ರಾಜಕೀಯ

ವಿಧಾನಸಭೆ ಚುನಾವಣೆ | ವಿರೋಧ ಪಕ್ಷದಿಂದ ಅಭ್ಯರ್ಥಿಯಿಲ್ಲದೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧ ಆಯ್ಕೆ

ಇಟಾನಗರ: ವಿಧಾನಸಭೆ ಚುನಾವಣೆ ಇಲ್ಲದೆ ಬಿಜೆಪಿಯ ಐವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾದ ವಿದ್ಯಮಾನ ನಡೆದಿರುವುದು ಅರುಣಾಚಲ ಪ್ರದೇಶದಲ್ಲಿ. ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿ ಐವರು ಬಿಜೆಪಿ ಅಭ್ಯರ್ಥಿಗಳು ವಿಧಾನಸಭೆಗೆ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಬುಧವಾರ ಕೊನೆಯ ದಿನವಾಗಿತ್ತು. ಆದರೆ ಕೊನೇ ಗಳಿಗೆ ತನಕ ಐದು ಕ್ಷೇತ್ರಗಳಿಗೆ ಬೇರೆ ಯಾರೂ ನಾಮಪತ್ರ ಸಲ್ಲಿಸಿಲ್ಲ. ಹೀಗಾಗಿ 5 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅರುಣಾಚಲ ಪ್ರದೇಶದ ಎರಡು ಲೋಕಸಭಾ ಕ್ಷೇತ್ರಗಳು […]

ವಿಧಾನಸಭೆ ಚುನಾವಣೆ | ವಿರೋಧ ಪಕ್ಷದಿಂದ ಅಭ್ಯರ್ಥಿಯಿಲ್ಲದೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧ ಆಯ್ಕೆ Read More »

ಲೋಕಸಭೆ ಚುನಾವಣೆ | ಬಿಜೆಪಿಯಿಂದ ಚುನಾವಣಾ ಪ್ರಭಾರಿಗಳ ನೇಮಕ

ಪುತ್ತೂರು: ಲೋಕಸಭೆ ಚುನಾವಣೆಯನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಪ್ರತೀ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಪ್ರಭಾರಿಗಳನ್ನು ನೇಮಿಸಲಾಗಿದೆ.ಆಯ್ಕೆಯಾದ ಬಿಜೆಪಿ ಚುನಾವಣಾ ಪ್ರಭಾರಿಗಳ ವಿವರ ಈ ಕೆಳಗಿನಂತಿದೆ. ಹರಿಕೃಷ್ಣ ಬಂಟ್ವಾಳ (ಬೆಳ್ತಂಗಡಿ), ಚಂದ್ರಶೇಖರ ರಾವ್ ಬಪ್ಪಳಿಗೆ (ಮೂಡುಬಿದಿರೆ), ರೂಪ ಡಿ. ಬಂಗೇರ (ಮಂಗಳೂರು ನಗರ ಉತ್ತರ), ರವಿಶಂಕರ ಮಿಜಾರ್ (ಮಂಗಳೂರು ನಗರ ದಕ್ಷಿಣ), ರಾಧಾಕೃಷ್ಣ ರೈ ಬೂಡಿಯಾರ್ (ಮಂಗಳೂರು), ಜಗದೀಶ ಶೇಣವ (ಬಂಟ್ವಾಳ), ಸುಲೋಚನಾ ಜಿ.ಕೆ.ಭಟ್ (ಪುತ್ತೂರು), ಅಪ್ಪಯ್ಯ ಮಣಿಯಾಣಿ (ಸುಳ್ಯ)

ಲೋಕಸಭೆ ಚುನಾವಣೆ | ಬಿಜೆಪಿಯಿಂದ ಚುನಾವಣಾ ಪ್ರಭಾರಿಗಳ ನೇಮಕ Read More »

ಕೇರಳ ಲೋಕಸಭಾ ಚುನಾವಣೆ ಸಹ ಉಸ್ತುವಾರಿಯಾಗಿ ನಳೀನ್ ಕುಮಾರ್ ಕಟೀಲ್‍

ಪುತ್ತೂರು: ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯಾಗಿ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್‍ ಅವರನ್ನು ನೇಮಕ ಮಾಡಲಾಗಿದ್ದು, ಈ ಮೂಲಕ ಕಟೀಲ್‍ ಅವರಿಗೆ ಹೈಕಮಾಂಡ್ ಮಹತ್ವದ ಜವಾಬ್ದಾರಿ ನೀಡಿದೆ. ಇದರ ಜತೆಗೆ ತೆಲಂಗಾಣ ಮತ್ತು ಮಹಾರಾಷ್ಟ್ರ ಲೋಕಸಣಾ ಚುನಾವಣೆಯ ಉಸ್ತುವಾರಿಯನ್ನು ಕರ್ನಾಟಕದ ಬಿಜೆಪಿ ನಾಯಕರಿಗೆ ನೀಡಲಾಗಿದೆ. ತೆಲಂಗಾಣ ಲೋಕಸಭಾ ಚುನಾವಣೆಯ ಬಿಜೆಪಿ ಉಸ್ತುವಾರಿಯಾಗಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್‍ ಅವರನ್ನು ನೇಮಕ ಮಾಡಲಾಗಿದೆ. ಮಹಾರಾಷ್ಟ್ರ ಬಿಜೆಪಿ ಸಹ ಉಸ್ತುವಾರಿಯಾಗಿ ನಿರ್ಮಲ್ ಕುಮಾರ್ ಸುಲಾನಾ

ಕೇರಳ ಲೋಕಸಭಾ ಚುನಾವಣೆ ಸಹ ಉಸ್ತುವಾರಿಯಾಗಿ ನಳೀನ್ ಕುಮಾರ್ ಕಟೀಲ್‍ Read More »

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಳಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

ಬೆಳ್ತಂಗಡಿ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಬುಧವಾರ ಬೆಳಿಗ್ಗೆ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಶ್ರೀ ದೇವಸ್ಥಾನದಲ್ಲಿ ಶ್ರೀ ದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಅಧ್ಯಕ್ಷ  ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಬೆಳ್ತಂಗಡಿ ಚುನಾವಣಾ ಉಸ್ತುವಾರಿಗಳಾದ ಧರ್ಣೇಂದ್ರ ಕುಮಾರ್, ರಜತ್ ಗೌಡ, ಸುಭಾಶ್ ರೈ, ಮಾಲಾಡಿ

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಳಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. Read More »

ಮತದಾನದ ದಿನ ದುಡಿಯುವ ಕಾರ್ಮಿಕರಿಗೆ ರಜೆ ಘೋಷಣೆ | ಚುನಾವಣಾ ಆಯೋಗದಿಂದ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯಾದಂತ ಮತದಾನ ನಡೆಯುವ ದಿನವಾದ ಏ.26 ಹಾಗೂ ಮೇ 7 ರಂದು ಮತದಾನ ಮಾಡಲು ನೌಕರರಿಗೆ ಅನುಕೂಲವಾಗುವಂತೆ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ದುಡಿಯುವ ಕಾರ್ಮಿಕರಿಗೆ ವೇತನ ಸಹಿತ ನೀಡಬೇಕು ಎಂದು ಚುನಾವಣಾ ಆಯೋಗ ಸೂಚನೆ ನೀಡಿದೆ. ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳು ಹಾಗೂ ಏ.26 ರಂದು ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಮತದಾನದ ದಿನ ಕಾರ್ಮಿಕರಿಗೆ 1963 ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳಡಿಯಲ್ಲಿ ವೇತನ ಸಹಿತ

ಮತದಾನದ ದಿನ ದುಡಿಯುವ ಕಾರ್ಮಿಕರಿಗೆ ರಜೆ ಘೋಷಣೆ | ಚುನಾವಣಾ ಆಯೋಗದಿಂದ ಆದೇಶ Read More »

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಚುನಾವಣಾ ಕಚೇರಿ ಉದ್ಘಾಟನೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರ ಚುನಾವಣಾ ಕಚೇರಿ ಮಂಗಳೂರು ಲಾಲ್’ಭಾಗ್’ನಲ್ಲಿ ಇಂದು ಉದ್ಘಾಟನೆಗೊಂಡಿತು. ಮಂಗಳೂರು ಮಹಾನಗರ ಪಾಲಿಕೆ ಬಳಿಯಲ್ಲಿರುವ ಕಚೇರಿಯನ್ನು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ದ.ಕ. ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಬಿ. ರಮಾನಾಥ ರೈ, ಕೆಪಿಸಿಸಿ

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಚುನಾವಣಾ ಕಚೇರಿ ಉದ್ಘಾಟನೆ Read More »

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಕ ಜನಾರ್ದನ ರೆಡ್ಡಿ ಮರಳಿ ಬಿಜೆಪಿಗೆ

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡಿದ್ದ ಜನಾರ್ದನ ರೆಡ್ಡಿ ಅವರು ಮತ್ತೆ ಬಿಜೆಪಿಗೆ ಮರಳಿದ್ದಾರೆ. ಈ  ಮೂಲಕ ಲೋಕಸಭೆ ಚುನಾವಣೆ ಮೊದಲು ಬಿಜೆಪಿಗೆ ಬರುವ ಮೂಲಕ ಬಲ ತುಂಬಿದ್ದಾರೆ. ಸೋಮವಾರ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಟಿ. ಜಾನ್‌ ಅವರ ಪುತ್ರ ಥಾಮಸ್‌ ಜಾನ್‌ ಅವರು ಪಕ್ಷ ಸೇರಿದರು. ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಹಿರಿಯ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಕ ಜನಾರ್ದನ ರೆಡ್ಡಿ ಮರಳಿ ಬಿಜೆಪಿಗೆ Read More »

ದ,ಕ,ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಬೆಳ್ತಂಗಡಿ ಭೇಟಿ | ಹಿರಿಯ ಬಿಜೆಪಿ ಮುಖಂಡರನ್ನು ಭೇಟಿಯಾಗಿ ಮಾರ್ಗದರ್ಶನ ಪಡೆದ ಚೌಟ

ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು, ಇವತ್ತಿನ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರವಾಸದ ಸಂದರ್ಭದಲ್ಲಿ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಹೊಸಂಗಡಿ ಪಡ್ಯಾರಬೆಟ್ಟು ಕೊಡಮಣಿತ್ತಾಯ ದೈವಸ್ಥಾನಕ್ಕೆ ಭೇಟಿ ನೀಡಿ, ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ‌ ಅವರೊಂದಿಗಿದ್ದರು. ಬೆಳ್ತಂಗಡಿ ಮಂಡಲದ ನಾರಾವಿ ಮತ್ತು ಅಳದಂಗಡಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ, ಅಳದಂಗಡಿ ಅರಮನೆ ತಿಮ್ಮಣ್ಣರಸರಾದ

ದ,ಕ,ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಬೆಳ್ತಂಗಡಿ ಭೇಟಿ | ಹಿರಿಯ ಬಿಜೆಪಿ ಮುಖಂಡರನ್ನು ಭೇಟಿಯಾಗಿ ಮಾರ್ಗದರ್ಶನ ಪಡೆದ ಚೌಟ Read More »

46 ಅಭ್ಯರ್ಥಿಗಳನ್ನೊಳಗೊಂಡ ಕಾಂಗ್ರೆಸ್ ನ ನಾಲ್ಕನೇ ಪಟ್ಟಿ ಬಿಡುಗಡೆ | ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಸ್ಪರ್ಧೆ

ಹೊಸದಿಲ್ಲಿ: ಕಾಂಗ್ರೆಸ್ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.  46 ಅಭ್ಯರ್ಥಿಗಳ ಹೆಸರುಗಳನ್ನೊಳಗೊಂಡ ಈ ಪಟ್ಟಿ ಶನಿವಾರ ರಾತ್ರಿ ಬಿಡುಗಡೆಗೊಂಡಿದ್ದು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ತಿರುವಳ್ಳೂರಿನಿಂದ ಸ್ಪರ್ಧಿಸಲಿದ್ದಾರೆ. ವಾರಣಾಸಿ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಎದುರು ಕಾಂಗ್ರೆಸ್ ಹಿರಿಯ ನಾಯಕ ಅಜಯ್ ರಾಯ್ ಮತ್ತೆ ಸ್ಪರ್ಧಿಸಲಿದ್ದಾರೆ. ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ವಾರ್ ರೂಂ ನಿರ್ವಹಿಸಿ ಕಾಂಗ್ರೆಸ್ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ್ದ ಸಸಿಕಾಂತ್ ಸೆಂಥಿಲ್ ಗೆ ತಮಿಳುನಾಡಿನ ತಿರುವಳ್ಳೂರಿನಿಂದ

46 ಅಭ್ಯರ್ಥಿಗಳನ್ನೊಳಗೊಂಡ ಕಾಂಗ್ರೆಸ್ ನ ನಾಲ್ಕನೇ ಪಟ್ಟಿ ಬಿಡುಗಡೆ | ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಸ್ಪರ್ಧೆ Read More »

ಲೋಕಸಭೆ ಚುನಾವಣೆ | ಬಿಜೆಪಿ ನಾಲ್ಕನೇ ಪಟ್ಟಿ ಬಿಡುಗಡೆ

ನವದೆಹಲಿ: ಬಿಜೆಪಿ ಲೋಕಸಭೆ ಚುನಾವಣೆ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ 15 ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್‌ ನೀಡಿದೆ. ಅದರಲ್ಲೂ, ಬಹುಭಾಷಾ ನಟಿ, ನಟ ಶರತ್‌ಕುಮಾರ್‌ ಅವರ ಪತ್ನಿ ರಾಧಿಕಾ ಶರತ್‌ ಕುಮಾರ್‌ ಅವರಿಗೆ ಬಿಜೆಪಿ ಟಿಕೆಟ್‌ ಘೋಷಿಸಿದೆ. ರಾಧಿಕಾ ಶರತ್‌ ಕುಮಾರ್‌ ಅವರು ತಮಿಳುನಾಡಿನ ವಿರುಧುನಗರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಪುದುಚೇರಿಯ ಹಾಗೂ ತಮಿಳುನಾಡಿನ 14 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿಯು ಬಿಡುಗಡೆ ಮಾಡಿದೆ. ತಮಿಳುನಾಡಿನಲ್ಲಿ ಬಿಜೆಪಿ ಬಿಡುಗಡೆ ಮಾಡುತ್ತಿರುವ ಎರಡನೇ ಪಟ್ಟಿ ಇದಾಗಿದೆ.

ಲೋಕಸಭೆ ಚುನಾವಣೆ | ಬಿಜೆಪಿ ನಾಲ್ಕನೇ ಪಟ್ಟಿ ಬಿಡುಗಡೆ Read More »

error: Content is protected !!
Scroll to Top