ರಾಜಕೀಯ

ಡಿ.ವಿ.ಎಸ್‍. ಗೆ ಬಿಜೆಪಿ-ಕಾಂಗ್ರೆಸ್ ಎರಡೂ ಪಕ್ಷದಿಂದಲೂ ಟಿಕೇಟ್ ಆಫರ್ ! | ಬಿಜೆಪಿಯಿಂದ ಮನವೊಲಿಕೆಗೆ ಯತ್ನ

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್‌ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಡಿ.ವಿ.ಸದಾನಂದ ಗೌಡರು ತಮ್ಮ ಮುಂದಿನ ನಡೆ ಕುರಿತು ಇನ್ನೂ ಗುಟ್ಟು ಬಿಟ್ಟುಕೊಟ್ಟಿಲ್ಲ. ಅವರ ನಡೆ ನಿಗೂಢವಾಗಿಯೇ ಉಳಿದಿದೆ. ಮುನಿಸಿಕೊಂಡಿರುವ ಸದಾನಂದ ಗೌಡರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳಲು ಪ್ರಯತ್ನ ಮಾಡುತ್ತಿರುವ ಬಿಜೆಪಿ ಹೈಕಮಾಂಡ್ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಆಫರ್ ನೀಡಿದೆ. ಇನ್ನೊಂದೆಡೆ ಡಿ.ವಿ.ಸದಾನಂದ ಗೌಡರನ್ನು ಸೆಳೆಯಲು ಕಾಂಗ್ರೆಸ್‌ನಿಂದಲೂ ಪ್ರಯತ್ನ ನಡೆಯುತ್ತಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಡಿ.ವಿ.ಸದಾನಂದ ಗೌಡ ಮಾ.19ರಂದು ಬೆಂಗಳೂರಿನಲ್ಲಿ ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ […]

ಡಿ.ವಿ.ಎಸ್‍. ಗೆ ಬಿಜೆಪಿ-ಕಾಂಗ್ರೆಸ್ ಎರಡೂ ಪಕ್ಷದಿಂದಲೂ ಟಿಕೇಟ್ ಆಫರ್ ! | ಬಿಜೆಪಿಯಿಂದ ಮನವೊಲಿಕೆಗೆ ಯತ್ನ Read More »

ದ.ಕ.ಜಿಲ್ಲಾ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್.ಪದ್ಮರಾಜ್

ಪುತ್ತೂರು: ದಕ್ಷಿಣಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಅವರಿಗೆ ಟಿಕೇಟ್ ನೀಡಲಾಗಿದೆ. ಜನಾರ್ದನ ಪೂಜಾರಿಯವರ ಶಿಷ್ಯರಾಗಿರುವ, ವಕೀಲ ಪದ್ಮರಾಜ್ ಬಿಲ್ಲವ ಸಮುದಾಯದ ಯುವ ನಾಯಕ, ಗುರುಬೆಳದಿಂಗಳು ಸೇವಾ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಖಜಾಂಚಿಯಾಗಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಆರ್. ಪದ್ಮರಾಜ್ ತಮ್ಮ ಸಮಾಜಮುಖಿ ಕೆಲಸಗಳಿಂದ ಹೆಚ್ಚು ಜನಪ್ರಿಯರಾಗಿದ್ದಾರೆ. ಇತ್ತೀಚೆಗೆ ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿಯೂ ಇವರು ಕಣಕ್ಕಿಳಿಯಲಿದ್ದಾರೆ ಎನ್ನುವ ಮಾತುಗಳು ಕೇಳಿ

ದ.ಕ.ಜಿಲ್ಲಾ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್.ಪದ್ಮರಾಜ್ Read More »

ಡಿ.ವಿ.ಎಸ್. ಕಾಂಗ್ರೆಸ್‍ ಗೆ ಬರುವುದು ಬೇಡ : ಖಡಕ್ ಆಗಿ ಹೇಳಿದ ಮುಖ್ಯಮಂತ್ರಿ ಸಿದ್ಧರಾಮಯ್ಯ | ಕಾಂಗ್ರೆಸ್‍ ಸೇರ್ಪಡೆ ಯೋಜನೆ ಠುಸ್‍ !

ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಕಾಂಗ್ರೆಸ್‌ ಬರುವುದು ಬೇಡ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಖಡಕ್ ಆಗಿ ಹೇಳಿದ್ದಾರೆ. ಈ ಮೂಲಕ ಡಿವಿಎಸ್ ಅವರಿಗೆ ಕಾಂಗ್ರೆಸ್ ಸೇರ್ಪಡೆಗೆ ತಣ್ಣೀರು ಎರಚಿದಂತಾಗಿದೆ. ಸದಾನಂದ ಗೌಡ ಸಹಿತ ಬಿಜೆಪಿಯ ಹಲವು ಅತೃಪ್ತ ನಾಯಕರ ಕಾಂಗ್ರೆಸ್‌ ಸೇರುವ ಯೋಜನೆ ಠುಸ್‌ ಆಗಿದೆ ಎಂದು ಮೂಲವೊಂದು ತಿಳಿಸಿದೆ. ಮೈಸೂರು ಕ್ಷೇತ್ರದಿಂದ ಸದಾನಂದ ಗೌಡರನ್ನು ಕಾಂಗ್ರೆಸ್‌ ಕಣಕ್ಕಿಳಿಸುವ ವದಂತಿ ದಟ್ಟವಾಗಿ ಹರಡಿತ್ತು. ಈ ಪ್ರಸ್ತಾವಕ್ಕೆ ಒಂದೇ ಮಾತಿನಲ್ಲಿ ಸಿದ್ದರಾಮಯ್ಯ ಆಗುವುದಿಲ್ಲ ಎಂದು ಖಡಕ್‌ ಆಗಿ ಹೇಳಿದ್ದಾರೆ.

ಡಿ.ವಿ.ಎಸ್. ಕಾಂಗ್ರೆಸ್‍ ಗೆ ಬರುವುದು ಬೇಡ : ಖಡಕ್ ಆಗಿ ಹೇಳಿದ ಮುಖ್ಯಮಂತ್ರಿ ಸಿದ್ಧರಾಮಯ್ಯ | ಕಾಂಗ್ರೆಸ್‍ ಸೇರ್ಪಡೆ ಯೋಜನೆ ಠುಸ್‍ ! Read More »

ಮುಂದೂಡಲ್ಪಟ್ಟ ಡಿವಿಎಸ್ ಪತ್ರಿಕಾಗೋಷ್ಠಿ

ಬೆಂಗಳೂರು: ಇಂದು ನಿಗದಿಯಾಗಿದ್ದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರ ಸುದ್ದಿಗೋಷ್ಠಿ ಮುಂದೂಡಲ್ಪಟ್ಟಿದೆ. ಬೆಂಗಳೂರಿನಲ್ಲಿ ಇಂದು ಸದಾನಂದ ಗೌಡ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರ ಜೊತೆ ಚರ್ಚೆ ನಡೆಸಲಿದ್ದಾರೆ.  ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಮುಂದೂಡಲಾಗಿದೆ ಎಂದು ಹೇಳಲಾಗಿದೆ.

ಮುಂದೂಡಲ್ಪಟ್ಟ ಡಿವಿಎಸ್ ಪತ್ರಿಕಾಗೋಷ್ಠಿ Read More »

ಇಂದು ಡಿವಿ ಸದಾನಂದ ಗೌಡರ ನಿರ್ಧಾರ ಪ್ರಕಟ  | ತಟಸ್ಥವಾಗಿ  ಉಳಿಯುತ್ತಾರೋ? ‘ಕೈ’ ಹಿಡಿಯುತ್ತಾರೋ?

ಬೆಂಗಳೂರು : ಲೋಕಸಭಾ ಚುನಾವಣೆ ಟಿಕೆಟ್‌ಗೆ ಸಂಬಂಧಿಸಿದಂತೆ ಕೆ. ಎಸ್.ಈಶ್ವರಪ್ಪ ಬಳಿಕ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡರೂ ಅಸಮಾಧಾನಗೊಂಡಿದ್ದು, ಇಂದು ತಮ್ಮ ಮುಂದಿನ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಇಂದು ಸುದ್ದಿಗೋಷ್ಟಿ ಕರೆದಿದ್ದು ತಮ್ಮ ನಿರ್ಧಾರ ಪ್ರಕಟಿಸಲಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿವಿಎಸ್ ‘ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಆ ಪಕ್ಷದ ನಾಯಕರು ನನ್ನನ್ನು ಸಂಪರ್ಕಿಸಿರುವುದು ನಿಜ. ಈ ಬಗ್ಗೆ ಕುಟುಂಬದವರೊಂದಿಗೆ ಚರ್ಚಿಸಿ ಇಂದು ನನ್ನ ಅಂತರಾಳದ ವಿಚಾರವನ್ನು ತಿಳಿಸುತ್ತೇನೆ’ ಎಂದಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ

ಇಂದು ಡಿವಿ ಸದಾನಂದ ಗೌಡರ ನಿರ್ಧಾರ ಪ್ರಕಟ  | ತಟಸ್ಥವಾಗಿ  ಉಳಿಯುತ್ತಾರೋ? ‘ಕೈ’ ಹಿಡಿಯುತ್ತಾರೋ? Read More »

ಡಿ.ವಿ.ಸದಾನಂದ ಗೌಡ ಕಾಂಗ್ರೆಸ್ ಸೇರುತ್ತಾರೋ ? ಇಲ್ಲವೋ ? | ನಾಳೆ ಪತ್ರಿಕಾಗೋಷ್ಠಿ ಆಯೋಜಿಸಿದ ಡಿ.ವಿ.

ಬೆಂಗಳೂರು: ಲೋಕಸಭೆ ಚುನಾವಣೆ ಟಿಕೇಟ್ ಕುರಿತು ಕಾಂಗ್ರೆಸ್ ನಾಯಕರು ನನ್ನನ್ನು ಸಂಪರ್ಕ ಮಾಡಿರುವುದು ನಿಜ. ಈ ಕುರಿತು ಕುಟುಂಬದವರ ಜತೆ ಮಾತುಕತೆ ನಡೆಸಬೇಕಾಗಿದೆ. ನಾಳೆ ಪತ್ರಿಕಾಗೋಷ್ಠಿ ನಡೆಸಿ ನನ್ನ ನಿಲುವು ತಿಳಿಸುತ್ತೇನೆ ಎಂದು ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ. ಈಗಾಗಲೇ ಕಾಂಗ್ರೆಸ್ ಪಕ್ಷದ ಪ್ರಮುಖರೊಬ್ಬರು ನನ್ನ ಜತೆ ಸಮಾಲೋಚನೆ ಮಾಡಿದ್ದಾರೆ. ಅವರು ಹೇಳಿರುವ ಮಾತನ್ನು ಈಗ ಬಹಿರಂಗಪಡಿಸಲು ಆಗುವುದಿಲ್ಲ. ನಾಳೆ ಎಲ್ಲವನ್ನೂ ತಿಳಿಸುತ್ತೇನೆ ಎಂದಿದ್ದಾರೆ. ಯಾರಿಗೆಲ್ಲ ಅನ್ಯಾಯ ಆಗಿದೆಯೋ ಅವರೆಲ್ಲಾ ಒಂದುಗೂಡಿ ಹೈಕಮಾಂಡ್ ಬಳಿ ಹೋಗೋಣ ಎಂದಿದ್ದೆ. ಆದರೆ

ಡಿ.ವಿ.ಸದಾನಂದ ಗೌಡ ಕಾಂಗ್ರೆಸ್ ಸೇರುತ್ತಾರೋ ? ಇಲ್ಲವೋ ? | ನಾಳೆ ಪತ್ರಿಕಾಗೋಷ್ಠಿ ಆಯೋಜಿಸಿದ ಡಿ.ವಿ. Read More »

ಪುತ್ತೂರು ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರ ಮೇಲಿನ ಕಾಂಗ್ರೆಸ್ ಗೂಂಡಾಗಿರಿ ಖಂಡನೀಯ : ಕ್ಯಾ.ಬ್ರಿಜೇಶ್ ಚೌಟ

ಪುತ್ತೂರು: ಪುತ್ತೂರಿನ ಶಾಸಕರ 1400 ಕೋಟಿಯ ಅನುದಾನದ ಬಗ್ಗೆ ಮಾಹಿತಿ ಕೇಳಿದ ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರರ ಮನೆಗೆ ನುಗ್ಗಿ ದಾಂದಲೆ ನಡೆಸಿರುವ ಘಟನೆಯನ್ನು ತೀವ್ರವಾಗಿ ಖಂಡನೀಯ ಎಂದು ದ.ಕ.ಜಿಲ್ಲಾ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಹೇಳಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ತಾನು 1400 ಕೋಟಿಯ ಅನುದಾನ ತಂದಿದ್ದೇನೆ ಎಂದು ಹೇಳುವ ಶಾಸಕರಿಗೆ ಆ ಬಗ್ಗೆ ಮಾಹಿತಿ ನೀಡಲು ಹಿಂಜರಿಕೆ ಏಕೆ.  ಅನುದಾನದ ಬಗ್ಗೆ ಮಾಹಿತಿ ನೀಡಲು ಪುತ್ತೂರು ಶಾಸಕರು ವಿಫಲರಾಗಿದ್ದು, ಹತಾಶರಾಗಿರುವ ಶಾಸಕರು ತನ್ನ

ಪುತ್ತೂರು ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರ ಮೇಲಿನ ಕಾಂಗ್ರೆಸ್ ಗೂಂಡಾಗಿರಿ ಖಂಡನೀಯ : ಕ್ಯಾ.ಬ್ರಿಜೇಶ್ ಚೌಟ Read More »

ಲೋಕಸಭೆ ಚುನಾವಣೆ | ಪುತ್ತೂರಿನಲ್ಲಿ 9 ಮಾದರಿ ಮತಗಟ್ಟೆಗಳನ್ನು ಗುರುತಿಸಲಾಗಿದೆ | ಪತ್ರಿಕಾಗೋಷ್ಠಿಯಲ್ಲಿ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ

ಪುತ್ತೂರು : ಏ.26 ಹಾಗೂ ಮೇ7 ರಂದು ಎರಡು ಹಂತಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲೆ ಸೇರಿದಂತೆ ಪುತ್ತೂರು ವಿಧಾನಸಭಾ ಕ್ಷೇತ್ರ ಶಾಂತಿಯುತ ಮತದಾನ ನಡೆಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೂರ್ವ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ತಿಳಿಸಿದ್ದಾರೆ. ಭಾನುವಾರ ಆಡಳಿತ ಸೌಧದಲ್ಲಿರುವ ಸಹಾಯಕ ಆಯುಕ್ತರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಚುನಾವಣೆ ಕುರಿತು ಮಾಹಿತಿ ನೀಡಿದರು. ಮಾ.28 ರಿಂದ ಏ.4 ರ ತನಕ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ, ಏ.5

ಲೋಕಸಭೆ ಚುನಾವಣೆ | ಪುತ್ತೂರಿನಲ್ಲಿ 9 ಮಾದರಿ ಮತಗಟ್ಟೆಗಳನ್ನು ಗುರುತಿಸಲಾಗಿದೆ | ಪತ್ರಿಕಾಗೋಷ್ಠಿಯಲ್ಲಿ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ Read More »

ಪುತ್ತೂರಿನಲ್ಲಿ ಬಿಜೆಪಿ ಯಾವತ್ತೂ ಸೋಲೊದಿಲ್ಲ : ಅರುಣ್ ಕುಮಾ‌ರ್ ಪುತ್ತಿಲ

ಪುತ್ತೂರು: ಇವತ್ತು ನಾವೆಲ್ಲ ಕಾರ್ಯಾಲಯದಲ್ಲಿ ಭಾಗಿಯಾಗಿ ಮುಕ್ತ ಮನಸ್ಸಿನಿಂದ ಜೊತೆಯಾಗಿದ್ದೇವೆ. ಈ ರೀತಿಯ ವಾತಾವರಣ ಮುಂದಿನ ನೂರಾರು ವರ್ಷಗಳ ಕಾಲ ಇರಲಿ. ಪುತ್ತೂರಿನಲ್ಲಿ ಬಿಜೆಪಿ ಯಾವತ್ತೂ ಸೋಲೊದಿಲ್ಲ ಎಂಬ ಸಂದೇಶ ಸಮಾಜಕ್ಕೆ ರವಾನೆಯಾಗಲಿ ಎಂದು ಅರುಣ್ ಕುಮಾರ್ ಪುತ್ತಿಲ ಅವರು ಹೇಳಿದರು. ಅವರು ಇಂದು ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿ ಪಕ್ಷದ ಸ್ವಾಗತ ಪಡೆದು ಮಾತನಾಡಿದರು. ಈ ಹಿಂದೆ ಒಂದಷ್ಟು ಗೊಂದಲ ಆಗಿರುವುದು ಸಹಜ. ನಾನಿದನ್ನು ಒಪ್ಪಿಕೊಳ್ಳುತ್ತೇನೆ. ಎರಡು ಭಾಗಗಳಿಂದಲೂ ನೋವು ಆಗಿರುವುದು ಸಹಜ. ಆದರೆ

ಪುತ್ತೂರಿನಲ್ಲಿ ಬಿಜೆಪಿ ಯಾವತ್ತೂ ಸೋಲೊದಿಲ್ಲ : ಅರುಣ್ ಕುಮಾ‌ರ್ ಪುತ್ತಿಲ Read More »

ಅರುಣ್ ಕುಮಾರ್ ಪುತ್ತಿಲ ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ | ಆತ್ಮೀಯವಾಗಿ ಬರಮಾಡಿಕೊಂಡ ಬಿಜೆಪಿ ಪ್ರಮುಖರು

ಪುತ್ತೂರು: ಬಿಜೆಪಿ ಜತೆ ಪುತ್ತಿಲ ಪರಿವಾರ ವಿಲೀನಗೊಂಡ ಬೆನ್ನಲ್ಲೇ ಅರುಣ್ ಕುಮಾರ್ ಪುತ್ತಿಲ ಪುತ್ತೂರು ಬಿಜೆಪಿ ಕಚೇರಿಗೆ ಭಾನುವಾರ ಭೇಟಿ ನೀಡಿದರು. ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ಪುತ್ತಿಲರನ್ನು ಸ್ವಾಗತಿಸಿದರು. ಪುತ್ತಿಲರ ಜತೆ ಪ್ರಸನ್ನ ಕುಮಾರ್ ಮಾರ್ತ, ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ ಸಹಿತ ಹಲವಾರು ಮಂದಿ ಇದ್ದರು. ಬಿಜೆಪಿ ಪ್ರಮುಖರಾದ ಪುರುಷೋತ್ತಮ ಮುಂಗ್ಲಿಮನೆ, ಯುವರಾಜ್ ಪೆರಿಯತ್ತೋಡಿ, ಹರಿಪ್ರಸಾದ್ ಯಾದವ್, ಜಿಲ್ಲಾ ಬಿಜೆಪಿ ಪ್ರಮುಖರಾದ ಬೂಡಿಯಾರ್ ರಾಧಾಕೃಷ್ಣ

ಅರುಣ್ ಕುಮಾರ್ ಪುತ್ತಿಲ ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ | ಆತ್ಮೀಯವಾಗಿ ಬರಮಾಡಿಕೊಂಡ ಬಿಜೆಪಿ ಪ್ರಮುಖರು Read More »

error: Content is protected !!
Scroll to Top