ರಾಜಕೀಯ

ಜನಪ್ರಿಯತೆ ಕಳೆದುಕೊಂಡ ಕಾಂಗ್ರೆಸ್: ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವ್ಯಂಗ್ಯ

ಮಂಗಳೂರು: ಅಧಿಕಾರಕ್ಕೆ ಬಂದು ಆರೇ ತಿಂಗಳಿಗೆ ಜನಪ್ರಿಯತೆಯನ್ನು ಕಳೆದುಕೊಂಡ ಸರ್ಕಾರ ಎಂದರೆ ಅದು ಕಾಂಗ್ರೆಸ್ ಮಾತ್ರ ಎಂದು ಬಿಜೆಪಿ ನೂತನ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ. ಬಿಜೆಪಿಯ ನೂತನ ರಾಜ್ಯ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ ಬಿ.ವೈ.ವಿಜಯೇಂದ್ರ ಅವರಿಗೆ ಸೇಬು ಹಣ್ಣಿನ ಹಾರ ಹಾಕುವ ಮೂಲಕ ಭರ್ಜರಿ ಸ್ವಾಗತ ಮಾಡಲಾಯಿತು. ಈ ವೇಳೆ ಬ್ಯಾಂಡ್‌ನವರು ನುಡಿಸಿದ ಮುದುಡಿದ ತಾವರೆ ಅರಳಿದೆ… ಹಾಡು ಕಾರ್ಯಕರ್ತರಲ್ಲಿ ಹೊಸ ಸಂಚಲನವನ್ನು ಸೃಷ್ಟಿ ಮಾಡಿದೆ. ಈ ವೇಳೆ […]

ಜನಪ್ರಿಯತೆ ಕಳೆದುಕೊಂಡ ಕಾಂಗ್ರೆಸ್: ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವ್ಯಂಗ್ಯ Read More »

ಪಿಸ್ತೂಲ್ ತೋರಿಸಿ ಬೆದರಿಸಿದವರಿಂದ ಬುದ್ಧಿವಾದ ಬೇಕಿಲ್ಲ!! | ಶಾಸಕ ಅಶೋಕ್ ರೈ ಹೇಳಿಕೆಗೆ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ತಿರುಗೇಟು

ಪುತ್ತೂರು: ಬಿಜೆಪಿ ಸರಕಾರವಿದ್ದಾಗ ಹಿಂದೂ ಕಾರ್ಯಕರ್ತರ ಮೇಲೆ ಹಾಕಿದ್ದ ಪ್ರಕರಣಗಳ ಆಧಾರದಲ್ಲಿ ಗಡಿಪಾರು ಆದೇಶ ಮಾಡಲಾಗಿದೆ ಎಂಬ ಶಾಸಕ ಅಶೋಕ್ ಕುಮಾರ್ ರೈ ಅವರ ಹೇಳಿಕೆಗೆ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ತಿರುಗೇಟು ನೀಡಿದ್ದಾರೆ. ಉದ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುವಾಗ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿರುವ ವ್ಯಕ್ತಿಗಳು ಇಂದು ಬಿಜೆಪಿಗೆ ಬುದ್ಧಿವಾದ ಹೇಳುತ್ತಿದ್ದಾರೆ. ಅಂತಹವರಿಂದ ಬಿಜೆಪಿಗೆ ಬುದ್ಧಿವಾದ ಬೇಕಿಲ್ಲ. ಮೊದಲು ಅಂತಹ ವ್ಯಕ್ತಿಗಳನ್ನೇ ಗಡಿಪಾರು ಮಾಡಬೇಕು ಎಂದು ಸಾಜ ರಾಧಾಕೃಷ್ಣ ಆಳ್ವ ಆಗ್ರಹಿಸಿದರು.

ಪಿಸ್ತೂಲ್ ತೋರಿಸಿ ಬೆದರಿಸಿದವರಿಂದ ಬುದ್ಧಿವಾದ ಬೇಕಿಲ್ಲ!! | ಶಾಸಕ ಅಶೋಕ್ ರೈ ಹೇಳಿಕೆಗೆ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ತಿರುಗೇಟು Read More »

ಗಡಿಪಾರು ಆಗಲಿರುವ ಯುವಕರ ಮೇಲೆ ಕೇಸು ಹಾಕಿದ್ದೇ ಬಿಜೆಪಿ ಸರಕಾರ: ಅಶೋಕ್ ರೈ

ಪುತ್ತೂರು: ಮತೀಯ ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪುತ್ತೂರಿನ ಕೆಲವು ಯುವಕರ ಮೇಲೆ ಗಡಿಪಾರು ನೋಟೀಸ್ ಜಾರಿಯಾಗಿದೆ. ಬಿಜೆಪಿ ಸರಕಾರವೇ ಈ ಯುವಕರ ಮೇಲೆ ಕೇಸು ಮಾಡಿಸಿದ್ದು, ಈಗ ಬಿಜೆಪಿಯವರು ಯುವಕರ ಪರ ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ. ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಮಾಧ್ಯಮದ ಜೊತೆ ಮಾತನಾಡಿದ ಅವರು ಈ ವಿಚಾರದಲ್ಲಿ ಬಿಜೆಪಿ ನಾಯಕರು ಆತ್ಮ ವಿಮರ್ಶೆ ಮಾಡಿಕೊಳ್ಳುವುದು ಉತ್ತಮ. ಯುವಕರನ್ನು ಬಳಕೆ ಮಾಡಿ ಅವರ ಮೇಲೆ ಕೇಸು ಹಾಕಿಸಿ ಅವರನ್ನು

ಗಡಿಪಾರು ಆಗಲಿರುವ ಯುವಕರ ಮೇಲೆ ಕೇಸು ಹಾಕಿದ್ದೇ ಬಿಜೆಪಿ ಸರಕಾರ: ಅಶೋಕ್ ರೈ Read More »

ವಿಧಾನಸಭೆ ಪ್ರತಿಪಕ್ಷ ನಾಯಕನ ಆಯ್ಕೆ: ಘೋಷಣೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಬೆನ್ನಲ್ಲೇ ವಿಧಾನಸಭೆ ಪ್ರತಿಪಕ್ಷ ನಾಯಕನ ಆಯ್ಕೆಯನ್ನು ಬಿಜೆಪಿ ಮಾಡಿದೆ. ಶಾಸಕನಾಗಿ, ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿರುವ ಆರ್. ಅಶೋಕ್ ಅವರನ್ನು ವಿಧಾನಸಭೆ ಪ್ರತಿಪಕ್ಷ ನಾಯಕನಾಗಿ ಆಯ್ಕೆ ಮಾಡಲಾಗಿದೆ. ಶುಕ್ರವಾರ ಸಂಜೆ ನಡೆದ ಬಿಜೆಪಿ ಶಾಸಕಾಂಗ‌ ಪಕ್ಷದ ನಾಯಕರ ಸಭೆಯಲ್ಲಿ ಈ ಆಯ್ಕೆಯನ್ನು ಮಾಡಲಾಯಿತು. ನಿರ್ಮಲಾ ಸೀತಾರಾಮನ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ವಿಧಾನಸಭೆ ಪ್ರತಿಪಕ್ಷ ನಾಯಕನ ಆಯ್ಕೆ: ಘೋಷಣೆ Read More »

ರಾಜ್ಯಾಧ್ಯಕ್ಷ ಆಯ್ಕೆ ಬೆನ್ನಲ್ಲೇ ಯತ್ನಾಳ್ ಅಸಮಾಧಾನ ಸ್ಫೋಟ!!

ಬೆಂಗಳೂರು: ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ತೋಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಯಾವುದೋ ಒಂದು ಕುಟುಂಬದ ಪಕ್ಷವಲ್ಲ. ಇದನ್ನು ನಾವು ಕೂಡ ಒಪ್ಪುವುದಿಲ್ಲ. ಬಿಜೆಪಿಗಾಗಿ, ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡಲು ನಾನು ಪ್ರಾಣ ಕೊಡಲೂ ಸಿದ್ಧ. ಆದರೆ ಕೆಲ ಚೇಲಾಗಳ ಮಾತು ಕೇಳಿ ವರಿಷ್ಠರು ನಿರ್ಧಾರ ತೆಗೆದುಕೊಳ್ಳಬಾರದು ಎಂದು ಹೇಳಿದರು. ಯಡಿಯೂರಪ್ಪ, ವಿಜಯೇಂದ್ರರಿಂದ ಯತ್ನಾಳ್ ಸಂಪರ್ಕ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ

ರಾಜ್ಯಾಧ್ಯಕ್ಷ ಆಯ್ಕೆ ಬೆನ್ನಲ್ಲೇ ಯತ್ನಾಳ್ ಅಸಮಾಧಾನ ಸ್ಫೋಟ!! Read More »

ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ: ವೀಡಿಯೋ ವೈರಲ್ ಹಿನ್ನೆಲೆಯಲ್ಲಿ ಸಿಎಂ ಖಡಕ್ ಮಾತು

ಬೆಂಗಳೂರು: ಯತೀಂದ್ರ ಅವರ ಸಂಭಾಷಣೆಯ ವೀಡಿಯೋ ವೈರಲ್ ಆದ ಘಟನೆಗೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಫೋನ್ ಸಂಭಾಷಣೆಯಲ್ಲಿ ವರ್ಗಾವಣೆಯ ವಿಷಯ ಮಾತನಾಡಲಾಗಿದೆಯೇ? ಇಲ್ಲ. ಹಾಗಿದ್ದು ವರ್ಗಾವಣೆಗೆ ಲಿಂಕ್ ಮಾಡುವುದು ಯಾಕೆ ಎಂದು ಪ್ರಶ್ನಿಸಿದರು. ಒಂದು ವೇಳೆ ಈ ಬಗ್ಗೆ ಒಂದೇ ಒಂದು ಸಾಕ್ಷ್ಯ ತೋರಿಸಿದರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಸವಾಲೆಸೆದರು. ಮೈಸೂರಿನ ಜನಸಂಪರ್ಕ ಸಭೆಯೊಂದರಲ್ಲಿ ಯತೀಂದ್ರ ಅವರು ಸಿಎಂ ಸಿದ್ದರಾಮಯ್ಯ ಅವರ

ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ: ವೀಡಿಯೋ ವೈರಲ್ ಹಿನ್ನೆಲೆಯಲ್ಲಿ ಸಿಎಂ ಖಡಕ್ ಮಾತು Read More »

ಸಿಎಂ ಪುತ್ರನ ಆಡಳಿತ ದರ್ಬಾರ್!?  | “ನಾನು ಯಾವುದು ನಾಲ್ಕೈದು ಕೊಟ್ಟಿದ್ದೇನೋ ಅಷ್ಟನ್ನು ಮಾತ್ರ ಮಾಡಿ” – ಸಂಭಾಷಣೆಯ ವೀಡಿಯೋ ವೈರಲ್

ಮೈಸೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಡಾ.ಯತೀಂದ್ರ ಅವರು ಮೊಬೈಲ್’ನಲ್ಲಿ ಮಾತನಾಡಿರುವ ವೀಡಿಯೋ ಒಂದು ಇದೀಗ ಮಾಧ‍್ಯಮಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕ ಸಭೆಯಲ್ಲಿದ್ದ ಯತೀಂದ್ರ ಅವರು ಸಿಎಂ ಸಿದ್ದರಾಮಯ್ಯ ಅವರ ಜೊತೆ ಮಾತನಾಡುತ್ತಾ, “ಅಪ್ಪ ಹೇಳಿ” ಎಂದು ಮಾತು ಆರಂಭಿಸಿ ತಾನು ನೀಡಿದ ಲಿಸ್ಟ್​ ಬಗ್ಗೆ ಮಾತನಾಡಿದ್ದಾರೆ. ಆ ಕಡೆಯಿಂದ ವಿವೇಕಾನಂದರ ಹೆಸರು ಎತ್ತಿದ್ದು, ಇದಕ್ಕೆ ಯಾರು ಎಂದು ಯತೀಂದ್ರ ಪ್ರಶ್ನೆ ಮಾಡುತ್ತಾರೆ. ಅಲ್ಲದೆ, ಬೇರೊಂದು ಲಿಸ್ಟ್​ ನೀಡಿದ ಬಗ್ಗೆ ಅಸಮಾಧಾನಗೊಂಡ ಯತೀಂದ್ರ ಅವರು,

ಸಿಎಂ ಪುತ್ರನ ಆಡಳಿತ ದರ್ಬಾರ್!?  | “ನಾನು ಯಾವುದು ನಾಲ್ಕೈದು ಕೊಟ್ಟಿದ್ದೇನೋ ಅಷ್ಟನ್ನು ಮಾತ್ರ ಮಾಡಿ” – ಸಂಭಾಷಣೆಯ ವೀಡಿಯೋ ವೈರಲ್ Read More »

‘ಡಿಕೆ ಸಹೋದರರನ್ನು ಕೊಲ್ಲು’ – ಪೋಸ್ಟ್: ಬಂಧನ

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರನ್ನು ಕೊಲ್ಲುವಂತೆ ಜನರನ್ನು ಒತ್ತಾಯಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್ ಹಾಕಿದ್ದಕ್ಕಾಗಿ ಬುಧವಾರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ರಂಜಿತ್ ಆರ್‌.ಎಂ. ಎಂದು ಗುರುತಿಸಲಾಗಿದೆ. ಈ ಸಂಬಂಧ ಬೆಂಗಳೂರಿನ ಜಯನಗರ ಬ್ಲಾಕ್‌ನ ಯುವ ಕಾಂಗ್ರೆಸ್ ಅಧ್ಯಕ್ಷ ಶರತ್ ದೂರು ದಾಖಲಿಸಿದ್ದಾರೆ. ‘ಡಿಕೆ ಸಹೋದರರನ್ನು ಕೊಲ್ಲು’ ಎಂಬ ಶೀರ್ಷಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿ ಪೋಸ್ಟ್ ಹಾಕಿದ್ದ ಎಂದು ಹೇಳಲಾಗಿದೆ.

‘ಡಿಕೆ ಸಹೋದರರನ್ನು ಕೊಲ್ಲು’ – ಪೋಸ್ಟ್: ಬಂಧನ Read More »

ಬಿಜೆಪಿ ರಾಜ್ಯಾಧ್ಯಕ್ಷ ಅಧಿಕಾರ ಹಸ್ತಾಂತರಿಸಿದ ನಳಿನ್ ಕುಮಾರ್ ಕಟೀಲ್

ಬೆಂಗಳೂರು: ಗಣಹೋಮ, ದುರ್ಗಾಹೋಮದ ಬಳಿಕ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅಧಿಕಾರ ಸ್ವೀಕರಿಸಿದ್ದಾರೆ. ರಾಜ್ಯಾಧ್ಯಕ್ಷರಾಗಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಧಿಕಾರ ಹಸ್ತಾಂತರ ಮಾಡಿದರು. ಈ ಸಂದರ್ಭ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಆರಗ ಜ್ಞಾನೇಂದ್ರ, ಸಂಸದರಾದ ರಾಘವೇಂದ್ರ, ತೇಜಸ್ವಿ ಸೂರ್ಯ, ಅಶೋಕ್, ಗೋವಿಂದ ಕಾರಜೋಳ ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ನಳಿನ್ ಕುಮಾರ್ ಕಟೀಲ್ ಅವರು, ದೇಶದ ಅತಿದೊಡ್ಡ ಪಕ್ಷದ

ಬಿಜೆಪಿ ರಾಜ್ಯಾಧ್ಯಕ್ಷ ಅಧಿಕಾರ ಹಸ್ತಾಂತರಿಸಿದ ನಳಿನ್ ಕುಮಾರ್ ಕಟೀಲ್ Read More »

ಬಿಜೆಪಿ 11ನೇ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಪದಗ್ರಹಣ | ಹೋಮ ಸಂಕಲ್ಪದ ಉಸ್ತುವಾರಿ ವಹಿಸಿಕೊಂಡ ಕರಾವಳಿ ಶಾಸಕ

ಬೆಂಗಳೂರು: ರಾಜ್ಯ ಬಿಜೆಪಿಯ 11 ನೇ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಪದಗ್ರಹಣದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಂಗಳವಾರ ಬೆಳಿಗ್ಗೆ ದುರ್ಗಾ ಹೋಮ ಹಾಗೂ ಗಣಪತಿ ಹೋಮ ನಡೆಯಿತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಹೋಮ ಕಾರ್ಯದ ಸಂಕಲ್ಪದಲ್ಲಿ ಭಾಗಿಯಾಗಿದ್ದು, ಅವರಿಗೆ ಪೂಜಾ ಕಾರ್ಯಕ್ರಮಗಳ ಉಸ್ತುವಾರಿ ವಹಿಸಲಾಗಿತ್ತು. ವಿಜಯೇಂದ್ರ ಪದಗ್ರಹಣದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಕಚೇರಿಯನ್ನು ವಿದ್ಯುತ್ ದೀಪಗಳು ಮತ್ತು ತೋರಣಗಳಿಂದ ಅಲಂಕರಿಸಲಾಗಿತ್ತು.

ಬಿಜೆಪಿ 11ನೇ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಪದಗ್ರಹಣ | ಹೋಮ ಸಂಕಲ್ಪದ ಉಸ್ತುವಾರಿ ವಹಿಸಿಕೊಂಡ ಕರಾವಳಿ ಶಾಸಕ Read More »

error: Content is protected !!
Scroll to Top