ರಾಜಕೀಯ

ಬಿಲ್ಲವ ಸಮಾಜಕ್ಕೆ ಮುಖ್ಯಮಂತ್ರಿ ಸಹಿತ ಕಾಂಗ್ರೆಸ್ ಅನ್ಯಾಯ ಮಾಡಿಲ್ಲ | ಶಿಕ್ಷಣ ಸಚಿವ ಮಧು ಬಂಗಾರಪ್ಪ

ಪುತ್ತೂರು: ನಾನು ಕೂಡಾ ಬಿಲ್ಲವ. ನಮ್ಮ ಬಿಲ್ಲವ, ಈಡಿಗ, ನಾಮದಾರಿ ಸಮಾಜಕ್ಕೆ ಯಾವುದೇ ತರದ ಅನ್ಯಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರಾಗಲಿ, ಕಾಂಗ್ರೆಸ್ ಆಗಲಿ ಮಾಡಿಲ್ಲ. ನಮ್ಮ ಸಮಾಜಕ್ಕೆ ಪ್ರಾತಿನಿಧ್ಯ ಕಾಂಗ್ರೆಸ್ ನೂರಕ್ಕೆ ನೂರು ನೀಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷಾರತ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪುತ್ತೂರು ಗೆಜ್ಜೆಗಿರಿ ಕ್ಷೇತ್ರಕ್ಕೆ ತೆರಳುವ ಮುಂದೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಚುನಾವಣಾ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯ ಬಳಿಕ ಮಾತನಾಡಿದರು. ಕಾಂಗ್ರೆಸ್ ಹಿರಿಯ ನಾಯಕ […]

ಬಿಲ್ಲವ ಸಮಾಜಕ್ಕೆ ಮುಖ್ಯಮಂತ್ರಿ ಸಹಿತ ಕಾಂಗ್ರೆಸ್ ಅನ್ಯಾಯ ಮಾಡಿಲ್ಲ | ಶಿಕ್ಷಣ ಸಚಿವ ಮಧು ಬಂಗಾರಪ್ಪ Read More »

ಗ್ರಾಮ ಪಂಚಾಯಿತಿ ಉಪಚುನಾವಣೆ | ಗ್ರಾಪಂ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ

ಮಂಗಳೂರು : ಗ್ರಾಮ ಪಂಚಾಯತ್ ಉಪ ಚುನಾವಣೆ ಹಿನ್ನಲೆಯಲ್ಲಿ ಚುನಾವಣೆ ನಡೆಯುವ ಗ್ರಾಪಂನ 3 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯಮುಕ್ತ ದಿನ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಪುತ್ತೂರು ತಾಲೂಕಿನ ನಿಡ್ಪಳ್ಳಿ, ಆರ್ಯಾಪು, ಬಂಟ್ವಾಳ ತಾಲೂಕಿನ ಪುದು, ಬೆಳ್ತಂಗಡಿ ತಾಲೂಕಿನ ಉಜಿರೆ ಹಾಗೂ ಮಡಂತ್ಯಾರು ಗ್ರಾಪಂಗಳಲ್ಲಿ ಚುನಾವಣೆ/ಉಪಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಜು.21 ರ ಸಂಜೆ 5 ಗಂಟೆಯಿಂದ ಚುನಾವಣೆ ಮುಕ್ತವಾಗುವ ವರೆಗೆ ನಿಷೇಧಿಸಲಾಗಿದೆ. ಎಲ್ಲಾ ವಿವಿಧ ಮದ್ಯದಂಗಡಿ, ಮದ್ಯ ಮಾರಾಟ ಪರವಾನಿಗೆ ಇರುವ ಅಂಗಡಿಗಳನ್ನು ಹಾಗೂ ಮಾರಾಟ

ಗ್ರಾಮ ಪಂಚಾಯಿತಿ ಉಪಚುನಾವಣೆ | ಗ್ರಾಪಂ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ Read More »

ಗ್ರಾಪಂ ಉಪಚುನಾವಣೆ | ಶಸ್ತ್ರಾಸ್ತ್ರ ಠೇವಣಿ ಇಡುವಂತೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಇದೀಗ ಚುನಾವಣೆ ಘೋಷಣೆಯಾಗಿರುವ ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ ಪರವಾನಗಿ ಪಡೆದಿರುವ ಆಯುಧಗಳನ್ನು ಠೇವಣಿ ಇಡುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶಿಸಿದ್ದಾರೆ.  ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನಿಡ್ಪಳ್ಳಿ ಮತ್ತು ಆರ್ಯಾಪು ಗ್ರಾಮ ಪಂಚಾಯತ್, ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ ಮತ್ತು ಉಜಿರೆ ಗ್ರಾಮ ಪಂಚಾಯತ್ ಹಾಗೂ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ಚುನಾವಣೆಗಳು ನಡೆಯಲಿವೆ. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಬೆಳೆ ರಕ್ಷಣೆ ಮತ್ತು

ಗ್ರಾಪಂ ಉಪಚುನಾವಣೆ | ಶಸ್ತ್ರಾಸ್ತ್ರ ಠೇವಣಿ ಇಡುವಂತೆ ಜಿಲ್ಲಾಧಿಕಾರಿ ಸೂಚನೆ Read More »

ವಿಧಾನಸೌಧ ಕಾರಿಡಾರ್ ನಲ್ಲಿ ಕುಸಿದು ಬಿದ್ದ ಶಾಸಕ ಬಸನಗೌಡ ಯತ್ನಾಳ್ | ಆಸ್ಪತ್ರೆಗೆ ಶಿಫ್ಟ್

ಬೆಂಗಳೂರು : ಹತ್ತು ಶಾಸಕರನ್ನು ವಿಧಾನ ಸಭೆಯಿಂದ ಅಮಾನತ್ತು ಮಾಡಲಾದ ಹಿನ್ನೆಲೆಯಲ್ಲಿ ಮಾರ್ಷಲ್ ಗಳು ಶಾಸಕರನ್ನು ಹೊರ ಹಾಕುವ ವೇಳೆ ಶಾಸಕ ಬಸನಗೌಡ ಯತ್ನಾಳ್ ವಿಧಾನ ಸೌಧದ ಕಾರಿಡಾರ್ ನಲ್ಲಿ ಕುಸಿದು ಬಿದ್ದ ಘಟನೆ ನಡೆದಿದೆ. ಬಿಪಿ ಜಾಸ್ತಿಯಾಗಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ತುರ್ತುವಾಹನದ ಮೂಲಕ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಪೀಕರ್ ನಿಲುವು ಖಂಡಿಸಿ ಬಿಜೆಪಿ ಸದ್ಯಸರು ವಿಧಾನಸಭೆಯ ಬಾಗಿಲ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದರು, ಈ ವೇಳೆ ಬಿಪಿಯಲ್ಲಿ ಏಳಿರಿಳಿತವಾಗಿ ಬಸನಗೌಡ ಯತ್ನಾಳ್ ಅಸ್ವಸ್ಥರಾಗಿದ್ದು,

ವಿಧಾನಸೌಧ ಕಾರಿಡಾರ್ ನಲ್ಲಿ ಕುಸಿದು ಬಿದ್ದ ಶಾಸಕ ಬಸನಗೌಡ ಯತ್ನಾಳ್ | ಆಸ್ಪತ್ರೆಗೆ ಶಿಫ್ಟ್ Read More »

ನಿಡ್ಪಳ್ಳಿ ಗ್ರಾಪಂ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ಪರ ಮತ ಯಾಚನೆ

ಪುತ್ತೂರು: ನಿಡ್ಪಳ್ಳಿ ಗ್ರಾಪಂ ಉಪಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿ  ಚಂದ್ರಶೇಖರ ಪ್ರಭು ಅವರ ಪರವಾಗಿ ಮತ ಯಾಚನೆ ನಡೆಯಿತು. ಗ್ರಾಮ ಪಂಚಾಯತಿನ ಒಂದು ಸ್ಥಾನಕ್ಕೆ ನಡೆಯುವ ಉಪಚುನಾವಣೆಯ ಚುನಾವಣಾ ಪ್ರಚಾರ ಕಾರ್ಯ ಮನೆ ಮನೆಯ ಭೇಟಿ ಮೂಲಕ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮುಖಂಡರಾದ ಚನಿಲ ತಿಮ್ಮಪ್ಪ ಶೆಟ್ಟಿ, ಪುರುಷೋತ್ತಮ ಮುಂಗ್ಲಿಮನೆ, ಸಾಜ ರಾಧಾಕೃಷ್ಣ ಆಳ್ವ, ನಿತೇಶ್ ಕುಮಾರ್ ಶಾಂತಿವನ, ರಾಜೇಶ್‍ ಪರ್ಪುಂಜ, ಆರ್.ಸಿ.ನಾರಾಯಣ ರೆಂಜ, ಉಷಾಚಂದ್ರ ಮುಳಿಯ, ಗೌರಿ ಬನ್ನೂರು,

ನಿಡ್ಪಳ್ಳಿ ಗ್ರಾಪಂ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ಪರ ಮತ ಯಾಚನೆ Read More »

ಭಾರತದ 1- ಟಾಪ್ ಶ್ರೀಮಂತ ಶಾಸಕರ ಪಟ್ಟಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಂ.1

ನವದೆಹಲಿ: ಭಾರತದ 10 ಶ್ರೀಮಂತ ಟಾಪ್ ಶಾಸಕರ ಪಟ್ಟಿಯಲ್ಲಿ ಕರ್ನಾಟಕದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನಂ.1 ಸ್ಥಾನದಲ್ಲಿದ್ದಾರೆ. ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿಯ ಪ್ರಕಾರ ಅಸೋಸಿಯೇಷನ್ ಭಾರತದಾದ್ಯಂತ ವಿಧಾನಸಭೆಗಳ ಪ್ರತಿ ಸದಸ್ಯರ ಸರಾಸರಿ ಆಸ್ತಿ 13.63 ಕೋಟಿ ರೂ.ಗಳಾಗಿದ್ದರೆ, ಘೋಷಿತ ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವವರು ಯಾವುದೇ ಕ್ರಿಮಿನಲ್ ಪ್ರಕರಣಗಳಿಲ್ಲದವರಿಗಿಂತ (11.45 ಕೋಟಿ ರೂ.) ಹೆಚ್ಚು (16.36 ಕೋಟಿ ರೂ.) ಹೊಂದಿದ್ದಾರೆ. ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 1,413 ಕೋಟಿ ರೂ.ಗಳ ಆಸ್ತಿಯೊಂದಿಗೆ ದೇಶದ ಅತ್ಯಂತ ಶ್ರೀಮಂತ

ಭಾರತದ 1- ಟಾಪ್ ಶ್ರೀಮಂತ ಶಾಸಕರ ಪಟ್ಟಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಂ.1 Read More »

ಹಲವು ತೊಡಕುಗಳನ್ನು ಸರಿಪಡಿಸಿ ಮುಂದಿನ ಕಾಮಗಾರಿ ಆರಂಭ | ರೈಲ್ವೇ ಅಂಡರ್ ಪಾಸ್ ಪ್ರದೇಶಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

ಪುತ್ತೂರು: ಎಪಿಎಂಸಿ ಅಂಡರ್ ಪಾಸ್ ರಸ್ತೆ ಒಂದು ಹಂತದಲ್ಲಿ ಕಾಲಮಿತಿಯೊಳಗೆ ಮುಗಿದಿದ್ದು, ಮುಂದಿನ ಕಾಮಗಾರಿಗಳಿಗೆ ಕೆಲವೊಂದು ತೊಡಕುಗಳಿದ್ದು, ಅದನ್ನು ಸರಿಪಡಿಸಿ ಕಾಮಗಾರಿ ಆರಂಭಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಅವರು ಮಂಗಳವಾರ ಎಪಿಎಂಸಿ ರೈಲ್ವೇ ಅಂಡರ್ ಪಾಸ್ ಪ್ರದೇಶಕ್ಕೆ ಭೇಟಿ ನೀಡಿ ಮಾತನಾಡಿದರು. ರೈಲ್ವೇ ಅಂಡರ್ ಪಾಸ್ ಪುತ್ತೂರಿನ ಬಹುಬೇಡಿಕೆಯಾಗಿದ್ದು, ಕಾಮಗಾರಿ ಮುಗಿದು ಸಂಚಾರಕ್ಕೆ ಈಗಾಗಲೇ ತೆರೆದುಕೊಂಡಿದೆ. ಹಾಗೆಯೇ ಜಿಲ್ಲೆಯ ಹಲವು ಕಡೆಗಳಲ್ಲಿ ಅಂಡರ್ ಪಾಸ್ ಅಥವಾ ಓವರ್ ಬ್ರಿಡ್ಜ್ ನ ಬೇಡಿಕೆಯಿದೆ. ಈ

ಹಲವು ತೊಡಕುಗಳನ್ನು ಸರಿಪಡಿಸಿ ಮುಂದಿನ ಕಾಮಗಾರಿ ಆರಂಭ | ರೈಲ್ವೇ ಅಂಡರ್ ಪಾಸ್ ಪ್ರದೇಶಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ Read More »

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಜೆಡಿಎಸ್-ಬಿಜೆಪಿ ಮೈತ್ರಿ ಸಾಧ್ಯತೆ | ಬಿಜೆಪಿ ಜತೆ ಸಖ್ಯ ಬೆಳೆಸಲು ದಿಲ್ಲಿಗೆ ತೆರಳಲಿರುವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪರಸ್ಪರ ಕಚ್ಚಾಡಿಕೊಂಡಿದ್ದ ಜೆಡಿಎಸ್ ಮತ್ತು ಬಿಜೆಪಿ ನಡುವೆ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮೈತ್ರಿ ಏರ್ಪಡುವ ಸಾಧ್ಯತೆಗಳು ದಟ್ಟವಾಗಿವೆ. ಈ ಮೂಲಕ ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುಗಳೂ ಅಲ್ಲ, ಯಾರೂ ಶಾಶ್ವತ ಮಿತ್ರರೂ ಅಲ್ಲ ಎಂಬ ಹಳೇ ಗಾದೆ ಮಾತಿಗೆ ಮತ್ತೊಂದು ನಿದರ್ಶನ ಕರ್ನಾಟಕದಲ್ಲೆ ತಯಾರಾಗುತ್ತಿದೆ. ಬಿಜೆಪಿಯನ್ನು ಕಟ್ಟಿಹಾಕಲು ಮಹಾಘಟಬಂಧನ್ ನಾಯಕರು ಬೆಂಗಳೂರಿನಲ್ಲಿ ಇಂದಿನಿಂದ ಒಗ್ಗಟ್ಟು ಪ್ರದರ್ಶನಕ್ಕೆ ಸಜ್ಜಾಗಿದ್ದಾರುವಂತೆಯೇ ಎಚ್.ಡಿ. ಕುಮಾರಸ್ವಾಮಿ ಬಿಜೆಪಿ ಜತೆ ಸಖ್ಯ ಬೆಳೆಸಲು ದಿಲ್ಲಿಗೆ ತೆರಳಲಿದ್ದಾರೆ. ತೆನೆ

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಜೆಡಿಎಸ್-ಬಿಜೆಪಿ ಮೈತ್ರಿ ಸಾಧ್ಯತೆ | ಬಿಜೆಪಿ ಜತೆ ಸಖ್ಯ ಬೆಳೆಸಲು ದಿಲ್ಲಿಗೆ ತೆರಳಲಿರುವ ಎಚ್.ಡಿ.ಕುಮಾರಸ್ವಾಮಿ Read More »

ಬ್ಯಾಟ್ ಹಿಡಿದು ಫೀಲ್ಡ್ ಗಿಳಿದ ಪುತ್ತಿಲ ಪರಿವಾರ | ಮುಂದುವರೆದ ಮನೆ ಮನೆ ಭೇಟಿ

ಪುತ್ತೂರು: ಉಪಚುನಾವಣೆ ಎದುರಿಸುತ್ತಿರುವ ನಿಡ್ಪಳ್ಳಿಯ ಒಂದು ಕ್ಷೇತ್ರದಲ್ಲಿ ಪುತ್ತಿಲ ಪರಿವಾರ ಸಭೆ ಹಾಗೂ ಮನೆ ಮನೆ ಭೇಟಿ ನಡೆಯಿತು. ಇಲ್ಲಿಯೂ ಬ್ಯಾಟ್ ಚಿಹ್ನೆಯೇ ಸಿಕ್ಕಿರುವುದರಿಂದ  ಪುತ್ತಿಲ ಪರಿವಾರ ಪ್ರಚಾರ ಸಂದರ್ಭ ಬ್ಯಾಟ್ ಹಿಡಿದೇ ಫೀಲ್ಡ್ ಗೆ ಹೋಗುತ್ತಿದ್ದಾರೆ. ನೂರಾರು ಕಾರ್ಯಕರ್ತರ ಸಮ್ಮುಖದಲ್ಲಿ ಅಧ್ಯಕ್ಷ ಪ್ರಸನ್ನ ಮಾರ್ತಾರ  ಅಧ್ಯಕ್ಷತೆಯಲ್ಲಿ ಪುತ್ತಿಲ ಪರಿವಾರದ ಸಭೆ ನಿಡ್ಪಳ್ಳಿಯಲ್ಲಿ ಜರಗಿತು.  ಹಿಂದೂ ಮುಖಂಡ ಅರುಣ್ ಪುತ್ತಿಲ, ನಿಡ್ಪಳ್ಳಿಯ ಪುತ್ತಿಲ ಪರಿವಾರದ ಅಭ್ಯರ್ಥಿ ಜಗನ್ನಾಥ ರೈ ಕೊಳಂಬೆತ್ತಿಮಾರು,  ನಿಡ್ಪಳ್ಳಿ  ಶಾಂತಾದುರ್ಗಾ ದೇವಸ್ಥಾನದ ವ್ಯವಸ್ಥಾಪನ ನಾರಾಯಣ

ಬ್ಯಾಟ್ ಹಿಡಿದು ಫೀಲ್ಡ್ ಗಿಳಿದ ಪುತ್ತಿಲ ಪರಿವಾರ | ಮುಂದುವರೆದ ಮನೆ ಮನೆ ಭೇಟಿ Read More »

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಕಡಬ ತಾಲೂಕಿನಾದ್ಯಂತ ಭೇಟಿ | ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಸುಳ್ಯ: ಸುಳ್ಯ ವಿಧಾನ ಸಭಾಕ್ಷೇತ್ರದ ಕಡಬ ತಾಲೂಕಿನಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಆಲಂಕಾರು ಗ್ರಾಮ ವನ್ ಕಛೇರಿಗೆ ಭೇಟಿ ನೀಡಿ ಶುಭಾಹಾರೈಸಿದರು. ನಂತರ ಆಲಂಕಾರು ಕಮ್ಮಿತ್ತಿಲು ಕೊರಗಜ್ಜ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥಿಸಿ ಪ್ರಸಾದ ಸ್ವೀಕರಿಸಿದರು. ಪೆರಾಬೆ ಗ್ರಾಮದ ಪೂಂಜಾ ಎಂಬಲ್ಲಿ ಸಾರ್ವಜನಿಕ ರಸ್ತೆಯ ಬದಿಯ ಭೂ ಕುಸಿತದ ವೀಕ್ಷಣೆ ನಡೆಸಿ ಸಾರ್ವಜನಿಕ ಕುಂದು ಕೊರತೆಯನ್ನು ಆಲಿಸಿದರು. ಹಳೆನೇರೆಂಕಿ ದ.ಕ.ಜಿ.ಪ ಉನ್ನತ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ಶಾಲಾ ಶತಮಾನೋತ್ಸವ ಸಮಿತಿ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಕಡಬ ತಾಲೂಕಿನಾದ್ಯಂತ ಭೇಟಿ | ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ Read More »

error: Content is protected !!
Scroll to Top