ರಾಜಕೀಯ

ಮೊದಲ ಬಾರಿ ಶಾಸಕರಾಗಿರುವ ಭಜನ್ ಲಾಲ್ ಶರ್ಮಾ ರಾಜಸ್ಥಾನ ಸಿಎಂ!

ನಿರೀಕ್ಷೆಯಂತೆಯೇ ಹೊಸ ಮುಖಗಳಿಗೆ ಆದ್ಯತೆ ನೀಡುತ್ತಾ ಬಂದಿರುವ ಬಿಜೆಪಿ, ಇದೀಗ ರಾಜಸ್ಥಾನದಲ್ಲೂ ಹೊಸ ಮುಖಕ್ಕೆ ಆದ್ಯತೆ ನೀಡಿದ್ದಾರೆ. ಇದರೊಂದಿಗೆ ಇಬ್ಬರು ಡಿಸಿಎಂಗಳನ್ನು ನೇಮಕ ಮಾಡಲಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಚ್ಚರಿಯ ಆಯ್ಕೆ ಮಾಡಲಾಗಿದೆ. ರಾಜಕೀಯದಲ್ಲಿ ಹೊಸ ಪರೀಕ್ಷೆ ನಡೆಸುವಂತೆ ಹೊಸ ಮುಖಗಳನ್ನೇ ಆಯ್ಕೆ ಮಾಡಲಾಗುತ್ತಿದೆ. ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಭಜನ್ ಲಾಲ್ ಶರ್ಮಾ ಅವರನ್ನು ಸಿಎಂ ಆಗಿ ಆಯ್ಕೆ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಇವರು ಸಂಗಾನೇರ್ ಕ್ಷೇತ್ರದ ಶಾಸಕ. 4 ಬಾರಿ […]

ಮೊದಲ ಬಾರಿ ಶಾಸಕರಾಗಿರುವ ಭಜನ್ ಲಾಲ್ ಶರ್ಮಾ ರಾಜಸ್ಥಾನ ಸಿಎಂ! Read More »

ಮೋಹನ್ ಯಾದವ್‌ ಮಧ್ಯಪ್ರದೇಶ ಸಿಎಂ!

ಮಧ್ಯಪ್ರದೇಶ: ತೀವ್ರ ಕುತೂಹಲ ಕೆರಳಿಸಿದ್ದ ಮಧ್ಯಪ್ರದೇಶ ಸಿಎಂ ಆಯ್ಕೆ ಕಗ್ಗಂಟು ಕೊನೆಗೂ ಬಗೆಹರಿದಿದೆ. ಸಿಎಂ ರೇಸ್‌ನಲ್ಲಿದ್ದ ಎಲ್ಲರನ್ನೂ ಹಿಂದಿಕ್ಕಿ ಮೋಹನ್ ಯಾದವ್ ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಸೋಮವಾರ ಬಿಜೆಪಿ ಕೇಂದ್ರ ನಾಯಕರ ನೇತೃತ್ವದಲ್ಲಿ ಮಧ್ಯಪ್ರದೇಶ ಬಿಜೆಪಿ ಶಾಸಕಾಂಗ ಸಭೆ ನಡೆಯಿತು. ಸಭೆಯಲ್ಲಿ ವೀಕ್ಷಕರಾಗಿ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಒಬಿಸಿ ಮೋರ್ಚಾ ಮುಖ್ಯಸ್ಥ ಕೆ. ಲಕ್ಷ್ಮಣ್ ಮತ್ತು ಕಾರ್ಯದರ್ಶಿ ಆಶಾ ಲಾಕ್ರ ಭಾಗವಹಿಸಿದ್ದರು. ಸಭೆಯಲ್ಲಿ ಮೋಹನ್ ಯಾದವ್ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಸಿಎಂ ರೇಸ್‌ನಲ್ಲಿ

ಮೋಹನ್ ಯಾದವ್‌ ಮಧ್ಯಪ್ರದೇಶ ಸಿಎಂ! Read More »

ಇಬ್ಭಾಗವಾದ ಜೆ.ಡಿ.ಎಸ್.ಗೆ ಸಿ.ಕೆ. ನಾಣು ಅಧ್ಯಕ್ಷ!

ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್​ಡಿ ದೇವೇಗೌಡ  ಅವರಿಗೆ ಅಸಮಾಧಾನಿತ ಹಾಗೂ ಉಚ್ಛಾಟಿತ ನಾಯಕರು ಸೆಡ್ಡು ಹೊಡೆದಿದ್ದಾರೆ. ಸೋಮವಾರ ನಡೆದ ಸಭೆಯಲ್ಲಿ ಉಚ್ಛಾಟಿತ ನಾಯಕ ಸಿ.ಕೆ. ನಾಣು ಅವರನ್ನು ಜೆಡಿಎಸ್​ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಬೆಂಗಳೂರಿನ ಕೆ.ಜಿ. ಹಳ್ಳಿಯ ಖಾಸಗಿ ಹೋಟೆಲ್​ನಲ್ಲಿ ಸಿ.ಎಂ. ಇಬ್ರಾಹಿಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಿ.ಕೆ. ನಾಣು ಅವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಸಿ.ಎಂ ಇಬ್ರಾಹಿಂ ಮಾಹಿತಿ ನೀಡಿದ್ದಾರೆ. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಇಬ್ರಾಹಿಂ, ಜೆಡಿಎಸ್ ನೂತನ

ಇಬ್ಭಾಗವಾದ ಜೆ.ಡಿ.ಎಸ್.ಗೆ ಸಿ.ಕೆ. ನಾಣು ಅಧ್ಯಕ್ಷ! Read More »

ಅಕ್ಬರುದ್ದಿನ್ ಓವೈಸಿ ತೆಲಂಗಾಣದ ಹಂಗಾಮಿ ಸ್ಪೀಕರ್: ವಿರೋಧ

ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯ ಸಾಧಿಸಿ ತೆಲಂಗಾಣದಲ್ಲಿ ಸರ್ಕಾರ ರಚನೆ ಮಾಡಿದೆ. ಇದೀಗ ಎಐಎಂಐಎಂ ಶಾಸಕ ಅಕ್ಬರುದ್ದಿನ್ ಓವೈಸಿ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಲಾಗಿದೆ. ಈ ನಿರ್ಧಾರಕ್ಕೆ ಇದೀಗ ತೀವ್ರ ವಿರೋಧ ವ್ಯಕ್ತವಾಗಿದೆ. ಅಕ್ಬರುದ್ದಿನ್ ಓವೈಸಿ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಿದ ನಿರ್ಧಾರವನ್ನು ವಿರೋಧಿಸಿದ ಬಿಜೆಪಿ ಶಾಸಕರು, ಅವರಿಂದ ಪ್ರಮಾಣ ವಚನ ಸ್ವೀಕರಿಸಲೂ ನಿರಾಕರಿಸಿದ್ದಾರೆ. ಓವೈಸಿ ಅವರಿಂದ ಪಕ್ಷದ ಶಾಸಕರು ಪ್ರಮಾಣ ವಚನ ಸ್ವೀಕರಿಸುವುದಿಲ್ಲ ಎಂದು

ಅಕ್ಬರುದ್ದಿನ್ ಓವೈಸಿ ತೆಲಂಗಾಣದ ಹಂಗಾಮಿ ಸ್ಪೀಕರ್: ವಿರೋಧ Read More »

ಲೋಕಸಭೆಯಿಂದ ಟಿಎಂಸಿಯ ಮಹುವಾ ಮೊಹಿತ್ರಾ ಉಚ್ಛಾಟನೆ!

ಹೊಸದಿಲ್ಲಿ: ಕೆಲವು ದಿನಗಳಿಂದ ಚರ್ಚೆಯಲ್ಲಿದ್ದ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಹಿತ್ರಾ ಅವರನ್ನು ಲೋಕಸಭೆಯಿಂದ ಉಚ್ಛಾಟನೆ ಮಾಡಲಾಗಿದೆ. ಮಹುವಾ ಮೊಹಿತ್ರಾ ಉಚ್ಛಾಟನೆಗೆ ನೈತಿಕ ಸಮಿತಿಯು ಶಿಫಾರಸು ಮಾಡಿತ್ತು. ಸಂಸತ್ ನಲ್ಲಿ ಪ್ರಶ್ನೆ ಕೇಳಲು ಮಹುವಾ ಮೊಹಿತ್ರಾ ಹಣ ಪಡೆದಿದ್ದಾರೆಂದು ಆರೋಪಿಸಲಾಗಿತ್ತು. ಸಂಸತ್ತಿನ ನೈತಿಕ ಸಮಿತಿಯು ಈ ಪ್ರಕರಣದಲ್ಲಿ ಮಹುವಾ ಮೊಯಿತ್ರಾ ಅವರನ್ನು ತಪ್ಪಿತಸ್ಥರೆಂದು ವರದಿ ನೀಡಿದೆ. ಅಲ್ಲದೆ ಸಂಸತ್ತಿನ ಕೆಳಮನೆಯಿಂದ ಅವರನ್ನು ಹೊರಹಾಕಲು ಶಿಫಾರಸು ಮಾಡಿತು. ಲೋಕಸಭೆಯಲ್ಲಿ ಸಂಸದೀಯ ವ್ಯವಹಾರಗಳ ಸಚಿವರು ಮಂಡಿಸಿದ ಮಹುವಾ ಮೊಹಿತ್ರಾ ಅವರನ್ನು

ಲೋಕಸಭೆಯಿಂದ ಟಿಎಂಸಿಯ ಮಹುವಾ ಮೊಹಿತ್ರಾ ಉಚ್ಛಾಟನೆ! Read More »

“ಎಲ್ಲೋ ಬಾಲ್ ಬರುತ್ತೇ ಎಂದು ಈಗಲೇ ಬ್ಯಾಟ್ ಬೀಸಿದರೆ ಆಗುತ್ತಾ?” | ಸಾವರ್ಕರ್ ಭಾವಚಿತ್ರ ವಿವಾದಕ್ಕೆ ಯು.ಟಿ. ಖಾದರ್ ಪ್ರತಿಕ್ರಿಯೆ

ಬೆಳಗಾವಿ: ವಿಧಾನಸಭೆಯ ಸಭಾಂಗಣದಲ್ಲಿನ ಸಾವರ್ಕರ್ ಭಾವಚಿತ್ರ ತೆರವು ಮಾಡುವ ಸಂಬಂಧ ಯಾವುದೇ ಪ್ರಸ್ತಾವ ಬಂದಿಲ್ಲ ಎಂದು ಸ್ಪೀಕರ್ ಯು.ಟಿ.‌ ಖಾದರ್ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಸಾವರ್ಕರ್ ಭಾವಚಿತ್ರ ತೆರವುಗೊಳಿಸಲು ಪ್ರಸ್ತಾವ ಬಂದರೆ ಆಗ ಪರಿಶೀಲನೆ ನಡೆಸಬಹುದು. ಆದರೆ, ಎಲ್ಲೋ ಬಾಲ್ ಬರುತ್ತೇ ಎಂದು ಈಗಲೇ ಬ್ಯಾಟ್ ಬೀಸಿದರೆ ಆಗುತ್ತಾ? ಸಂವಿಧಾನ ಬದ್ಧವಾಗಿ ಏನು ಮಾಡಬೇಕು ಅದನ್ನು ಮಾಡುತ್ತೇನೆ” ಎಂದು ಹೇಳಿದರು. “ನನಗೆ ಸಚಿವರೂ, ಪ್ರತಿಪಕ್ಷದವರೂ ಎಂಬ ಬೇಧವಿಲ್ಲ. ಎಲ್ಲರೂ ಒಂದೇ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ

“ಎಲ್ಲೋ ಬಾಲ್ ಬರುತ್ತೇ ಎಂದು ಈಗಲೇ ಬ್ಯಾಟ್ ಬೀಸಿದರೆ ಆಗುತ್ತಾ?” | ಸಾವರ್ಕರ್ ಭಾವಚಿತ್ರ ವಿವಾದಕ್ಕೆ ಯು.ಟಿ. ಖಾದರ್ ಪ್ರತಿಕ್ರಿಯೆ Read More »

ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ

ತೆಲಂಗಾಣ: ತೆಲಂಗಾಣ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಟಿಪಿಸಿಸಿ ಅಧ್ಯಕ್ಷ, ಕೊಡಂಗಲ್ ಶಾಸಕ ರೇವಂತ್ ರೆಡ್ಡಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಹೈದರಾಬಾದ್‌ನ ಲಾಲ್‌ ಬಹದ್ದೂರ್ ಶಾಸ್ತ್ರಿ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಪ್ರಮಾಣ ವಚನ ಬೋಧಿಸಿದರು. ರೇವಂತ್ ರೆಡ್ಡಿ ಜೊತೆ ಉಪಮುಖ್ಯಮಂತ್ರಿಯಾಗಿ ಮಧಿರ ಶಾಸಕ ಹಾಗೂ ದಲಿತ ನಾಯಕ ಭಟ್ಟಿ ವಿಕ್ರಮಾರ್ಕ ಮಲ್ಲು ಪದಗ್ರಹಣ ಮಾಡಿದರು. ಟಿಪಿಸಿಸಿ ಮಾಜಿ ಅಧ್ಯಕ್ಷ, ಎನ್. ಉತ್ತಮ್ ಕುಮಾರ್ ರೆಡ್ಡಿ, ಶಾಸಕರಾದ ಶ್ರೀಧರ್ ಬಾಬು, ಪೊನ್ನಂ ಪ್ರಭಾಕರ್, ಕೋಮಟಿರೆಡ್ಡಿ

ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ Read More »

ಅಕ್ರಮ ಕೃಷಿ ಪಂಪ್‍ಸೆಟ್‍ ಸಕ್ರಮಕ್ಕೆ ಮುಂದಾದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿರುವ 4 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲು ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್‍ ಈ ಬಗ್ಗೆ ಮಾಹಿತಿ ನೀಡಿ, ರಾಜ್ಯದಲ್ಲಿರುವ 4 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಈ ನಡುವೆ ಶ್ರವಣ, ದೃಷ್ಟಿ ದೋಷ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿರುವ ಮಕ್ಕಳ ವಸತಿ ಶಾಲೆಗಳಿಗೆ ನಿಯಮದಂತೆ ತಮ್ಮ ಕ್ಷೇತ್ರಾಭಿವೃದ್ಧಿ ನಿಧಿಯ ಶೇ 15ರಷ್ಟು ವಿನಿಯೋಗಿಸಲು ವಿಧಾನ ಪರಿಷತ್‌ನ ಎಲ್ಲ ಸದಸ್ಯರು ಸಮ್ಮತಿಸಿದ್ದಾರೆ ಎಂದು ತಿಳಿಸಿದ್ದಾರೆ. ಈ

ಅಕ್ರಮ ಕೃಷಿ ಪಂಪ್‍ಸೆಟ್‍ ಸಕ್ರಮಕ್ಕೆ ಮುಂದಾದ ರಾಜ್ಯ ಸರಕಾರ Read More »

ಸಮಯಕ್ಕೆ ಸರಿಯಾಗಿ ಸದನಕ್ಕೆ ಹಾಜರಾದ ಪುತ್ತೂರು ಶಾಸಕರು | ಬಹುಮಾನ ನೀಡಿ ಗೌರವಿಸಿದ ಸ್ಪೀಕರ್ ಯು.ಟಿ. ಖಾದರ್

ಪುತ್ತೂರು: ಕಳೆದ ಬಾರಿ ನಡೆದ ವಿಧಾನಸಬಾ ಅಧಿವೇಶನಕ್ಕೆ ಸಮಯಕ್ಕೆ ಸರಿಯಾಗಿ ಹಾಜರಾಗಿದ್ದು ಮಾತ್ರವಲ್ಲದೆ ಸದನ ಮುಗಿಯುವ ತನಕ ಸದನದಲ್ಲೇ ಇದ್ದು ಸದನಕ್ಕೆ ಗೌರವ ಸಲ್ಲಿಸಿದ್ದ ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸ್ಪೀಕರ್ ಯು. ಟಿ. ಖಾದರ್ ಬಹುಮಾನ ನೀಡಿ ಗೌರವಿಸಿದ್ದಾರೆ. ಶಾಸಕ ಅಶೋಕ್ ರೈಯವರು ಕಳೆದ ಬಾರಿ ಚೊಚ್ಚಲ ಅದಿವೇಶನದಲ್ಲಿ ಭಾಗವಹಿಸಿದ್ದರು. ಸದನಕ್ಕೆ ಸಮಯಕ್ಕೆ ಸರಿಯಗಿ ಹಾಜರಾಗುವ ಸದಸ್ಯರಿಗೆ ಬಹುಮಾ ನೀಡಿ ಗೌರವಿಸಲಾಗುವುದು ಎಂದು ಸ್ಪೀಕರ್ ಆಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಯು.ಟಿ. ಖಾದರ್ ಅವರು ಘೋಷಣೆ

ಸಮಯಕ್ಕೆ ಸರಿಯಾಗಿ ಸದನಕ್ಕೆ ಹಾಜರಾದ ಪುತ್ತೂರು ಶಾಸಕರು | ಬಹುಮಾನ ನೀಡಿ ಗೌರವಿಸಿದ ಸ್ಪೀಕರ್ ಯು.ಟಿ. ಖಾದರ್ Read More »

INDIA ಮೈತ್ರಿಕೂಟ ಸಭೆ ಮುಂದೂಡಿದ ಕಾಂಗ್ರೆಸ್!

ಪ್ರಮುಖ ಪ್ರತಿ ಪಕ್ಷದ ನಾಯಕರ ಅಲಭ್ಯತೆ ಹಿನ್ನಲೆಯಲ್ಲಿ ನಾಳೆ ಅಂದರೆ ಬುಧವಾರ ನಡೆಯಬೇಕಿದ್ದ INDIA ಮಿತ್ರಕೂಟದ ಸಭೆಯನ್ನು ಮುಂದೂಡಲಾಗಿದೆ. ಪಂಚರಾಜ್ಯಗಳ ಚುನಾವಣೆ ಹಿನ್ನಲೆ INDIA ಒಕ್ಕೂಟದ ಸಭೆ ನಡೆಸಲು ಸಾಧ್ಯವಾಗಿರಲಿಲ್ಲ. ಫಲಿತಾಂಶ ಪ್ರಕಟವಾದ ಬಳಿಕ ಲೋಕಸಭೆ ಚುನಾವಣೆ ಬಗ್ಗೆ ಚರ್ಚಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿ ಸಭೆ ನಡೆಸಲು ನಿರ್ಧರಿಸಿದ್ದರು‌. ಹೀಗಾಗಿ ಬುಧವಾರ ದೆಹಲಿಯಲ್ಲಿ INDIA ಮೈತ್ರಿಕೂಟದ ಸಭೆ ಕರೆಯಲಾಗಿತ್ತು. ಆದರೆ ಮಿಚಾಂಗ್‌ ಚಂಡಮಾರುತದಿಂದ ತಮಿಳುನಾಡಿನಲ್ಲಿ ಭಾರಿ ಮಳೆ ಮತ್ತು ಮಳೆ ಸಂಬಂಧಿತ ಅವಘಡಗಳು ಸಂಭವಿಸಿರುವುದರಿಂದ

INDIA ಮೈತ್ರಿಕೂಟ ಸಭೆ ಮುಂದೂಡಿದ ಕಾಂಗ್ರೆಸ್! Read More »

error: Content is protected !!
Scroll to Top