ರಾಜಕೀಯ

ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವರ ಜು 7 ರಿಂದ ಜಿಲ್ಲಾ ಪ್ರವಾಸ

ಮಂಗಳೂರು: ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ದಿನೇಶ್ ಗುಂಡೂರಾವ್ ಜು.7ರಿಂದ ದ.ಕ.ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಜು.7ರ ರಾತ್ರಿ 9.15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಬಳಿಕ ಧರ್ಮಸ್ಥಳಕ್ಕೆ ತೆರಳಿ ಸನ್ನಿಧಿ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡುವರು. ಜು.8ರ ಬೆಳಗ್ಗೆ 9.30ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೆಳಿಗ್ಗೆ 10 ಗಂಟೆಗೆ ಕನ್ಯಾಡಿ ರಾಮಮಂದಿರಕ್ಕೆ ಭೇಟಿ ನೀಡುವರು. ಪೂರ್ವಾಹ್ನ 11ಕ್ಕೆ ಉಜಿರೆಯ ಮಾತೃಶ್ರೀ ಡಿ.ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ […]

ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವರ ಜು 7 ರಿಂದ ಜಿಲ್ಲಾ ಪ್ರವಾಸ Read More »

ಪ್ರತಿಭಾ ಕಾರಂಜಿಯಲ್ಲಿ ದೈವ ಕೋಲ ಸೇರ್ಪಡೆಯನ್ನು ಕೈಬಿಡುವಂತೆ ಶಾಸಕ ಸುನಿಲ್ ಕುಮಾರ್ ಸದನದಲ್ಲಿ ಒತ್ತಾಯ

ಕಾರ್ಕಳ : ಶಿಕ್ಷಣ ಇಲಾಖೆಯಲ್ಲಿ ಪ್ರತಿಭಾ ಕಾರಂಜಿ ಮಹತ್ವದ್ದಾಗಿದ್ದು, ಈ ಬಾರಿ ಪ್ರತಿಭಾ ಕಾರಂಜಿಯಲ್ಲಿ ದೈವದ ಕೋಲವನ್ನು ಶಿಕ್ಷಣ ಇಲಾಖೆ ಸೇರಿಸಿ ಸುತ್ತೋಲೆ ಹೊರಡಿಸಿದ್ದು, ದೈವದ ಕೋಲ ಪ್ರದರ್ಶನದ ವಸ್ತುವಲ್ಲ. ಅದನ್ನು ತಕ್ಷಣ ಕೈಬಿಡಬೇಕು ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಸದನದಲ್ಲಿ ಒತ್ತಾಯಿಸಿದ್ದಾರೆ. ಸದನದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಶಿಕ್ಷಣ ಸಚಿವರನ್ನು ಒತ್ತಾಯಿಸಿದರು. ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಈ ಕುರಿತು ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪ್ರತಿಭಾ ಕಾರಂಜಿಯಲ್ಲಿ ದೈವ ಕೋಲ ಸೇರ್ಪಡೆಯನ್ನು ಕೈಬಿಡುವಂತೆ ಶಾಸಕ ಸುನಿಲ್ ಕುಮಾರ್ ಸದನದಲ್ಲಿ ಒತ್ತಾಯ Read More »

ಅವೈಜ್ಞಾನಿಕ ಕಾಮಗಾರಿಯಿಂದ ಸರಕಾರಿ ಬಾವಿ ಕುಸಿತ | ವಲಯ ಕಾಂಗ್ರೆಸ್ ಅಧ್ಯಕ್ಷರಿಂದ ಶಾಸಕರಿಗೆ ದೂರು

ಪುತ್ತೂರು: ಒಳಮೊಗ್ರು ಗ್ರಾಪಂಗೆ ನೂತನ ಕಟ್ಟಡ ಕಾಮಗಾರಿ ಕೆಲದಿನಗಳ ಹಿಂದೆ ನಡೆದಿದ್ದು ಇದರ ಕಾಮಗಾರಿ ಮಾಡುವ ವೇಳೆ ಅಲ್ಲಿರುವ ಸರಕಾರಿ ಬಾವಿ ಬಳಿ ಅವೈಜ್ಞಾನಿಕ ಕಾಮಗಾರಿ ನಡೆಸಿರುವ ಕಾರಣ ಮಳೆಗೆ ಬಾವಿ ಕುಸಿತಕ್ಕೊಳಗಾಗಿದೆ ಎಂದು ಆರೋಪಿಸಿ ಒಳಮೊಗ್ರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಪೂಜಾರಿ ಬೊಳ್ಳಾಡಿಯವು ಶಾಸಕರಿಗೆ ದೂರು ನೀಡಿದ್ದಾರೆ. ಕಳೆದ 52 ವರ್ಷಗಳಿಂದ ಇಲ್ಲಿ ಸರಕಾರಿ ಬಾವಿ ಇದೆ. ಇದರ ನೀರನ್ನು ಸ್ಥಳೀಯ ಸಾರ್ವಜನಿಕರು, ಕಾಲನಿ ನಿವಾಸಿಗಳು ಬಳಕೆ ಮಾಡುತ್ತಿದ್ದಾರೆ. ಗ್ರಾಮದಲ್ಲಿ ನೀರಿನ ಅಭಾವ ಉಂಟಾದಾಗ

ಅವೈಜ್ಞಾನಿಕ ಕಾಮಗಾರಿಯಿಂದ ಸರಕಾರಿ ಬಾವಿ ಕುಸಿತ | ವಲಯ ಕಾಂಗ್ರೆಸ್ ಅಧ್ಯಕ್ಷರಿಂದ ಶಾಸಕರಿಗೆ ದೂರು Read More »

ಪ್ರಧಾನಮಂತ್ರಿ ಮೋದಿಯವರ 9ನೇ ವರ್ಷದ ಸಾಧನೆ | ಮನೆ ಮನೆ ತಲುಪಿಸಲು ಪದಾಧಿಕಾರಿಗಳ ಸಭೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ವತಿಯಿಂದ ನರೇಂದ್ರ ಮೋದಿ ಜೀ ರವರ 9ವರ್ಷ ದ ಸಾಧನೆಯನ್ನು ಮಹಾ ಸಂಪರ್ಕ ಅಭಿಯಾನ ಮಾಡುವ ಮೂಲಕ ಮನೆ ಮನೆಗೆ ತಿಳಿಸುವ ಪದಾಧಿಕಾರಿಗಳ ಸಭೆ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆಯಿತು. ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಬಳಿಕ 9 ನೇ ವರ್ಷದ ಸಾಧನೆಯನ್ನು ಮತದಾರರಿಗೆ ತಿಳಿಸುವ ಸಾಹಿತ್ಯದ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ಚನಿಲ

ಪ್ರಧಾನಮಂತ್ರಿ ಮೋದಿಯವರ 9ನೇ ವರ್ಷದ ಸಾಧನೆ | ಮನೆ ಮನೆ ತಲುಪಿಸಲು ಪದಾಧಿಕಾರಿಗಳ ಸಭೆ Read More »

ಕೊಯಿಲಾ ಫಾರಂ: ಪಾಳುಬಿದ್ದ ಭೂಮಿಯಲ್ಲಿ ಖಾಸಗಿಯವರಿಗೆ ಉದ್ಯಮಕ್ಕೆ ಅವಕಾಶ | ಪಶುಸಂಗೋಪನಾ ಸಚಿವರನ್ನು ಭೇಟಿಯಾದ ಶಾಸಕ ಅಶೋಕ್ ರೈ

ಪುತ್ತೂರು: ಪ್ರತ್ತೂರು ತಾಲ್ಲೂಕಿನ ಕೊಯಿಲಾ ಗ್ರಾಮದ ಪಾಳು ಬಿದ್ದಿರುವ ೬೮೦ ಎಕರೆ ಪಶು ಸಂಗೋಪನೆ ಇಲಾಖೆಗೆ ಸೇರಿದ ಜಾಗದಲ್ಲಿ ಪಿ.ಪಿ.ಪಿ. ಆಧಾರದ ಮೇಲೆ ಖಾಸಗಿ ಸಂಸ್ಥೆಯವರಿಗೆ ಗುತ್ತಿಗೆ ಆಧಾರದ ಮೇಲೆ ಪೌಲ್ಟ್ರಿಫಾರಂ, ಕುರಿ ಸಾಕಾಣಿಕೆ, ಹಂದಿ ಸಾಕಾಣಿಕೆ, ಮತ್ತು ಹಸು ಸಾಕಾಣಿಕೆ ಮಾಡಲು ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಕಳೆದ ಎರಡು ವಆರದ ಹಿಂದೆ ಪಶುಸಂಗೋಪನಾ ಸಚಿವರಿಗೆ ಶಾಸಕರಾದ ಅಶೋಕ್ ರೈ ಮನವಿ ನೀಡಿದ್ದು ಜು.3 ರಂದು ಅವರನ್ನು ಎರಡನೇ ಬಾರಿಗೆ ಖುದ್ದಾಗಿ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ.

ಕೊಯಿಲಾ ಫಾರಂ: ಪಾಳುಬಿದ್ದ ಭೂಮಿಯಲ್ಲಿ ಖಾಸಗಿಯವರಿಗೆ ಉದ್ಯಮಕ್ಕೆ ಅವಕಾಶ | ಪಶುಸಂಗೋಪನಾ ಸಚಿವರನ್ನು ಭೇಟಿಯಾದ ಶಾಸಕ ಅಶೋಕ್ ರೈ Read More »

ಜು.23 : ನಿಡ್ಪಳ್ಳಿ, ಆರ್ಯಾಪು ಗ್ರಾಪಂಗಳ ಉಪ ಚುನಾವಣೆ

ಪುತ್ತೂರು : ಗ್ರಾಮ ಪಂಚಾಯತ್‍ಗಳಲ್ಲಿ ತೆರವಾದ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 308 ಎಎ ಮತ್ತು 308 ಎಬಿ ಅನ್ವಯ ದಿನಾಂಕ ನಿಗದಿಗೊಳಿಸಿ ವೇಳಾಪಟ್ಟಿ ಪ್ರಕಟಿಸಿದೆ. ಪುತ್ತೂರು ತಾಲೂಕಿನ ನಿಡ್ಪಳ್ಳಿ ಹಾಗೂ ಆರ್ಯಾಪು ಗ್ರಾಪಂಗಳಲ್ಲಿ ತೆರವಾದ ಒಂದೊಂದು ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ. ಆರ್ಯಾಪು ಗ್ರಾಪಂನ ವಾರ್ಡ್2 (ಹಿಂದುಳಿದ ವರ್ಗ ಎ ಮೀಸಲು) ಕ್ಷೇತ್ರದಿಂದ ಚುನಾಯಿತರಾಗಿದ್ದ ನಿವೃತ್ತ ಎಸ್‍.ಐ.ರುಕ್ಮಯ್ಯ ಮೂಲ್ಯ ಹಾಗೂ ನಿಡ್ಪಳ್ಳಿ

ಜು.23 : ನಿಡ್ಪಳ್ಳಿ, ಆರ್ಯಾಪು ಗ್ರಾಪಂಗಳ ಉಪ ಚುನಾವಣೆ Read More »

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನಕ್ಕೆ ಶೋಭಾ ಕರಂದ್ಲಾಜೆ ಸಾಧ್ಯತೆ !

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇಮಕವಾಗುವ ಸಾಧ್ಯತೆ ಇದೆ. ವಿರೋಧ ಪಕ್ಷದ ನಾಯಕ ಸ್ಥಾನ ಲಿಂಗಾಯತ ಸಮುದಾಯಕ್ಕೆ ಸಿಕ್ಕಿದರೆ, ಅಧ್ಯಕ್ಷ ಸ್ಥಾನ ಒಕ್ಕಲಿಗ ಸಮುದಾಯಕ್ಕೆ ನೀಡಬೇಕಾಗುತ್ತದೆ. ಆ ಹೊತ್ತಿನಲ್ಲಿ ತಮ್ಮ ಆಯ್ಕೆ ಹಿಂದೊಮ್ಮೆ ನಿಕಟವರ್ತಿಯಾಗಿದ್ದ ಶೋಭಾ ಕರಂದ್ಲಾಜೆ ಎಂದು ಯಡಿಯೂರಪ್ಪ ಸೂಚಿಸಿದ್ದಾರೆ. ಯಡಿಯೂರಪ್ಪ ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಶೋಭಾ ಅವರು ಸರ್ಕಾರದ ಮೇಲೆ ಹೆಚ್ಚಿನ ಹಿಡಿತ ಸಾಧಿಸಿದ್ದರು. ಅವರು ಎರಡನೇ ಬಾರಿ ಮುಖ್ಯಮಂತ್ರಿ ಆದಾಗ ಯಡಿಯೂರಪ್ಪ ಅವರ

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನಕ್ಕೆ ಶೋಭಾ ಕರಂದ್ಲಾಜೆ ಸಾಧ್ಯತೆ ! Read More »

ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ. ಎಂತಹಾ ಹೀನಾಯ ಸ್ಥಿತಿಯಲ್ಲಿದೆ ಬಿಜೆಪಿ | ಹೀಗೆಂದು ಟ್ವಿಟ್ ಮಾಡಿದೆ ಕಾಂಗ್ರೆಸ್

ಬೆಂಗಳೂರು: ಎಲ್ಲಿ ನಿಮ್ಮ ವಿರೋಧ ಪಕ್ಷದ ನಾಯಕ ? ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ. ಎಂತಹಾ ಹೀನಾಯ ಸ್ಥಿತಿಯಲ್ಲಿದೆ ಬಿಜೆಪಿ. ಹೀಗೆಂದು ಕಾಂಗ್ರೆಸ್ ಟ್ವಿಟ್ ಮೂಲಕ ಲೇವಡಿ ಮಾಡಿದೆ. ಸರಕಾರ ರಚನೆ ಆಯ್ತು ನಮ್ಮ ಸರ್ಕಾರ ಟೆಕಾಫ್ ಆಗಿ ಹಲವು ದಿನಗಳಾಯ್ತು, ನಮ್ಮ ಗ್ಯಾರಂಟಿ ಯೋಜನೆಗಳ ಜಾರಿಯೂ ಆಯ್ತು, ಆದರೆ ವಿರೋಧ ಪಕ್ಷ ನಾಯಕನನ್ನು ಆಯ್ಕೆ ಮಾಡಲು ಆಗಲಿಲ್ಲ. ಬಿಜೆಪಿಯ 66 ಶಾಸಕರಲ್ಲಿ ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಇರುವ ಒಬ್ಬನೇ ಒಬ್ಬ ಶಾಸಕನಿಲ್ಲದಿರುವುದು

ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ. ಎಂತಹಾ ಹೀನಾಯ ಸ್ಥಿತಿಯಲ್ಲಿದೆ ಬಿಜೆಪಿ | ಹೀಗೆಂದು ಟ್ವಿಟ್ ಮಾಡಿದೆ ಕಾಂಗ್ರೆಸ್ Read More »

ಉಪಮುಖ್ಯಮಂತ್ರಿಯನ್ನು ಭೇಟಿ ಮಾಡಿದ ಕೆಪಿಸಿಸಿ ಸದಸ್ಯ ಸತೀಶ್ ಕುಮಾರ್ ಕೆಡೆಂಜಿ | ವಿವಿಧ ಬೇಡಿಕೆ ಸಲ್ಲಿಕೆ

ಪುತ್ತೂರು: ರಾಜ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಬೆಂಗಳೂರಿನ ಗೃಹ ಕಚೇರಿಯಲ್ಲಿ ಕೆಪಿಸಿಸಿ ಸದಸ್ಯ, ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿವಿಧ ಬೇಡಿಕೆಗಳನ್ನು ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ತಾಪಂ ಮಾಜಿ ಉಪಾಧ್ಯಕ್ಷ ಶೀನಪ್ಪ ಗೌಡ ಬೈತಡ್ಕ, ಅವಿನಾಶ್ ಬೈತಡ್ಕ, ಜಯಪ್ರಕಾಶ್, ಸುಬ್ರಹ್ಮಣ್ಯ ಮತ್ತಿತರರು ಉಪಸ್ಥಿತರಿದ್ದರು.

ಉಪಮುಖ್ಯಮಂತ್ರಿಯನ್ನು ಭೇಟಿ ಮಾಡಿದ ಕೆಪಿಸಿಸಿ ಸದಸ್ಯ ಸತೀಶ್ ಕುಮಾರ್ ಕೆಡೆಂಜಿ | ವಿವಿಧ ಬೇಡಿಕೆ ಸಲ್ಲಿಕೆ Read More »

ಸರ್ವೆ ವಲಯ ಕಾಂಗ್ರೆಸ್‌ನಿಂದ ಕಾಯಕರ್ತರ ಸಭೆ, ಶಾಸಕರಿಗೆ ಸನ್ಮಾನ

ಪುತ್ತೂರು : ಪುತ್ತೂರು ಸಹಿತ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದಿದ್ದು, ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ಬಂದಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಸರ್ವೆ ವಲಯ ಕಾಂಗ್ರೆಸ್ ವತಿಯಿಂದ ಕಲ್ಪನೆ ಸಮುದಾಯಭವನದಲ್ಲಿ ಶನಿವಾರ ನಡೆದ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ಮತ್ತು ಶಾಸಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಳೆದ ಹಲವು ವರ್ಷಗಳಿಂದ ಪುತ್ತೂರಿನಲ್ಲಿ ಕಾಂಗ್ರೆಸ್ ಶಾಸಕರಿಲ್ಲದ ಕಾರಣ ಕಾರ್ಯಕರ್ತರು ನೋವು, ಯಾತನೆಯನ್ನು ಅನುಭವಿಸುವಂತಾಗಿತ್ತು. ಕಾಂಗ್ರೆಸ್ ಗೆಲ್ಲಲೇಬೇಕು ಎಂದು ಕಳೆದ ಚುನಾವಣೆಯಲ್ಲಿ ಕಾರ್ಯಕರ್ತರ

ಸರ್ವೆ ವಲಯ ಕಾಂಗ್ರೆಸ್‌ನಿಂದ ಕಾಯಕರ್ತರ ಸಭೆ, ಶಾಸಕರಿಗೆ ಸನ್ಮಾನ Read More »

error: Content is protected !!
Scroll to Top