ರಾಜಕೀಯ

ರಾಜ್ಯದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ | ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪ್ರತಿಭಟನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಶಾಸಕರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಸೂಚನೆ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದರು. ವಿಧಾನಸೌಧದಿಂದ ರಾಜಭವನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಕರ್ನಾಟಕದಲ್ಲಿ ಜಂಗಲ್ ರಾಜ್ಯ ಶುರುವಾಗಿದೆ. ಸಾಮಾನ್ಯರು ಭಯ ಭೀತಿ ಇಲ್ಲದೆ ಓಡಾಡುವಂತಿಲ್ಲ. ಜೈನ ಮುನಿ ಕೊಲೆ ಆಗಿದೆ‌ […]

ರಾಜ್ಯದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ | ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪ್ರತಿಭಟನೆ Read More »

ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವವನ್ನು ಅನೂರ್ಜಿತ ಗೊಳಿಸಲು ಹುನ್ನಾರ | ಕಾಂಗ್ರೆಸ್ ವತಿಯಿಂದ ಮೌನ ಪ್ರತಿಭಟನೆ

ಪುತ್ತೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವವನ್ನು ಅನೂರ್ಜಿತ ಗೊಳಿಸಲು ಹುನ್ನಾರ ನಡೆಸುತ್ತಿರುವ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಪುತ್ತೂರು, ವಿಟ್ಲ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪುತ್ತೂರು ಗಾಂಧಿಕಟ್ಟೆ ಎದುರು ಒಂದು ದಿನ ಮೌನ ಪ್ರತಿಭಟನೆ ಬುಧವಾರ ನಡೆಯಿತು. ಪುತ್ತೂರು ಬ್ಲಾಕ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಹಾಗೂ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ.ರಾಜಾರಾಮ್ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮೌನ ಪ್ರತಿಭಟನೆಗೆ ಚಾಲನೆ ನೀಡಿದರು. ಕಾಂಗ್ರೆಸ್ ನಾಯಕರು ಬಾಯಿಗೆ

ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವವನ್ನು ಅನೂರ್ಜಿತ ಗೊಳಿಸಲು ಹುನ್ನಾರ | ಕಾಂಗ್ರೆಸ್ ವತಿಯಿಂದ ಮೌನ ಪ್ರತಿಭಟನೆ Read More »

ಆಯಾರ್ಪು ಗ್ರಾಪಂ ಉಪ ಚುನಾವಣೆಗೆ ಬಿಜೆಪಿಯಿಂದ ಜಗದೀಶ್ ಭಂಡಾರಿ, ವಸಂತ ನಾಮಪತ್ರ ಸಲ್ಲಿಕೆ

ಪುತ್ತೂರು : ಆರ್ಯಾಪು ಗ್ರಾಮ ಪಂಚಾಯತ್ ನ ಉಪಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಜಗದೀಶ್ ಭಂಡಾರಿ ಹಾಗೂ ವಸಂತ ಆರ್ಯಾಪು ಗ್ರಾಮ ಪಂಚಾಯತ್ ನಲ್ಲಿ ಬುಧವಾರ ನಾಮಪತ್ರ ಸಲ್ಲಿಸಿದರು. ಆರ್ಯಾಪು ಗ್ರಾಮ ಪಂಚಾಯತಿಯ ಆರ್ಯಾಪು ಎರಡನೇ ವಾರ್ಡ್‌ನ (ಆರ್ಯಾಪು 11) ಸದಸ್ಯರಾಗಿದ್ದ ನಿವೃತ್ತ ಎಸ್‌ಐ ರುಕ್ಕಯ್ಯ ಮೂಲ್ಯ ಅವರು ಇತ್ತೀಚೆಗೆ ಹೃದಯಾಘಾತದಿಂದ ನಿಧನ ಹೊಂದಿದ್ದು, ಈ ಹಿನ್ನೆಲೆ ಉಪಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮುಖಂಡರಾದ ಬೂಡಿಯಾರ್ ರಾಧಾಕೃಷ್ಣ ರೈ, ಜೀವಂಧರ್

ಆಯಾರ್ಪು ಗ್ರಾಪಂ ಉಪ ಚುನಾವಣೆಗೆ ಬಿಜೆಪಿಯಿಂದ ಜಗದೀಶ್ ಭಂಡಾರಿ, ವಸಂತ ನಾಮಪತ್ರ ಸಲ್ಲಿಕೆ Read More »

ಆರ್ಯಾಪು ಗ್ರಾಪಂ ಉಪ ಚುನಾವಣೆ | ಪುತ್ತಿಲ ಪರಿವಾರದಿಂದ ಸುಬ್ರಹ್ಮಣ್ಯ ಬಲ್ಯಾಯ ನಾಮಪತ್ರ ಸಲ್ಲಿಕೆ

ಪುತ್ತೂರು: ಆರ್ಯಾಪು ಗ್ರಾಮ ಪಂಚಾಯಿತಿ ಉಪ ಚುನಾವಣೆಗೆ ಪುತ್ತಿಲ ಪರಿವಾರದಿಂದ ಸುಬ್ರಹ್ಮಣ್ಯ ಬಲ್ಯಾಯ ದೊಡ್ಡಡ್ಕ ಮಂಗಳವಾರ ನಾಮಪತ್ರ ಸಲ್ಲಿಸಿದರು. ಈ ಹಿಂದಿನ ಅಭ್ಯರ್ಥಿ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಆರ್ಯಾಪು ಗ್ರಾಮ ಪಂಚಾಯಿತಿಯಲ್ಲಿ ನಾಮಪತ್ರ ಸಲ್ಲಿಸಲಾಯಿತು. ಈ ಸಂದರ್ಭ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾ,  ಪ್ರಧಾನ ಕಾರ್ಯದರ್ಶಿ ಉಮೇಶ್ ಗೌಡ ವೀರಮಂಗಲ,  ಪ್ರಮುಖರಾದ ವಾಣಿಶ್ರೀ, ಶ್ರೀಕರಿ, ನವೀನ್ ರೈ ಮೇಗಿನಪಂಜ, ಜಗದೀಶ್ ಪೂಜಾರಿ, ನಾರಾಯಣ ಕುಲಾಲ್, ತಿಮ್ಮಪ್ಪ ನಾಯ್ಕ್

ಆರ್ಯಾಪು ಗ್ರಾಪಂ ಉಪ ಚುನಾವಣೆ | ಪುತ್ತಿಲ ಪರಿವಾರದಿಂದ ಸುಬ್ರಹ್ಮಣ್ಯ ಬಲ್ಯಾಯ ನಾಮಪತ್ರ ಸಲ್ಲಿಕೆ Read More »

ನಿಡ್ಪಳ್ಳಿ ಗ್ರಾಮ ಪಂಚಾಯತ್ ಉಪಚುನಾವಣೆಗೆ ಬಿಜೆಪಿಯಿಂದ ಚಂದ್ರಶೇಖರ ಪ್ರಭು ನಾಮಪತ್ರ ಸಲ್ಲಿಕೆ

ಪುತ್ತೂರು: ಉಪಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಚಂದ್ರಶೇಖರ್ ಪ್ರಭು ನಿಡ್ಲಳ್ಳಿ ಗ್ರಾಮ ಪಂಚಾಯಿತಿಯಿಂದ ನಾಮಪತ್ರ ಸಲ್ಲಿಸಿದರು.  ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯತಿ ಮತ್ತು ನಿಡ್ನಳ್ಳಿ ಗ್ರಾಮ ಪಂಚಾಯತಿಯಲ್ಲಿ ತೆರವಾಗಿದ್ದ ತಲಾ ಒಂದು ಸ್ಥಾನಗಳಿಗೆ ಜುಲೈ 23ರಂದು ಉಪಚುನಾವಣೆ ನಡೆಯಲಿದೆ. ನಿಡ್ನಳ್ಳಿ ಗ್ರಾಮ ಪಂಚಾಯತಿಯ ಒಂದನೇ ವಾರ್ಡ್ ಸದಸ್ಯ ಮುರಳೀಕೃಷ್ಣ ಭಟ್ ಕೆಲವು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಅವರ ತೆರವಾದ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆಯಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಸಾಜ

ನಿಡ್ಪಳ್ಳಿ ಗ್ರಾಮ ಪಂಚಾಯತ್ ಉಪಚುನಾವಣೆಗೆ ಬಿಜೆಪಿಯಿಂದ ಚಂದ್ರಶೇಖರ ಪ್ರಭು ನಾಮಪತ್ರ ಸಲ್ಲಿಕೆ Read More »

ಶಾಲಾ ಶಿಕ್ಷಕರಿಗೂ ವಸ್ತ್ರ ಸಂಹಿತೆ ಜ್ಯಾರಿ | ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು

ಬೆಂಗಳೂರು :  ಶಾಲಾ ಶಿಕ್ಷಕರಿಗೆ ವಸ್ತ್ರಸಂಹಿತೆ ಜಾರಿಗೊಳಿಸುವ ಕುರಿತು ಚರ್ಚೆ ನಡೆಸಿ ಆ ಬಳಿಕ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಸೋಮವಾರ, ಕಾಂಗ್ರೆಸ್‌ನ ಮಂಜುನಾಥ ಭಂಡಾರಿ ಪ್ರಶ್ನೆಗೆ ಉತ್ತರಿಸಿದ ಅವರು, ಶಾಲಾ ಶಿಕ್ಷಕರ ವಸ್ತ್ರಸಂಹಿತೆಗೆ ನಿಯಮಗಳಿಲ್ಲ. ಅಂತಹ ಪ್ರಸ್ತಾವನೆಯೂ ಸರ್ಕಾರದ ಮುಂದಿಲ್ಲ. ವಸ್ತ್ರಸಂಹಿತೆ ಒಳಿತು ಎನ್ನುವುದಾದರೆ ಎಲ್ಲರ ಜತೆ ಚರ್ಚಿಸಿದ ನಂತರವೇ ನಿರ್ಧಾರ ತೆಗೆದುಕೊಳ್ಳಲಾಗುವುದು. ಆತುರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದರು. ರಾಜ್ಯದಲ್ಲಿ ಶಿಕ್ಷಕರ ಕೊರತೆ

ಶಾಲಾ ಶಿಕ್ಷಕರಿಗೂ ವಸ್ತ್ರ ಸಂಹಿತೆ ಜ್ಯಾರಿ | ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು Read More »

ಜೈನಮುನಿಗಳ ಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಅಗತ್ಯವಿಲ್ಲ : ಜಿ.ಪರಮೇಶ್ವರ್ ಹೇಳಿಕೆ

ಹುಬ್ಬಳ್ಳಿ : ಜೈನಮುನಿಗಳ ಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಅಗತ್ಯವಿಲ್ಲ ಗೃಹ ಇಲಾಖೆ ಸಮರ್ಥವಾಗಿದೆ. ನಮ್ಮ ಇಲಾಖೆಯ ತನಿಖೆ ಮುಗಿದ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಆಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾರೂ ರಾಜಕೀಯ ತಾರತಮ್ಯ ಮಾಡುವುದಿಲ್ಲ ಎಂದು ತಿಳಿಸಿದರು. ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಆರೋಪಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಮುಂದಿನ ದಿನದಲ್ಲಿ ಇಂತಹ ಕೃತ್ಯ

ಜೈನಮುನಿಗಳ ಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಅಗತ್ಯವಿಲ್ಲ : ಜಿ.ಪರಮೇಶ್ವರ್ ಹೇಳಿಕೆ Read More »

ಗ್ರಾಪಂ ಉಪಚುನಾವಣೆ | ನಿಡ್ಪಳ್ಳಿ ಗ್ರಾಪಂಗೆ ಪುತ್ತಿಲ ಪರಿವಾರದ ಅಭ್ಯರ್ಥಿಯಾಗಿ ಜಗನ್ನಾಥ ರೈ ಕೊಳೆಂಬೆತ್ತಿಮಾರು ನಾಮಪತ್ರ ಸಲ್ಲಿಕೆ

ನಿಡ್ಪಳ್ಳಿ : ನಿಡ್ಪಳ್ಳಿ ಗ್ರಾಮ ಪಂಚಾಯತ್ ನ ಉಪಚುನಾವಣೆಗೆ ಪುತ್ತಿಲ ಪರಿವಾರದಿಂದ ಅಭ್ಯರ್ಥಿಯಾಗಿ ನಾಮಪತ್ರ ಜಗನ್ನಾಥ್ ರೈ ಕೊಳೆಂಬೆತ್ತಿಮಾರು ನಾಮಪತ್ರ ಸಲ್ಲಿಸಿದರು. ಸೋಮವಾರ ಪುತ್ತಿಲ ಪರಿವಾರದ ಮುಖಂಡರೊಂದಿಗೆ ತೆರಳಿ ನಿಡ್ಪಳ್ಳಿ ಗ್ರಾಮ ಪಂಚಾಯತ್ ನಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಮಾರ್ತಾ, ಪ್ರಧಾನ ಕಾರ್ಯದರ್ಶಿ ಉಮೇಶ್ ಗೌಡ ವೀರಮಂಗಲ, ಪ್ರಮುಖರಾದ ಸುಧೀರ್ ರೈ ನೇಸರ ಕಂಪ, ನಗರ ಅಧ್ಯಕ್ಷ ಅನಿಲ್ ತೆಂಕಿಲ, ಕುಮಾರ್

ಗ್ರಾಪಂ ಉಪಚುನಾವಣೆ | ನಿಡ್ಪಳ್ಳಿ ಗ್ರಾಪಂಗೆ ಪುತ್ತಿಲ ಪರಿವಾರದ ಅಭ್ಯರ್ಥಿಯಾಗಿ ಜಗನ್ನಾಥ ರೈ ಕೊಳೆಂಬೆತ್ತಿಮಾರು ನಾಮಪತ್ರ ಸಲ್ಲಿಕೆ Read More »

ಅನ್ನಭಾಗ್ಯಕ್ಕೆ ಇಂದು ಚಾಲನೆ|ಬಿಪಿಎಲ್ ಕಾರ್ಡ್‍ದಾರರ ಅಕೌಂಟ್‍ಗೆ ರೇಷನ್ ಹಣ

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಎರಡನೇ ಗ್ಯಾರಂಟಿ ಯೋಜನೆ ಅನ್ನಭಾಗ್ಯಕ್ಕೆ ಇಂದು ಚಾಲನೆ ಸಿಗಲಿದೆ. ಬಿಪಿಎಲ್ ಕಾರ್ಡ್‌ದಾರರ ಖಾತೆಗೆ ಹಣ ಹಾಕುವ ಮೂಲಕ ಚಾಲನೆ ಸಿಗಲಿದೆ. ಹಂತಹಂತವಾಗಿ ಖಾತೆಗೆ ಹಣ ಹಾಕುವ ಪ್ಲಾನ್ ಅನ್ನು ಆಹಾರ ಇಲಾಖೆ ಮಾಡಿಕೊಂಡಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆ ಅನ್ನಭಾಗ್ಯ, ಅನ್ನಭಾಗ್ಯ ಯೋಜನೆ ಜುಲೈ ಒಂದರಿಂದಲೇ ಜಾರಿ ಆಗಬೇಕಿತ್ತು. ಅಕ್ಕಿ ಸಿಗದ ಕಾರಣ ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿಯೊಂದಿಗೆ 5 ಕೆಜಿ ಅಕ್ಕಿಗೆ ಹಣ ಹಾಕಲು

ಅನ್ನಭಾಗ್ಯಕ್ಕೆ ಇಂದು ಚಾಲನೆ|ಬಿಪಿಎಲ್ ಕಾರ್ಡ್‍ದಾರರ ಅಕೌಂಟ್‍ಗೆ ರೇಷನ್ ಹಣ Read More »

ಗ್ರಾಮ ಪಂಚಾಯಿತಿ ಸದಸ್ಯರು ಆಸ್ತಿ ವಿವರ ಸಲ್ಲಿಕೆ ಕುರಿತು ಹೈಕೋರ್ಟ್ ಮಹತ್ವದ ತೀರ್ಪು | ಮೂರು ತಿಂಗಳೊಳಗೆ ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯ

ಬೆಂಗಳೂರು : ಗ್ರಾಮ ಪಂಚಾಯಿತಿ ಸದಸ್ಯರ ಆಸ್ತಿ ವಿವರ ಸಲ್ಲಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಮೂರು ತಿಂಗಳೊಳಗೆ ತಮ್ಮ ಆಸ್ತಿ ವಿವರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ತಿಳಿಸಿದೆ. ಆಸ್ತಿ ವಿವರ ಸಲ್ಲಿಸಲು ವಿಫಲವಾದರೆ ಶೋಕಾಸ್ ನೋಟಿಸ್ ನೀಡದೇ ಸದಸ್ಯತ್ವದಿಂದ ಅನರ್ಹಗೊಳಿಸಬಹುದು ಎಂದು ಅಭಿಪ್ರಾಯಪಟ್ಟಿದೆ. ಇದಕ್ಕೆ ಉದಾಹರಣೆ ಎಂಬಂತೆ ಕಲಬುರಗಿ ಜಿಲ್ಲೆಯ ಅಳಂದ ತಾಲೂಕಿನ ಮೊಘಾ ಗ್ರಾಪಂ ಸದಸ್ಯೆ ಲಲಿತಾಬಾಯಿ ಪಾಟೀಲ್ ಎಂಬವರನ್ನು ರಾಜ್ಯ ಚುನಾವಣಾ ಆಯೋಗ ಸದಸ್ಯತ್ವದಿಂದ ಅನರ್ಹಗೊಳಿಸಿದ್ದು, ಇದನ್ನು

ಗ್ರಾಮ ಪಂಚಾಯಿತಿ ಸದಸ್ಯರು ಆಸ್ತಿ ವಿವರ ಸಲ್ಲಿಕೆ ಕುರಿತು ಹೈಕೋರ್ಟ್ ಮಹತ್ವದ ತೀರ್ಪು | ಮೂರು ತಿಂಗಳೊಳಗೆ ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯ Read More »

error: Content is protected !!
Scroll to Top