ರಾಜಕೀಯ

ಅರುಣ್ ಕುಮಾರ್ ಪುತ್ತಿಲ ಮಂಗಳೂರು ಬಿಜೆಪಿ ಕಚೇರಿಗೆ ಭೇಟಿ | ಸ್ವಾಗತಿಸಿದ ಕಾರ್ಯಕರ್ತರು

ಮಂಗಳೂರು: ಅರುಣ್ ಕುಮಾರ್ ಪುತ್ತಿಲ ಇಂದು ಸಂಜೆ ಮಂಗಳೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದಾಗ ಅವರನ್ನು ಶಾಲು ಹಾಕಿ ಸ್ವಾಗತಿಸಲಾಯಿತು. ಅರುಣ್ ಕುಮಾರ್ ಪುತ್ತಿಲ ಮಂಗಳೂರಿಗೆ ಭೇಟಿ ನೀಡುವ ಸುದ್ದಿ ತಿಳಿಯುತ್ತಿದ್ದಂತೆ ಹಲವಾರು ಕಾರ್ಯಕರ್ತರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಹಲವಾರು ಮಂದಿ ಬಿಜೆಪಿ ಕಚೇರಿ ಮುಂದೆ ಜಮಾಯಿಸಿದ್ದಾರೆ ಎನ್ನಲಾಗಿದೆ.

ಅರುಣ್ ಕುಮಾರ್ ಪುತ್ತಿಲ ಮಂಗಳೂರು ಬಿಜೆಪಿ ಕಚೇರಿಗೆ ಭೇಟಿ | ಸ್ವಾಗತಿಸಿದ ಕಾರ್ಯಕರ್ತರು Read More »

ಕೇಂದ್ರ ಚುನಾವಣಾ ಆಯೋಗದಿಂದ ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟ

ಬೆಂಗಳೂರು: ಲೋಕಸಭಾ ಚುನಾವಣೆ ದಿನಾಂಕ ಪ್ರಕಟವಾಗಿದ್ದು, ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ  ಏಪ್ರೀಲ್ 26 ಹಾಗು ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆದು ಜೂನ್ 4 ರಂದು ಸಾರ್ವತ್ರಿಕ ಚುನಾವಣೆಯ ಪಲಿತಾಂಶ ಘೋಷಣೆಯಾಗಲಿದೆ. ಇಂದು ದೆಹಲಿಯ ವಿಜ್ಞಾನ್ ಭವನದಲ್ಲಿ ಚುನಾವಣಾ ಆಯೋಗ ಸುದ್ದಿಗೋಷ್ಟಿ ನಡೆಸಿದ್ದು, ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ಕುಮಾ‌ರ್ ಅವರ ನೇತೃತ್ವದ ಚುನಾವಣಾ ಆಯೋಗ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆ ಮಾಡಿದೆ.

ಕೇಂದ್ರ ಚುನಾವಣಾ ಆಯೋಗದಿಂದ ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟ Read More »

ಮಹಾನ್ ಭಾರತದ ಕನಸಿನ ಸಾಕಾರಮೂರ್ತಿ ನರೇಂದ್ರ ಮೋದಿಯವರನ್ನು  ಪ್ರಧಾನಿಯಾಗಿಸಲು ಪ್ರತೀ ಮನಸ್ಸುಗಳು ಒಂದಾಗಬೇಕು :ಚಕ್ರವರ್ತಿ ಸೂಲಿಬೆಲೆ

ಪುತ್ತೂರು: ಮಹಾನ್ ಭಾರತದ ಕನಸಿನ ಸಾಕಾರಮೂರ್ತಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿಯಾಗಿಸುವಲ್ಲಿ ಪ್ರತಿ ಮನಸ್ಸುಗಳು ಒಂದಾಗಬೇಕು ಎಂದು ಯುವ ಬ್ರಿಗೇಡ್ ಸಂಸ್ಥಾಪಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು. ಪುತ್ತೂರು ನಮೋ ಭಾರತ್ ವತಿಯಿಂದ ಗುರುವಾರ ಸಂಜೆ ನಗರದ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಹಿಂದಿನ ಗದ್ದೆಯಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು. ರಾಷ್ಟ್ರದ ಅಭಿವೃದ್ಧಿಗಾಗಿ 10 ವರ್ಷಗಳಲ್ಲಿ ಒಂದು ದಿನವೂ ರಜೆಯನ್ನು ಮಾಡದೆ ಶ್ರಮಿಸುವ ಪ್ರಧಾನಿ ನರೇಂದ್ರ ಮೋದಿಯವರು, ಸೈನಿಕರ ಜತೆ

ಮಹಾನ್ ಭಾರತದ ಕನಸಿನ ಸಾಕಾರಮೂರ್ತಿ ನರೇಂದ್ರ ಮೋದಿಯವರನ್ನು  ಪ್ರಧಾನಿಯಾಗಿಸಲು ಪ್ರತೀ ಮನಸ್ಸುಗಳು ಒಂದಾಗಬೇಕು :ಚಕ್ರವರ್ತಿ ಸೂಲಿಬೆಲೆ Read More »

ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕೆ.ಎಸ್.ಈಶ್ವರಪ್ಪ ಸ್ಪರ್ಧೆ !

ಶಿವಮೊಗ್ಗ: ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕೆ.ಎಸ್.ಈಶ್ವರಪ್ಪ  ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದು, ಯಡಿಯೂರಪ್ಪನವರ ಪುತ್ರ ರಾಘವೇಂದ್ರ ಅವರ ವಿರುದ್ಧ ನಿಲ್ಲುವುದಾಗಿ ಸವಾಲು ಹಾಕಿದ್ದಾರೆ. ಕಾರ್ಯಕರ್ತರ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ನಾನು ಗೆಲ್ಲುತ್ತೇನೆ. ಗೆದ್ದ ಎರಡು ತಿಂಗಳಿನಲ್ಲಿ ನಾನು ಬಿಜೆಪಿ ಸೇರುತ್ತೇನೆ ಎಂದು ಹೇಳಿದ್ದಾರೆ. ಯಡಿಯೂರಪ್ಪ ಅವರು ಅವರಿಗೆ ಬೇಕಾದವರಿಗೆ ಟಿಕೇಟ್ ನೀಡಿದ್ದಾರೆ. ಸೋತರೆ ಯಡಿಯೂರಪ್ಪನವರೇ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನಗೆ ಆರೋಗ್ಯ ಸರಿಯಿಲ್ಲ, ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಬೊಮ್ಮಾಯಿ ತಿಳಿಸಿದ್ದರು.

ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕೆ.ಎಸ್.ಈಶ್ವರಪ್ಪ ಸ್ಪರ್ಧೆ ! Read More »

ಪುತ್ತೂರು ಬಿಜೆಪಿ ಕಚೇರಿಯಲ್ಲಿ ಬಾಗಿಲು ಹಾಕಿ ಪ್ರಮುಖರ ಸಭೆ | ಮಾಧ್ಯಮ ಸಹಿತ ಇತರರಿಗೆ ಪ್ರವೇಶ ನಿರಾಕರಣೆ

ಪುತ್ತೂರು: ಪುತ್ತೂರು ಬಿಜೆಪಿ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಇಂದು ಸಂಜೆ ಭೇಟಿ ನೀಡಿದ್ದು, ಪ್ರಮುಖರ ಆಂತರಿಕ ಸಭೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಬಿಜೆಪಿ ಕಚೇರಿಯ ಬಾಗಿಲು ಹಾಕಿ ಸಭೆ ನಡೆಸಲಾಗುತ್ತಿದೆ. ಮಾಧ್ಯಮ ಸಹಿತ ಇತರರಿಗೆ ಪ್ರವೇಶಕ್ಕೆ ಅವಕಾಶ ನೀಡಿಲ್ಲ ಎಂದು ತಿಳಿದು ಬಂದಿದೆ.

ಪುತ್ತೂರು ಬಿಜೆಪಿ ಕಚೇರಿಯಲ್ಲಿ ಬಾಗಿಲು ಹಾಕಿ ಪ್ರಮುಖರ ಸಭೆ | ಮಾಧ್ಯಮ ಸಹಿತ ಇತರರಿಗೆ ಪ್ರವೇಶ ನಿರಾಕರಣೆ Read More »

ಮೋದಿ ನೇತೃತ್ವದ ಸದೃಢ ಸರಕಾರ ಆಡಳಿತಕ್ಕೆ ಬರಬೇಕು | ಬಿಜೆಪಿ ಮರು ಸೇರ್ಪಡೆ ಬಳಿಕ ಅರುಣ್ ಕುಮಾರ್ ಪುತ್ತಿಲ ಪ್ರತಿಕ್ರಿಯೆ

ಪುತ್ತೂರು: ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟರನ್ನು ನಾಲ್ಕು ಲಕ್ಷ ಅಂತರಗಳಿಂದ ಈ ಬಾರಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಸಂಕಲ್ಪ ಮಾಡುವ ಮೂಲಕ ಮೋದಿ ನೇತೃತ್ವದ ಸದೃಢ ಸರಕಾರ ಆಡಳಿತಕ್ಕೆ ಬರಬೇಕಾದ ಅವಶ್ಯಕತೆಯಿದೆ  ಎಂದು ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ. ಗುರುವಾರ ರಾತ್ರಿ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಮರು ಸೇರ್ಪಡೆಗೊಂಡ ಬಳಿಕ ಪುತ್ತೂರಿಗೆ ಆಗಮಿಸಿದ ಅರುಣ್ ಕುಮಾರ್ ಪುತ್ತಿಲ ಇಂದು ಬೆಳಿಗ್ಗೆ ಮಾಧ್ಯಮದವರೊಂದಿಗೆ ಈ ವಿಷಯ ತಿಳಿಸಿದರು. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಾವಿದ್ದು, ಈ ರಾಷ್ಟ್ರದಲ್ಲಿ

ಮೋದಿ ನೇತೃತ್ವದ ಸದೃಢ ಸರಕಾರ ಆಡಳಿತಕ್ಕೆ ಬರಬೇಕು | ಬಿಜೆಪಿ ಮರು ಸೇರ್ಪಡೆ ಬಳಿಕ ಅರುಣ್ ಕುಮಾರ್ ಪುತ್ತಿಲ ಪ್ರತಿಕ್ರಿಯೆ Read More »

ಬಿಜೆಪಿಗೆ ಮರು ಸೇರ್ಪಡೆಗೊಂಡ ಅರುಣ್ ಕುಮಾರ್ ಪುತ್ತಿಲ | ಕೊನೆಗೂ ಮಾತುಕತೆ ಫಲಪ್ರದ

ಪುತ್ತೂರು: ಕೊನೆಗೂ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಕಚೇರಿಯಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಸುನಿಲ್ ಕುಮಾರ್ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪುತ್ತೂರು ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪಿ.ಜಿ.ಜಗನ್ನಿವಾಸ ರಾವ್, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ಬಿಜೆಪಿಗೆ ಮರು ಸೇರ್ಪಡೆಗೊಂಡ ಅರುಣ್ ಕುಮಾರ್ ಪುತ್ತಿಲ | ಕೊನೆಗೂ ಮಾತುಕತೆ ಫಲಪ್ರದ Read More »

ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಸಂಘಟನೆಯ ಆಧಾರದಲ್ಲಿ ಚುನಾವಣೆ ಪ್ರಚಾರ : ಕ್ಯಾ.ಬ್ರಿಜೇಶ್ ಚೌಟ

ಪುತ್ತೂರು: ಹಿರಿಯರು ರಕ್ತ ಮತ್ತು ಬೆವರನ್ನು ಒಂದು ಮಾಡಿ ಕಟ್ಟಿದ ಅಂತ್ಯಂತ ದೊಡ್ಡ ರಾಷ್ಟ್ರೀಯ ಪಕ್ಷ ಬಿಜೆಪಿ. ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂಬ ಸಂಕಲ್ಪದಂತೆ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕೆಲಸ ಕಾರ್ಯಗಳನ್ನು ಮಾಡಲಿದ್ದೇನೆ ಎಂದು ಲೋಕಸಭೆ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಹೇಳಿದರು. ಅವರು ಗುರುವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಾವುದೇ ಚ್ಯುತಿ ಬಾರದಂತೆ ಸಂಘಟನೆಯ ಆಧಾರದಲ್ಲಿ

ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಸಂಘಟನೆಯ ಆಧಾರದಲ್ಲಿ ಚುನಾವಣೆ ಪ್ರಚಾರ : ಕ್ಯಾ.ಬ್ರಿಜೇಶ್ ಚೌಟ Read More »

ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿಯಾಗಿ ನಿವೃತ್ತ ಸೇನಾಧಿಕಾರಿ, ಯುವ ನಾಯಕ ಬ್ರಿಜೇಶ್‍ ಚೌಟ | ರಾಜ್ಯದಿಂದ ಇದೇ ಮೊದಲ ಬಾರಿಗೆ ಸೇನೆಯಲ್ಲಿ ದುಡಿದ ವ್ಯಕ್ತಿಗೆ ಸಂಸತ್ ಸ್ಪರ್ಧೆಗೆ ಟಿಕೇಟ್

ಮಂಗಳೂರು: ನಿವೃತ್ತ ಸೇನಾಧಿಕಾರಿ, ಮಂಗಳೂರಿನ ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ. ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ ಸ್ವಯಂ ನಿವೃತ್ತಿ ಪಡೆದು ಸಮಾಜ ಸೇವೆಗೆ ಇಳಿದ ಯುವ ನಾಯಕನನ್ನು ಬಿಜೆಪಿ ಸಂಸತ್ತಿಗೆ ಆಯ್ದುಕೊಂಡಿದೆ. ರಾಜ್ಯದಿಂದ ಇತ್ತೀಚಿನ ದಿನಗಳಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಸೇನೆಯಲ್ಲಿ ದೇಶಕ್ಕಾಗಿ ದುಡಿದು ಬಂದ ವ್ಯಕ್ತಿಯೊಬ್ಬರಿಗೆ ಸಂಸತ್ ಸ್ಪರ್ಧೆಯ ಟಿಕೆಟ್ ಕೊಡಲಾಗಿದೆ. ಮಂಗಳೂರಿನ ರಥಬೀದಿಯಲ್ಲಿ

ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿಯಾಗಿ ನಿವೃತ್ತ ಸೇನಾಧಿಕಾರಿ, ಯುವ ನಾಯಕ ಬ್ರಿಜೇಶ್‍ ಚೌಟ | ರಾಜ್ಯದಿಂದ ಇದೇ ಮೊದಲ ಬಾರಿಗೆ ಸೇನೆಯಲ್ಲಿ ದುಡಿದ ವ್ಯಕ್ತಿಗೆ ಸಂಸತ್ ಸ್ಪರ್ಧೆಗೆ ಟಿಕೇಟ್ Read More »

ಹಾವೇರಿ ಕ್ಷೇತ್ರ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಕೆ.ಎಸ್‍.ಈಶ್ವರಪ್ಪ ಭಾರೀ ಆಕ್ರೋಶ | ಶಿವಮೊಗ್ಗದಿಂದ ಬಂಡಾಯ ಸಾಧ್ಯತೆ ?

ಶಿವಮೊಗ್ಗ: ಬಸವರಾಜ್ ಬೊಮ್ಮಾಯಿ ಅವರ ಹೆಸರು ಹಾವೇರಿ ಕ್ಷೇತ್ರಕ್ಕೆ ಘೋಷಣೆಯಾಗುತ್ತಿದ್ದಂತೆ ಮಾಜಿ ಸಿಎಂ ಕೆ.ಎಸ್‍.ಈಶ್ವರಪ್ಪ ಅವರು ಭಾರೀ ಆಕ್ರೋಶಿತರಾಗಿದ್ದಾರೆ. ಈ ಕುರಿತು ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಅವರು ಮಾತನಾಡಿ ನಾನು 40 ವರ್ಷ ಪಕ್ಷದಲ್ಲಿ ನಿಷ್ಠೆಯಿಂದ ದುಡಿದಿದ್ದು, ಅದನ್ನು ಗುರುತಿಸಿ ನನ್ನ ಮಗನಿಗೆ ಟಿಕೇಟ್ ನೀಡಬಹುದಿತ್ತು ಎಂದು ಹೇಳಿರುವ ಅವರು, ಶುಕ್ರವಾರ ಶಿವಮೊಗ್ಗದಲ್ಲಿ ಬೆಂಬಲಿಗರ ಸಭೆ ಕರೆದು ತೀರ್ಮಾನ ಕೈಗೊಳ್ಳಲಿದ್ದೇನೆ ಎಂದು ತಿಳಿಸಿದ್ದಾರೆ. ನಾನು 40 ವರ್ಷ ಪಕ್ಷಕ್ಕೆ ನಿಷ್ಠನಾಗಿದ್ದೇನೆ. ಅದನ್ನು ಗುರುತಿಸಿ ನನ್ನ

ಹಾವೇರಿ ಕ್ಷೇತ್ರ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಕೆ.ಎಸ್‍.ಈಶ್ವರಪ್ಪ ಭಾರೀ ಆಕ್ರೋಶ | ಶಿವಮೊಗ್ಗದಿಂದ ಬಂಡಾಯ ಸಾಧ್ಯತೆ ? Read More »

error: Content is protected !!
Scroll to Top