ರಾಜಕೀಯ

ಸಿ.ಟಿ.ರವಿಗೆ ಕೊಲೆಗಡುಕ ಎಂದದ್ದು ನಿಜ : ಸ್ಪಷ್ಟನೆ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್‌

ರಾಹುಲ್‌ ಗಾಂಧಿಯನ್ನು ಡ್ರಗ್‌ ಅಡಿಕ್ಟ್‌ ಎಂದಾಗ ಕೋಪ ಬಂತು ಎಂದ ಸಚಿವೆ ಬೆಳಗಾವಿ: ರಾಹುಲ್ ಗಾಂಧಿಯವರನ್ನು ಸುಮ್ಮನೆ ಎಳೆದು ತಂದು ಡ್ರಗ್ ಅಡಿಕ್ಟ್ ಎಂದಿದ್ದಕ್ಕೆ ನೀವು ಮೂವರನ್ನು ಆಕ್ಸಿಡೆಂಟ್ ಮಾಡಿ ಅವರ ಕೊಲೆಗೆ ಕಾರಣರಾಗಿದ್ದೀರಿ, ನೀವು ಕೊಲೆಗಡುಕ ಎಂದು ನಾನು ಹೇಳಿದ್ದು ನಿಜ. ನಾನು ಆ ಮಾತಿನಿಂದ ಹಿಂದೆ ಸರಿಯುವುದಿಲ್ಲ, ಹೆಣ್ಣಿನ ಮಾನ, ಶೀಲದ ಬಗ್ಗೆ ಬಳಸಬಾರದ ಪದ ಬಳಸಿದ ಸಿ.ಟಿ ರವಿಯವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ […]

ಸಿ.ಟಿ.ರವಿಗೆ ಕೊಲೆಗಡುಕ ಎಂದದ್ದು ನಿಜ : ಸ್ಪಷ್ಟನೆ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್‌ Read More »

ನನ್ನ ಜೀವಕ್ಕೆ ಅಪಾಯವಾದರೆ ಡಿಕೆಶಿ ಹೊಣೆ : ಸಿ.ಟಿ.ರವಿ ವೀಡಿಯೊ ಸಂದೇಶ

ಪೊಲೀಸರು ಕಾರಿನಲ್ಲಿ ಕೂರಿಸಿಕೊಂಡು ಸುತ್ತಾಡುತ್ತಿದ್ದಾರೆ ಎಂದು ಆರೋಪ ಬೆಂಗಳೂರು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬೆಳಗಾವಿ ಪೊಲೀಸರ ವಶದಲ್ಲಿರುವ ಬಿಜೆಪಿ ಎಂಎಲ್​​ಸಿ ಸಿ.ಟಿ ರವಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜತೆಗೆ, ತನ್ನ ಜೀವಕ್ಕೆ ಅಪಾಯವಿದ್ದು ಏನೇ ಆದರೂ ಅದಕ್ಕೆ ಪೊಲೀಸರು ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವೆ ಹೆಬ್ಬಾಳ್ಕರ್ ಕಾರಣ ಎಂದು ವಿಡಿಯೋ ಸಂದೇಶ ಪ್ರಕಟಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ವೀಡಿಯೊ ಸಂದೇಶ ಪ್ರಕಟಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ

ನನ್ನ ಜೀವಕ್ಕೆ ಅಪಾಯವಾದರೆ ಡಿಕೆಶಿ ಹೊಣೆ : ಸಿ.ಟಿ.ರವಿ ವೀಡಿಯೊ ಸಂದೇಶ Read More »

ರಾತ್ರಿಯಿಡೀ ಬೆಳಗಾವಿಯಲ್ಲಿ ಹೈಡ್ರಾಮಾ : ಇಂದು ಬೆಂಗಳೂರಿನ ಕೋರ್ಟ್‌ಗೆ ಸಿ.ಟಿ.ರವಿ ಹಾಜರು

ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಕೊಲೆ ಸಂಚು ದೂರು-ಠಾಣೆಯಿಂದ ಠಾಣೆಗೆ ಕರೆದೊಯ್ದ ಪೊಲೀಸರು ಬೆಳಗಾವಿ: ನಿನ್ನೆ ಸಂಸತ್‌ನಲ್ಲಿ ಆಡಳಿತ ಪಕ್ಷ ಮತ್ತು ವಿಪಕ್ಷಗಳ ಸಂಸದರ ನಡುವೆ ನಡೆದ ಜಟಾಜಟಿ ಮಾದರಿಯಲ್ಲೇ ರಾಜ್ಯದಲ್ಲೂ ಹೈಡ್ರಾಮಾ ನಡೆದಿದ್ದು, ಬೆಳಗಾವಿಯಲ್ಲಿ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರನ್ನು ರಾತ್ರಿಯಿಡೀ ಠಾಣೆಯಿಂದ ಠಾಣೆಗೆ ಶಿಫ್ಟ್‌ ಮಾಡಲಾಗಿದೆ. ನಂತರ ಗುರುವಾರ ರಾತ್ರಿಯೇ ಬಿಗಿ ಭದ್ರತೆಯಲ್ಲಿ ಅವರನ್ನು ಖಾನಾಪುರ ಠಾಣೆಯಿಂದ ಬೆಂಗಳೂರಿಗೆ ಬಿಗಿಭದ್ರತೆಯಲ್ಲಿ ಕರೆತರಲಾಗಿದ್ದು, ಇಂದು ಸಂಜೆಯೊಳಗೆ ಬೆಂಗಳೂರಿನ ಜನಪ್ರತಿನಿಧಿ ಕೋರ್ಟ್​​​ಗೆ ಸಿ‌ಟಿ‌ ರವಿಯನ್ನು ಪೊಲೀಸರು

ರಾತ್ರಿಯಿಡೀ ಬೆಳಗಾವಿಯಲ್ಲಿ ಹೈಡ್ರಾಮಾ : ಇಂದು ಬೆಂಗಳೂರಿನ ಕೋರ್ಟ್‌ಗೆ ಸಿ.ಟಿ.ರವಿ ಹಾಜರು Read More »

ರಾಹುಲ್‌ ಗಾಂಧಿ ತಳ್ಳಿದಾಗ ಬಿದ್ದು ಗಾಯಗೊಂಡ ಬಿಜೆಪಿ ಸಂಸದ

ಸಂಸತ್‌ ಆವರಣದಲ್ಲಿ ಪ್ರತಿಭಟನೆ ವೇಳೆ ಹೈಡ್ರಾಮಾ ಹೊಸದಿಲ್ಲಿ: ಅಂಬೇಡ್ಕರ್‌ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ನೀಡಿದ ಹೇಳಿಕೆ ಬಿಜೆಪಿ-ಕಾಂಗ್ರೆಸ್‌ ನಡುವೆ ಕಿಚ್ಚು ಹೊತ್ತಿಸಿದೆ. ಇಂದು ಉಭಯ ಪಕ್ಷಗಳು ಸಂಸತ್‌ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಭಾರಿ ಹೈಡ್ರಾಮಾ ನಡೆದಿದೆ. ಬಿಜೆಪಿ ಸಂಸದ ಪ್ರತಾಪ್‌ ಸಾರಂಗಿ ಕುಸಿದು ಬಿದ್ದಿದ್ದು, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರನ್ನು ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಾಂಗ್ರೆಸ್‌ ಪ್ರತಿಭಟನೆ ವಿರೋಧಿಸಿ ಬಿಜೆಪಿ ಸದಸ್ಯರು ಪ್ರತಿಭಟಿಸುತ್ತಿದ್ದ ವೇಳೆ ಪ್ರತಾಪ್‌

ರಾಹುಲ್‌ ಗಾಂಧಿ ತಳ್ಳಿದಾಗ ಬಿದ್ದು ಗಾಯಗೊಂಡ ಬಿಜೆಪಿ ಸಂಸದ Read More »

ಸುದೇಶ್ ಕುಮಾರ್ ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ಪುತ್ತೂರು: ಕೊಂಬೆಟ್ಟು ಬೂತ್ ಅಧ್ಯಕ್ಷರಾಗಿದ್ದ ಸುದೇಶ್ ಕುಮಾರ್ ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಹಾಲಿಂಗೇಶ್ವರ ದೇವಳದ ನೂತನ ಸಮಿತಿ ಘೋಷಣೆಯಾಗುತ್ತಿದ್ದಂತೆ ರಾಜೀನಾಮೆ ಪತ್ರವನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವರಿಗೆ ನೀಡಿದ್ದಾರೆ. ತಾನು ಕಳೆದ 35 ವರ್ಷಗಳಿಂದ ಕಾಂಗ್ರೆಸ್ ಕಾರ್ಯಕರ್ತನಾಗಿ ಕೊಂಬೆಟ್ಟು ವಾರ್ಡ್ ನಲ್ಲಿ ದುಡಿಯುತ್ತಿದ್ದು ಪಕ್ಷದ ಎಲ್ಲಾ ಚಟುವಟಿಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದೆ. ಪಕ್ಷದ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದೇನೆ. ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನಾಮ ನಿರ್ದೇಶನಕ್ಕೆ ಅರ್ಜಿ ಸಲ್ಲಿಸಿದ್ದು ಪ್ರಬಲ

ಸುದೇಶ್ ಕುಮಾರ್ ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ Read More »

ಬೆಂಗಳೂರಿನಲ್ಲಿ ಕಾಣಿಸಿಕೊಂಡ ಸ್ನೇಹಮಯಿ ಕೃಷ್ಣ : ಕೇಸ್‌ ಹಿಂದೆಗೆಯಲು ಆಮಿಷವೊಡ್ಡಿದ ಆರೋಪ

ಮುಡಾ ಹಗರಣದ ಸಿಬಿಐ ತನಿಖೆಗೆ ಆದೇಶವಾಗುವ ತನಕ ಹೋರಾಟ ಬೆಂಗಳೂರು : ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮುಡಾ ಹಗರಣದ ಪ್ರಮುಖ ದೂರುದಾರ ಸ್ನೇಹಮಯಿ ಕೃಷ್ಣ ಇಂದು ಬೆಂಗಳೂರಿನಲ್ಲಿ ಕಾಣಿಸಿಕೊಂಡು ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ. ತನ್ನ ವಿರುದ್ಧ ಸುಳ್ಳು ಕೇಸ್‌ಗಳನ್ನು ದಾಖಲಿಸುವ ಮೂಲಕ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಮೈಸೂರಿನ ಚಾಮುಂಡಿ ದೇವಿಗೆ ಬರುವ ಹರಕೆ ಸೀರೆಯನ್ನು ಕಳ್ಳತನ ಮಾಡಲಾಗುತ್ತದೆ ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದರು. ಇದರ ಬೆನ್ನಲ್ಲೇ ಅವರ ವಿರುದ್ಧ ಕರ್ತವ್ಯಕ್ಕೆ ಅಡ್ಡಿಪಡಿಸಿದ ಎಫ್​ಐಆರ್

ಬೆಂಗಳೂರಿನಲ್ಲಿ ಕಾಣಿಸಿಕೊಂಡ ಸ್ನೇಹಮಯಿ ಕೃಷ್ಣ : ಕೇಸ್‌ ಹಿಂದೆಗೆಯಲು ಆಮಿಷವೊಡ್ಡಿದ ಆರೋಪ Read More »

ಒಂದು ದೇಶ ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಮಂಡನೆ

ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯನ್ನು ಈಡೇರಿಸುವತ್ತ ಬಿಜೆಪಿ ನಿರ್ಣಾಯಕ ಹೆಜ್ಜೆ ಹೊಸದಿಲ್ಲಿ : ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಅವಕಾಶ ಕೊಡುವ ಬಹುನಿರೀಕ್ಷೆಯ ಒಂದು ದೇಶ ಒಂದು ಚುನಾವಣೆ ಮಸೂದೆ ಇಂದು ಲೋಕಸಭೆಯಲ್ಲಿ ಮಂಡನೆಯಾಗಿದ್ದು, ಇದರೊಂದಿಗೆ ಸಾರ್ವತ್ರಿಕ ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ಬಿಜೆಪಿ ಘೋಷಣೆ ಮಾಡಿದ ಭರವಸೆಯನ್ನು ಜಾರಿಗೊಳಿಸುವಲ್ಲಿ ನಿರ್ಣಾಯಕ ಹೆಜ್ಜೆ ಇಟ್ಟಿದೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಇಂದು ಲೋಕಸಭೆಯಲ್ಲಿ ಸಂವಿಧಾನ (ನೂರ ಇಪ್ಪತ್ತೊಂದನೇಯ ತಿದ್ದುಪಡಿ) ಮಸೂದೆ, 2024 ಮತ್ತು ಕೇಂದ್ರಾಡಳಿತ

ಒಂದು ದೇಶ ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಮಂಡನೆ Read More »

ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ?

ಮೂರು ದಿನಗಳಿಂದ ಕಾಣಿಸದ ಸ್ನೇಹಮಯಿ ಕೃಷ್ಣ; ಮೊಬೈಲ್‌ ಸ್ವಿಚ್‌ ಆಫ್‌ ಬೆಂಗಳೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ ಎಂಬ ವಿಚಾರ ಬೆಳಕಿಗೆ ಬಂದು ರಾಜ್ಯಾದ್ಯಂತ ಸಂಚಲನ ಉಂಟಾಗಿದೆ. ಸ್ನೇಹಮಯಿ ಕೃಷ್ಣ ಅವರ ದೂರಿನಿಂದಾಗಿ ಮುಡಾದಲ್ಲಾಗಿರುವ ಬ್ರಹ್ಮಾಂಡ ಭ್ರಷ್ಟಾಚಾರ ಬೆಳಕಿಗೆ ಬಂದಿತ್ತು. ದಿನಕ್ಕೊಂದರಂತೆ ದಾಖಲೆಗಳನ್ನು ಬಿಡುಗಡೆ ಮಾಡಿ ಸ್ನೇಹಮಯಿ ಕೃಷ್ಣ ಬಲಿಷ್ಠ ಕಾಂಗ್ರೆಸ್‌ ಸರಕಾರದ ವಿರುದ್ಧ ಸಮರವನ್ನೇ ಸಾರಿದ್ದರು. ಆ ಬಳಿಕ

ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ? Read More »

ಒಂದು ದೇಶ ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಇಂದು ಮಂಡನೆ

ಹೊಸದಿಲ್ಲಿ : ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಉದ್ದೇಶ ಹೊಂದಿರುವ ಒಂದು ದೇಶ ಒಂದು ಚುನಾವಣೆ ಮಸೂದೆ ಇಂದು ಲೋಕಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆಯಿದೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಇಂದು ಲೋಕಸಭೆಯಲ್ಲಿ ಮಸೂದೆ ಮಂಡಿಸುವ ನಿರೀಕ್ಷೆಯಿದೆ. ನಂತರ ವ್ಯಾಪಕ ಸಮಾಲೋಚನೆಗಾಗಿ ಸಂಸತ್ತಿನ ಜಂಟಿ ಸಮಿತಿಗೆ ಶಿಫಾರಸು ಮಾಡುವಂತೆ ಮೇಘವಾಲ್ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಮಾಡಲಿದ್ದಾರೆ ಎನ್ನಲಾಗುತ್ತಿದೆ.ಪಕ್ಷಗಳ ಸಂಸದರ ಸಂಖ್ಯಾಬಲದ ಆಧಾರದ ಮೇಲೆ ಜಂಟಿ ಸದನ ಸಮಿತಿಯನ್ನು ರಚಿಸಲಾಗುತ್ತದೆ.

ಒಂದು ದೇಶ ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಇಂದು ಮಂಡನೆ Read More »

ರಾತ್ರಿ 1 ಗಂಟೆಯ ತನಕ ನಡೆದ ಕಲಾಪ

ರಜೆ, ಅಧಿವೇಶನ ಮೊಟಕು ಹಿನ್ನೆಲೆಯಲ್ಲಿ ದೀರ್ಘಾವಧಿ ಕಲಾಪ ಬೆಳಗಾವಿ: ಈ ಸಲದ ಚಳಿಗಾಲದ ಅಧಿವೇಶನ ಸೋಮವಾರ ತಡರಾತ್ರಿಯವರೆಗೂ ನಡೆದು ವಿಶೇಷ ದಾಖಲೆಯೊಂದನ್ನು ಮಾಡಿತು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನ ಸೋಮವಾರ ವಿಶೇಷ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಸುಮಾರು 15 ಗಂಟೆಗಳ ಕಾಲ, ಅಂದರೆ ಬೆಳಗ್ಗೆ 10 ಗಂಟೆಗೆ ಆರಂಭವಾಗಿ ರಾತ್ರಿ 12.55ರ ವರೆಗೂ ಸೂಚನಾ ಕಲಾಪ ನಡೆದಿದೆ. ಕಳೆದೊಂದು ದಶಕದಲ್ಲೇ ಇದು ವಿಶೇಷ ದಾಖಲೆಯ ಕಲಾಪವಾಗಿದೆ. ನಮಗೆ ಅವಕಾಶ ಕೊಡಿ, ಸಮಯವಾಯಿತು ಎಂದು ಕೆಲ ಶಾಸಕರು

ರಾತ್ರಿ 1 ಗಂಟೆಯ ತನಕ ನಡೆದ ಕಲಾಪ Read More »

error: Content is protected !!
Scroll to Top