ್ಟು ಬೇಗ ಮುಗಿಸಬೇಕು ಎಂದು ಎಸ್‌ಐಟಿಗೆ ತಿಳಿಸಿದ್ದೇವೆ ಎಂಬುದಾಗಿ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಧರ್ಮಸ್ಥಳ ಪ್ರಕರಣದಲ್ಲಿ ಆದಷ್ಟು ಶೀಘ್ರದಲ್ಲಿ ಎಸ್‌ಐಟಿಯಿಂದ ತನಿಖಾ ವರದಿ ಪಡೆಯಲು ಸರ್ಕಾರ ನಿರ್ಧರಿಸಿದೆ. ಎಫ್‌ಎಸ್‌ಎಲ್ ವರದಿ ಇನ್ನೂ ಬಂದಿಲ್ಲ. ಇತ್ತೀಚಿನ ಸಾಕ್ಷ್ಯಗಳನ್ನು ಎಫ್‌ಎಸ್‌ಎಲ್‌ಗೆ ಕಳಿಸಲಾಗಿದೆ. ಎಲ್ಲವನ್ನೂ ಅಂತಿಮಗೊಳಿಸಿ ವರದಿ ಕೊಡಲು ಎಸ್‌ಐಟಿಗೆ ಹೇಳಿದ್ದೇವೆ. ಆದಷ್ಟು ಶೀಘ್ರದಲ್ಲಿ ಇಡೀ ತನಿಖೆಯನ್ನು ಮುಗಿಸಬೇಕು ಅಂತ

ಧರ್ಮಸ್ಥಳ ಪ್ರಕರಣ ಎಸ್‌ಐಟಿ ತನಿಖೆ ಶೀಘ್ರ ಮುಕ್ತಾಯ : ಪರಮೇಶ್ವರ್‌ Read More »

ಕಾಂಗ್ರೆಸ್‌ ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಗಳಿಕೆ ಆರೋಪ ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕಾಂಗ್ರೆಸ್‌ ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಇಂದು ಲೋಕಾಯುಕ್ತ ದಾಳಿ ನಡೆಸಿದೆ. ಕೋರ್ಟ್ ನಿರ್ದೇಶನದಂತೆ ರಾಜೇಗೌಡ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್ ದಾಖಲು ಬೆನ್ನಲ್ಲೇ ಲೋಕಾಯುಕ್ತ ತನಿಖೆ ಚುರುಕುಗೊಳಿಸಿದೆ. ಶೃಂಗೇರಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಶಾಸಕ ರಾಜೇಗೌಡ, ಪತ್ನಿ‌ ಪುಷ್ಪ ಹಾಗೂ ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಟಿ.ಡಿ.ರಾಜೇಗೌಡ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡೆವಿಟ್‌ನಲ್ಲಿ ಆಸ್ತಿ

ಕಾಂಗ್ರೆಸ್‌ ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ Read More »

ಸರ್ಕಾರಕ್ಕೆ 80 ಪರ್ಸೆಂಟ್‌ ಕಮಿಷನ್‌ ಕಂಟಕ : ಗುತ್ತಿಗೆದಾರರ ಸಂಘದ ಪತ್ರದಿಂದ ಮುಜುಗರ

33 ಸಾವಿರ ಕೋಟಿ ಬಿಲ್‌ ಬಾಕಿ; ನಿಷ್ಪ್ರಯೋಜಕ ಸರ್ಕಾರ ಎಂದು ಹೇಳಿದ ಸಂಘ ಬೆಂಗಳೂರು: ಕಾಂಗ್ರೆಸ್ ಆಡಳಿತದಲ್ಲಿ ಕಮಿಷನ್ ದರ ದುಪ್ಪಟ್ಟು ಆಗಿದ್ದು, ಬಾಕಿ ಬಿಲ್ ಪಾವತಿಯಾಗಿಲ್ಲ ಎಂದು ರಾಜ್ಯ ಗುತ್ತಿಗೆದಾರರ ಸಂಘ ಆರೋಪಿಸಿ ಬರೆದಿರುವ ಪತ್ರ ಭಾರಿ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಬಿಜೆಪಿ ಮತ್ತು ಜೆಡಿಎಸ್‌ ಈ ಪತ್ರದ ಹಿನ್ನೆಲೆಯಲ್ಲಿ ಸರ್ಕಾರದ ಮೇಲೆ ಮುಗಿಬಿದ್ದಿದೆ. ಹಿಂದೆ ಬಿಜೆಪಿ ಸರ್ಕಾರದ ಮೇಲೆ ಶೇ.40 ಕಮಿಷನ್‌ ಸುಳ್ಳು ಆರೋಪ ಹೊರಿಸಿದವರೇ ಇಂದು ನಿರ್ಲಜ್ಜವಾಗಿ ಶೇ.80 ಕಮಿಷನ್‌ ಕಬಳಿಸುತ್ತಿದ್ದಾರೆ ಎಂದು

ಸರ್ಕಾರಕ್ಕೆ 80 ಪರ್ಸೆಂಟ್‌ ಕಮಿಷನ್‌ ಕಂಟಕ : ಗುತ್ತಿಗೆದಾರರ ಸಂಘದ ಪತ್ರದಿಂದ ಮುಜುಗರ Read More »

ಜಾತಿ ಗಣತಿ ಸಮೀಕ್ಷೆಗೆ ಮಾಹಿತಿ ನೀಡುವುದು ಜನರ ಇಚ್ಚೆಗೆ ಬಿಟ್ಟ ವಿಚಾರ

ಸಮೀಕ್ಷೆಯಲ್ಲಿ ಭಾಗವಹಿಸಲು ಒತ್ತಾಯ ಮಾಡುವುದಿಲ್ಲ ಎಂದು ಸರ್ಕಾರ ಸ್ಪಷ್ಟನೆ ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸುವುದು ಕಡ್ಡಾಯವಲ್ಲ ಎಂದು ಹಿಂದುಳಿದ ವರ್ಗಗಳ ಆಯೋಗ ಸ್ಪಷ್ಟಪಡಿಸಿದೆ. ಜಾತಿ ಗಣತಿ ಅಥವಾ ಸಾಮಾಜಿಕ-ಆರ್ಥಿಕ ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರು ಅಥವಾ ಕುಟುಂಬಗಳ ಸ್ವಯಂ ಇಚ್ಛೆಗೆ ಬಿಡಲಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಆಯೋಗ ಸೆ.22ರಿಂದ ರಾಜ್ಯದ ಕುಟುಂಬಗಳ ಹಾಗೂ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಾರಂಭಿಸಲಾಗಿದ್ದು, ಅಕ್ಟೋಬರ್‌ 7ರ

ಜಾತಿ ಗಣತಿ ಸಮೀಕ್ಷೆಗೆ ಮಾಹಿತಿ ನೀಡುವುದು ಜನರ ಇಚ್ಚೆಗೆ ಬಿಟ್ಟ ವಿಚಾರ Read More »

ಇನ್ನೂ ವೇಗ ಪಡೆಯದ ಜಾತಿ ಗಣತಿ ಸಮೀಕ್ಷೆ

ಹತ್ತಾರು ಸಮಸ್ಯೆಗಳಿಂದ ಕಂಗೆಟ್ಟಿರುವ ಶಿಕ್ಷಕರು ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷೆಯ ಜಾತಿ ಗಣತಿ ಇನ್ನೂ ವೇಗ ಪಡೆದುಕೊಂಡಿಲ್ಲ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹೆಸರಿನ ಜಾತಿ ಗಣತಿ ಆಮೆಗತಿಯಲ್ಲಿ ಸಾಗುತ್ತಿದ್ದು, ಮತ್ತಷ್ಟು ಜಟಿಲಗೊಂಡಿದೆ. ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರ ಒಳಗೆ ಸರ್ವೆ ಕಾರ್ಯ ಪೂರ್ಣಗೊಳ್ಳಬೇಕೆಂದು ಸರ್ಕಾರ ಡೆಡ್‌ಲೈನ್ ಕೊಟ್ಟಿದೆ. ಆದರೆ ಸಮೀಕ್ಷೆ ಶುರುವಾಗಿ 5 ದಿನ ಕಳೆದಿದೆ. ಕಳೆದ 4 ದಿನಗಳಲ್ಲಿ ಶೇ.10ರಷ್ಟು ಸಹ ಪೂರ್ಣಗೊಂಡಿಲ್ಲ. ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಗಣತಿ ಆರಂಭವೇ ಆಗಿಲ್ಲ. ರಾಜ್ಯಾದ್ಯಂತ 4 ದಿನಗಳಲ್ಲಿ

ಇನ್ನೂ ವೇಗ ಪಡೆಯದ ಜಾತಿ ಗಣತಿ ಸಮೀಕ್ಷೆ Read More »

ಧರ್ಮಸ್ಥಳ ಷಡ್ಯಂತ್ರಕ್ಕೆ ಕಾಂಗ್ರೆಸ್‌ ಸರ್ಕಾರ ಕುಮ್ಮಕ್ಕು : ಬಿಜೆಪಿ ಆರೋಪ

ಪಿಐಎಲ್‌ ವಜಾ ಆಗಿರುವುದು ಗೊತ್ತಿದ್ದೂ ಎಸ್‌ಐಟಿ ರಚನೆ ಎಂದು ಆರೋಪ ಬೆಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚಿಸುವಂತೆ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹೇರಿದವರು ಯಾರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಶ್ನಿಸಿದ್ದಾರೆ. ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಅಪಪ್ರಚಾರ ನಡೆಸಿ ಕ್ಷೇತ್ರದ ವರ್ಚಸ್ಸು ಕುಗ್ಗಿಸಲೇಬೇಕೆಂಬ ವ್ಯವಸ್ಥಿತ ಷಡ್ಯಂತರಕ್ಕೆ ಕಾಂಗ್ರೆಸ್ ಸರ್ಕಾರವೇ ಕುಮ್ಮಕ್ಕು ನೀಡುತ್ತಿದೆ. ಈ ದುಷ್ಟ ಉದ್ದೇಶದಿಂದಲೇ ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು

ಧರ್ಮಸ್ಥಳ ಷಡ್ಯಂತ್ರಕ್ಕೆ ಕಾಂಗ್ರೆಸ್‌ ಸರ್ಕಾರ ಕುಮ್ಮಕ್ಕು : ಬಿಜೆಪಿ ಆರೋಪ Read More »

ಪೌರ ಕಾರ್ಮಿಕರ ದಿನಾಚರಣೆ |ಮಹತ್ವದ ಸ್ವಚ್ಛತಾ ಕೆಲಸ ಮಾಡುವವರನ್ನು ಗೌರವದಿಂದ ಕಾಣಬೇಕು: ಅಶೋಕ್ ರೈ

ಪುತ್ತೂರು: ಪೌರ ಕಾರ್ಮಿಕರ ಮಹತ್ವ ಬಹಳಷ್ಟು ಜನರಿಗೆ ಗೊತ್ತಿಲ್ಲ. ಪರಿಸರ ಸ್ವಚ್ಛತೆ ಇದ್ದರೆ ಅಲ್ಲಿ ಓಡಾಡುವ ಜನರ ಮನಸ್ಸು ಸ್ವಚ್ಛ ಆಗುತ್ತದೆ. ಸ್ವಚ್ಛತಾ ಕೆಲಸ ಮಾಡುವವರನ್ನು ಕೀಳು ಮನೋಭಾವನೆಯಲ್ಲಿ ನೋಡದೆ ಗೌರವದಿಂದ ಕಾಣಬೇಕು. ಸರಕಾರವೂ ಪೌರ ಕಾರ್ಮಿಕರನ್ನು ಗುರುತಿಸುವುದರೊಂದಿಗೆ ಧೈರ್ಯ, ಸ್ಥೈರ್ಯ ತುಂಬುತ್ತಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ನಗರದ ಪುರಭವನದಲ್ಲಿ ಮಂಗಳವಾರ ನಗರಸಭೆ ವತಿಯಿಂದ ಆಯೋಜಿಸಿದ ಪೌರ ಕಾರ್ಮಿಕರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ತ್ಯಾಜ್ಯ ವಿಲೇವಾರಿ ಎಂಬುದು ಸವಾಲಿನ ಕೆಲಸ. ಸ್ವಚ್ಛತಾ

ಪೌರ ಕಾರ್ಮಿಕರ ದಿನಾಚರಣೆ |ಮಹತ್ವದ ಸ್ವಚ್ಛತಾ ಕೆಲಸ ಮಾಡುವವರನ್ನು ಗೌರವದಿಂದ ಕಾಣಬೇಕು: ಅಶೋಕ್ ರೈ Read More »

ಜಾತಿ ಗಣತಿಗೆ ಮಾಹಿತಿ ಒತ್ತಾಯದಿಂದ ಪಡೆಯಬಾರದು ಎಂದ ಹೈಕೋರ್ಟ್‌

ಜನರ ಮಾಹಿತಿಗಳ ಗೌಪ್ಯತೆ ರಕ್ಷಿಸಲು ಕಟ್ಟುನಿಟ್ಟಿನ ಸೂಚನೆ ಬೆಂಗಳೂರು : ಹತ್ತಾರು ಗೊಂದಲಗಳ ಗೂಡಾಗಿರುವ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಜಾತಿ ಗಣತಿಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಜಾತಿಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿದ್ದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ಪೀಠ ಎರಡು ದಿನ ವಾದ ಪ್ರತಿವಾದ ಆಲಿಸಿ ವಿಚಾರಣೆಗೊಳಪಡಿಸಿ ಅಂತಿಮವಾಗಿ ಗುರುವಾರ ಸಾಮಾಜಿಕ, ಶೈಕ್ಷಣಿಕ

ಜಾತಿ ಗಣತಿಗೆ ಮಾಹಿತಿ ಒತ್ತಾಯದಿಂದ ಪಡೆಯಬಾರದು ಎಂದ ಹೈಕೋರ್ಟ್‌ Read More »

error: Content is protected !!
Scroll to Top