ರಾಜಕೀಯ

ನಾಳೆಯಿಂದ ಅನ್ನಭಾಗ್ಯ ಯೋಜನೆ ಜಾರಿಗೆ | ಬಿಪಿಎಲ್, ಅಂತ್ಯೋದಯ ಫಲಾನುಭವಿಗಳ ಖಾತೆಗೆ ನೇರ ಜಮೆ

ಬೆಂಗಳೂರು:: ರಾಜ್ಯ ಸರ್ಕಾರ ತನ್ನ ಐದು ಗ್ಯಾರಂಟಿಗಳಲ್ಲಿ ಈಗಾಗಲೇ 2 ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದು, ನಾಳೆಯಿಂದ ಮೂರನೇ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯ ಕೂಡ ಜಾರಿಗೆ ಬರಲಿದ್ದು ನಾಳೆಯಿಂದ ನೇರವಾಗಿ ಬಿಪಿಎಲ್​ ಹಾಗೂ ಅಂತ್ಯೋದಯ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಿದೆ. ಸೋಮವಾರ ಸಂಜೆ ಐದು ಗಂಟೆಗೆ ಸಿಎಂ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಲಿದ್ದಾರೆ. ರಾಜ್ಯ ಸರ್ಕಾರವು ಐದು ಕೆಜಿ ಅಕ್ಕಿಯನ್ನು ನ್ಯಾಯಬೆಲೆ ಅಂಗಡಿಯಲ್ಲಿ ನೀಡಿದ್ದು ಉಳಿದ ಐದು ಕೆಜಿ ಅಕ್ಕಿಯ ಬದಲಾಗಿ 170 ರೂಪಾಯಿಗಳನ್ನು ನೀಡಲಿದೆ. ಈ […]

ನಾಳೆಯಿಂದ ಅನ್ನಭಾಗ್ಯ ಯೋಜನೆ ಜಾರಿಗೆ | ಬಿಪಿಎಲ್, ಅಂತ್ಯೋದಯ ಫಲಾನುಭವಿಗಳ ಖಾತೆಗೆ ನೇರ ಜಮೆ Read More »

ಸಿದ್ಧರಾಮಯ್ಯ ಸರಕಾರದ ಬಜೆಟ್ ಎಲ್ಲರೂ ಮೆಚ್ಚುವ ಸಮತೋಲನದ ಬಜೆಟ್ : ಪಿ.ಸಿ.ಜಯರಾಮ

ಸುಳ್ಯ : ಸುಳ್ಯ:ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಎಲ್ಲರೂ ಮೆಚ್ಚುವ ಸಮತೋಲನದ ಬಜೆಟ್ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಶ್ಲಾಘಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ರಾಜ್ಯದಲ್ಲಿ ಇರುವುದು ನುಡಿದಂತೆ ನಡೆಯುವ ಸರಕಾರ. ಚುನಾವಣೆ ಸಂದರ್ಭದಲ್ಲಿ ಜನರಿಗೆ ಕೊಟ್ಟ ಎಲ್ಲಾ ಭರವಸೆಗಳನ್ನು ಈಡೇರಿಸುವತ್ತ ದಿಟ್ಟ ಹೆಜ್ಜೆ ಇರಿಸಿದೆ‌.ಗ್ಯಾರಂಟಿಗಳಅನುಷ್ಠಾನಕ್ಕೆ 52 ಸಾವಿರ ಕೋಟಿಗಳನ್ನು ಮೀಸಲಿರಿಸಿದೆ.ಶಕ್ತಿ ಯೋಜನೆ, ಅನ್ನ ಭಾಗ್ಯ,ಗೃಹಜ್ಯೋತಿ, ಈಗಾಗಲೇ ಜಾರಿ ಮಾಡಿದೆ.ಉಳಿದ ಎರಡು ಗ್ಯಾರಂಟಿಗಳನ್ನು ಶೀಘ್ರ ಅನುಷ್ಠಾನ ಮಾಡಲಿದೆ. ಬಜೆಟ್ ಶೇ.90 ಜನರಿಗೆ ನೇರವಾಗಿ

ಸಿದ್ಧರಾಮಯ್ಯ ಸರಕಾರದ ಬಜೆಟ್ ಎಲ್ಲರೂ ಮೆಚ್ಚುವ ಸಮತೋಲನದ ಬಜೆಟ್ : ಪಿ.ಸಿ.ಜಯರಾಮ Read More »

ಮುಖ್ಯಮಂತ್ರಿ ಸಿದ್ದರಾಮಯ್ಯರ ಬಜೇಟ್ ಅಲ್ಪಸಂಖ್ಯಾತ ಓಲೈಕೆ ಬಜೆಟ್: ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಕಳೆದ ಬಾರಿ ಸಿದ್ದರಾಮಯ್ಯರ ಆಡಳಿತದಲ್ಲಿ ಇದ್ದಂತೆ ಈ ಬಾರಿಯೂ ಸಿದ್ದರಾಮಯ್ಯ ಬಜೇಟ್ ಅಲ್ಪಸಂಖ್ಯಾತರಿಗೆ ಮೀಸಲಿಟ್ಟ ಬಜೇಟ್ ನಂತಾಗಿದೆ ಎಂದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ಮೆಟ್ರಿಕ್ ನಂತರದ  ವಿದ್ಯಾರ್ಥಿಗಳಿಗೆ   ವಿದ್ಯಾರ್ಥಿವೇತನಕ್ಕಾಗಿಯೇ 60 ಕೋಟಿ ರೂ. ಅನುದಾನ, ಹೊಸದಾಗಿ 10 ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸುವುದು ಮತ್ತು ನೂರಾರು ಕೋಟಿ ಅನುದಾನ,  ಮೌಲನ ಅಜಾದ್ ಶಾಲೆಗಳಿಗೆ ಅಗತ್ಯ ಮೂಲ ಸೌಕರ್ಯ,  ಸಿ.ಇ.ಟಿ ಮೂಲಕ ಪ್ರವೇಶ ಪಡೆದ ಇಂಜಿನಿಯರಿಂಗ್‌, ವೈದ್ಯಕೀಯ

ಮುಖ್ಯಮಂತ್ರಿ ಸಿದ್ದರಾಮಯ್ಯರ ಬಜೇಟ್ ಅಲ್ಪಸಂಖ್ಯಾತ ಓಲೈಕೆ ಬಜೆಟ್: ಅರುಣ್ ಕುಮಾರ್ ಪುತ್ತಿಲ Read More »

ನರೇಂದ್ರ ಮೋದಿಯವರ 9 ವರ್ಷ ಸಾಧನೆಯನ್ನು ಜನರಿಗೆ ತಲುಪಿಸಿ : ಮಾಜಿ ಶಾಸಕ ಸಂಜೀವ ಮಠಂದೂರು | ಪುಣಚ ಮಹಾಶಕ್ತಿ ಕೇಂದ್ರದ ಸಭೆ

ವಿಟ್ಲ : ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಿ 9ವರ್ಷ ಪೂರೈಸಿದ ಸಾಧನೆಯ ಸಂಭ್ರಮವನ್ನು ಜನರಿಗೆ ತಲುಪಿಸಲು ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಶನಿವಾರ ವಿಟ್ಲ ಪುಣಚ ಮಹಾಶಕ್ತಿ ಕೇಂದ್ರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವ ಮಾತನಾಡಿ, ಪ್ರತಿ ಬೂತಿನಲ್ಲಿ ಪಕ್ಷವನ್ನು ಬಲಪಡಿಸುವ ಮೂಲಕ ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಂಘಟಿತ ಪ್ರಯತ್ನ ಮಾಡಬೇಕು ಎಂದು ಹೇಳಿದರು. ಕೆಲವು ದಿನಗಳಿಂದ

ನರೇಂದ್ರ ಮೋದಿಯವರ 9 ವರ್ಷ ಸಾಧನೆಯನ್ನು ಜನರಿಗೆ ತಲುಪಿಸಿ : ಮಾಜಿ ಶಾಸಕ ಸಂಜೀವ ಮಠಂದೂರು | ಪುಣಚ ಮಹಾಶಕ್ತಿ ಕೇಂದ್ರದ ಸಭೆ Read More »

ಪುತ್ತಿಲ ಪರಿವಾರದೊಂದಿಗೆ ರಹಸ್ಯ ಸಭೆ ನಡೆಸಿದ ಬಿ.ಎಲ್.ಸಂತೋಷ್ | ಸಂಧಾನಕ್ಕೆ ಯತ್ನ

ಪುತ್ತೂರು : ದ.ಕ.ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ಭದ್ರಕೋಟೆಯನ್ನು ಅಲುಗಾಡಿಸಿರುವ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಅರುಣ್ ಕುಮಾರ್ ಪುತ್ತಿಲರ ಬಿಜೆಪಿ ಜತೆಗಿನ ಸಂಧಾನ ಮಾಡಿಕೊಳ್ಳುವ ಪ್ರಯತ್ನ ನಡೆಯುತ್ತಿದ್ದು ಇದೀಗ ಬಹಿರಂಗಗೊಂಡಿದೆ. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಪುತ್ತಿಲರನ್ನು ದೆಹಲಿಗೆ ಕರೆಸಿ ರಹಸ್ಯ ಸಭೆ ನಡೆಸಿದ್ದಾರೆ. ಸಭೆಯಲ್ಲಿ  ಚುನಾವಣೆ ಪೂರ್ವ ಹಾಗೂ ನಂತರ ವಿಷಯಗಳ ಕುರಿತು ವಿಸ್ತೃತವಾಗಿ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದ್ದು, ಈ ಸಭೆ ಜೂನ್‍ನಲ್ಲೇ ನಡೆದಿದೆ ಎಂಬುದು ಇದೀಗ ಬಹಿರಂಗವಾಗಿದೆ. ಈ ಬಾರಿಯ ವಿಧಾನಸಭೆ ಚುನಾವಣೆ

ಪುತ್ತಿಲ ಪರಿವಾರದೊಂದಿಗೆ ರಹಸ್ಯ ಸಭೆ ನಡೆಸಿದ ಬಿ.ಎಲ್.ಸಂತೋಷ್ | ಸಂಧಾನಕ್ಕೆ ಯತ್ನ Read More »

ರಾಜ್ಯ ಸರಕಾರದ ಬಜೆಟ್ ಭವಿಷ್ಯದಲ್ಲಿ ನಾಗರಿಕರ ಜೇಬಿಗೆ ಕತ್ತರಿಯ ಬದಲು ಗರಗಸವನ್ನೇ ಹಾಕುವ ಸಾಧ್ಯತೆ ಹೆಚ್ಚು : ಶಾಸಕ ಸುನಿಲ್ ಕುಮಾರ್

ಕಾರ್ಕಳ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ ಪುಸ್ತಕದಲ್ಲಿ‌ ಹೊಸ ಸಂಪ್ರದಾಯವನ್ನು ತುರುಕಿದ್ದಾರೆ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ. ಹಿಂದಿನ‌ ಸರ್ಕಾರ ಹಾಗೂ‌‌ ಕೇಂದ್ರ ಸರ್ಕಾರದ ನಿಂದನೆಗೆ ನೀಡಿದಷ್ಟು ಸ್ಥಳಾವಕಾಶವನ್ನು ಹೊಸ ಯೋಜನೆಗಳ ಪ್ರಕಟಣೆಗೆ ನೀಡಿಲ್ಲ. ಈ ಬಜೆಟ್ ನಲ್ಲಿ ಆರ್ಥಿಕ ಮುನ್ನೋಟಕ್ಕಿಂತ ರಾಜಕೀಯ ಹಿನ್ನೋಟವೇ ಜಾಸ್ತಿ ಇದೆ. ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ  52 ಸಾವಿರ ಕೋಟಿ ರೂ. ಖರ್ಚಾಗುತ್ತದೆ ಎಂದು ಲೆಕ್ಕಕೊಟ್ಟಿದ್ದರೂ, ಅದಕ್ಕೆ ಯಾವ ಮೂಲದಿಂದ ಹಣಕಾಸು ಹೊಂದಿಸುತ್ತಾರೆಂಬ ಬಗ್ಗೆ ಸ್ಪಷ್ಟತೆ ಇಲ್ಲ.

ರಾಜ್ಯ ಸರಕಾರದ ಬಜೆಟ್ ಭವಿಷ್ಯದಲ್ಲಿ ನಾಗರಿಕರ ಜೇಬಿಗೆ ಕತ್ತರಿಯ ಬದಲು ಗರಗಸವನ್ನೇ ಹಾಕುವ ಸಾಧ್ಯತೆ ಹೆಚ್ಚು : ಶಾಸಕ ಸುನಿಲ್ ಕುಮಾರ್ Read More »

ಕಾಂಗ್ರೆಸ್ ಸರಕಾರ ಗ್ಯಾರಂಟಿ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸದೇ ಜನರನ್ನು ವಂಚಿಸಲು ಪ್ರಯತ್ನಿಸುತ್ತಿದೆ : ಸಂಸದ ನಳಿನ್ ಕುಮಾರ್ ಕಟೀಲ್

ಮಂಗಳೂರು : ಗ್ಯಾರಂಟಿ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸದೆ ರಾಜ್ಯದ ಜನತೆಯನ್ನು  ವಂಚಿಸಿದ ಕಾಂಗ್ರೆಸ್ ಸರಕಾರ ಇದೀಗ ಸುಳ್ಳು ಭರವಸೆಗಳ ಬಜೆಟ್ ಮಂಡಿಸಿ ಮತ್ತೆ ಜನರ ವಂಚಿಸಲು ಪ್ರಯತ್ನಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್  ತಿಳಿಸಿದ್ದಾರೆ. ಗ್ಯಾರಂಟಿಗಳ ಜಾರಿಗೆ 57,910 ಕೋಟಿ ರೂ. ವೆಚ್ಚ ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ. ಆದರೆ ಆದಾಯ ಸಂಗ್ರಹದ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ನಿರುದ್ಯೋಗಿ ಪದವೀಧರರಿಗೆ ಮಾಸಿಕ ಭತ್ಯೆ ನೀಡುವುದಾಗಿ ಘೋಷಿಸಿದ್ದರೂ, ಬಜೆಟ್ ನಲ್ಲಿ ಇದರ ವೆಚ್ಚದ ಉಲ್ಲೇಖವಿಲ್ಲ

ಕಾಂಗ್ರೆಸ್ ಸರಕಾರ ಗ್ಯಾರಂಟಿ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸದೇ ಜನರನ್ನು ವಂಚಿಸಲು ಪ್ರಯತ್ನಿಸುತ್ತಿದೆ : ಸಂಸದ ನಳಿನ್ ಕುಮಾರ್ ಕಟೀಲ್ Read More »

ದಕ್ಷಿಣ ಕನ್ನಡದಲ್ಲಿ ಅತ್ಯಾಧುನಿಕ ಕೌಶಲ್ಯ ಪ್ರಯೋಗಾಲಯಗಳು, ಸಂಶೋಧನಾ ಕೇಂದ್ರಗಳ ಸ್ಥಾಪನೆ | ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯದ ಸಾವಿರಾರು ಬಡಜನರಿಗೆ ಕೈಗೆಟಕುವ ದರದಲ್ಲಿ ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆ ನೀಡುವ ಕಿದ್ವಾಯಿ ಸಂಸ್ಥೆಯು ಸುವರ್ಣ ಮಹೋತ್ಸವದ ಹೊಸ್ತಿಲಿನಲ್ಲಿದೆ. ಈ ಸಂದರ್ಭದಲ್ಲಿ ಆಸ್ಪತ್ರೆಯ ಕಲಬುರಗಿ ಮತ್ತು ಮೈಸೂರಿನಲ್ಲಿರುವ ಪ್ರಾದೇಶಿಕ ಘಟಕಗಳಲ್ಲಿ ಸೌಲಭ್ಯಗಳ ಸುಧಾರಣೆಗೆ 20 ಕೋಟಿ ರೂ. ಒದಗಿಸಲಾಗುವುದು. ರಾಜ್ಯದಲ್ಲಿ ಈಗಾಗಲೇ ಆರಂಭಿಸಲಾಗಿರುವ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ 450 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಗದಗ, ಕೊಪ್ಪಳ, ಕಾರವಾರ ಮತ್ತು ಕೊಡಗು ಜಿಲ್ಲೆಗಳಲ್ಲಿ 450 ಬೆಡ್ ಆಸ್ಪತ್ರೆಗಳ ನಿರ್ಮಾಣ

ದಕ್ಷಿಣ ಕನ್ನಡದಲ್ಲಿ ಅತ್ಯಾಧುನಿಕ ಕೌಶಲ್ಯ ಪ್ರಯೋಗಾಲಯಗಳು, ಸಂಶೋಧನಾ ಕೇಂದ್ರಗಳ ಸ್ಥಾಪನೆ | ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ Read More »

3.27 ಲಕ್ಷ ಕೋಟಿ ರೂ. ಬಜೆಟ್ ಮಂಡನೆ | ಸರ್ವರಿಗೆ ಸಮಪಾಲು ಸರ್ವರಿಗೆ ಸಮಬಾಳು ಬಜೆಟ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿಂದು ತನ್ನ ದಾಖಲೆಯ 14ನೇ ಬಜೆಟ್ ಮಂಡಿಸುತ್ತಿದ್ದಾರೆ. ಹೀಗಾಗಿ ಈ ಹಿಂದೆ ರಾಮಕೃಷ್ಣ ಹೆಗಡೆ 13 ಸಲ ಮಂಡಿಸಿದ್ದ ಬಜೆಟ್‌ ದಾಖಲೆ ಪತನಗೊಂಡಿತು. ಬಜೆಟ್ ಮಂಡನೆಗೂ ಮೊದಲು ಸರ್ವರಿಗೆ ಸಮಪಾಲು ಸರ್ವರಿಗೆ ಸಮಬಾಳು ಬಜೆಟ್, ನೀವೇ ನನ್ನ ಪಾಲಿನ ಜನತಾ ಜನಾರ್ದರು. ನುಡಿದಂತೆ ನಡೆದಿದ್ದೇವೆ, ವಿಶ್ವಾಸ ಹುಸಿಗೊಳಿಸುವುದಿಲ್ಲ ಎಂದು ಸಿದ್ದರಾಮಯ್ಯ ಟ್ವಿಟ್ ಮಾಡಿದ್ದರು. 2023 – 24 ನೇ ಸಾಲಿನ ರಾಜ್ಯ ಬಜೆಟ್ ಲೈವ್ ಅಪ್‌ಡೇಟ್ಸ್‌. • 3.27 ಲಕ್ಷ ಕೋಟಿ

3.27 ಲಕ್ಷ ಕೋಟಿ ರೂ. ಬಜೆಟ್ ಮಂಡನೆ | ಸರ್ವರಿಗೆ ಸಮಪಾಲು ಸರ್ವರಿಗೆ ಸಮಬಾಳು ಬಜೆಟ್ Read More »

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಗೆ ರೇಡಿಯಾಲಜಿಸ್ಟ್ ಮತ್ತು ಪ್ರಸೂತಿ ತಜ್ಞರ ನೇಮಕ | ವಿಧಾನಸಭಾ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ಅಶೋಕ್ ರೈ

ಪುತ್ತೂರು; ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ರೇಡಿಯಾಲಜಿಸ್ಟ್ ಮತ್ತು ಪ್ರಸೂತಿ ವೈಧ್ಯರನ್ನು ನೇಮಕ ಮಾಡುವಂತೆ ಆಗ್ರಹಿಸಿ ವಿಧಾನಸಭಾ ಅಧಿವೇಶನದಲ್ಲಿ ಪುತ್ತೂರು ಶಾಸಕರಾದ ಅಶೋಕ್ ರಐಯವರು ವಿಷಯ ಪ್ರಸ್ತಾಪಿಸಿದ್ದು ಸರಕಾರಿ ಆಸ್ಪತ್ರೆಯ ಸಮಸ್ಯೆಯಗಳ ಬಗ್ಗೆ ಸರಕಾರದ ಗಮನ ಸೆಳೆದಿದ್ದಾರೆ. ಆಸ್ಪತ್ರೆಗೆ ರೇಡಿಯಾಲಜಿಸ್ಟ್ ಅಗತ್ಯವಾಗಿ ಬೇಕಾಗಿದ್ದು, ಆಸ್ಪತ್ರೆಯಲ್ಲಿ ಒಬ್ಬರು ಪ್ರಸೂತಿ ತಜ್ಞರಿದ್ದು ಅವರು ಹೆಸರಿಗೆ ರಜೆ ಮೆಲೆ ತೆರಳಿದ ಕಾರಣ ಹೆರಿಗೆ ಮಾಡಿಸಲು ವೈಧ್ಯರಿಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗಿರುತ್ತದೆ. ಪುತ್ತೂರು ತಾಲೂಕು ವ್ಯಾಪ್ತಿಯಲ್ಲಿರುವ ಏಕೈಕ ದೊಡ್ಡ ಸರಕಾರಿ ಆಸ್ಪತ್ರೆಯಗಿರುವ ಕಾರಣ ಸರಕಾರಿ ಆಸ್ಪತ್ರೆಗೆ

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಗೆ ರೇಡಿಯಾಲಜಿಸ್ಟ್ ಮತ್ತು ಪ್ರಸೂತಿ ತಜ್ಞರ ನೇಮಕ | ವಿಧಾನಸಭಾ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ಅಶೋಕ್ ರೈ Read More »

error: Content is protected !!
Scroll to Top