ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಆಡಳಿತ ಅವಧಿ ಜುಲೈ ತಿಂಗಳಲ್ಲಿ ಸಂಪೂರ್ಣ | ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿಗೆ ಚುನಾವಣಾ ಆಯೋಗ ಆದೇಶ
ಪುತ್ತೂರು: ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಆಡಳಿತ ಅವಧಿ ಜುಲೈ ತಿಂಗಳಲ್ಲಿ ಕೊನೆಗೊಳ್ಳಲಿದ್ದು, ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗದಿಪಡಿಸುವಂತೆ ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಅಧಿನಿಯಮದ ಪ್ರಕಾರ ಅಧಿಕಾರ ಚಲಾಯಿಸಿ ಈ ಆದೇಶ ಹೊರಡಿಸಿದೆ. ರಾಜ್ಯದಲ್ಲಿ 5948 ಗ್ರಾಪಂಗಳಿಗೆ ತಾಲೂಕುವಾರು, ವರ್ಗವಾರು ಚುನಾವಣೆ 2020 ರಲ್ಲಿ ನಡೆದಿತ್ತು. ಅದಾದ ಬಳಿಕ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಹುದ್ದೆಗಳ ಸಂಖ್ಯೆಯನ್ನು ನಿರ್ದಿಷ್ಟಪಡಿಸಲಾಗಿದೆ. ಪರಿಶಿಷ್ಟ ಪಂಗಡ, ಜಾತಿ, ಹಿಂದುಳಿದ ವರ್ಗ ಹೀಗೆ […]