ರಾಜಕೀಯ

ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜನೆ | ಚುನಾವಣಾ ಆಯೋಗದಿಂದ ನೋಟೀಸ್

ಮಂಗಳೂರು: ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜಿಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆಯೋಜಕರಿಗೆ ಚುನಾವಣಾ ಆಯೋಗ ನೋಟೀಸ್ ಜಾರಿ ಮಾಡಿದೆ. ಮಂಗಳೂರಿನ ಮುಡಿಪು ನಲ್ಲಿ ಒಂದು ಬದಿಯ ರಸ್ತೆಯನ್ನು ತಡೆಮಾಡಿ ಚಯರ್‍ ಗಳನ್ನು ಅಳವಡಿಸಿ ಇಫ್ತಾರ್ ಕೂಟ ನಡೆಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಕುರಿತು ಹಿಜಾಂವೇ ಆಯೋಜಕರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಅದರಂತೆ ಇದೀಗ ಚುನಾವಣಾ ಆಯೋಗ ನೋಟೀಸ್ ಜಾರಿ ಮಾಡಿದೆ.

ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜನೆ | ಚುನಾವಣಾ ಆಯೋಗದಿಂದ ನೋಟೀಸ್ Read More »

ಬಿಜೆಪಿ ವತಿಯಿಂದ ಬೊಳುವಾರು ಶಕ್ತಿ ಕೇಂದ್ರದ ಬೂತ್ ಸಭೆ

ಪುತ್ತೂರು: ಬಿಜೆಪಿ ಪುತ್ತೂರು ನಗರ ಮಂಡಲ ಬೊಳುವಾರು ಶಕ್ತಿಕೇಂದ್ರದ ಬೂತ್ ಸಂ.123,124,129 ರ ಸಭೆ ಕೊಂಬೆಟ್ಟು ಗಣೇಶ್ ಬಾಳಿಗರ ಮನೆಯಲ್ಲಿ ನಡೆಯಿತು. ಸಭೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ದ.ಕ.ಜಿಲ್ಲೆಯಲ್ಲಿ ಕ್ಯಾ.ಬ್ರಿಜೇಶ್‍ ಚೌಟರನ್ನು ಗೆಲ್ಲಿಸುವ ಮೂಲಕ ನರೇಂದ್ರ ಮೋದಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯರಾದ ರಂಗನಾಥ ರಾವ್, ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಪ್ರಧಾನ ಕಾರ್ಯದರ್ಶಿ ಯುವರಾಜ್ ಪೆರಿಯತ್ತೋಡಿ, ನಗರ ಸಭಾ ಸದಸ್ಯ ಸಂತೋಷ್ ಕುಮಾರ್ ಬೊಳುವಾರು, ಶಕ್ತಿ ಕೇಂದ್ರ ಪ್ರಮುಖ್ ನೀಲಂತ್

ಬಿಜೆಪಿ ವತಿಯಿಂದ ಬೊಳುವಾರು ಶಕ್ತಿ ಕೇಂದ್ರದ ಬೂತ್ ಸಭೆ Read More »

ಬಿಜೆಪಿಯಿಂದ ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ

ಪುತ್ತೂರು: ಭಾರತೀಯ ಜನತಾ ಪಾರ್ಟಿಯ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ನಗರ ಮಂಡಲದ‌ ಮನೆ ಸಂಪರ್ಕ ಅಭಿಯಾನಕ್ಕೆ ನೆಲಪ್ಪಾಲಿನ ಬೂತ್ ಸಂಖ್ಯೆ 63 ರಲ್ಲಿ ಭಾನುವಾರ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಎ.2 ರಂದು ನಡೆಯುವ ಕಾರ್ಯಕರ್ತರ ಸಮಾವೇಶದ ಕುರಿತು ಮಾಹಿತಿ ನೀಡಲಾಯಿತು. ಅಭಿಯಾನದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಮಂಗಳೂರು ವಿಭಾಗದ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಯುವರಾಜ ಪೆರಿಯತ್ತೋಡಿ, ನಗರಸಭೆ ನಿಕಟಪೂರ್ವ ಅಧ್ಯಕ್ಷ ಜೀವಂದರ್ ಜೈನ್, ಬೂತ್ ಅಧ್ಯಕ್ಷ

ಬಿಜೆಪಿಯಿಂದ ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ Read More »

ಕಡಬ ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ ಸ್ಪೋಟ | ಸಾಮಾಜಿಕ ಜಾಲತಾಣದಲ್ಲಿ ವೈರಲ್

ಕಡಬ : ಕಡಬ ಕಾಂಗ್ರೆಸ್‌ ಪಾಳಯದಲ್ಲಿ ಶನಿವಾರ ನಾಯಕರ ಮತ್ತು ಕಾರ್ಯಕರ್ತರ ನಡುವೆ ವಾಗ್ವಾದ ನಡೆದು, ನೂಕಾಟ – ತಳ್ಳಾಟ ನಡೆಯುವ ಮೂಲಕ ಭಿನ್ನಮತ ಸ್ಪೋಟಗೊಂಡ ಘಟನೆ ನಡೆದಿದೆ. ಸಭೆಯಿಂದ ಮುಸ್ಲಿಂ ಮುಖಂಡರು ಹೊರನಡೆದ ಘಟನೆಯೂ ನಡೆದಿದ್ದು, ಅಲ್ಪ ಸಂಖ್ಯಾತ ಸಮುದಾಯದ ಕಡೆಗಣನೆ ವಿಚಾರವಾಗಿ ಈ ಗದ್ದಲ ನಡೆದಿದೆ ಎನ್ನಲಾಗಿದೆ. ಈ ಕುರಿತು ಇದೀಗ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಕಡಬ ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ ಸ್ಪೋಟ | ಸಾಮಾಜಿಕ ಜಾಲತಾಣದಲ್ಲಿ ವೈರಲ್ Read More »

ಏ.2 : ಬಿಜೆಪಿ ಕಾರ್ಯಕರ್ತರ ಸಮಾವೇಶ | ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳನ್ನು ಮನೆ ಮನೆ ತಲುಪಿಸುವ ಕಾರ್ಯ ಪುತ್ತೂರು ವಿಧಾನಸಭಾ ಕ್ಷೇತ್ರದಾದ್ಯಂತ ನಡೆಯಲಿದೆ : ಪತ್ರಿಕಾಗೋಷ್ಠಿಯಲ್ಲಿ ಚನಿಲ ತಿಮ್ಮಪ್ಪ ಶೆಟ್ಟಿ

ಪುತ್ತೂರು: ಲೋಕಸಭಾ ಚುನಾವಣೆ ಅಂಗವಾಗಿ ಪುತ್ತೂರು ಬಿಜೆಪಿ ವತಿಯಿಂದ ಕಾರ್ಯಕರ್ತರ ಸಮಾವೇಶ ಏ.2ರಂದು ಬೈಪಾಸ್ ರಸ್ತೆಯ ಸ್ವಾಮಿ ಕಲಾಮಂದಿರದಲ್ಲಿ ನಡೆಯಲಿದೆ ಎಂದು ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಚನಿಲ ತಿಮ್ಮಪ್ಪ ಶೆಟ್ಟಿ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಪಾಲ್ಗೊಳ್ಳಲಿದ್ದಾರೆ. ಸಮಾವೇಶಕ್ಕೆ ಮೈಸೂರು ಸಂಸದ ಪ್ರತಾಪ್

ಏ.2 : ಬಿಜೆಪಿ ಕಾರ್ಯಕರ್ತರ ಸಮಾವೇಶ | ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳನ್ನು ಮನೆ ಮನೆ ತಲುಪಿಸುವ ಕಾರ್ಯ ಪುತ್ತೂರು ವಿಧಾನಸಭಾ ಕ್ಷೇತ್ರದಾದ್ಯಂತ ನಡೆಯಲಿದೆ : ಪತ್ರಿಕಾಗೋಷ್ಠಿಯಲ್ಲಿ ಚನಿಲ ತಿಮ್ಮಪ್ಪ ಶೆಟ್ಟಿ Read More »

ಏ.2 : ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆ ಏ.2 ಮಂಗಳವಾರ ಬೈಪಾಸ್ ರಸ್ತೆಯ ಸ್ವಾಮಿ ಕಲಾ ಮಂದಿರದಲ್ಲಿ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ನಡೆಯುವ ಸಮಾವೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ನಿಕಟಪೂರ್ವ ಸಂಸದ ನಳೀನ್‍ ಕುಮಾರ್ ಕಟೀಲ್‍ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳುವಂತೆ ಬಿಜೆಪಿ ಪ್ರಕಟಣೆ ತಿಳಿಸಿದೆ.

ಏ.2 : ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ Read More »

ಪುತ್ತೂರು ವಿಧಾನಸಭಾ ಕ್ಷೇತ್ರ ಚುನಾವಣಾ ನಿರ್ವಹಣಾ ಸಮಿತಿ ಸಭೆ

ಪುತ್ತೂರು: ಲೋಕಸಭಾ ಚುನಾವಣೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆಯಿತು. ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ವಿಭಾಗಗಳ ಪ್ರಮುಖರಿಂದ ಒಟ್ಟು ಕ್ಷೇತ್ರದ ಚುನಾವಣೆಯ ಕೆಲಸಗಳ ಪ್ರಗತಿಯ ವಿವರಣೆಯನ್ನು ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಚನಿಲ ತಿಮ್ಮಪ್ಪ ಶೆಟ್ಟಿಯವರು ಅವಲೋಕಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಪುತ್ತೂರು ಚುನಾವಣೆಯ ಪ್ರಭಾರಿ ಸುಲೋಚನ

ಪುತ್ತೂರು ವಿಧಾನಸಭಾ ಕ್ಷೇತ್ರ ಚುನಾವಣಾ ನಿರ್ವಹಣಾ ಸಮಿತಿ ಸಭೆ Read More »

ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾಗಿ ಚನಿಲ ತಿಮ್ಮಪ್ಪ ಶೆಟ್ಟಿ, ಸಹಸಂಚಾಲಕರಾಗಿ ಉಮೇಶ್ ಕೋಡಿಬೈಲು

ಪುತ್ತೂರು: ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾಗಿ ಚನಿಲ ತಿಮ್ಮಪ್ಪ ಶೆಟ್ಟಿ, ಸಹಸಂಚಾಲಕರಾಗಿ ಉಮೇಶ್ ಕೋಡಿಬೈಲು ಅವರು ನೇಮಕಗೊಂಡಿದ್ದಾರೆ. ಕಲ್ಲೇಗ ಭಾರತ್ ಮಾತಾ ಸಭಾಭವನದಲ್ಲಿ ನಡೆದ ಲೋಕಸಭಾ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಈ ಘೋಷಣೆ ಮಾಡಲಾಯಿತು. ವಿವಿಧ ವಿಭಾಗಗಳ ಹೆಸರನ್ನು ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್ ಬೆಳ್ತಂಗಡಿ ಘೋಷಣೆ ಮಾಡಿದರು.

ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾಗಿ ಚನಿಲ ತಿಮ್ಮಪ್ಪ ಶೆಟ್ಟಿ, ಸಹಸಂಚಾಲಕರಾಗಿ ಉಮೇಶ್ ಕೋಡಿಬೈಲು Read More »

ಲೋಕಸಭೆ ಚುನಾವಣೆ : 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ |

ಬೆಂಗಳೂರು: ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅಧಿಸೂಚನೆ ಪ್ರಕಟಗೊಂಡ ಬೆನ್ನಲ್ಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏ.4ರಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿದಿನ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಸಲ್ಲಿಕೆ ಮಾಡಬಹುದು. ಚುನಾವಣಾಧಿಕಾರಿಯ ಅನುಪಸ್ಥಿತಿಯಲ್ಲಿ ಹೆಚ್ಚುವರಿ ಚುನಾವಣಾಧಿಕಾರಿ ಮೂಲಕ ನಾಮಪತ್ರ ಸಲ್ಲಿಸಬಹುದು. ಏ.5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏ.8ರಂದು ಉಮೇದುವಾರಿಕೆಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಏ.26ರಂದು ಮತದಾನ ನಡೆಯಲಿದೆ.

ಲೋಕಸಭೆ ಚುನಾವಣೆ : 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ | Read More »

ವಿಧಾನಸಭೆ ಚುನಾವಣೆ | ವಿರೋಧ ಪಕ್ಷದಿಂದ ಅಭ್ಯರ್ಥಿಯಿಲ್ಲದೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧ ಆಯ್ಕೆ

ಇಟಾನಗರ: ವಿಧಾನಸಭೆ ಚುನಾವಣೆ ಇಲ್ಲದೆ ಬಿಜೆಪಿಯ ಐವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾದ ವಿದ್ಯಮಾನ ನಡೆದಿರುವುದು ಅರುಣಾಚಲ ಪ್ರದೇಶದಲ್ಲಿ. ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿ ಐವರು ಬಿಜೆಪಿ ಅಭ್ಯರ್ಥಿಗಳು ವಿಧಾನಸಭೆಗೆ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಬುಧವಾರ ಕೊನೆಯ ದಿನವಾಗಿತ್ತು. ಆದರೆ ಕೊನೇ ಗಳಿಗೆ ತನಕ ಐದು ಕ್ಷೇತ್ರಗಳಿಗೆ ಬೇರೆ ಯಾರೂ ನಾಮಪತ್ರ ಸಲ್ಲಿಸಿಲ್ಲ. ಹೀಗಾಗಿ 5 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅರುಣಾಚಲ ಪ್ರದೇಶದ ಎರಡು ಲೋಕಸಭಾ ಕ್ಷೇತ್ರಗಳು

ವಿಧಾನಸಭೆ ಚುನಾವಣೆ | ವಿರೋಧ ಪಕ್ಷದಿಂದ ಅಭ್ಯರ್ಥಿಯಿಲ್ಲದೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧ ಆಯ್ಕೆ Read More »

error: Content is protected !!
Scroll to Top