ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಸರಕಾರಿ ಗುತ್ತಿಗೆಯಲ್ಲಿ 4 % ಮೀಸಲಾತಿ | ರದ್ದುಪಡಿಸುವಂತೆ ಹಿಂದೂ ಜನಜಾಗೃತಿ ಸಮಿತಿಯಿಂದ ರಾಜ್ಯಪಾಲರಿಗೆ ಮನವಿ
ಪುತ್ತೂರು: ಕರ್ನಾಟಕ ಸರಕಾರ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಸರಕಾರಿ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡಿದ್ದನ್ನು ರದ್ದು ಮಾಡುವಂತೆ ಹಿಂದೂ ಜನಜಾಗೃತಿ ಸಮಿತಿ ಆಯುಕ್ತರ ಸಹಾಯಕ ಪೂವಪ್ಪ ಅವರ ಮೂಲಕ ರಾಜ್ಯಪಾಲರಿಗೆ ಮನವಿ ನೀಡಿದೆ. ಸರಕಾರದ ಟೆಂಡರ್ ಗಳಲ್ಲಿ ಅಲ್ಪಸಂಖ್ಯಾತರಿಗೆ 4% ಮೀಸಲಾತಿ ನೀಡುವ ಮಸೂದೆಯನ್ನು ಸಹ ಮಂಡಿಸಲಾಗಿದೆ. ಭಾರತದ ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲಾತಿಗೆ ಅವಕಾಶವಿಲ್ಲದಿರುವಾಗಲೂ ಸರಕಾರ ಸಂವಿಧಾನಕ್ಕೆ ವಿರುದ್ಧವಾಗಿ ಸಂವಿಧಾನಬಾಹಿರ ಮೀಸಲಾತಿಯನ್ನು ನೀಡಿದೆ. ಇದನ್ನು ರದ್ದುಮಾಡುವಂತೆ ಮನವಿಯಲ್ಲಿ ಸಮಿತಿ ಉಲ್ಲೇಖಿಸಿದೆ. ಕರ್ನಾಟಕ ಸರಕಾರ ಇತ್ತಿಚೇಗೆ ತನ್ನ ಬಜೆಟ್ […]









