ರಾಜಕೀಯ

ಮುಂದಿನ ಲೋಕಸಭೆ ಚುನಾವಣೆ ಭಾರತದ ಭವಿಷ್ಯ ರೂಪಿಸಬೇಕಾದ ಮಹತ್ವದ ಚುನಾವಣೆಯಾಗಲಿದೆ | ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಮಂಗಳೂರು: ಮುಂದಿನ ಲೋಕಸಭಾ ಚುನಾವಣೆಯ ತಾಂತ್ರಿಕ ಘೊಷಣೆಯಾಗಿದ್ದು, ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬಂದು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಅವರು ಮಂಗಳವಾರ ಮಂಗಳೂರಿನಲ್ಲಿ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸತೀಶ್ ಕುಂಪಲ ಅವರ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಲೋಕಸಭೆ ಚುನಾವಣೆ ಕುರಿತು ಕರ್ನಾಟಕ ಸೇರಿದಂತೆ ಎಲ್ಲಾ ಕಡೆ ಬಿಜೆಪಿ ಪರ ವಾತಾವರಣ ಉಂಟಾಗಿದೆ. ಇದಕ್ಕೆ ಕಳೆದ ಕಾರ್ಯಕಾರಿಣಿ ಸಭೆಯಲ್ಲಿ ಶೇ.98 ರಷ್ಟು ಮಂದಿ […]

ಮುಂದಿನ ಲೋಕಸಭೆ ಚುನಾವಣೆ ಭಾರತದ ಭವಿಷ್ಯ ರೂಪಿಸಬೇಕಾದ ಮಹತ್ವದ ಚುನಾವಣೆಯಾಗಲಿದೆ | ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ Read More »

ಬೆಳಿಗ್ಗೆ ರಾಜೀನಾಮೆ, ಸಂಜೆ ಪ್ರಮಾಣವಚನ | ಇದು ಬಿಹಾರದ ಸಿಎಂ ನಿತೀಶ್ ಕುಮಾರ್ ಭಾನುವಾರದ ದಿನಚರಿ

ಪಾಟ್ನಾ: ಜೆಡಿಯು – ಬಿಜೆಪಿ ನೇತೃತ್ವದ ನೂತನ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್‌ ಭಾನುವಾರ (ಜ.28 ರಂದು) ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ಆಯೋಜಿಸಿದ ಸಮಾರಂಭದಲ್ಲಿ ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದರು. ಆ ಮೂಲಕ ನಿತೀಶ್‌ ಕುಮಾರ್‌ 9ನೇ ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಭಾನುವಾರ ಮುಂಜಾನೆ ನಿತೀಶ್ ರಾಜಭವವಕ್ಕೆ ತೆರಳಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದು

ಬೆಳಿಗ್ಗೆ ರಾಜೀನಾಮೆ, ಸಂಜೆ ಪ್ರಮಾಣವಚನ | ಇದು ಬಿಹಾರದ ಸಿಎಂ ನಿತೀಶ್ ಕುಮಾರ್ ಭಾನುವಾರದ ದಿನಚರಿ Read More »

ಮೋದಿ ಮತ್ತೊಮ್ಮೆ ಗೋಡೆ ಬರಹಕ್ಕೆ ಚಾಲನೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮೋದಿ ಮತ್ತೊಮ್ಮೆ ಗೋಡೆ ಬರಹಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಪುತ್ತೂರಿನ ಹಲವೆಡೆ ಮೋದಿ ಮತ್ತೊಮ್ಮೆ ಎಂದು ಬರೆದು, ಬಿಜೆಪಿಯ ಕಮಲ ಚಿಹ್ನೆಯನ್ನು ಅಂಟಿಸಲಾಯಿತು.  ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಪಿ.ಜಿ ಜಗನ್ನೀವಾಸ್ ರಾವ್, ಮಾಜಿ ಶಾಸಕ ಸಂಜೀವ ಮಠಂದೂರು, ಗೋಡೆ ಬರಹ ಜಿಲ್ಲಾ ಸಹ ಸಂಚಾಲಕ ದಯಾನಂದ ಶೆಟ್ಟಿ, ಮಂಡಲದ ಗೋಡೆ ಬರಹ ಪ್ರಮುಖ ಸುರೇಶ್ ಅತ್ರಮಜಲು, ರಾಜೇಶ್

ಮೋದಿ ಮತ್ತೊಮ್ಮೆ ಗೋಡೆ ಬರಹಕ್ಕೆ ಚಾಲನೆ Read More »

ಲೋಕಸಭಾ ಚುನಾವಣೆವರೆಗೂ ವಿಶ್ರಮಿಸದಿರಿ: ಬಿ.ವೈ. ವಿಜಯೇಂದ್ರ

ಬೆಂಗಳೂರು: ನಮ್ಮ ಮುಂದಿರುವ ಗುರಿ ಲೋಕಸಭಾ ಚುನಾವಣೆ. ಆ ಲೋಕಸಭಾ ಚುನಾವಣೆ ಆಗುವವರೆಗೂ ನಾವು ವಿಶ್ರಾಂತಿ ಪಡೆಯುವ, ಮನೆಯಲ್ಲಿ ಕುಳಿತುಕೊಳ್ಳುವ ಸಂದರ್ಭ ಉದ್ಭವಿಸಬಾರದು. ನಮ್ಮ ಸಾಧನೆಗಳನ್ನು ಜನರ ಮುಂದಿಟ್ಟು, ಹಗಲು ರಾತ್ರಿ ಪಕ್ಷದ ಗೆಲುವಿಗಾಗಿ ಶ್ರಮ ಹಾಕಬೇಕಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ಆರಂಭವಾದ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಒಂದು ಕಡೆ ಲೋಕಸಭಾ ಚುನಾವಣೆ ಬರುತ್ತಿದೆ. ಇನ್ನೊಂದೆಡೆ ನೂರಾರು ವರ್ಷಗಳ

ಲೋಕಸಭಾ ಚುನಾವಣೆವರೆಗೂ ವಿಶ್ರಮಿಸದಿರಿ: ಬಿ.ವೈ. ವಿಜಯೇಂದ್ರ Read More »

ಲೋಕಸಭಾ ಚುನಾವಣೆ: ದಕ್ಷಿಣ ಕನ್ನಡಕ್ಕೆ ಕೋಟ ಶ್ರೀನಿವಾಸ ಪೂಜಾರಿ ಉಸ್ತುವಾರಿ | ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೂ ಉಸ್ತುವಾರಿ ನೇಮಿಸಿದ ಬಿಜೆಪಿ!

ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿರುವ ಬಿಜೆಪಿ ಹೈಕಮಾಂಡ್, ಈ ಬಾರಿ ರಾಜ್ಯ ಚುನಾವಣಾ ಉಸ್ತುವಾರಿಯನ್ನು ರಾಧ ಮೋಹನದಾಸ್ ಅಗರವಾಲ್ ಹಾಗೂ ಸುಧಾಕರ್ ರೆಡ್ಡಿ ಅವರಿಗೆ ನೀಡಲಾಗಿದೆ. ಅಲ್ಲದೇ, ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೂ  ಉಸ್ತುವಾರಿಗಳನ್ನು ನೇಮಕ ಮಾಡಿ ಅಧಿಕೃತ ಪಟ್ಟಿಯನ್ನು ಹೊರಡಿಸಿದೆ. ದಕ್ಷಿಣ ಕನ್ನಡಕ್ಕೆ ಕೋಟ ಶ್ರೀನಿವಾಸ ಪೂಜಾರಿ, ಮೈಸೂರಿಗೆ ಡಾ. ಸಿ.ಎನ್. ಅಶ್ವತ್ಥ ನಾರಾಯಣ್, ಮಂಡ್ಯಕ್ಕೆ ಸುನಿಲ್ ಸುಬ್ರಮಣಿ ಅವರಿಗೆ ಉಸ್ತುವಾರಿ ವಹಿಸಲಾಗಿದೆ. ಇದರ ಜೊತೆಗೆ ಇತರ ಕ್ಷೇತ್ರವಾರು ಉಸ್ತುವಾರಿಗಳ ಪಟ್ಟಿ ಹೀಗಿದೆ. ಮೈಸೂರು: ಡಾ.ಸಿಎನ್

ಲೋಕಸಭಾ ಚುನಾವಣೆ: ದಕ್ಷಿಣ ಕನ್ನಡಕ್ಕೆ ಕೋಟ ಶ್ರೀನಿವಾಸ ಪೂಜಾರಿ ಉಸ್ತುವಾರಿ | ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೂ ಉಸ್ತುವಾರಿ ನೇಮಿಸಿದ ಬಿಜೆಪಿ! Read More »

ಯಡಿಯೂರಪ್ಪ ಪುತ್ರನ ಗೆಲ್ಲಿಸಲು ಮನವಿ ಮಾಡಿದ ಕಾಂಗ್ರೆಸ್ ಹಿರಿಯ ಶಾಸಕ!!

ಶಿವಮೊಗ್ಗ: ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರರನ್ನು ಮತ್ತೊಮ್ಮೆ ಗೆಲ್ಲಿಸಿ ಎಂದು ಕಾಂಗ್ರೆಸ್‌ ಹಿರಿಯ ನಾಯಕ ದಾವಣಗೆರೆ ದಕ್ಷಿಣ ಕ್ಷೇತ್ರ ಶಾಸಕ, ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಬೆಕ್ಕಿನಕಲ್ಮಠದಲ್ಲಿಜಗದ್ಗುರು ಶ್ರೀ ಗುರುಬಸವ ಸ್ವಾಮೀಜಿಗಳ 112ನೇ ಪುಣ್ಯ ಸ್ಮರಣೋತ್ಸವ ಪ್ರಯುಕ್ತ ಶುಕ್ರವಾರ ಆಯೋಜಿಸಿದ್ದ ಭಾವೈಕ್ಯ ಸಮ್ಮೇಳನ ಹಾಗೂ ಗುರು ಬಸವಶ್ರೀ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಶಾಮನೂರು ಶಿವಶಂಕರಪ್ಪ ಅವರು, ”ರಾಘವೇಂದ್ರ ಅವರಂತಹ ಸಂಸತ್‌ ಸದಸ್ಯರನ್ನು ಪಡೆದ ನೀವೇ ಧನ್ಯರು. ಏಕೆಂದರೆ ತಮ್ಮ ಕ್ಷೇತ್ರದಲ್ಲಿ ಯಾವ ಕೆಲಸಗಳಾಗಬೇಕೆಂದು ನೋಡಿಕೊಂಡು ಆ ಎಲ್ಲವನ್ನು ತಮ್ಮ

ಯಡಿಯೂರಪ್ಪ ಪುತ್ರನ ಗೆಲ್ಲಿಸಲು ಮನವಿ ಮಾಡಿದ ಕಾಂಗ್ರೆಸ್ ಹಿರಿಯ ಶಾಸಕ!! Read More »

ಯೋಗ್ಯರನ್ನೇ ಪಕ್ಷಕ್ಕೆ ಕರೆತನ್ನಿ: ಖರ್ಗೆ ಸೂಚನೆ

ಬೆಂಗಳೂರು: ಪಕ್ಷಕ್ಕೆ ಯಾರನ್ನೇ ಕರೆತರುವಾಗ ಅವರ ಪೂರ್ವಾಪರ ವಿಚಾರಿಸಿ ಅವರು ನಮ್ಮ ಪಕ್ಷಕ್ಕೆ ಯೋಗ್ಯರೇ ಎಂಬುದನ್ನು ಯೋಚಿಸಿ ಕರೆತರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಶುಕ್ರವಾರ ಕರೆ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿರುವ ಖರ್ಗೆ ಅವರು, ಹೀಗೆ ಬಂದ್ರು ಹಾಗೆ ಹೋದ್ರು ಅಂತಾಗಬಾರದು. ಯಾರನ್ನೇ ಪಕ್ಷಕ್ಕೆ ಕರೆತರುವಾಗ ಯೋಚಿಸಿ, ಯೋಗ್ಯವಾದವರನ್ನು ಕರೆತರಬೇಕು ಎಂದು ಹೇಳಿದರು. ಮಾರುಕಟ್ಟೆಯಲ್ಲಿ ಯಾವೊಂದು ಸಣ್ಣ ವಸ್ತು ಖರೀದಿಸುವಾಗಲೂ ಅದರ ಗುಣಮಟ್ಟ

ಯೋಗ್ಯರನ್ನೇ ಪಕ್ಷಕ್ಕೆ ಕರೆತನ್ನಿ: ಖರ್ಗೆ ಸೂಚನೆ Read More »

ಶೆಟ್ಟರ್ ಘರ್ ವಾಪ್ಸಿ, ದೆಹಲಿಯಲ್ಲಿ ಘೋಷಣೆ! | ರಾಜೀನಾಮೆ ಪತ್ರ ತಲುಪಿಲ್ಲ ಎಂದ ಡಿಕೆಶಿ!

ಬೆಂಗಳೂರು: ಜಗದೀಶ್ ಶೆಟ್ಟರ್ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ನವದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಸೇರ್ಪಡೆ ಬಗ್ಗೆ ಮಾಹಿತಿ ನೀಡಲಾಯಿತು. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ನಿವಾಸದಲ್ಲಿ ಸಭೆ ನಡೆದು, ಈ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು. ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಉಪಸ್ಥಿತರಿದ್ದರು. ಶೆಟ್ಟರ್ ಬಿಜೆಪಿ ಮರು ಸೇರ್ಪಡೆ ಬಗ್ಗೆ ಹೇಳಿಕೆ ನೀಡಿರುವ ಡಿ.ಕೆ. ಶಿವಕುಮಾರ್, ಶೆಟ್ಟರ್ ಅವರು ಬಿಜೆಪಿಯಿಂದ ಸ್ಪರ್ಧಿಸಿ

ಶೆಟ್ಟರ್ ಘರ್ ವಾಪ್ಸಿ, ದೆಹಲಿಯಲ್ಲಿ ಘೋಷಣೆ! | ರಾಜೀನಾಮೆ ಪತ್ರ ತಲುಪಿಲ್ಲ ಎಂದ ಡಿಕೆಶಿ! Read More »

ಜಗದೀಶ್ ಶೆಟ್ಟರ್ ಬಿಜೆಪಿಗೆ ಮರುಸೇರ್ಪಡೆ!!??

ಬೆಂಗಳೂರು: ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿಗೆ ಮರು ಸೇರ್ಪಡೆ ಮಾಡುವ ಸುದ್ದಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಬಿಜೆಪಿಗೆ ಮರು ಸೇರ್ಪಡೆಯಾಗುವ ಬಗ್ಗೆ ಜಗದೀಶ್ ಶೆಟ್ಟರ್ ಒಪ್ಪಿಗೆ ಸೂಚಿಸಿದ್ದಾರೆ. ಕಾಂಗ್ರೆಸ್ ಗೆ ಗುಡ್ ಬೈ ಹೇಳುವ ಬಗ್ಗೆಯೂ ತೀರ್ಮಾನ ಕೈಗೊಂಡಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಆದರೆ ಈ ಬಗ್ಗೆ ಪರ ವಿರೋಧ ಅಭಿಪ್ರಾಯಗಳು ಹರಿದಾಡುತ್ತಿವೆ. ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡುವ ಬಗ್ಗೆ ಕೆಲವೇ ಕ್ಷಣದಲ್ಲಿ ಘೋಷಣೆ ಹೊರಬೀಳುವ ಸಾಧ್ಯತೆ ಇದೆ ಎಂದೂ ಹೇಳಲಾಗುತ್ತಿದೆ. ಇದರ ನಡುವೆ

ಜಗದೀಶ್ ಶೆಟ್ಟರ್ ಬಿಜೆಪಿಗೆ ಮರುಸೇರ್ಪಡೆ!!?? Read More »

ಜ.27 : ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ | ಮಾಹಿತಿ ನೀಡಿದ ಕಾರ್ಯದರ್ಶಿ ಪಿ.ರಾಜೀವ್

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಜ.27 ರಂದು ನಡೆಸಲು ನಿರ್ಧರಿಸಲಾಗಿದೆ. ಬಿಜಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿ, ಲೋಕಸಭೆ ಚುನಾವಣೆ ಇನ್ನೇನು ಬರಲಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 5.30 ರ ತನಕ ಸಭೆ ಏರ್ಪಡಿಸಲಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕೈಗೊಳ್ಳಬೇಕಾದ ಚುನಾವಣಾ ಸಿದ್ಧತೆಗಳು, ಪ್ರಚಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. ಸಭೆಯಲ್ಲಿ ಕೇಂದ್ರ ಸಚಿವ

ಜ.27 : ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ | ಮಾಹಿತಿ ನೀಡಿದ ಕಾರ್ಯದರ್ಶಿ ಪಿ.ರಾಜೀವ್ Read More »

error: Content is protected !!
Scroll to Top